Site icon Vistara News

Cooker Blast: ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟವಾಗಿ ಯುವಕ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

Cooker Blast

ಬೆಂಗಳೂರು: ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟಗೊಂಡು (Cooker Blast) ಯುವಕನೊಬ್ಬ ಮೃತಪಟ್ಟು, ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೆನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮೃತ ಹಾಗೂ ಗಾಯಗೊಂಡ ಯುವಕ ಇಬ್ಬರೂ ಉತ್ತರ ಪ್ರದೇಶ ಮೂಲದವರಾಗಿದ್ದಾರೆ.

ಉತ್ತರ ಪ್ರದೇಶ ಮೂಲದ ಮೋಸಿನ್ ಮೃತ. ಸಮೀರ್‌ ಗಾಯಾಳು. ಜೆ.ಪಿ.ನಗರದ ಆರನೇ ಹಂತದಲ್ಲಿ ಘಟನೆ ನಡೆದಿದ್ದು, ಕುಕ್ಕರ್‌ನ ಪ್ರೆಷರ್ ಹೆಚ್ಚಾಗಿ ಬ್ಲಾಸ್ಟ್ ಆಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಬೆನ್ನಲ್ಲೆ ಪುಟ್ಟೇನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ವಿಕ್ಟೋರಿಯಾ ಸುಟ್ಟಗಾಯ ವಿಭಾಗದಲ್ಲಿ ಸಮೀರ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಚಿಕಿತ್ಸೆ ಫಲಿಸದೇ ಮೋಸಿನ್ ಎಂಬಾತ ಮೃತಪಟ್ಟಿದ್ದಾನೆ. ಈತನಿಗೆ ಸುಮಾರು ಶೇ.60 ಸುಟ್ಟಗಾಯಗಳಾಗಿದ್ದವು.

ಕುಕ್ಕರ್ ಸ್ಫೋಟಗೊಂಡ ಬೆನ್ನಲ್ಲೇ ದೊಡ್ಡ ಪ್ರಮಾಣದ ಶಬ್ದ ಬಂದಿದ್ದು, ಮನೆಯಲ್ಲಿ ಇದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಉತ್ತರ ಪ್ರದೇಶ ಮೂಲದ ಇಬ್ಬರು ಯುವಕರು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಘಟನಾ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ ಮುಂದುವರಿದಿದೆ.

ಇದನ್ನೂ ಓದಿ | Sexual Abuse: ದಲಿತ ಬಾಲಕಿಯನ್ನು ಅಪಹರಿಸಿ ಇಸ್ಲಾಂಗೆ ಮತಾಂತರ; ಮುಸ್ಲಿಂ ಧರ್ಮಗುರು ಬಂಧನ

ಜೋರಾಗಿ ಶಬ್ದ ಬಂತು, ಪಕ್ಕದ ಬಿಲ್ಡಿಂಗ್‌ನಲ್ಲಿದ್ದ ನಾವೆಲ್ಲಾ ಓಡುತ್ತಾ ಹೊರಗೆ ಬಂದೆವು. ಅವರಿಗೆ ಮೈಯೆಲ್ಲಾ ಸುಟ್ಟ ಗಾಯ ಆಗಿತ್ತು. ಇಬ್ಬರನ್ನೂ ಆಟೋದಲ್ಲಿ ಆಸ್ಪತ್ರೆಗೆ ಕಳಿಸಿದೆವು. ಇಬ್ಬರೂ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದರಂತೆ. ಇಬ್ಬರೇ ರೂಮ್‌ನಲ್ಲಿ ಇದ್ದರು ಎಂದು ಗೊತ್ತಿದೆ. ಅವರು ಮಾತನಾಡೋ ಪರಿಸ್ಥಿತಿಯಲ್ಲಿ ಇರಲಿಲ್ಲ ಎಂದು ಸ್ಥಳೀಯ ಮಂಜು ಹೇಳಿದ್ದಾರೆ.

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿದ ಯುವಕ!

Vidhana Soudha

ಬೆಂಗಳೂರು: ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ, ವಿಧಾನಸೌಧ (Vidhana Soudha) ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಬುಧವಾರ ನಡೆದಿದೆ. ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತನಿಂದ ಕತ್ಯ ನಡೆದಿದೆ.

ಇದನ್ನೂ ಓದಿ | ಇದನ್ನೂ ಓದಿ: Physical Abuse : ತಪಾಸಣೆಗೆ ಬಂದ ರೋಗಿಗಳಿಬ್ಬರನ್ನು ಅತ್ಯಾಚಾರ ಮಾಡಿದ ಸರ್ಕಾರಿ ವೈದ್ಯ; ಜೂನಿಯರ್​ ವೈದ್ಯರ ಪೆಟ್ಟು ತಿಂದು ಐಸಿಯು ಸೇರಿದ ಆರೋಪಿ

ಟ್ರೆಕ್ಕಿಂಗ್ ಹೋಗಿ ಪೃಥ್ವಿ ನಾಪತ್ತೆಯಾಗಿದ್. ಹೀಗಾಗಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಯುವಕನ ತಾಯಿ ಹೋಗಿದ್ದರು. ಆ ವೇಳೆ ಪೊಲೀಸರು ಪೃಥ್ವಿ ತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ. ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಇಟ್ಟಿದ್ದಾನೆ. ಸದ್ಯ ಯುವಕನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Exit mobile version