Cooker Politics: ರೆಡ್ಡಿ vs ಶೆಟ್ಟಿ ಕುಕ್ಕರ್‌ ಪಾಲಿಟಿಕ್ಸ್;‌ ರಾಮಲಿಂಗಾ ರೆಡ್ಡಿ ಕೊಟ್ಟಿದ್ದನ್ನು ಕಿತ್ಕೊಂಡು ಬ್ರಾಂಡೆಡ್‌ ಕುಕ್ಕರ್‌ ಕೊಟ್ಟ ಅನಿಲ್‌ ಶೆಟ್ಟಿ! Vistara News
Connect with us

ಕರ್ನಾಟಕ

Cooker Politics: ರೆಡ್ಡಿ vs ಶೆಟ್ಟಿ ಕುಕ್ಕರ್‌ ಪಾಲಿಟಿಕ್ಸ್;‌ ರಾಮಲಿಂಗಾ ರೆಡ್ಡಿ ಕೊಟ್ಟಿದ್ದನ್ನು ಕಿತ್ಕೊಂಡು ಬ್ರಾಂಡೆಡ್‌ ಕುಕ್ಕರ್‌ ಕೊಟ್ಟ ಅನಿಲ್‌ ಶೆಟ್ಟಿ!

Cooker Politics: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರೆಲ್ಲರೂ ತಮ್ಮ ತಮ್ಮ ಕ್ಷೇತ್ರದಲ್ಲಿ ಮತದಾರರನ್ನು ಹಿಡಿದಿಟ್ಟುಕೊಳ್ಳಲು ತರಹೇವಾರಿ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ನಡುವೆ ಬಿಟಿಎಂ ಲೇಔಟ್‌ನಲ್ಲಿ ರಾಮಲಿಂಗಾರೆಡ್ಡಿ ಕೊಟ್ಟ ಕುಕ್ಕರ್‌ ಅನ್ನು ಅನಿಲ್‌ ಶೆಟ್ಟಿ ಕಿತ್ತು ಎಸೆದು, ಬ್ರಾಂಡೆಡ್‌ ಕುಕ್ಕರನ್ನು ವಿತರಿಸಿದ್ದಾರೆ.

VISTARANEWS.COM


on

Ramalinga Reddy vs Anil Shetty Cooker Politics in BTM Layout
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚುನಾವಣೆ ಕಾವು ಹೆಚ್ಚಾಗಿದೆ. ಈಗಾಗಲೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ಎಣಿಯುತ್ತಿವೆ. ಸಭೆ-ಸಮಾರಂಭ, ಹಬ್ಬ-ಹರಿದಿನಗಳನ್ನು ಬಳಸಿಕೊಂಡು ಗಿಫ್ಟ್‌ ಹಂಚುತ್ತಾ ಪ್ರಚಾರವನ್ನು ಆರಂಭಿಸಿವೆ. ಅದರಲ್ಲೂ ಮುಖ್ಯವಾಗಿ ಸ್ತ್ರೀ ಶಕ್ತಿಯನ್ನು ಸೆಳೆಯಲು ಕುಕ್ಕರ್‌ ಪಾಲಿಟಿಕ್ಸ್‌ (Cooker Politics) ಮುಂದುವರಿದಿದೆ.

ಮತದಾರರ ಮನೆ ಮನೆಗೆ ಕುಕ್ಕರ್‌ ತಲುಪಿಸಲು ಕ್ಷೇತ್ರದ ಅಭ್ಯರ್ಥಿಗಳ ಪೈಪೋಟಿ ಜೋರಾಗಿದೆ. ಅದರಲ್ಲೂ ಕಾಂಗ್ರೆಸ್‌ನ ಭದ್ರಕೋಟೆ ಬಿಟಿಎಂ ಲೇಔಟ್‌ನಲ್ಲಿ ಕುಕ್ಕರ್‌ ಪಾಲಿಟಿಕ್ಸ್‌ ಹೇಗಿದೆ ಎಂದರೆ ಶಾಸಕ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದ ಕುಕ್ಕರ್‌ ಅನ್ನು ಎದುರಾಳಿ ಅನಿಲ್‌ ಶೆಟ್ಟಿ ಕಿತ್ತೆಸೆದು, ತಾನೇ ಹೊಸ ಕುಕ್ಕರ್‌ ಕೊಟ್ಟಿದ್ದಾರೆ.

Ramalinga Reddy vs Anil Shetty Cooker Politics in BTM Layout
ಶಾಸಕ ರಾಮಲಿಂಗರೆಡ್ಡಿ ನೀಡಿರುವ ಕುಕ್ಕರ್‌ ಕಸಿದು ಬ್ರಾಂಡೆಡ್‌ ಕುಕ್ಕರ್‌ ಕೊಟ್ಟ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಅನಿಲ್‌ ಶೆಟ್ಟಿ

ಶಾಸಕ ರಾಮಲಿಂಗಾರೆಡ್ಡಿ ಕ್ಷೇತ್ರದ ಮಹಿಳೆಯರಿಗೆ ಕುಕ್ಕರ್‌ ವಿತರಣೆ ಮಾಡಿದ್ದರು. ಆದರೆ, ಅದು ಕಳಪೆಯಾಗಿದೆ. ಅದನ್ನು ಸ್ಟವ್‌ ಮೇಲೆ ಇಟ್ಟರೆ ಸಿಡಿದು ಹೋದೀತು ಎಂದು ಹೇಳಿರು ಬಿಟಿಎಂ ಲೇಔಟ್‌ನ ಬಿಜೆಪಿ ಟಿಕೆಟ್ ಆಕಾಂಕ್ಷಿ ಅನಿಲ್‌ ಶೆಟ್ಟಿ ಅವರು, ರಾಮಲಿಂಗಾರೆಡ್ಡಿ ಅವರು ಕೊಟ್ಟ ಕುಕ್ಕರ್ ಎಸೆದು ಹೊಸ ಬ್ರಾಂಡೆಡ್ ಕುಕ್ಕರ್ ವಿತರಣೆ ಮಾಡಿದ್ದಾರೆ. ಬ್ರಾಂಡೆಡ್‌ ಕುಕ್ಕರ್‌ ನೀಡುವ ಮೂಲಕ ಅನಿಲ್‌ ಶೆಟ್ಟಿ ಬಿಟಿಎಂ ಲೇಔಟ್‌ ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆ.

ಇದನ್ನೂ ಓದಿ: Congress Plenary Session​: ಕಾಂಗ್ರೆಸ್ ಸರ್ವ ಸದಸ್ಯರ ಸಮಾವೇಶ ಇಂದಿನಿಂದ ರಾಯ್ಪುರದಲ್ಲಿ ಪ್ರಾರಂಭ

ಬಿಟಿಎಂ ಲೇಔಟ್‌ ಕ್ಷೇತ್ರದ ಜನರನ್ನು ಒಂದೆಡೆ ಸೇರಿಸಿ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಅನಿಲ್‌ ಶೆಟ್ಟಿ, ರಾಮಲಿಂಗಾರೆಡ್ಡಿ ನೀಡಿದ ಕುಕ್ಕರ್‌ ಕಸಿದು ಎಸೆದಿರುವ ದೃಶ್ಯಗಳು ವೈರಲ್‌ ಆಗಿವೆ. ನಂತರ ಜನರಿಗೆ ಬ್ರಾಂಡೆಡ್‌ ಕುಕ್ಕುರ್‌ ವಿತರಣೆ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಭದ್ರಕೋಟೆ ಆಗಿರುವ ಬಿಟಿಎಂ ಲೇಔಟ್‌ ಕ್ಷೇತ್ರವನ್ನು ತಮ್ಮ ವಶಕ್ಕೆ ಪಡೆಯಲು ಬಿಜೆಪಿ ಟಿಕೆಟ್‌ ಆಕಾಂಕ್ಷಿ ಅನಿಲ್‌ ಶೆಟ್ಟಿ ಪ್ರಯತ್ನಿಸುತ್ತಿದ್ದಾರೆ. ಅದರ ಭಾಗವೇ ಈ ಕುಕ್ಕರ್‌ ಪಾಲಿಟಿಕ್ಸ್‌ ಎನ್ನಲಾಗಿದೆ. ಈ ಕುಕ್ಕರ್‌ಗಳನ್ನು ತಾನು ತನ್ನ ದುಡಿಮೆ ಹಣದಿಂದ ನೀಡುತ್ತಿರುವುದಾಗಿ ಅನಿಲ್‌ ಶೆಟ್ಟಿ ಹೇಳಿಕೊಂಡಿದ್ದಾರೆ.

ರಾಜಕೀಯ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Weather Report : ನಾಳೆವರೆಗೂ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Rain News : ಉತ್ತರ ಕರ್ನಾಟಕಕ್ಕೆ ಭಾರಿ ಮಳೆ ಮುನ್ಸೂಚನೆ ಇದ್ದು, ಮುಂಗಾರು ಚುರುಕುಗೊಂಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಲ್ಲಿ (Weather report) ಸಾಮಾನ್ಯವಾಗಿರಲಿದೆ.

VISTARANEWS.COM


on

Edited by

Rain day Girl enjoying
Koo

ಬೆಂಗಳೂರು: ಸೆ.23-24ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಆದರೆ ಉತ್ತರ ಒಳನಾಡಲ್ಲಿ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ಉತ್ತರ ಕರ್ನಾಟಕದಲ್ಲಿ ಬಿಡುವೇ ಇಲ್ಲ

ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚೆನಯನ್ನು (weather report) ನೀಡಲಾಗಿದೆ. ಎಡಬಿಡದೆ ಮಳೆ ಸುರಿಯಲಿದ್ದು, ಜತೆಗೆ ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ದಕ್ಷಿಣ ಒಳನಾಡಲ್ಲಿ ಲಘು ಮಳೆ

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿಯಲ್ಲಿ ತಗ್ಗಿದ ಅಬ್ಬರ

ಕರಾವಳಿಯಲ್ಲಿ ಮಳೆ ಅಬ್ಬರ ತಗ್ಗಿದೆ. ಆದಾಗ್ಯೂ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.

ಬೆಂಗಳೂರಲ್ಲಿ ಸಂಜೆಗೆ ಮಳೆ ಕಾಟ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಬಿಸಿಲಿನ ತಾಪ ಜಾಸ್ತಿ ಇದ್ದರೆ, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Cauvery Protest: ಕಾವೇರಿ ಕಿಚ್ಚು: ಮಂಡ್ಯ ಬಂದ್‌; ಹೆದ್ದಾರಿಯಲ್ಲಿ ಉರುಳುಸೇವೆ, ರೈತರ ಜತೆ ಸೇರಿದ ಬಿಜೆಪಿ, ಜೆಡಿಎಸ್

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 31 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 31 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ

ಸೆಪ್ಟೆಂಬರ್‌ 23ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0420.6160165735
ಆಲಮಟ್ಟಿ ಜಲಾಶಯ
(Almatti Dam)
519.6114.73405405
ಮಲಪ್ರಭಾ ಜಲಾಶಯ (Malaprabha Dam)633.8021.440194
ಘಟಪ್ರಭಾ ಜಲಾಶಯ
(Ghataprabha Dam)
662.9142.402311181
ತುಂಗಾಭದ್ರಾ ಜಲಾಶಯ (Tungabhadra Dam)497.7162.92437810316
ಭದ್ರಾ ಜಲಾಶಯ (Bhadra Dam)657.7343.23290290
ಕಬಿನಿ ಜಲಾಶಯ (Kabini Dam)696.1314.8031664390
ಹಾರಂಗಿ
(Harangi Dam)
871.388.0613352791
ಲಿಂಗನಮಕ್ಕಿ (Linganamakki Dam) 554.4468.3054935393
ಹೇಮಾವತಿ
(Hemavathi Dam)
890.5817.6649861300

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Ganesha Festival : ಹಿಂದು ಮಹಾಸಭಾ ಗಣೇಶೋತ್ಸವದಲ್ಲಿ ತುಂಡು ಬಟ್ಟೆ ತೊಟ್ಟು ಯುವತಿ ಪ್ರಚೋದಕ ಡ್ಯಾನ್ಸ್‌!

Ganesha Festival : ಕೊಪ್ಪಳದ ಹಗರಿಬೊಮ್ಮನಹಳ್ಳಿಯಲ್ಲಿ ಗಣೇಶೋತ್ಸವದ ವೇಳೆ ಯುವತಿಯೊಬ್ಬಳ ಪ್ರಚೋದಕ ಡ್ಯಾನ್ಸ್‌ ಸುದ್ದಿ ಮಾಡಿದೆ. ಕೆಲವರು ವಿರೋಧಿಸಿದರೆ ಇನ್ನು ಕೆಲವರು ಇದು ಕಾಮನ್‌ ಅಂದಿದ್ದಾರೆ.

VISTARANEWS.COM


on

Edited by

Ptovocative dance at Ganesha festival
ಹಗರಿಬೊಮ್ಮನಹಳ್ಳಿಯಲ್ಲಿ ನಡೆದ ಗಣೇಶೋತ್ಸವದಲ್ಲಿ ವಿವಾದ ಸೃಷ್ಟಿಸಿದ ಡ್ಯಾನ್ಸ್‌
Koo

ಕೊಪ್ಪಳ: ಹಿಂದು ಮಹಾಸಭಾ (Koppala Hindu Mahasabha) ಆಯೋಜಿಸಿರುವ ಕೊಪ್ಪಳ ಗಣೇಶೋತ್ಸವದಲ್ಲಿ (Koppala Ganeshothsava) ಯುವತಿಯೊಬ್ಬಳು ತುಂಡು ಬಟ್ಟೆ ತೊಟ್ಟು ಡ್ಯಾನ್ಸ್‌ (Young lady dance in Half dress) ಮಾಡಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ. ಸಂಸ್ಕೃತಿ ಬಗ್ಗೆ ಮಾತನಾಡುವವರು ತುಂಡು ಬಟ್ಟೆ ಡ್ಯಾನ್ಸ್‌ಗೆ (Obscene dance) ಹೇಗೆ ಅನುಮತಿ ಕೊಟ್ಟರು (Ganesha festival) ಎಂಬ ಜನ ಪ್ರಶ್ನೆ ಮಾಡುತ್ತಿದ್ದಾರೆ.

ಕೊಪ್ಪಳದ ಕಾವ್ಯಾನಂದ ಪಾರ್ಕಿನಲ್ಲಿ ಪ್ರತಿಷ್ಠಾಪಿಸಿರುವ ಗಣೇಶನ ಉತ್ಸವದ ಸಂದರ್ಭದಲ್ಲಿ ಸಾರ್ವಜನಿಕರಿಗಾಗಿ ಮನೋರಂಜನೆ ಕಾರ್ಯಕ್ರಮ (Entertainment Programme) ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಯುವತಿಯೊಬ್ಬಳು ತುಂಡು ಬಟ್ಟೆ ತೊಟ್ಟು ಹಿಂದಿ ಹಾಡಿಗೆ ಪ್ರಚೋದಕವಾಗಿ ಕುಣಿದಿದ್ದಳು (Provocative dance). ಸಂಸ್ಕೃತಿಯ ಬಗ್ಗೆ ಮಾತನಾಡುವವರು ತುಂಡು ಬಟ್ಟೆಯ ಡ್ಯಾನ್ಸ್ ಆಯೋಜನೆ ಮಾಡಿದ್ದು ಎಷ್ಟು ಸರಿ, ಇದಕ್ಕೆಲ್ಲ ಗಣೇಶನ ವೇದಿಕೆಯೇ ಬೇಕಾಗಿತ್ತಾ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಡ್ಯಾನ್ಸ್ ಆಯೋಜನೆ ಕುರಿತು ಅಸಮಾಧಾನ ವ್ಯಕ್ತವಾಗಿದೆ.

ಯುವತಿಯ ತಪ್ಪಿಲ್ಲ, ಆಯೋಜಕರದೇ ತಪ್ಪು

ಡ್ಯಾನ್ಸ್‌ ಮಾಡಿದ ಯುವತಿಯ ತಪ್ಪಿಲ್ಲ, ಈ ರೀತಿಯ ನೃತ್ಯಗಳು ಈಗ ಎಲ್ಲ ಕಡೆ ಸಾಮಾನ್ಯವಾಗಿದೆ. ಮಕ್ಕಳು ಇವುಗಳನ್ನು ಪ್ರದರ್ಶಿಸುತ್ತಾರೆ. ಆದರೆ, ಇದನ್ನು ಗಣೇಶೋತ್ಸವದ ವೇದಿಕೆಯಲ್ಲಿ ನಡೆಸಲು ಆಯೋಜಕರು ಹೇಗೆ ಪರ್ಮಿಷನ್‌ ಕೊಟ್ಟರು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ಆಯೋಜಕರಿಗೆ ಯಾವ ರೀತಿಯ ನೃತ್ಯ ಎನ್ನುವ ಬಗ್ಗೆ ಆರಂಭದಲ್ಲಿ ಮಾಹಿತಿ ಇರುವುದಿಲ್ಲ, ನೃತ್ಯ ಮಾಡುವವರು ವೇದಿಕೆ, ಸಮಯ, ಸಂದರ್ಭ ನೋಡಿಕೊಂಡು ತಮ್ಮ ಕಲೆಯನ್ನು ಪ್ರದರ್ಶನ ಮಾಡಬೇಕು ಎಂಬ ವಾದವನ್ನೂ ಮಂಡಿಸಿದ್ದಾರೆ. ಇದೇ ವೇಳೆ ಕೆಲವರು ಇಂಥದ್ದೆಲ್ಲ ನಡೀತದೆ, ಇದರಲ್ಲಿ ತಲೆ ಹೋಗುವಂತದ್ದು ಏನೂ ಇಲ್ಲ. ನಮ್ಮ ಮಕ್ಕಳೇ ಅಲ್ಲವೇ ಡ್ಯಾನ್ಸ್‌ ಮಾಡಿದ್ದು ಎಂದು ಸಮಾಧಾನ ಹೇಳಿದ್ದಾರೆ. ಒಟ್ಟಿನಲ್ಲಿ ಗಣೇಶನ ವೇದಿಕೆಯ ಮುಂದಿನ ಪ್ರಚೋದಕ ಡ್ಯಾನ್ಸ್‌ ಸುದ್ದಿ ಮಾಡಿದೆ.

ಇದನ್ನೂ ಓದಿ: Communal Harmony : ದರ್ಗಾದಲ್ಲೇ ಗಣಪತಿ ಪ್ರತಿಷ್ಠಾಪನೆ; ಘಂಟೆ ಬಡಿದು ಜೈ ಗಣೇಶ ಎಂದ ಮುಸ್ಲಿಮರು, ಎಂಥಾ ಸೌಹಾರ್ದ!

ಹಗರಿಬೊಮ್ಮನಹಳ್ಳಿಯಲ್ಲಿ ಡಿಜೆ ಸದ್ದಿಗೆ ಹಾರಿ ಹೋಯಿತು ಯುವಕನ ಪ್ರಾಣ

ಇದು ಕೊಪ್ಪಳದ ಕಥೆಯಾದರೆ ಅತ್ತ ವಿಜಯನಗರ ಜಿಲ್ಲೆ ಹಗರಿಬೊಮ್ಮನ ಹಳ್ಳಿ ಪಟ್ಟಣದ ಭೋವಿ ಕಾಲನಿಯಲ್ಲಿ ಗಣೇಶೋತ್ಸವದ ಶೋಭಾಯಾತ್ರೆ ಸಂದರ್ಭದಲ್ಲಿ ಡಿ.ಜೆ. ಸೌಂಡ್‌ಗೆ ಯುವಕನ ಪ್ರಾಣವೇ ಹಾರಿ ಹೋಗಿದೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬೋವಿ ಕಾಲೊನಿಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಡಿಜೆಗೆ ಡ್ಯಾನ್ಸ್‌ ಮಾಡುತ್ತಿದ್ದ ಜಮೀರ್ ಪಿಂಜಾರ( 22) ಎಂಬ ಯುವಕ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿ ಅತಿಯಾಗಿ ಮದ್ಯ ಸೇವನೆ ಮಾಡಿದ್ದ ಎನ್ನಲಾಗಿದೆ. BSNL ಕಚೇರಿ ಬಳಿ ಮೆರವಣಿಗೆಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಯುವಕರು ತಾಲೂಕಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಮಾರ್ಗಮದ್ಯದಲ್ಲಿ ಮೃತಪಟ್ಟಿದ್ದಾನೆ. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇತ್ತ ಹೊಸಪೇಟೆಯಲ್ಲಿ ಗಣೇಶೋತ್ಸವದ ವೇಳೆ ಯುವಕರ ರಣೋತ್ಸಾಹವನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಡಿಜೆ ಸೌಂಡ್ ಗೆ ಕುಣಿದು ಕುಪ್ಪಳಿಸಿದ ಯುವಕರನ್ನು ನಿಯಂತ್ರಿಸಲು ಸ್ವತಃ ವಿಜಯನಗರ ಎಸ್ಪಿ ಶ್ರೀ ಹರಿಬಾಬು ಬಿಎಲ್, ಡಿವೈಎಸ್ಪಿ ಮಂಜುನಾಥ್ ತಳವಾರ್, ಹೊಸಪೇಟೆ ಸಿಪಿಐ ಬಾಲನಗೌಡ ಅವರೇ ಕಣಕ್ಕೆ ಇಳಿಬೇಕಾಯಿತು. ಎಸ್ಪಿ ಶ್ರೀಹರಿಬಾಬು ಬಿಎಲ್ ಸ್ವತಃ ತಾವೇ ಯುವಕರನ್ನು ಹೊರದಬ್ಬಿದ ದೃಶ್ಯಗಳು ವೈರಲ್‌ ಆಗಿವೆ.

Continue Reading

Live News

Karnataka live news: ರಾಜ್ಯದ ಇಂದಿನ ಮಹತ್ವದ ಸುದ್ದಿಗಳು: ವಿಸ್ತರಿಸುತ್ತಿದೆ ಕಾವೇರಿ ಹೋರಾಟ, ಮಂಡ್ಯ ಬಂದ್

ಇಂದು ಮಂಡ್ಯ ಬಂದ್‌ ನಡೆದಿದೆ. ರಾಜದಾನಿಯೂ ಸೇರಿದಂತೆ ಇಡೀ ರಾಜ್ಯಕ್ಕೆ ಹೋರಾಟ (Cauvery protest) ವಿಸ್ತರಿಸುತ್ತಿದೆ. ರಾಜ್ಯದ ಇಂದಿನ ಇನ್ನಷ್ಟು ಮಹತ್ವದ ಸುದ್ದಿಗಳನ್ನು (Karnataka live news) ಓದಲು ಇಲ್ಲಿ ಗಮನಿಸಿ.

VISTARANEWS.COM


on

Edited by

Cauvery protest at Mandya
Koo

ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ಇಂದು ಮಂಡ್ಯ ಬಂದ್‌ ನಡೆದಿದೆ. ರಾಜದಾನಿಯೂ ಸೇರಿದಂತೆ ಇಡೀ ರಾಜ್ಯಕ್ಕೆ ಹೋರಾಟ (Cauvery protest) ವಿಸ್ತರಿಸುತ್ತಿದೆ. ರಾಜ್ಯದ ಇಂದಿನ ಇನ್ನಷ್ಟು ಮಹತ್ವದ ಸುದ್ದಿಗಳನ್ನು (Karnataka live news) ಓದಲು ಇಲ್ಲಿ ಗಮನಿಸಿ.

Continue Reading

ಕರ್ನಾಟಕ

Cauvery Protest: ಸಿಲಿಕಾನ್ ಸಿಟಿಯಲ್ಲೂ ಕಾವೇರುತ್ತಿದೆ ಕಾವೇರಿ ಕಿಚ್ಚು; ಇಂದು ಬೆಂಗಳೂರು ಬಂದ್‌ ಫಿಕ್ಸ್‌?

ಕಳೆದ ಮೂರು ದಿನಗಳಿಂದ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ (Cauvery protest) ಮಾಡುತ್ತಿದ್ದಾರೆ. ಇಂದು ಬೆಂಗಳೂರು ಅಥವಾ ಕರ್ನಾಟಕ ಬಂದ್ (Karnataka bundh) ದಿನಾಂಕವೂ ಘೋಷಣೆ ಮಾಡುವ ಸಾಧ್ಯತೆ ಇದೆ.

VISTARANEWS.COM


on

Edited by

cauvery protest
Koo

ಬೆಂಗಳೂರು: ರಾಜಧಾನಿಯಲ್ಲಿ ಇಂದು ಕಾವೇರಿ ನೀರಿನ (Cauvery dispute) ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ (Supreme court) ಪ್ರತಿಭಟಿಸಿ ಸಾಲು ಸಾಲು ಪ್ರತಿಭಟನೆಗಳು (Cauvery Protest) ನಡೆಯಲಿವೆ. ಬೆಂಗಳೂರು ಮತ್ತು ಕರ್ನಾಟಕ ಬಂದ್‌ಗೂ ಇಂದೇ ದಿನ ಫಿಕ್ಸ್‌ ಆಗುವ ಸಾಧ್ಯತೆ ಇದೆ.

ಕಾವೇರಿಗಾಗಿ ಇಂದು ಕನ್ನಡಪರ ಹೋರಾಟಗಾರರು ರೋಡಿಗಿಳಿಯಲಿದ್ದು, ಕೇಂದ್ರ, ರಾಜ್ಯ ‌ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಿದ್ದಾರೆ. ಕಳೆದ ಮೂರು ದಿನಗಳಿಂದ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಇಂದು ಬೆಂಗಳೂರು ಅಥವಾ ಕರ್ನಾಟಕ ಬಂದ್ ದಿನಾಂಕವೂ ಘೋಷಣೆ ಮಾಡುವ ಸಾಧ್ಯತೆ ಇದೆ.

ಕರ್ನಾಟಕ ಜಲಸಂರಕ್ಷಣಾ ಸಮಿತಿಯಿಂದ ಇಂದು ಬೆಳಗ್ಗೆ 11 ಗಂಟೆಗೆ ಫ್ರೀಡಂಪಾರ್ಕ್‌ನಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ 100ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಲಿವೆ. ಬೆಂಗಳೂರಿನ ಪ್ರಮುಖ ಅಪಾರ್ಟ್ಮೆಂಟ್ ಅಸೋಸಿಯೇಷನ್, ಲೇಔಟ್ ಅಸೋಸಿಯೇಷನ್, ಹೋಟೆಲ್ ಮಾಲೀಕರ ಸಂಘ, ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಐಟಿ ಕಂಪನಿಗಳು ಭಾಗಿಯಾಗಲಿವೆ. ಸಭೆ ಬಳಿಕ ಹೋರಾಟದ ರೂಪುರೇಷೆಯ ಬಗ್ಗೆ ನಿರ್ಧಾರವಾಗಲಿದೆ.

ಹಲವು ಪ್ರತಿಭಟನೆಗಳು

ರಾಜಧಾನಿಯಲ್ಲಿ ಇಂದು ಹಲವು ಸಂಘಟನೆಗಳಿಂದ ಪ್ರಮುಖ ಪ್ರತಿಭಟನೆಗಳು ನಡೆಯಲಿವೆ.

1) ಬೆಳಿಗ್ಗೆ 10.30ಕ್ಕೆ ಕರ್ನಾಟಕ ರಕ್ಷಣಾ ‌ವೇದಿಕೆ ಶಿವರಾಮೇಗೌಡ ಬಣದಿಂದ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ಕುವೆಂಪು ಪ್ರತಿಮೆ ಮುಂದೆ ಪ್ರತಿಭಟನೆ ನಡೆಯಲಿದ್ದು ಕರವೇಯ ನೂರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

2) ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದಿಂದ ಬೆಳಿಗ್ಗೆ 10 ಗಂಟೆಗೆ ಕರ್ನಾಟಕ- ತಮಿಳುನಾಡು ಅತ್ತಿಬೆಲೆ ಗಡಿ ಬಂದ್ ಆಗಲಿದ್ದು, ಕರವೇಯ ಸಾವಿರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

3) ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರಿನಿಂದ ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್‌ನಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಆಮ್ ಆದ್ಮಿ ‌ಪಾರ್ಟಿಯ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.

4) ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನಿಂದ ಬೆಳಿಗ್ಗೆ 11.30ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಲಿದೆ.

5) ಮಧ್ಯಾಹ್ನ 1-30 ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಸಾ.ರಾ ಗೋವಿಂದು, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರುಗಳಾದ ಪ್ರವೀಣ್ ಕುಮಾರ್ ಶೆಟ್ಟಿ, ಶಿವರಾಮೇಗೌಡ, ಕನ್ನಡಸೇನೆಯ ರಾಜ್ಯಾಧ್ಯಕ್ಷ ಕೆ.ಆರ್ ಕುಮಾರ್, ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವ್, ‌ಕನ್ನಡಪರ ಹೋರಾಟಗಾರ ಹೆಚ್.ವಿ ಗಿರೀಶ್ ಗೌಡ ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳ ಮುಖಂಡರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: Cauvery Protest: ಕಾವೇರಿ ಕಿಚ್ಚು: ಮಂಡ್ಯ ಬಂದ್‌; ಹೆದ್ದಾರಿಯಲ್ಲಿ ಉರುಳುಸೇವೆ, ರೈತರ ಜತೆ ಸೇರಿದ ಬಿಜೆಪಿ, ಜೆಡಿಎಸ್

Continue Reading
Advertisement
Rain day Girl enjoying
ಉಡುಪಿ23 seconds ago

Weather Report : ನಾಳೆವರೆಗೂ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Ptovocative dance at Ganesha festival
ಕರ್ನಾಟಕ19 mins ago

Ganesha Festival : ಹಿಂದು ಮಹಾಸಭಾ ಗಣೇಶೋತ್ಸವದಲ್ಲಿ ತುಂಡು ಬಟ್ಟೆ ತೊಟ್ಟು ಯುವತಿ ಪ್ರಚೋದಕ ಡ್ಯಾನ್ಸ್‌!

Cauvery protest at Mandya
Live News21 mins ago

Karnataka live news: ರಾಜ್ಯದ ಇಂದಿನ ಮಹತ್ವದ ಸುದ್ದಿಗಳು: ವಿಸ್ತರಿಸುತ್ತಿದೆ ಕಾವೇರಿ ಹೋರಾಟ, ಮಂಡ್ಯ ಬಂದ್

Petal Gehlot At UNGA
ದೇಶ31 mins ago

India At UNGA: ‘ನಿಮ್ಮ ದೇಶ ನೋಡಿಕೊಳ್ಳಿ’; ವಿಶ್ವಸಂಸ್ಥೆಯಲ್ಲಿ ‘ಕಾಶ್ಮೀರ’ ಪ್ರಸ್ತಾಪಿಸಿದ ಪಾಕ್‌ಗೆ ಭಾರತ ಚಾಟಿ

cauvery protest
ಕರ್ನಾಟಕ47 mins ago

Cauvery Protest: ಸಿಲಿಕಾನ್ ಸಿಟಿಯಲ್ಲೂ ಕಾವೇರುತ್ತಿದೆ ಕಾವೇರಿ ಕಿಚ್ಚು; ಇಂದು ಬೆಂಗಳೂರು ಬಂದ್‌ ಫಿಕ್ಸ್‌?

Chaitra Gagan kadur and Halashri Swameeji
ಉಡುಪಿ59 mins ago

Chaitra Kundapura : ಚೈತ್ರಾ ಕುಂದಾಪುರ ಗ್ಯಾಂಗ್‌ನಿಂದ ಸೀಜ್‌ ಆಗಿದ್ದು 3.67 ಕೋಟಿ, ಹಾಲಶ್ರೀಯ ಐಷಾರಾಮಿ ಕಾರು ನೋಡಿದ್ರಾ?

Kamal Haasan And Udhayanidhi Stalin
ದೇಶ1 hour ago

Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್‌ ಹಾಸನ್

mandya bundh
ಕರ್ನಾಟಕ2 hours ago

Cauvery Protest: ಕಾವೇರಿ ಕಿಚ್ಚು: ಮಂಡ್ಯ ಬಂದ್‌; ಹೆದ್ದಾರಿಯಲ್ಲಿ ಉರುಳುಸೇವೆ, ರೈತರ ಜತೆ ಸೇರಿದ ಬಿಜೆಪಿ, ಜೆಡಿಎಸ್

Sanjay and Halashri
ಕರ್ನಾಟಕ2 hours ago

Halashri Swameeji : ಹಾಲಶ್ರೀ ಇನ್ನೊಂದು ದೋಖಾ; ಶಿರಹಟ್ಟಿ ಬಿಜೆಪಿ ಟಿಕೆಟ್‌ ಕೊಡಿಸೋದಾಗಿ ಪಿಡಿಒಗೆ ಕೋಟಿ ವಂಚನೆ!

narendra modi justi Trudeau
ದೇಶ2 hours ago

India Canada Row: ನಿಜ್ಜರ್‌ ಹತ್ಯೆ ಕುರಿತು ಭಾರತಕ್ಕೆ ನಂಬಲರ್ಹ ಮಾಹಿತಿ ನೀಡಿದ್ದೇವೆ; ಕೆನಡಾ ಹೊಸ ರಾಗ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ6 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ7 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ7 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ7 days ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌