ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರು ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಕುಕ್ಕರ್‌ಗಳು ಹಾಗೂ ಮದ್ಯವನ್ನು ತಹಸೀಲ್ದಾರ್ ಶ್ರೀನಿವಾಸ ನೇತೃತ್ವದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಣನೂರು ಗ್ರಾಮದಲ್ಲಿ ಗುರುವಾರ ರಾತ್ರಿ ತಹಸೀಲ್ದಾರ್ ಶ್ರೀನಿವಾಸ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಮತದಾರರಿಗೆ ಹಂಚಲು ಕೊಂಡೊಯ್ಯುತ್ತಿದ್ದ ಕುಕ್ಕರ್‌ಗಳು ಹಾಗೂ ಮದ್ಯ ಸೇರಿ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.
ಕೊಣನೂರು ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಬ್ಲೌಸ್ ಪೀಸ್, ಬಳೆ, ಅರಿಶಿಣ, ಕುಂಕುಮ, ಕುಕ್ಕರ್ ವಿತರಣೆ ಹಾಗೂ ಮದ್ಯ ಪ್ರಿಯರಿಗಾಗಿ ಮದ್ಯ ಹಂಚುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದರಿಂದ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಅಮಾನತುಗೊಂಡಿದ್ದ ಎಸ್‌ಐ ನಂದೀಶ್ ಹೃದಯಾಘಾತದಿಂದ ಸಾವು, ಆಯುಕ್ತರ ಮೇಲೆ ಸಚಿವ ಎಂಟಿಬಿ ನಾಗರಾಜ್ ಗರಂ