ಬೆಂಗಳೂರು: ಸಹಕಾರ ಕ್ಷೇತ್ರದ ಆರೋಗ್ಯ ವಿಮೆಯಲ್ಲಿ ಸಾಕಷ್ಟು ಯಶಸ್ಸು ಕಂಡಿದ್ದ ಯಶಸ್ವಿನಿ ಯೋಜನೆ ಇದೇ ವರ್ಷದ ಗಾಂಧಿ ಜಯಂತಿಯಿಂದ ಮರು ಜಾರಿ ಆಗುವಂತೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ಕುರಿತು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸುಳಿವು ನೀಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಸೋಮಶೇಖರ್ “”ಯಶಸ್ವಿನಿ ಯೋಜನೆಯನ್ನು ಮರುಜಾರಿ ಮಾಡಲಾಗುತ್ತದೆ ಎಂದು ಈಗಾಗಲೆ ತಿಳಿಸಲಾಗಿದೆ. ಇದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈಗಾಗಲೇ ಇಲಾಖೆ ಕಡೆಯಿಂದ ಎಲ್ಲ ತಯಾರಿ ಆಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಜತೆಗೂ ಚರ್ಚೆ ನಡೆಸಲಾಗಿದೆ. ಬರುವ ಅಕ್ಟೋಬರ್ 2ರಂದು ಉದ್ಘಾಟನೆ ಆಗುವ ಸಾಧ್ಯತೆ ಇದೆʼʼ ಎಂದು ಹೇಳಿದ್ದಾರೆ.
ಸಹಕಾರ ಸಂಸ್ಥೆಗಳಿಂದ ರೈತರಿಗೆ ಸಾಲ ನೀಡುವ ಕುರಿತು ಗೊಂದಲದ ಕುರಿತು ಪ್ರತಿಕ್ರಿಯಿಸಿದ ಸೋಮಶೇಖರ್, ರಾಜ್ಯದಲ್ಲಿ 24 ಸಾವಿರ ಕೋಟಿ ರೂ. ಸಾಲ ನೀಡಲಾಗುವುದು. ರಾಜ್ಯದ 33 ಲಕ್ಷ ರೈತರಿಗೆ ಸಾಲ ಕೊಡಲು ನಿರ್ಧರಿಸಲಾಗಿದೆ. ಇದರಲ್ಲಿ ಒಂಬತ್ತು ಲಕ್ಷ ಮಹಿಳೆಯರಿಗೆ ಸಾಲ ಸೌಲಭ್ಯವ ನೀಡುವ ಉದ್ದೇಶವಿದೆ ಇದರಲ್ಲಿ 3 ಲಕ್ಷ ಹೊಸ ರೈತರಿಗೆ ಸಾಲ ನೀಡಲು ನಿರ್ಧರಿಸಲಾಗಿದೆ. ಸಾಲ ನೀಡುವಲ್ಲಿ ಯಾವುದೇ ರೀತಿ ಗೊಂದಲಕ್ಕೆ ಆಸ್ಪದ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ | Life tips: 30 ವರ್ಷ ಆಗೋ ಮೊದಲು ಇವಿಷ್ಟನ್ನು ಮಾಡಿಬಿಡಿ!