ಬೆಂಗಳೂರು: ದೇಶದೆಲ್ಲೆಡೆ ರೂಪಾಂತರಿ ಕೊರೊನಾ ಸೋಂಕು (Coronavirus) ವ್ಯಾಪಿಸುತ್ತಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನೆರೆ ರಾಷ್ಟ್ರಗಳಲ್ಲಿ ಸೋಂಕು ಅತ್ಯಂತ ವೇಗವಾಗಿ ಹರಡುತ್ತಿದ್ದು, ರಾಜ್ಯ ಆರೋಗ್ಯ ಇಲಾಖೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.
ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ ಮತ್ತು ಸಿಂಗಾಪುರ್, ಥೈಲ್ಯಾಂಡ್ ದೇಶಗಳಿಂದ ಬರುವ ಪ್ರತಿ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ತರುವುದು ಕಡ್ಡಾಯವಾಗಿದೆ. ಜತೆಗೆ ಈ ದೇಶಗಳಿಂದ ಬರುವ ಪ್ರಯಾಣಿಕರಲ್ಲಿ ರೋಗಲಕ್ಷಣಗಳು ಕಂಡು ಬಂದರೆ ಕೂಡಲೇ ಐಸೋಲೇಷನ್‌ಗೆ ಒಳಪಡಿಸುವುದು. ಕೋವಿಡ್ ಸ್ಯಾಂಪಲ್ಸ್ ತೆಗೆದುಕೊಂಡು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸುವ ಕ್ರಮವನ್ನು ವಹಿಸಲಾಗಿದೆ.
ವಿದೇಶಿ ಪ್ರಯಾಣಿಕರು ಕಡ್ಡಾಯವಾಗಿ ೭ ದಿನಗಳ ಕ್ವಾರಂಟೈನ್‌ನಲ್ಲಿ ಇರಬೇಕು. ಕ್ವಾರಂಟೈನ್ ಸಮಯದಲ್ಲಿ ಜ್ವರ, ಕೆಮ್ಮು, ಶೀತ, ತಲೆ ನೋವು, ಅತಿಸಾರ ಮತ್ತು ಉಸಿರಾಟದ ತೊಂದರೆ ಜತೆಗೆ ರುಚಿ ಇಲ್ಲದಿರುವುದು, ವಾಸನೆ ಬರದೆ ಇರುವ ರೋಗಲಕ್ಷಣಗಳು ಕಂಡುಬಂದರೆ ಕೂಡಲೇ ಆಸ್ಪತ್ರೆಗೆ ದಾಖಲು ಮಾಡುವಂತೆ ಸೂಚನೆ ನೀಡಲಾಗಿದೆ.
ಜನವರಿ 1ರಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರದ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡದ ಐದು ಎಚ್‌ಐಒಗಳನ್ನು ಬೆಂಗಳೂರಿನ ಕೆಐಎಎಲ್‌ಗೆ ನಿಯೋಜಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ.
ಇದನ್ನೂ ಓದಿ | Coronavirus | ಹೈರಿಸ್ಕ್ ದೇಶಗಳಿಂದ ಬಂದಿದ್ದ ಮೂವರಿಗೆ ಪಾಸಿಟಿವ್; ಜಿನೋಮಿಕ್ ಟೆಸ್ಟ್‌ಗೆ ಸ್ಯಾಂಪಲ್ಸ್ ರವಾನೆ