ಬೆಂಗಳೂರು: ನೋವೆಲ್ ಕೊರೊನಾ ವೈರಸ್ (Coronavirus) ಮತ್ತೆ ಆಕ್ಟಿವ್ ಆಗುತ್ತಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಕೊರೊನಾ ತವರೂರು ಚೀನಾದಲ್ಲಿ ಸೋಂಕು ಹರಡುವಿಕೆ ಹೆಚ್ಚಾಗುತ್ತಿದ್ದು, ವಿಮಾನ ನಿಲ್ದಾಣ ಸೇರಿ ಜನಸಂದಣಿ ಮೇಲೆ ನಿಗಾ ವಹಿಸಲಾಗಿದೆ. ಇದೀಗ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆರೋಗ್ಯದ ದೃಷ್ಟಿಯಿಂದ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಫೇಸ್ ಮಾಸ್ಕ್ ಹಾಕುವುದನ್ನು ಕಡ್ಡಾಯಗೊಳಿಸಿದೆ.
ಈಗಾಗಲೇ ದೇಶಾದಾದ್ಯಂತ ಮತ್ತೊಮ್ಮೆ ಕೊರೊನಾ ವೈರಸ್ ಹರಡುವ ಆತಂಕ ಉಂಟಾಗಿದೆ. ರಾಜ್ಯದಲ್ಲಿಯೂ ಸಹ ಈ ಬಗ್ಗೆ ಎಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಶಿಕ್ಷಕರು, ಶಿಕ್ಷಕೇತರ ನೌಕರರು, ವಿದ್ಯಾರ್ಥಿಗಳು ಕಡ್ಡಾಯವಾಗಿ ಬೂಸ್ಟರ್ ಡೋಸ್ ವ್ಯಾಕ್ಸಿನ್ (Precautionary Dose) ಪಡೆಯುವಂತೆ ಸೂಚಿಸಲಾಗಿದೆ.
ಜತೆಗೆ ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಶಿಕ್ಷಕರು, ಶಿಕ್ಷಕೇತರ ನೌಕರರು ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಕೊರೊನಾ ಮಾರ್ಗಸೂಚಿ ಪಾಲಿಸಲು ಬೆಂಗಳೂರು ವಿವಿ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.
ಇದನ್ನೂ ಓದಿ | Cancer | Gemini | 2023 ಮಿಥುನ, ಕರ್ಕಾಟಕ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ! ಆರೋಗ್ಯದಲ್ಲಿ ನಷ್ಟ!