ಚಿಕ್ಕಬಳ್ಳಾಪುರ: ಸರ್ಕಾರಿ ಆಂಬ್ಯುಲೆನ್ಸ್ ಕಳುಹಿಸಲು ವೈದ್ಯರು ಲಂಚಕ್ಕೆ ಬೇಡಿಕೆ (Corruption Case) ಇಟ್ಟಿರುವುದು ಜಿಲ್ಲೆಯ ಚಿಂತಾಮಣಿಯಲ್ಲಿ ಕಂಡುಬಂದಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ತವರು ಕ್ಷೇತ್ರದಲ್ಲೇ ಲಂಚಾವತಾರ ತಾಂಡವವಾಡುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಊಲವಾಡಿ ಗ್ರಾಮದ ಮೂರ್ಛೆ ರೋಗಿ ಅಮರನಾರಾಯಣ ಎಂಬುವವರನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆ ಕರೆದೊಯ್ಯಲು ವೈದ್ಯ ಸೂಚಿಸಿದ್ದಾರೆ. ಹೀಗಾಗಿ ರೋಗಿಯನ್ನು ಕರೆದುಕೊಂಡು ಹೋಗಲು ಕುಟುಂಬಸ್ಥರು, ಆಂಬ್ಯುಲೆನ್ಸ್ ಕಳುಹಿಸುವಂತೆ ಮನವಿ ಮಾಡಿದ್ದಾರೆ. ಈ ವೇಳೆ 1500 ರೂಪಾಯಿ ಹಣ ಕೊಟ್ಟು, ವಾಹನಕ್ಕೆ ಡೀಸೆಲ್ ಹಾಕಿಸುವಂತೆ ವೈದ್ಯ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಯುವಕ ಆಸ್ಪತ್ರೆಗೆ ದಾಖಲಾಗಿದ್ದ. ತುರ್ತು ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ವೈದ್ಯ ಜಯರಾಮ್ ಸೂಚಿಸಿದ್ದಾರೆ. ನಂತರ ಆಂಬ್ಯುಲೆನ್ಸ್ ಕಳುಹಿಸಿಲು ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ರೋಗಿಗಳ ಪ್ರಾಣದ ಜತೆ ವೈದ್ಯರು ಚೆಲ್ಲಾಟ ಆಡುತ್ತಿದ್ದಾರೆ ಎಂದು ರೋಗಿಯ ಕುಟುಂಬಸ್ಥರು ಆಕ್ರೋಶ ಹೊರಹಾಕಿ, ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ | Online Fraud: ಆನ್‌ಲೈನ್‌ನಲ್ಲಿ ಸ’ಮೋಸ’ ಆರ್ಡರ್ ಮಾಡಿ 1.4 ಲಕ್ಷ ರೂ. ಕಳೆದುಕೊಂಡ ಡಾಕ್ಟರ್