couple dies after their bike hits lorry Road accident: ಲಾರಿ, ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು Vistara News
Connect with us

ಕರ್ನಾಟಕ

Road accident: ಲಾರಿ, ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು

Hasana accident: ಬೇಲೂರು ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ದಂಪತಿ ಮೃತಪಟ್ಟಿದ್ದಾರೆ.

VISTARANEWS.COM


on

Accident at Hasana couple died on spot
Koo

ಹಾಸನ: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ (Road accident) ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಗ್ರಾಮದ ಬಳಿ ನಡೆದ ಘಟನೆಯಲ್ಲಿ ಪುಟ್ಟರಾಜು (65), ಭಾರತಿ (54) ಮೃತಪಟ್ಟಿದ್ದಾರೆ.

ಮೃತ ದಂಪತಿ ಬೇಲೂರು ತಾಲೂಕಿನ ಮೂಳೆನಹಳ್ಳಿ ಗ್ರಾಮದವರಾಗಿದ್ದು, ಇವರು ಬೈಕ್‌ನಲ್ಲಿ ತೆರಳುವಾಗ ನಾಯಿ ಅಡ್ಡ ಬಂತೆನ್ನಲಾಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಬೈಕ್‌ ಲಾರಿಗೆ ಡಿಕ್ಕಿ ಹೊಡೆದಿದೆ.

ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿಂತಿದ್ದ ಬಸ್ ಗೆ ಟಿಟಿ ಡಿಕ್ಕಿ, ಇಬ್ಬರ ದುರ್ಮರಣ

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಡಿ.ಹೊಸಹಳ್ಳಿ ಬಳಿ ನಿಂತಿದ್ದ ಬಸ್‌ಗೆ ಟೆಂಪೊ ಟ್ರಾವೆಲರ್‌ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರಿನವರಾದ ವೀರೇಶ್ (30) ಮತ್ತು ಶಶಿಕಲಾ(79) ಮೃತಪಟ್ಟಿದ್ದಾರೆ. ಅವರ ಜತೆಗೆ ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ, ಪ್ರತೀಕ್ಷಾ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇವರೆಲ್ಲರೂ ರಾಯಚೂರಿನ ಸಿಂಧನೂರಿನಿಂದ ಮೈಸೂರಿಗೆ ಪ್ರವಾಸಕ್ಕೆ ಹೊರಟಿದ್ದರು. ಶಶಿಕಲಾ ಅವರು ಕುಟುಂಬದ ಹಿರಿಯರಾಗಿದ್ದು, ಅವರ ಮನೆಯವರೆಲ್ಲರೂ ಟೆಂಪೊ ಟ್ರಾವೆಲರ್‌ ಮೂಲಕ ಮೈಸೂರಿಗೆ ಪ್ರವಾಸಕ್ಕೆಂದು ಹೋಗುತ್ತಿದ್ದರು. ಟಿಟಿ ವಾಹನದಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತಿದ್ದರು.

ರಾತ್ರಿ ಪ್ರಯಾಣದ ಸಂದರ್ಭದಲ್ಲಿ ಮಾರ್ಗ ಮಧ್ಯೆ ಡಿ.ಹೊಸಹಳ್ಳಿ ಬಳಿ ಟೆಂಪೊ ಟ್ರಾವೆಲರ್‌ ನಿಂತಿದ್ದ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ. ಶಶಿಕಲಾ ಮತ್ತು ವೀರೇಶ್‌ ಮೃತಪಟ್ಟಿದ್ದಾರೆ. ಹುಲಿಯೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧಾರವಾಡ: ರಸ್ತೆ ಅಪಘಾತದಲ್ಲಿ ಪಿಡಿಓ ಸಾವು

ಧಾರವಾಡದ ಯರಿಕೊಪ್ಪ ಕ್ರಾಸ್‌ ಬಳಿ ತಡರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಪಿಡಿಒ ಒಬ್ಬರು ಮೃತಪಟ್ಟಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕಣ್ಣೂರು ಗ್ರಾಮದ ನಿವಾಸಿ ಶಿವಾನಂದ ಹಡಪದ ಮೃತಪಟ್ಟವರು. ಅವರು ಸದ್ಯ ಹಾವೇರಿ ಜಿಲ್ಲೆಯ ಸವಣೂರಿನ ಶಿರಬಡಗಿ ಗ್ರಾಮ ಪಂಚಾಯತಿ ಪಿಡಿಓ ಆಗಿ ಸೇವೆ ಸಲ್ಲಿಸುತ್ತಿದ್ದರು.

ಟ್ರಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಅವರು ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ತಿರುಪತಿಗೆ ಹೋಗುತ್ತಿದ್ದ ಬಸ್‌ ಪಲ್ಟಿ; ಅಕ್ಕನ ಮದುವೆಯ ದಿನದಂದೇ ಸ್ಮಶಾನ ಸೇರಿದ ತಮ್ಮ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

Ramalinga Reddy: 4 ಸಾರಿಗೆ ನಿಗಮಗಳ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ನೇಮಕ

Ramalinga Reddy: ರಾಜ್ಯ ಸಾರಿಗೆ ಇಲಾಖೆಯ ಬಿಎಂಟಿಸಿ, ಕೆಎಸ್ಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಕೆಕೆಆರ್‌ಟಿಸಿ ಅಧ್ಯಕ್ಷರಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ನೇಮಿಸಲಾಗಿದೆ.

VISTARANEWS.COM


on

Edited by

Transport Minister Ramalinga reddy
Koo

ಬೆಂಗಳೂರು: ಸಾರಿಗೆ ಇಲಾಖೆಯ 4 ಸಾರಿಗೆ ನಿಗಮಗಳಿಗೆ ಅಧ್ಯಕ್ಷರಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೇಮಕವಾಗಿದ್ದಾರೆ. ಸಾರಿಗೆ ಇಲಾಖೆ ಅಧೀನದಲ್ಲಿರುವ ಬಿಎಂಟಿಸಿ, ಕೆಎಸ್ಆರ್‌ಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ಅವರನ್ನು ನೇಮಿಸಿ ಸಾರಿಗೆ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ವಿ.ಎಸ್‌. ಪುಷ್ಪ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ | Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು

ಸಾಮಾನ್ಯವಾಗಿ ನಾಲ್ಕು ನಿಗಮಗಳಿಗೆ ಪ್ರತ್ಯೇಕವಾಗಿ ಅಧ್ಯಕ್ಷರ ನೇಮಕವಾಗುತ್ತಿತ್ತು. ಆದರೆ, ಈ ಬಾರಿ ಪ್ರತ್ಯೇಕವಾಗಿ ಅಧ್ಯಕ್ಷರನ್ನು ನೇಮಿಸದೆ ಸಚಿವ ರಾಮಲಿಂಗಾರೆಡ್ಡಿ ಅವರಿಗೇ ನಾಲ್ಕೂ ನಿಗಮಗಳ ಜವಾಬ್ದಾರಿ ನೀಡಲಾಗಿದೆ.

Continue Reading

ಕರ್ನಾಟಕ

Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು

Hosakerehalli Lake: ಬೆಂಗಳೂರಿನ ಹೊಸಕೆರೆಹಳ್ಳಿ ಕೆರೆಯ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿಯ ಇಬ್ಬರು ಮಹಿಳಾ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

VISTARANEWS.COM


on

Edited by

DCM DK Shivakumar
Koo

ಬೆಂಗಳೂರು: ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಹೊಸಕೆರೆಹಳ್ಳಿ ಕೆರೆಯ (Hosakerehalli Lake) ಮಧ್ಯೆ ರಸ್ತೆ ನಿರ್ಮಾಣಕ್ಕೆ ಅನುಮತಿ ನೀಡಿದ ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕ್ರಮ ಕೈಗೊಳ್ಳಲು ಸೂಚಿಸಿದ ಬೆನ್ನಲ್ಲೇ ಇಬ್ಬರು ಮಹಿಳಾ ಅಧಿಕಾರಿಗಳನ್ನು ಅಮಾನತು ಮಾಡಿ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್‌.ಕೆ.ಲಕ್ಷ್ಮೀ‌ಸಾಗರ್ ಆದೇಶ ಹೊರಡಿಸಿದ್ದಾರೆ.

ಘನತ್ಯಾಜ್ಯ ವಿಭಾಗದ ಇಇ ಎಚ್.ಎಸ್.ಮೇಘ ಹಾಗೂ ಎಇ ಶಿಲ್ಪ ಅಮಾನತುಗೊಂಡ ಅಧಿಕಾರಿಗಳು. ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆಯ ಮಧ್ಯೆ ರಸ್ತೆ ನಿರ್ಮಾಣಕ್ಕೆ ಕಾರಣಕರ್ತರಾದ ಅಧಿಕಾರಿಗಳು, ಎಂಜಿನಿಯರ್‌ಗಳನ್ನು ಸೋಮವಾರ (ಜೂನ್‌ 5) ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದರು. ಹೀಗಾಗಿ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ.

ಇದನ್ನೂ ಓದಿ | ಗ್ಲೋಬಲ್ ಬೆಂಗಳೂರು ಮಾಡಲು ಸಲಹಾ ಸಮಿತಿ; ಇದು ಡಿಕೆಶಿ ಮಾಸ್ಟರ್‌ ಪ್ಲ್ಯಾನ್!

ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕಾಗಿ ಇದನ್ನು ಮಾಡಿದಿರಿ? ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದಿರಿ? ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದೀರಿ ಎಂದು ಶಿವಕುಮಾರ್ ಅವರು ಸೋಮವಾರ ಮಧ್ಯಾಹ್ನ ಸಭೆಯಲ್ಲಿ ಬಿಬಿಎಂಪಿ ಆಯುಕ್ತರನ್ನು ಪ್ರಶ್ನಿಸಿದ್ದರು. ಅಧಿಕಾರಿಗಳು ಇದಕ್ಕೆ ಉತ್ತರಿಸಲು ತಡಬಡಾಯಿಸಿದರು. ತಕ್ಷಣವೇ ಉಪ ಮುಖ್ಯಮಂತ್ರಿಗಳು ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದ್ದರು.

Continue Reading

ಕರ್ನಾಟಕ

Koppal News: ಕನಕಗಿರಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Koppal News: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.

VISTARANEWS.COM


on

Edited by

Water tap
Koo

ಕೊಪ್ಪಳ: ರಾಯಚೂರು ಜಿಲ್ಲೆಯ ರೇಖಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಒಬ್ಬ ಬಾಲಕ ಮೃತಪಟ್ಟು, 30ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಪ್ರಕರಣ ನಡೆದ ಬೆನ್ನಲ್ಲೇ ಅಂತಹುದೇ ಪ್ರಕರಣ ಜಿಲ್ಲೆಯಲ್ಲಿ (Koppal News) ನಡೆದಿದೆ. ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.

Honnamma Shivappa who dies after consuming contaminated water

ಹೊನ್ನಮ್ಮ ಶಿವಪ್ಪ (65) ಮೃತ ಮಹಿಳೆ. ಬಸರಿಹಾಳ ಗ್ರಾಮದಲ್ಲಿ ಸುಮಾರು ಮೂರು ದಿನಗಳಿಂದ ವಾಂತಿ- ಭೇದಿಯಿಂದ ಹಲವು ಜನರು ಬಳಲುತ್ತಿದ್ದರು. ಅಸ್ವಸ್ಥಗೊಂಡವರನ್ನು ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಲುಷಿತ ನೀರು ಪೂರೈಕೆಯಾಗಿದೆ ಸ್ಥಳೀಯರು ಆರೋಪಿಸಿದ್ದಾರೆ. ವೃದ್ಧೆ ಸಾವು ಬಳಿಕ ದಿನದಿಂದ ದಿನಕ್ಕೆ ಅಸ್ವಸ್ಥರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆಯ ಗಮನಕ್ಕೆ ತಾರದೆ ನಿರ್ಲಕ್ಷ್ಯ ವಹಿಸಿದ ಆರೋಪ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಕೇಳಿಬಂದಿದೆ.

Those who fell ill after consuming contaminated water

ಇದನ್ನೂ ಓದಿ | ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್‌ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ

ಟಯರ್ ಸಿಡಿದು ಪಲ್ಟಿ ಹೊಡೆದ ಕಾರು; ಐವರಿಗೆ ಗಾಯ

Car accident in mandya

ಮಂಡ್ಯ: ಟಯರ್ ಸಿಡಿದು ಕಾರು ಪಲ್ಟಿಯಾಗಿದ್ದರಿಂದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ಚಿಕ್ಕಮಂಡ್ಯ ಬಳಿ ಸೋಮವಾರ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರು ಮೂಲದ ಅರ್ಜುನ್, ಮಂಜುನಾಥ್ ಜಿ.ಅಡಿಗ, ಶ್ರೀಕಾಂತ್, ಕೃಷ್ಣ, ಮೂರ್ತಿ ಗಾಯಗೊಂಡವರು.
ಬೆಂಗಳೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿದ್ದಾಗ ಚಿಕ್ಕಮಂಡ್ಯ ಸಮೀಪಿಸುತ್ತಿದ್ದಂತೆ ಕಾರಿನ ಟಯರ್ ಸ್ಫೋಟಗೊಂಡಿದೆ. ಹೀಗಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.

Continue Reading

ಕರ್ನಾಟಕ

World Environment Day: ಶಿವಮೊಗ್ಗದಲ್ಲಿ ಸಹಸ್ರ ವೃಕ್ಷಾರೋಪಣ; ಸಾವಿರ ಗಿಡ ನೆಡುವ ಅಭಿಯಾನಕ್ಕೆ ಚಾಲನೆ

World Environment Day: ಶಿವಮೊಗ್ಗದ ತುಂಗಾ ಮೇಲ್ದಂಡೆ ಕಾಲುವೆಯ ಇಕ್ಕೆಲಗಳಲ್ಲಿ ಸಹಸ್ರ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.

VISTARANEWS.COM


on

Edited by

A sapling was planted on the banks of Tunga in Shivamogga
Koo

ಶಿವಮೊಗ್ಗ: ಪರಿಸರ ದಿನಾಚರಣೆ ನಿಮಿತ್ತ ವಿಸ್ತಾರ ನ್ಯೂಸ್ ಹಮ್ಮಿಕೊಂಡಿದ್ದ ಅಭಿಯಾನಕ್ಕೆ (World Environment Day) ಶಿವಮೊಗ್ಗದಲ್ಲಿ ಭಾರಿ ಬೆಂಬಲ ವ್ಯಕ್ತವಾಗಿದೆ. ತುಂಗಾ ಮೇಲ್ದಂಡೆ ಕಾಲುವೆಯ ಇಕ್ಕೆಲಗಳಲ್ಲಿ ಸಹಸ್ರ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ದೊರಕಿದೆ. ನಗರ ವ್ಯಾಪ್ತಿಯ 11 ಕಿ.ಮೀ. ಉದ್ದದ ಕಾಲುವೆಯ ಎರಡೂ ಬದಿಗಳಲ್ಲಿ ಸಾವಿರ ಗಿಡಗಳನ್ನು ನೆಡುವ ಬೃಹತ್ ಅಭಿಯಾನಕ್ಕೆ ಆರ್‌ಎಸ್‌ಎಸ್ ದಕ್ಷಿಣ ಪ್ರಾಂತ ಕಾರ್ಯವಾಹ ಪಟ್ಟಾಭಿರಾಮ ಚಾಲನೆ ನೀಡಿದರು.

ನಿರ್ಮಲ ತುಂಗಾ ಅಭಿಯಾನ ತಂಡ, ಪರ್ಯಾವರಣ ಸಂರಕ್ಷಣೆ, ಸರ್ಜಿ ಫೌಂಡೇಶನ್, ವಿಸ್ತಾರ ನ್ಯೂಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾಡಳಿತ, ತುಂಗಾ ಮೇಲ್ದಂಡೆ ಯೋಜನೆ, ಅರಣ್ಯ ಇಲಾಖೆ ಸಹಯೋಗ ನೀಡಿದ್ದು, ನಗರದ ಪರಿಸರ ಪ್ರೇಮಿಗಳು ಪರಿಸರ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ.

environment day in Shivamogga

ಆರ್‌ಎಸ್‌ಎಸ್ ವಿಭಾಗ ಕಾರ್ಯವಾಹ ಗಿರೀಶ್ ಕಾರಂತ್, ಜಿಲ್ಲಾ ಸಂಘಚಾಲಕ ರಂಗನಾಥ, ಸರ್ಜಿ ಫೌಂಡೇಶನ್ ಮುಖ್ಯಸ್ಥ ಡಾ. ಧನಂಜಯ ಸರ್ಜಿ, ಮಾಚೇನಹಳ್ಳಿ ಕೈಗಾರಿಕಾ ವಸಾಹತು ಸಂಘದ ಅಧ್ಯಕ್ಷ ರಮೇಶ್ ಹೆಗ್ಡೆ, ದಿನೇಶ್ ಶೇಟ್, ತ್ಯಾಗರಾಜ ಮಿತ್ಯಾಂತ, ಬಾಲಕೃಷ್ಣ ನಾಯ್ಡು, ಗೊ.ಕೃ. ಭಾಗವತ್, ರಂಗಭೂಮಿ ಮಂಜು, ನಾಗಭೂಷಣ್ ಸ್ವಾಮಿ, ಕುಮಾರಿಪ್ರಣಮ್ಯ, ಪ್ರಣೀತಾ, ಮುಂತಾದವರು ಇದ್ದರು.

Continue Reading
Advertisement
Transport Minister Ramalinga reddy
ಕರ್ನಾಟಕ2 hours ago

Ramalinga Reddy: 4 ಸಾರಿಗೆ ನಿಗಮಗಳ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ನೇಮಕ

DCM DK Shivakumar
ಕರ್ನಾಟಕ3 hours ago

Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು

Indian Railways help desk
ದೇಶ3 hours ago

Odisha Train Accident : ಅವಘಡದಲ್ಲಿ ಮೃತಪಟ್ಟವರನ್ನು ಗುರುತಿಸಲು ಭಾರತೀಯ ರೈಲ್ವೆ ಮನವಿ

Water tap
ಕರ್ನಾಟಕ4 hours ago

Koppal News: ಕನಕಗಿರಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Rehena Fathima
ದೇಶ4 hours ago

ಬೆತ್ತಲೆಯಾಗುವುದು ಯಾವಾಗಲೂ ಅಶ್ಲೀಲವಲ್ಲ: ಬೆತ್ತಲಾದ 33 ವರ್ಷದ ಮಹಿಳೆಗೆ ಕೇರಳ ಹೈಕೋರ್ಟ್​​ನಿಂದ ರಿಲೀಫ್​

A sapling was planted on the banks of Tunga in Shivamogga
ಕರ್ನಾಟಕ4 hours ago

World Environment Day: ಶಿವಮೊಗ್ಗದಲ್ಲಿ ಸಹಸ್ರ ವೃಕ್ಷಾರೋಪಣ; ಸಾವಿರ ಗಿಡ ನೆಡುವ ಅಭಿಯಾನಕ್ಕೆ ಚಾಲನೆ

Ashwini Vaishnav
ಪ್ರಮುಖ ಸುದ್ದಿ4 hours ago

ವಿಸ್ತಾರ ಸಂಪಾದಕೀಯ: ರೈಲು ದುರಂತ ಬಳಿಕ ಪರಿಹಾರ ಕಾರ್ಯ; ರೈಲ್ವೆ ಸಚಿವರ ನಡೆ ಅನುಕರಣೀಯ

World Environment Day celebration at Shirsi veda health centere
ಉತ್ತರ ಕನ್ನಡ4 hours ago

Uttara Kannada News: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

Ekana Stadium
ಕ್ರಿಕೆಟ್5 hours ago

ತಾಯಿ, ಮಗಳ ಜೀವ ತೆಗೆಯಿತು ಐಪಿಎಲ್ ಲಕ್ನೊ ತಂಡದ ಹೋರ್ಡಿಂಗ್

Bike Accident in Charmadi Ghat
ಕರ್ನಾಟಕ5 hours ago

Bike Accident: ಚಾರ್ಮಾಡಿ ಘಾಟ್‌ನಲ್ಲಿ ಸಾರಿಗೆ ಬಸ್‌ ಚಕ್ರಕ್ಕೆ ಸಿಲುಕಿ ಸ್ಕೂಟರ್‌ ಸವಾರ ಸಾವು

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Chakravarthy Sulibele and MB Patil
ಕರ್ನಾಟಕ15 hours ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ15 hours ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ22 hours ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

Mangalore Moral Policing News
ಉಡುಪಿ2 days ago

Video: ನಮ್ಮ ನಿದ್ದೆಗೆಡಿಸಿದ್ದಾರೆ; ಮುಸ್ಲಿಮರೊಂದಿಗೆ ಬೀಚ್​​ಗೆ ಬಂದಿದ್ದ ಹುಡುಗಿಯರ ವಿರುದ್ಧ ನಿಂತ ಮಹಿಳೆಯರು

horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸಲೇಬೇಕು!

South facing house vastu
ಭವಿಷ್ಯ3 days ago

Vastu Tips : ದಕ್ಷಿಣ ದಿಕ್ಕಿಗೆ ಬಾಗಿಲಿರುವ ಮನೆ ಕೂಡ ಶುಭವಂತೆ! ಹೌದೇ? ಏನೆನ್ನುತ್ತದೆ ವಾಸ್ತು ಶಾಸ್ತ್ರ?

jackfruit
ಕೃಷಿ3 days ago

Krishi Khajane : ಹುಲುಸಾಗಿ ಹಲಸು ಬೆಳೆಯಿರಿ, ಎಕರೆಗೆ 2.5 ಲಕ್ಷ ಆದಾಯ ಪಡೆಯಿರಿ!

Bus Driver
ಕರ್ನಾಟಕ3 days ago

Viral Video: ಬೆಂಗಳೂರು ಟ್ರಾಫಿಕ್‌ನಲ್ಲೇ ಊಟ ಮಾಡಿ ಮುಗಿಸಿದ ಡ್ರೈವರ್! ಇಲ್ಲಿದೆ ನೋಡಿ ವಿಡಿಯೊ

horoscope today
ಪ್ರಮುಖ ಸುದ್ದಿ3 days ago

Horoscope Today : ಈ ಮೂರು ರಾಶಿಯವರಿಗೆ ಖರ್ಚು ಹೆಚ್ಚು; ಇಂದು ನಿಮ್ಮ ಭವಿಷ್ಯ ಹೀಗಿದೆ

Siddaramaiah
ಕರ್ನಾಟಕ3 days ago

Congress Guarantee : ಹೂ ಈಸ್‌ ಯುವರ್‌ ಯಜಮಾನಿ? ಸಿದ್ದರಾಮಯ್ಯ ಸುದ್ದಿಗೋಷ್ಠಿಯ ತಮಾಷೆ ಪ್ರಸಂಗಗಳು ಇಲ್ಲಿವೆ!

ಟ್ರೆಂಡಿಂಗ್‌

error: Content is protected !!