Site icon Vistara News

Road Accident : ಬೈಕ್‌ಗಳಿಗೆ ಗುದ್ದಿ ಕರೆಂಟ್‌ ಕಂಬಕ್ಕೆ ಡಿಕ್ಕಿ ಹೊಡೆದ ಟೆಂಪೋ ಬೂದಿ! ದಂಪತಿ ಸಾವು

chintamani road accident tempo buried

ನೆಲಮಂಗಲ/ಚಿಕ್ಕಬಳ್ಳಾಪುರ: ರಾಜ್ಯದ ಪ್ರತ್ಯೇಕ ಕಡೆ ರಸ್ತೆ ಅಪಘಾತಗಳು (Road Accident) ಸಂಭವಿಸಿದ್ದು, ಸಾವು-ನೋವುಗಳು ಸಂಭವಿಸಿವೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 15 ಅಡಿ ವೃದ್ಧ ದಂಪತಿ ಹಾರಿಬಿದ್ದು ಗಾಯಗೊಂಡಿದ್ದಾರೆ. ಇನ್ನೊಂದು ಕಡೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಗೇಟ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಈ ವೇಳೆ ದಂಪತಿ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ, ಟೆಂಪೋ ಮತ್ತು ಬೈಕ್‌ಗಳು ಬೆಂಕಿಗಾಹುತಿಯಾಗಿವೆ.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ; ಇಬ್ಬರ ಸಾವು, ಮೂವರು ಗಂಭೀರ

ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಗೇಟ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಎರಡು ಬೈಕ್ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮತ್ತೆ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

chintamani road accident and ambulence

ಇದನ್ನೂ ಓದಿ: Video Viral : ರೈಲಿಗೆ ಸಿಲುಕೇ ಬಿಡುತ್ತಿದ್ದ ವೃದ್ಧನನ್ನು ಕಾಪಾಡಿದ ಆರ್‌ಪಿಎಫ್ ಕಾನ್‌ಸ್ಟೇಬಲ್!

ಅಪಘಾತದಲ್ಲಿ ಪತಿ ಪತ್ನಿ ದಾರುಣವಾಗಿ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಪತಿ ಶ್ರೀರಾಮಪ್ಪ, ಶ್ಯಾಮಲ ಮೃತ ದುರ್ದೈವಿಗಳು. ಇವರು ಎರಡು ಬೈಕ್‌ಗಳಲ್ಲಿ ಚಲಿಸುತಿದ್ದರು. ಟೆಂಪೊ ಚಾಲಕನ ಅಜಾಗರೂಕತೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ವೇಗವಾಗಿ ಬರುತ್ತಿದ್ದ ಟೆಂಪೋವೊಂದು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದ್ದು, ಬಳಿಕ ಮುಂದಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬದಲ್ಲಿ ಬೆಂಕಿ ಹತ್ತಿಕೊಂಡ ಪರಿಣಾಮ ಟೆಂಪೋ ಹಾಗೂ ಬೈಕ್‌ಗಳು ಸುಟ್ಟು ಕರಕಲಾಗಿವೆ. ಅಪಘಾತದ ಸ್ಥಳದಿಂದ ಟೆಂಪೋ ಚಾಲಕ ಪರಾರಿಯಾಗಿದ್ದಾನೆ. ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಿದ್ದಾರೆ.

Road Accident : ಸ್ಕೂಟರ್‌ಗೆ ಕಾರು ಡಿಕ್ಕಿಯಾಗಿ 15 ಅಡಿ ಹಾರಿಬಿದ್ದ ದಂಪತಿ!

ನೆಲಮಂಗಲ ತಾಲೂಕಿನ ತಿಪ್ಪಗೊಂಡನಹಳ್ಳಿ ಬಳಿ ಅಪಘಾತ ನಡೆದಿದೆ. ವೇಗವಾಗಿ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಕೂಟರ್‌ನಲ್ಲಿದ್ದ ಅವೆರಹಳ್ಳಿ ಗ್ರಾಮದ ವೆಂಕಟನರಸಪ್ಪ ಹಾಗೂ ಅವರ ಪತ್ನಿ ಶಾರದಾ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರ ನೆರವಿನಿಂದ ಅವರನ್ನು ನೆಲಮಂಗಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Hasirumakki launch : ಪ್ರವಾಸಿಗರ ಗಮನಕ್ಕೆ; ನಾಳೆಯಿಂದ ಹಸಿರುಮಕ್ಕಿ ಲಾಂಚ್ ಪುನಾರಂಭ

ಅಪಘಾತದಿಂದ ಶಾರದಾ ಅವರ ತಲೆಗೆ ಗಂಭೀರ ಗಾಯಗಾಳಗಿವೆ. ಇನ್ನು ವೆಂಕಟನರಸಪ್ಪ ಅವರ ಕಾಲೊಂದು ಮುರಿದಿದೆ. ತೀವ್ರವಾಗಿ ಗಾಯಗೊಂಡ ಅವರು ನಿತ್ರಾಣರಾಗಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ ಬಂದಿದ್ದರಿಂದ ಅವರನ್ನು ಸ್ಟ್ರೆಚರ್‌ ಮೂಲಕ ಮಲಗಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Exit mobile version