Site icon Vistara News

JDS Karnataka: ಸಿ.ಎಂ.ಇಬ್ರಾಹಿಂ ಜೆಡಿಎಸ್‌ ಚಿಹ್ನೆ, ಲೆಟರ್‌ ಹೆಡ್‌ ಬಳಸುವಂತಿಲ್ಲ: ಕೋರ್ಟ್‌ ಆದೇಶ

CM Ibrahim

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್‌ನಿಂದ (JDS Karnataka) ಉಚ್ಚಾಟಿತರಾಗಿರುವ ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಜೆಡಿಎಸ್‌ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ನಗರದ 9ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ಕೋರ್ಟ್‌ ಆದೇಶ ಹೊರಡಿಸಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜತೆ ಜೆಡಿಎಸ್‌ ಮೈತ್ರಿ ಘೋಷಿಸಿದ ಹಿನ್ನೆಲೆಯಲ್ಲಿ ಸಿಎಂ ಇಬ್ರಾಹಿಂ ಸೇರಿ ಜೆಡಿಎಸ್‌ನ ಅಲ್ಪಸಂಖ್ಯಾತ ನಾಯಕರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಜೆಡಿಎಸ್‌ ನಾಯಕರ ಬಗ್ಗೆ ಬಹಿರಂಗ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಿ.ಎಂ.ಇಬ್ರಾಹಿಂ ಅವರನ್ನು ಜೆಡಿಎಸ್‌ನಿಂದ ಉಚ್ಚಾಟಿಸಲಾಗಿತ್ತು.

ಪಕ್ಷದಿಂದ ಉಚ್ಚಾಟನೆ ಮಾಡಿದ್ದರೂ ನಮ್ಮದೇ ಮೂಲ ಜೆಡಿಎಸ್‌ ಪಕ್ಷ ಎಂದು ಸಿಎಂ ಇಬ್ರಾಹಿಂ ಹೇಳುತ್ತಿದ್ದರು. ಜತೆಗೆ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಿದ್ದರು. ಹೀಗಾಗಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಪಿ. ರಂಗನಾಥ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ | BJP Karnataka : ರಾಜ್ಯದಲ್ಲಿ ತಾಲಿಬಾನಿಗಳು ತಲೆ ಎತ್ತಿದ್ದಾರೆ ಹುಷಾರ್‌ ಎಂದ ಬೊಮ್ಮಾಯಿ

ಪಕ್ಷದಿಂದ ಉಚ್ಚಾಟಿತರಾಗಿರುವ ಸಿಎಂ ಇಬ್ರಾಹಿಂ ಅವರು ಯಾವುದೇ ಅಧಿಕಾರವಿಲ್ಲದಿದ್ದರೂ ಕಾನೂನು ಬಾಹಿರವಾಗಿ ಪಕ್ಷದ ಚಿಹ್ನೆ ಬಳಸಿಕೊಂಡು, ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಂಡು, ಪಕ್ಷದ ಹೆಸರು, ಚಿಹ್ನೆ ಬಳಸದಂತೆ ನಿರ್ಬಂಧ ಹೇರಬೇಕು ಎಂದು ಅರ್ಜಿದಾರ ಎ.ಪಿ. ರಂಗನಾಥ ಮನವಿ ಮಾಡಿದ್ದರು. ಆದ್ದರಿಂದ ಸಿ.ಎಂ.ಇಬ್ರಾಹಿಂ ಅವರಿಗೆ ಜೆಡಿಎಸ್‌ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಎಂದು ನಿರ್ಬಂಧ ವಿಧಿಸಿ ಕೋರ್ಟ್‌ ಆದೇಶ ನೀಡಿದೆ.

Exit mobile version