ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಲಿಂಗಾಯತ ಸಮುದಾಯದವರ (Lingayat Community) ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಆರೋಪದ ಮೇಲೆ ಸಿದ್ದರಾಮಯ್ಯ (CM Siddaramaiah) ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದ್ದ ಮಾನನಷ್ಟ ಮೊಕದ್ದಮೆ (Defamation case) ಅರ್ಜಿ ವಜಾಗೊಂಡಿದೆ.
ಶಂಕರ್ ಸೇಠ್ ಮತ್ತು ಮಲ್ಲಯ್ಯ ಹಿರೇಮಠ್ ಎಂಬುವರು ಸಿದ್ದರಾಮಯ್ಯ ವಿರುದ್ಧ ಖಾಸಗಿ ಅರ್ಜಿಯನ್ನು ಸಲ್ಲಿಸಿದ್ದರು. ಲಿಂಗಾಯತ ಸಿಎಂಗಳು ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ಲಿಂಗಾಯತ ಸಮುದಾಯಕ್ಕೆ ತೀವ್ರ ನೋವಾಗಿದೆ. ಅಲ್ಲದೆ, ಮಾನನಷ್ಟವಾಗುವಂತೆ ಮಾತನಾಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.
ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ನೀಡಿದ ಕೋರ್ಟ್
ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಪ್ರೀತ್ ಜೆ ಅವರು, ಮಾನನಷ್ಟ ಮೊಕದ್ದಮೆ ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ.
ಇದನ್ನೂ ಓದಿ: Defamation case: ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿ ಸೇರಿ 36 ಕೈ ನಾಯಕರಿಗೆ ಜಾಹೀರಾತು ಸಂಕಷ್ಟ!
ಸಿದ್ದರಾಮಯ್ಯ ಹೇಳಿದ್ದೇನು?
ವಿಧಾನಸಭೆ ಚುನಾವಣೆ ಅಂಗವಾಗಿ ವರುಣದಲ್ಲಿ ಸಿದ್ದರಾಮಯ್ಯ ಪ್ರಚಾರದಲ್ಲಿ ಭಾಗಿಯಾಗಿದ್ದರು. ಆಗ ಮಾಧ್ಯಮದವರ ಜತೆ ಮಾತನಾಡುವಾಗ ಲಿಂಗಾಯತ ಸಿಎಂ ವಿಚಾರ ಮುನ್ನಲೆಗೆ ಬಂದಿದೆ. ಇದಕ್ಕೆ ಕೋಪಗೊಂಡ ಸಿದ್ದರಾಮಯ್ಯ ಅವರು, ಈಗಾಗಲೇ ಲಿಂಗಾಯತ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಆಡಳಿತ ನಡೆಸಿದ್ದಾರೆ. ಅವರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ರಾಜ್ಯಾದ್ಯಂತ ಭಾರಿ ಆಕ್ರೋಶ ಹಾಗೂ ವಿರೋಧ ವ್ಯಕ್ತವಾಗಿತ್ತು. ಈ ಸಂಬಂಧ ಮಾನನಷ್ಟ ಮೊಕದ್ದಮೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿಯೂ ದಾಖಲು ಮಾಡಲಾಗಿತ್ತು.