Site icon Vistara News

ಬೆಳಂದೂರು ಡಿನೋಟಿಫಿಕೇಶನ್ ಪ್ರಕರಣ: ಬಿಎಸ್‌ವೈಗೆ ಜಾಮೀನು ಮಂಜೂರು

ಡಿನೋಟಿಫಿಕೇಶನ್ ಕೇಸ್‌

ಬೆಂಗಳೂರು: ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿನ ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಜಾಮೀನು ಮಂಜೂರು ಮಾಡಿದೆ.

2000-2001 ರಲ್ಲಿ ಐಟಿ ಪಾರ್ಕ್​ಗೆಂದು ಕೆಐಎಡಿಬಿಯಿಂದ ಬೆಳ್ಳಂದೂರು, ದೇವರಬೀಸನಹಳ್ಳಿಯಲ್ಲಿ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಬಿ.ಎಸ್. ಯಡಿಯೂರಪ್ಪ ಡಿಸಿಎಂ ಆಗಿದ್ದಾಗ 4.30 ಎಕರೆ ಡಿನೋಟಿಫಿಕೇಶನ್​ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ 2013ರಲ್ಲಿ ವಾಸುದೇವರೆಡ್ಡಿ ಎಂಬುವವರು ಠಾಣೆಯಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ದೂರಿನ ಸಂಬಂಧ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೋರ್ಟ್​ ಸಮನ್ಸ್ ಜಾರಿಗೊಳಿಸಿತ್ತು. ಮುಂದಿನ ವಿಚಾರಣೆ ಜೂನ್‌ 18ಕ್ಕೆ ನಿಗದಿಯಾಗಿತ್ತು.

ಈ ನಡುವೆ ಬಿಎಸ್‌ವೈ ಅವರು ಜೂನ್‌ ೧೭ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಬಿಎಸ್‌ ವೈ ಹಾಜರಾಗಿದ್ದು, ಕೋರ್ಟ್‌ ಜಾಮೀನು ನೀಡಿದೆ.

ಇದನ್ನೂ ಓದಿ | ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಕೇಸ್ : ಕೋರ್ಟ್​​ಗೆ ಹಾಜರಾದ ಬಿಎಸ್‌ವೈ

ಈ ಹಿಂದೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಅಭಿಯೋಜಕರಿಗೆ ಸೂಚನೆ ನೀಡಿ ವಿಚಾರಣೆಯನ್ನು ಜೂನ್ 18ಕ್ಕೆ ಮುಂದೂಡಿತ್ತು.

ಇದನ್ನೂ ಓದಿ | ಆಡುಮುಟ್ಟದ ಸೊಪ್ಪಿಲ್ಲ, ಬಿಎಸ್‌ವೈ ಮುಟ್ಟದ ಕ್ಷೇತ್ರವೇ ಇಲ್ಲ: ತಂದೆಯನ್ನು ವಿಜಯೇಂದ್ರ ಹಾಡಿ ಹೊಗಳಿದ್ದೇಕೆ?

Exit mobile version