Site icon Vistara News

Lokayukta Raid: ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಪುತ್ರನ ವಿರುದ್ಧ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟಿಸದಂತೆ ಕೋರ್ಟ್‌ ತಡೆಯಾಜ್ಞೆ

Madalu virupakshappa and son prashanth

#image_title

ಬೆಂಗಳೂರು: ಟೆಂಡರ್‌ಗಾಗಿ ಲಂಚ ಸ್ವೀಕಾರ ಪ್ರಕರಣದಲ್ಲಿ (Lokayukta Raid) ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಪುತ್ರ ಪ್ರಶಾಂತ್‌ ಪ್ರಶಾಂತ್‌ ಮಾಡಾಳ್‌ ವಿರುದ್ಧ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರಕ್ಕೆ ಬೆಂಗಳೂರಿನ ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಶಾಸಕ ವಿರೂಪಾಕ್ಷಪ್ಪ, ಪುತ್ರ ಪ್ರಶಾಂತ್‌ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ಪ್ರತಿಬಂಧಕಾದೇಶ ನೀಡಲಾಗಿದೆ. ಮುಂದಿನ ವಿಚಾರಣೆಯವರೆಗೆ ಮಾಧ್ಯಮಗಳು ಯಾವುದೇ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯ ಆದೇಶ ನೀಡಿದ್ದು, ಪ್ರಕರಣದ ವಿಚಾರಣೆಯನ್ನು ಏಪ್ರಿಲ್‌ 20ಕ್ಕೆ ಮುಂದೂಡಲಾಗಿದೆ.

Exit mobile version