Site icon Vistara News

Covid-19 | ಇನ್ನೂ 2ನೇ ಡೋಸ್‌ ಲಸಿಕೆ ಪಡೆಯದ 30 ಲಕ್ಷ ಜನ: ರಾಜ್ಯದಲ್ಲಿ ಹೈ ಅಲರ್ಟ್‌

Rakshit Shetty Richard Anthony Produce By Hombale

ಬೆಂಗಳೂರು: ದೇಶದ ವಿವಿಧೆಡೆಯಂತೆಯೇ ರಾಜ್ಯದಲ್ಲೂ ಕಳೆದೊಂದು ವಾರದಿಂದ ಕೋವಿಡ್‌-19 (Covid-19) ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್‌ ಜಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ.

ಪ್ರಕರಣ ಕಡಿಮೆಯಾದ ಹಿನ್ನೆಲೆಯಲ್ಲಿ ದೆಹಲಿ ಸೇರಿ ಅನೇಕ ಸ್ಥಳಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಬಳಕೆಗೆ ದಂಡ ವಿಧಿಸುವುದನ್ನು ಕೈಬಿಡಲಾಗಿತ್ತು. ಇಷ್ಟವಿದ್ದವರು ಮಾಸ್ಕ್‌ ಧರಿಸಲು ಆಯ್ಕೆ ನೀಡಲಾಗಿತ್ತು. ಆದರೆ ಕಳೆದೊಂದು ವಾರದಲ್ಲಿ ದೆಹಲಿಯಲ್ಲಿ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದೆ. ಇದಕ್ಕಾಗಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ.

ರಾಜ್ಯದಲ್ಲಿ ಕೊರೋನಾದ ನಾಲ್ಕನೇ ಅಲೆ ಬಂದಿಲ್ಲ. ಆದರೂ ಮಾಸ್ಕ್ ಧರಿಸುವ ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇದನ್ನು ಗಮನಿಸಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಜತೆಗೆ ಆರೋಗ್ಯ ಇಲಾಖೆಯ ಸಭೆ ನಡೆಸಿ ಕ್ರಮ ವಹಿಸಲಾಗುವುದು. ಜನರ ಸುರಕ್ಷತಾ ದೃಷ್ಟಿಯಿಂದ ಮಾಸ್ಕ್ ಧರಿಸುವುದು ಹಾಗೂ ಕೋವಿಡ್ ಮೂರನೇ ಡೋಸ್ ಪಡೆಯಲು ಸೂಚಿಸಲಾಗಿದೆ. ಆದರೆ ಇದನ್ನು ಹೆಚ್ಚಿನವರು ಪಾಲಿಸುತ್ತಿಲ್ಲ. ರಾಜ್ಯದಲ್ಲಿ ಇನ್ನೂ 29-30 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ ಎಂದರು.

ಹೆಚ್ಚಿನ ಓದಿಗಾಗಿ: IPL 2022 | ಐಪಿಎಲ್‌ ಬಬಲ್‌ ಒಳಗೆ ಸೇರಿದೆ ಕೊರೋನಾ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇಡುವುದು ಸೇರಿದಂತೆ ಹಲವು ಕ್ರಮ ವಹಿಸಲಾಗಿದೆ. ಆದರೂ ಬೇರೆ ರಾಜ್ಯಗಳಲ್ಲಿ ಸೋಂಕು ಹೆಚ್ಚಾದಾಗ ಸಹಜವಾಗಿ ಹರಡುತ್ತದೆ. ಆದ್ದರಿಂದ ಜನರು ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕಿದೆ. ಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆ ಹೆಚ್ಚಾಗಿ ನೀಡಿರುವುದರಿಂದ ಮೂರನೇ ಅಲೆ ನಿಯಂತ್ರಣಕ್ಕೆ ಬಂದಿದೆ. ಆದರೆ ರಾಜ್ಯದಲ್ಲಿ ನಾಲ್ಕನೇ ಅಲೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ 97.9% ಜನರು ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಮೊದಲ ಡೋಸ್ ಅನ್ನು ಪಡೆದವರ ಪ್ರಮಾಣ 100% ದಾಟಿದೆ. 12 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಿನವರಿಗೆ ಲಸಿಕೆ ಕೊಡಿಸಬೇಕಿದೆ. ಪೋಷಕರು ಈ ಬಗ್ಗೆ ಗಮನ ನೀಡಬೇಕು ಎಂದರು.

ಕರ್ನಾಟಕದಲ್ಲಿ ಕೋವಿಡ್‌ ಪ್ರಕರಣ
ದಿನಾಂಕಪ್ರಕರಣಗಳು
ಏಪ್ರಿಲ್‌ 162
ಏಪ್ರಿಲ್‌ 234
ಏಪ್ರಿಲ್‌ 350
ಏಪ್ರಿಲ್‌ 438
ಏಪ್ರಿಲ್‌ 529
ಏಪ್ರಿಲ್‌ 633
ಏಪ್ರಿಲ್‌ 763
ಏಪ್ರಿಲ್‌ 877
ಏಪ್ರಿಲ್‌ 946
ಏಪ್ರಿಲ್‌ 10 56
ಏಪ್ರಿಲ್‌ 1134
ಏಪ್ರಿಲ್‌ 1248
ಏಪ್ರಿಲ್‌ 1355
ಏಪ್ರಿಲ್‌ 1445
ಏಪ್ರಿಲ್‌ 1549
ಏಪ್ರಿಲ್‌ 1645
ಏಪ್ರಿಲ್‌ 1754
ಏಪ್ರಿಲ್‌ 18 53
ಏಪ್ರಿಲ್‌ 1962
Exit mobile version