Site icon Vistara News

covid-19 news |ರಾಜ್ಯದಲ್ಲಿ ಮತ್ತೆ ಹೆಚ್ಚಿದ ಸೋಂಕಿತರ ಸಂಖ್ಯೆ, ಒಬ್ಬರ ಸಾವು

covid-19

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 (covid-19) ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗಿದೆ. ಗುರುವಾರ ಒಂದೇ ದಿನ ರಾಜ್ಯಾದ್ಯಂತ 833 ಕೊರೊನಾ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್-19 ವೈರಸ್ ಸೋಂಕಿತರ ಸಂಖ್ಯೆ 39,58,824 ಕ್ಕೆ ಏರಿಕೆಯಾದಂತಾಗಿದೆ. ಬೆಂಗಳೂರು ನಗರದಲ್ಲಿಯೇ 791 ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವಿಟಿ ದರ ಶೇ.3.47ಕ್ಕೆ ಏರಿದೆ.

ಗುರುವಾರ ಕೋವಿಡ್‌ ಸೋಂಕಿನಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 40,068ಕ್ಕೆ ಏರಿಕೆಯಾಗಿದೆ. ಕಳೆದ ಕೆಲ ದಿನಗಳಿಂದ ಸಾವಿನ ಪ್ರಕರಣ ವರದಿಯಾಗಿರಲಿಲ್ಲ. ಮತ್ತೆ ಸಾವಿನ ಸರಣಿ ಆರಂಭಗೊಂಡಿರುವುದು ಆತಂಕ ಮೂಡಿಸಿದೆ.

ಗುರುವಾರ 458 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಒಟ್ಟು 39,14,343 ಸೋಂಕಿತರು ಗುಣಮುಖರಾಗಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 4,371ಕ್ಕೆ ಏರಿಕೆಯಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ಬಳ್ಳಾರಿ- 04, ಬೆಳಗಾವಿ- 02, ಬೆಂಗಳೂರು ಗ್ರಾಮಾಂತರ- 04,  ಬೆಂಗಳೂರು ನಗರ- 791, ಮಂಗಳೂರು- 06, ಧಾರವಾಡ- 03, ಕೋಲಾರ- 04, ಮೈಸೂರು- 12, ರಾಮನಗರ- 01, ಉಡುಪಿ- 05, ಉತ್ತರಕನ್ನಡ- 01

ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ, ಸರ್ಕಾರವು ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದೆ. ಎಲ್ಲಾ ಜಿಲ್ಲಾ ಕಣ್ಗಾವಲು (Surveillance) ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಂಕಿತ  ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಜೀನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಬೇಕೆಂದು ಸೂಚಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇರಿಸಬೇಕು. ಹೊಸ ತಳಿ ಪತ್ತೆಗಾಗಿ ವಿದೇಶಗಳಿಂದ ಆಗಮಿಸುವ ಶೇ. 2 ರಷ್ಟು ಪ್ರಯಾಣಿಕರನ್ನು ಸಾಮೂಹಿಕವಾಗಿ ಕೋವಿಡ್‌ ಪರೀಕ್ಷೆಗೊಳಪಡಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ| Covid news | ದೇಶದಲ್ಲಿ ಒಂದೇ ದಿನ 12 ಸಾವಿರ ಕೊರೊನಾ ಪ್ರಕರಣ, ಎಲ್ಲೆಲ್ಲಿ ಹೆಚ್ಚಳ?

Exit mobile version