Site icon Vistara News

Covid Fear | ಕರ್ನಾಟಕ ಸೇರಿದಂತೆ 7 ರಾಜ್ಯಗಳಿಗೆ ಕೇಂದ್ರದಿಂದ ಕೋವಿಡ್‌ ಅಲರ್ಟ್‌!

covid

ಬೆಂಗಳೂರು: ಕೋವಿಡ್‌ ಸೋಂಕಿನ (Covid Fear) ತೀವ್ರತೆ ಹೆಚ್ಚಾಗುತ್ತಿದ್ದು, ಕರ್ನಾಟಕ ಸೇರಿದಂತೆ 7 ರಾಜ್ಯಗಳಿಗೆ ಮೈಮರೆಯದಂತೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. 7 ರಾಜ್ಯಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್‌, ಸಾಲು ಸಾಲು ಹಬ್ಬಗಳು ಶುರುವಾಗುವುದರಿಂದ ಜನರು ಗುಂಪು ಸೇರುವುದನ್ನು ತಪ್ಪಿಸುವಂತೆ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

ಕರ್ನಾಟಕ, ತಮಿಳುನಾಡು, ಕೇರಳ, ಒಡಿಶಾ, ಮಹಾರಾಷ್ಟರ, ದೆಹಲಿ ಹಾಗೂ ತೆಲಂಗಾಣ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಹೀಗಾಗಿ ರಾಜ್ಯದ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್‌ ಅವರು ಆರೋಗ್ಯಾಧಿಕಾರಿಗಳಿಗೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.  

ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಆಗುತ್ತಿದೆ. ಹಲವು ರಾಜ್ಯಗಳಲ್ಲಿ ಪ್ರತಿನಿತ್ಯ ಸಾವಿರಕ್ಕಿಂತ ಅಧಿಕ ಕೋವಿಡ್‌ ಕೇಸ್‌ಗಳು ದೃಢಪಡುತ್ತಿವೆ. ಮುಂಬರುವ ಹಬ್ಬದ ದಿನಗಳಲ್ಲಿ ಜನರ ಗುಂಪುಗೂಡುವಿಕೆಯು ದೇಶದ ಅನೇಕ ಭಾಗಗಳಲ್ಲಿ ಕೋವಿಡ್ 19 ಸೇರಿದಂತೆ ಸಾಂಕ್ರಾಮಿಕ ಕಾಯಿಲೆಗಳ ಹರಡುವಿಕೆಗೆ ಕಾರಣವಾಗಬಹುದು.

ಕಳೆದ ಒಂದು ತಿಂಗಳಲ್ಲಿ ದೈನಂದಿನ ಹೊಸ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಪ್ರತಿದಿನ ಸರಾಸರಿ 1,355 ಪ್ರಕರಣಗಳು ದಾಖಲಾಗುತ್ತಿವೆ. ರಾಜ್ಯದಲ್ಲಿ ಆಗಸ್ಟ್ 5ರಂದು ಅತ್ಯಧಿಕ 1992 ಪ್ರಕರಣ ವರದಿಯಾಗಿವೆ. ಹೀಗಾಗಿ ಎಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

ಇದನ್ನೂ ಓದಿ | GOOD NEWS| ಖಾಸಗಿ ಕಂಪನಿಗಳಲ್ಲಿ ಕೋವಿಡ್‌ ಪೂರ್ವಮಟ್ಟಕ್ಕಿಂತಲೂ ಹೆಚ್ಚಿನ ವೇತನ ಏರಿಕೆ

Exit mobile version