Site icon Vistara News

Coronavirus News: ಜ. 6ರಂದು ಕೋವಿಡ್‌ ಹೆಲ್ಪ್‌ಲೈನ್‌ ಆರಂಭ: ದಿನೇಶ್‌ ಗುಂಡೂರಾವ್‌

Dinesh Gundu Rao

ಬೆಂಗಳೂರು: ಕರ್ನಾಟಕದಲ್ಲಿ 1240 ಕೊರೊನಾ ಸಕ್ರಿಯ ಪ್ರಕರಣಗಳು (Coronavirus News) ಇವೆ. ಪಾಸಿಟಿವಿಟಿ ದರ ಹೆಚ್ಚಾಗಿದ್ದರೂ ಟೆಸ್ಟಿಂಗ್ ಪ್ರಮಾಣವೂ ಅಷ್ಟೇ ಹೆಚ್ಚಳವಾಗಿದೆ. ರೋಗ ಲಕ್ಷಣ ಇರುವವರ ಮೇಲೆ ನಿಗಾ ಇಟ್ಟು, ಟೆಸ್ಟಿಂಗ್ ಮಾಡಲಾಗುತ್ತಿದೆ. ಕೊರೊನಾ ಸೋಂಕಿತರ ಸಮಸ್ಯೆ ಆಲಿಸಲು ಜ. 6ರಂದು ಕೋವಿಡ್‌ 19 ಹೆಲ್ಪ್‌ಲೈನ್‌ಗೆ (Covid 19 Helpline) ಚಾಲನೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್‌ ಪಾಸಿಟಿವಿಟಿ ರೇಟ್ ಶೇ. 3.28 ಇದೆ. ಕೇರಳದಲ್ಲಿ ಇಳಿಕೆಯಾಗುತ್ತಿದ್ದು, ಕರ್ನಾಟಕದಲ್ಲಿ ಇಳಿಕೆಯ ಟ್ರೆಂಡ್ ಇನ್ನೂ ಶುರುವಾಗಿಲ್ಲ. ಮುಂದಿನ ದಿನದಲ್ಲಿ ಕಡಿಮೆಯಾಗಬಹುದು. ನಿನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ಮಾಡಿ ಮಾರ್ಗದರ್ಶನ ನೀಡಿದ್ದಾರೆ. ಈಗ 20ರಲ್ಲಿ ಒಂದು ಕೇಸ್‌ಗೆ ಟೆಸ್ಟ್ ಮಾಡುತ್ತಿದ್ದೇವೆ. ಎಲ್ಲಾ ಶೀತ ಜ್ವರ ಮಾದರಿ ಸಮಸ್ಯೆ (ಐಎಲ್‌ಐ) ಇರುವವರು ಸೇರಿ ವಯಸ್ಸಾಗಿರುವವರು ಟೆಸ್ಟ್‌ ಮಾಡಿಸಬೇಕು ಎಂದು ತಿಳಿಸಿದರು.

ಮನೆಯಲ್ಲಿ ಐಸೋಲೇಷನ್ ಆಗಿರುವ ವೃದ್ಧರ ಮೇಲೆ ತೀವ್ರ ನಿಗಾ ವಹಿಸಿದ್ದೇವೆ. ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರು ಮಾತ್ರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಬೇಕು ಎಂದು ಸೂಚಿಸಿದ್ದೇವೆ. ಡೆತ್ ಆಡಿಟ್ ಕಮಿಟಿ ರಚನೆಯಾಗಿದೆ. ಡಾ. ಶಶಿಭೂಷಣ್ ಅವರನ್ನು ಕಮಿಟಿ ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಇದುವರೆಗೆ ಒಟ್ಟು 20 ಸಾವು ಆಗಿದೆ. ಅದರಲ್ಲಿ 10 ಸಾವಿನ ಆಡಿಟ್ ರಿಪೋರ್ಟ್ ಬಂದಿದೆ. ಒಬ್ಬರ ಸಾವಿಗೆ ಮಾತ್ರ ಕೊರೊನಾ ಕಾರಣವಾಗಿತ್ತು. ಉಳಿದ ಮೃತರಿಗೆ ಅನ್ಯ ಕಾಯಿಲೆ ಇತ್ತು. ಹೀಗಾಗಿ ಎಲ್ಲಾ ಮೃತ ಸೋಂಕಿತರ ಡೆತ್ ಆಡಿಟ್‌ಗೆ ಸೂಚನೆ ಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ | Drought Relief: ರೈತರಿಗೆ 2 ಸಾವಿರ ರೂಪಾಯಿ ಬರ ಪರಿಹಾರ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಕೊರೊನಾ (Coronavirus News) ರೂಪಾಂತರ ಜೆ.ಎನ್- 1 ಸೋಂಕು ಕಾಣಿಸಿಕೊಂಡಿದ್ದರೂ ಜನತೆ ಆತಂಕಗೊಳ್ಳುವುದು ಬೇಡ. ಈ ಸಂಬಂಧ ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಲ್ಲದೆ, 60 ವರ್ಷ ಮೇಲ್ಪಟ್ಟವರು ಹಾಗೂ ದೀರ್ಘವ್ಯಾದಿಯಿಂದ ಬಳಲುತ್ತಿರುವವರು ಬುಧವಾರದಿಂದಲೇ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ (Medical Education Minister Dr Sharan Prakash Patil) ಸಲಹೆ ನೀಡಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖಾ ವ್ಯಾಪ್ತಿಗೆ ಒಳಪಡುವ ವಿವಿಧ ಆಸ್ಪತ್ರೆಗಳ ಮುಖ್ಯಸ್ಥರು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು, ಸದಸ್ಯರ ಜತೆ ಸಭೆ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್, ಪ್ರಸ್ತುತ ರಾಜ್ಯದಲ್ಲಿ ಕೋವಿಡ್ -19 ನಿಯಂತ್ರಣ ಹಾಗೂ ಪೂರ್ವ ಸಿದ್ದತೆಗಳ ಕುರಿತು ಮಾಹಿತಿ ಪಡೆದುಕೊಂಡರು.

ರೂಪಾಂತರ ಜೆ.ಎನ್-1 ಸೋಂಕು ಕಾಣಿಸಿಕೊಂಡಿದ್ದರೂ ಇದು ಮನುಷ್ಯರ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ, ಹಾಗೂ ತಜ್ಞರೇ ಹೇಳಿದ್ದಾರೆ. ಆದರೂ ಇದರ ಬಗ್ಗೆ ನಿರ್ಲಕ್ಷ್ಯ ವಹಿಸದೆ, ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಜನಜಾಗೃತಿ ಮೂಡಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಪ್ರಸ್ತುತ ಕೇಂದ್ರ ಸರ್ಕಾರ ರಾಜ್ಯಕ್ಕೆ 30 ಸಾವಿರ ಕೋವಿಡ್ ವ್ಯಾಕ್ಸಿನ್ ಬಂದಿದೆ. ಇದರ ಕೊರತೆಯಾಗದಂತೆ ಎಲ್ಲ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದರು.

Exit mobile version