COVID Subvariant JN.1 : ರಾಜ್ಯದಲ್ಲಿ JN.1 ಪತ್ತೆಯಾಗಿಲ್ಲ; ಆದರೂ ಕಟ್ಟೆಚ್ಚರ; ಟೆಸ್ಟಿಂಗ್‌ ಹೆಚ್ಚಳ - Vistara News

ಆರೋಗ್ಯ

COVID Subvariant JN.1 : ರಾಜ್ಯದಲ್ಲಿ JN.1 ಪತ್ತೆಯಾಗಿಲ್ಲ; ಆದರೂ ಕಟ್ಟೆಚ್ಚರ; ಟೆಸ್ಟಿಂಗ್‌ ಹೆಚ್ಚಳ

COVID Subvariant JN.1 : ರಾಜ್ಯದಲ್ಲಿ ನಾಲ್ಕು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಆದರೆ, ಇವು ಕೇರಳದಲ್ಲಿ ಪತ್ತೆಯಾದ ತಳಿಗಳಲ್ಲ. ರಾಜ್ಯದಲ್ಲಿ ಇನ್ನೂ ಜೆಎನ್‌.1 ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂ ರಾವ್‌ ಹೇಳಿದ್ದಾರೆ.

VISTARANEWS.COM


on

Corona gundu rao Meeting1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇರಳದಲ್ಲಿ ಕೋವಿಡ್ ಉಪ ತಳಿ ಜೆಎನ್‌ 1 (COVID Subvariant JN.1) ಪತ್ತೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದಲ್ಲಿ ಸೋಮವಾರ ಮತ್ತು ಮಂಗಳವಾರ ಒಟ್ಟು ನಾಲ್ಕು ಕೋವಿಡ್‌‌ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಮೂರು ಪ್ರಕರಣ ಪತ್ತೆಯಾಗಿದ್ದು, ಅದರಲ್ಲಿ ಒಬ್ಬರು ಗುಣಮುಖರಾಗಿದ್ದಾರೆ. ಚಾಮರಾಜನಗರ ಮತ್ತು ರಾಮನಗರದಲ್ಲಿ ಒಂದೊಂದು ಕೇಸು ಕಂಡುಬಂದಿದೆ. ಆದರೆ, ಇದು ಸಾಮಾನ್ಯ ಕೊರೊನಾ ಪ್ರಕರಣಗಳು, ಕೋವಿಡ್‌ ಉಪತಳಿ ಜೆಎನ್‌ 1 ಅಲ್ಲ ಎಂದು ರಾಜ್ಯದ ಆರೋಗ್ಯ ಸಚಿವ ದಿನೇಶ್‌ ಗುಂಡೂ ರಾವ್‌ (Health Minister Dinesh Gundu Rao) ಹೇಳಿದ್ದಾರೆ.

ರಾಜ್ಯದಲ್ಲಿನ ಪರಿಸ್ಥಿತಿಯ ಬಗ್ಗೆ ಅವಲೋಕನಕ್ಕಾಗಿ ಸಚಿವ ದಿನೇಶ್‌ ಗುಂಡೂ ರಾವ್‌ ಅವರು ಮಂಗಳವಾರ ಸಂಜೆ ಆರೋಗ್ಯಾಧಿಕಾರಿಗಳು ಮತ್ತು ತಾಂತ್ರಿಕ ಸಲಹಾ ಸಮಿತಿ ಸಭೆಯ ಬಳಿಕ ಮಾತನಾಡಿದರು. ರಾಜ್ಯದಲ್ಲಿ ಇಲ್ಲಿಯ ವರೆಗೆ ಜೆ.ಎನ್ 1 ಪತ್ತೆ ಆಗಿಲ್ಲ ಸಭೆಯಲ್ಲಿ ಆರೋಗ್ಯ ಅಧಿಕಾರಿಗಳು ಸ್ಪಷ್ಟಪಡಿಸಿದರು. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟ್ ಗಳನ್ನು ಮಾಡುವಂತೆ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಬುಧವಾರ ಬೆಳಗ್ಗೆ ಕೇಂದ್ರದ ಆರೋಗ್ಯ ಸಚಿವರು ಎಲ್ಲಾ ರಾಜ್ಯದ ಆರೋಗ್ಯ ಸಚಿವರ ಜೊತೆ ಚರ್ಚೆ ನಡೆಸಲಿದ್ದಾರೆ.

ಸಭೆ ಬಳಿಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದು..

  1. ಕೋವಿಡ್ ಟೆಸ್ಟಿಂಗ್ ಹೆಚ್ಚಿಸಲು ಸೂಚನೆ ನೀಡಲಾಗಿದೆ.. ಮುಂಬರುವ ಶನಿವಾರದ ವೇಳೆಗೆ ಪ್ರತಿ ನಿತ್ಯ 5 ಸಾವಿರ ಪ್ರಕರಣಗಳ ಟೆಸ್ಟಿಂಗ್ ನಡೆಸುವಂತಾಗಬೇಕು.‌
  2. ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆ ವರ್ಚುವಲ್ ಸಭೆ ನಡೆಸಿ ಕೋವಿಡ್ ಕುರಿತು ನಿಗಾ ಇಡುವಂತೆ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸಚಿವರ ಸೂಚನೆ.
  3. ಹೃದಯ ಸಂಬಂಧಿ, ಉಸಿರಾಟದ ಸಮಸ್ಯೆ, ಇನ್ಫೆಕ್ಷನ್ ಗಳಿಗೆ ಒಳಗಾದವರನ್ನು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಕೋವಿಡ್ ಟೆಸ್ಟಿಂಗ್ ಒಳಪಡಿಸಲು ಸೂಚನೆ.
  4. ಆಕ್ಸಿಜನ್, ವೆಂಟಿಲೇಟರ್, ಐಸಿಯು ಬೆಡ್ ಗಳನ್ನೂ ಸನ್ನದ್ಧ ಸ್ಥಿತಿಯಲ್ಲಿರಿಸಿಕೊಂಡು ಮುಂಜಾಗೃತವಾಗಿ ಸಜ್ಜಾಗಿರಬೇಕು.
  5. ವೈರಲ್ ಟ್ರಾನ್ಸಪೋರ್ಟ್ ಮೀಡಿಯಾ ಸಪ್ಲೆ ಮಾಡೋದಕ್ಕೆ ಕೇಳಲಾಗಿದೆ.
  6. ಹೊರ ರಾಜ್ಯಗಳಿಂದ ಬಂದವರಲ್ಲಿ ಕೋವಿಡ್ ಲಕ್ಷಣಗಳಿದ್ದವರನ್ನ ಕಡ್ಡಾಯವಾಗಿ ಟೆಸ್ಟಿಂಗ್ ಒಳಪಡಿಸಬೇಕು.‌
  7. ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ. ಸದ್ಯಕ್ಕೆ ಗಡಿ ಬಂದ್ ಮಾಡುವ ಪರಿಸ್ಥಿತಿ ಇಲ್ಲ.
  8. ರಾಜ್ಯಾದ್ಯಂತ ಅಗತ್ಯ ಆರ್.ಟಿ.ಪಿ.ಸಿ.ಆರ್ ಟೆಸ್ಟಿಂಗ್ ಕಿಟ್ ಸರಬರಾಜಿಗೆ ಸೂಚನೆ.

ಇದನ್ನೂ ಓದಿ: COVID Subvariant JN1: ಕೋವಿಡ್‌ ರಕ್ಷಣೆಗೆ 2 ಮಾರ್ಗಸೂಚಿ; ಹಿರಿಯರು, ಗರ್ಭಿಣಿ, ತಾಯಂದಿರಿಗೆ ಮಾಸ್ಕ್‌ ಕಡ್ಡಾಯ

Corona gundu rao Meeting1
ಆರೋಗ್ಯ ಇಲಾಖೆಯ ಸಭೆಯಲ್ಲಿ ಸಚಿವ ದಿನೇಶ್‌ ಗುಂಡೂರಾವ್‌ ಮತ್ತು ಇತರ ಅಧಿಕಾರಿಗಳು

ಜನರಲ್ಲಿ ಭಯ ಸೃಷ್ಟಿ ಮಾಡುವುದು ಬೇಡ

ಈ ನಡುವೆ, ಸಭೆಯಲ್ಲಿ ಮಾತನಾಡಿದ ದಿನೇಶ್‌ ಗುಂಡೂ ರಾವ್‌ ಅವರು ಮುನ್ನೆಚ್ಚರಿಕೆ ವಹಿಸೋಣ. ಆದರೆ, ಜನರಲ್ಲಿ ಭಯ ಇಲ್ಲವೇ ಗೊಂದಲ ಹುಟ್ಟಿಸುವುದು ಬೇಡ ಎಂದು ಸಲಹೆ ನೀಡಿದರು.

ಮುಂದಿನ ದಿನಗಳಲ್ಲಿ JN 1 ಬಗ್ಗೆ ಸ್ಪಷ್ಟ ಮಾಹಿತಿ ಪಡೆದುಕೊಂಡು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಕೇಂದ್ರ ಸರ್ಕಾರದ ಬಳಿ ಹೆಚ್ಚು ಮಾಹಿತಿ ಇರುತ್ತದೆ. ಅದನ್ನು ಹಂಚಿಕೊಳ್ಳುತ್ತೇವೆ. ಗುರುವಾರ ಸಿಎಂ ಅವರು ಬೆಂಗಳೂರಿಗೆ ಬರುತ್ತಾರೆ. ಈಗಾಗಲೇ ಅವರ ಜತೆ ಮಾತನಾಡಿದ್ದೇನೆ. ಹೊಸ ರೂಪಾಂತರಿ ಬಗ್ಗೆ ತಿಳಿದುಕೊಂಡು ಸ್ಪಷ್ಟ ಮಾಹಿತಿ ಪಡೆದು ಹೆಜ್ಜೆ ಇಡುತ್ತೇವೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

Fortis Hospital: ಕೊನೆಯ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಯೆಮನ್‌ ದೇಶದ 11 ವರ್ಷದ ಬಾಲಕ ಮತ್ತು ಬೆಂಗಳೂರಿನ 34 ವರ್ಷದ ವ್ಯಕ್ತಿಗೆ ರೋಬೋಟಿಕ್‌ ಸಹಾಯದಿಂದ ಅಪರೂಪದ “ಸಂಕೀರ್ಣ ಕಿಡ್ನಿ ಕಸಿ” ಶಸ್ತ್ರಚಿಕಿತ್ಸೆಯನ್ನು ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ ಎಂದು ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ತಿಳಿಸಿದ್ದಾರೆ.ಆಸ್ಪತ್ರೆಯ ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ಹಾಗೂ ನೆಫ್ರಾಲಜಿಸ್ಟ್‌ ಡಾ. ಎಸ್‌. ಮಂಜುನಾಥ್ ಅವರ ತಂಡವು ಈ ಶಸ್ತ್ರಚಿಕಿತ್ಸೆ ನಡೆಸಿದೆ.

VISTARANEWS.COM


on

Fortis Hospital doctors team performed a successful complex kidney transplant surgery for two patients with robotic assistance
Koo

ಬೆಂಗಳೂರು: ಕೊನೆಯ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಯೆಮನ್‌ ದೇಶದ 11 ವರ್ಷದ ಬಾಲಕ ಮತ್ತು ಬೆಂಗಳೂರಿನ 34 ವರ್ಷದ ವ್ಯಕ್ತಿಗೆ ರೋಬೋಟಿಕ್‌ ಸಹಾಯದಿಂದ ಅಪರೂಪದ “ಸಂಕೀರ್ಣ ಕಿಡ್ನಿ ಕಸಿ” ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ ಎಂದು ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೆಮೆನ್‌ ದೇಶದ 11 ವರ್ಷದ ಬಾಲಕ ಮತ್ತು ಬೆಂಗಳೂರಿನ 34 ವರ್ಷದ ವ್ಯಕ್ತಿ ಈ ಇಬ್ಬರಿಗೂ ರೋಬೋಟ್‌ ತಂತ್ರಜ್ಞಾನ ಬಳಸಿ ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ಹಾಗೂ ನೆಫ್ರಾಲಜಿಸ್ಟ್‌ ಡಾ. ಎಸ್‌. ಮಂಜುನಾಥ್ ಅವರ ತಂಡ ಶಸ್ತ್ರಚಿಕಿತ್ಸೆ ನಡೆಸಿದೆ ಎಂದರು.

ಇದನ್ನೂ ಓದಿ: ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

ಯೆಮನ್‌ ದೇಶದ 11 ವರ್ಷದ ಅಹ್ಮದ್ ಎಂಬ ಬಾಲಕನು ನಾಲ್ಕನೇ ವಯಸ್ಸಿನಿಂದಲೇ ಮೂತ್ರಪಿಂಡಕ್ಕೆ ಸಂಬಂಧಿಸಿದ ಸ್ಟೆರಾಯ್ಡ್ ರೆಸಿಸ್ಟೆಂಟ್ ನೆಫ್ರೋಟಿಕ್ ಸಿಂಡ್ರೋಮ್ (ಎಸ್‌ಆರ್‌ಎನ್‌ಎಸ್) ನಿಂದ ಬಳಲುತ್ತಿದ್ದರು. ನೆಫ್ರೋಟಿಕ್ ಸಿಂಡ್ರೋಮ್ ಒಂದು ಮೂತ್ರಪಿಂಡದ ಕಾಯಿಲೆಯಾಗಿದ್ದು, ಮೂತ್ರದಲ್ಲಿ ಪ್ರೋಟೀನ್ ಇರುವಿಕೆ, ರಕ್ತದಲ್ಲಿನ ಕಡಿಮೆ ಮಟ್ಟದ ಪ್ರೋಟೀನ್, ಅಧಿಕ ಕೊಲೆಸ್ಟ್ರಾಲ್ ಮತ್ತು ಊತದಿಂದ ಕೂಡಿತ್ತು. ಎಸ್‌ಆರ್‌ಎನ್‌ಎಸ್‌ನಲ್ಲಿ, ಸ್ಟಿರಾಯ್ಡ್‌ಗಳ ಚಿಕಿತ್ಸೆಯ ಹೊರತಾಗಿಯೂ ಮೂತ್ರಪಿಂಡಗಳು ಹೆಚ್ಚಿನ ಪ್ರಮಾಣದ ಪ್ರೋಟೀನ್‌ಗಳನ್ನು ಮೂತ್ರಕ್ಕೆ ಸೋರಿಕೆ ಮಾಡುವುದನ್ನು ಮುಂದುವರಿಸುತ್ತವೆ ಎಂದು ವಿವರಿಸಿದರು.

ಸ್ಟೀರಾಯ್ಡ್‌ಗಳಿಗೆ ಈ ಪ್ರತಿರೋಧವು ನಿರಂತರ ಅಥವಾ ಮರುಕಳಿಸುವ ನೆಫ್ರೋಟಿಕ್ ಸಿಂಡ್ರೋಮ್‌ಗೆ ಕಾರಣವಾಗಬಹುದು, ಇದರಿಂದ ಭವಿಷ್ಯದಲ್ಲಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗೆ ಕಾರಣವಾಗಬಹುದು. ಇದೇ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕನಿಗೆ ಸಾಕಷ್ಟು ಕಡೆ ಚಿಕಿತ್ಸೆ ಕೊಡಿಸಿದ್ದರೂ ಸಹ ಫಲಕಾರಿಯಾಗದೆ ಕಾಯಿಲೆ ಕೊನೆಯ ಹಂತಕ್ಕೆ ಬಂದು ತಲುಪಿತ್ತು. ಬಳಿಕ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಬಾಲಕನ ವಯಸ್ಸು ಕಡಿಮೆ ಇರುವ ಕಾರಣ, ಸಾಕಷ್ಟು ಮುತುವರ್ಜಿ ವಹಿಸಿ ರೋಬೋಟ್‌ ಸಹಾಯದ ಮೂಲಕ ಬಾಲಕನಿಗೆ ಕಿಡ್ನಿ ಕಸಿ ಮಾಡಲು ನಿರ್ಣಯಿಸಿದೆವು. ರೋಬೋಟ್‌ ಸಹಾಯದಿಂದ ಮಾತ್ರವೇ ನಿಖರವಾಗಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಬಾಲಕನ ಚಿಕ್ಕಮ್ಮನ ಒಂದು ಕಿಡ್ನಿಯನ್ನು ಹುಡುಗನಿಗೆ ಶಸ್ತ್ರಚಿಕಿತ್ಸೆಯ ಮೂಲಕ ಅಳವಡಿಸಲಾಯಿತು. ಇದೀಗ ಬಾಲಕ ಆರೋಗ್ಯವಾಗಿದ್ದು, ಶಸ್ತ್ರಚಿಕಿತ್ಸೆಯ ಐದು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಯಿತು ಎಂದು ತಿಳಿಸಿದರು.

ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದ 34 ವರ್ಷದ ಚೇತನ್, ಮೊದಲಿನಿಂದಲೂ ಕೇವಲ ಒಂದು ಕಿಡ್ನಿಯನ್ನು ಮಾತ್ರ ಹೊಂದಿದ್ದರು, ಜತೆಗೆ ಅಧಿಕ ರಕ್ತದೊತ್ತಡ ಇದ್ದ ಕಾರಣ ಅವರ ಒಂದು ಕಿಡ್ನಿಯೂ ಸಹ ಕಾಯಿಲೆಗೆ ತುತ್ತಾಗಿತ್ತು, ಕೊನೆಯ ಹಂತಕ್ಕೆ ತಲುಪಿದ್ದರಿಂದ ಇವರ ಜೀವಕ್ಕೂ ಆಪತ್ತು ಕಾದಿತ್ತು. ಹೀಗಾಗಿ ಇವರಿಗೆ 74 ವರ್ಷದ ಸ್ವಂತ ತಂದೆಯೇ ತಮ್ಮ ಕಿಡ್ನಿಯನ್ನು ದಾನ ಮಾಡಿದ್ದಾರೆ. ಇವರಿಗೂ ಸಹ ರೋಬೋಟ್‌ ಸಹಾಯದ ಮೂಲಕವೇ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಯಶಸ್ವಿಯಾಗಿದೆ ಎಂದು ಅವರು ವಿವರಿಸಿದರು.

ಇದನ್ನೂ ಒದಿ: Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

ರೋಬೋಟ್‌ ಶಸ್ತ್ರಚಿಕಿತ್ಸೆಯು ಹೆಚ್ಚು ನಿಖರವಾದ ಛೇದನವನ್ನು ಅನುಸರಿಸಲಿದ್ದು, ಇತರೆ ಯಾವುದೇ ಅಂಗಾಂಗಳಿಗೆ ಘಾಸಿ ಮಾಡುವುದಿಲ್ಲ, ರೋಬೋಟಿಕ್‌ ಶಸ್ತ್ರಚಿಕಿತ್ಸೆಯಿಂದ ವೇಗವಾಗಿಯೂ ಚೇತರಿಸಿಕೊಳ್ಳಲು ನೆರವಾಗಲಿದೆ ಎಂದು ಹೇಳಿದರು.

Continue Reading

ವಿಜಯನಗರ

Vijayanagara News: ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಡಿಸಿ ಎಚ್ಚರಿಕೆ

Vijayanagara News: ಹೊಸಪೇಟೆ ನಗರದ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾಗಿ ಚಿಕಿತ್ಸೆ ನೀಡದೇ ಸಾವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯ ಸಂಘ ಸಂಸ್ಥೆಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಎಸ್ಪಿ ಶ್ರೀಹರಿಬಾಬು ಅವರ ನೇತೃತ್ವದಲ್ಲಿ ವಿಜಯನಗರ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಭೆ ನಡೆಯಿತು.

VISTARANEWS.COM


on

private hospitals heads and health department officers Meeting at vijayanagara DC office
Koo

ಹೊಸಪೇಟೆ: ನಗರದ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾಗಿ ಚಿಕಿತ್ಸೆ ನೀಡದೇ ಸಾವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯ ಸಂಘ ಸಂಸ್ಥೆಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಎಸ್ಪಿ ಶ್ರೀಹರಿಬಾಬು ಅವರ ನೇತೃತ್ವದಲ್ಲಿ ವಿಜಯನಗರ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಡಿಸಿ ಕಚೇರಿ ಸಭಾಂಗಣದಲ್ಲಿ (Vijayanagara News) ಮಂಗಳವಾರ ಸಭೆ ನಡೆಯಿತು.

ಈ ವೇಳೆ ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌ ಮಾತನಾಡಿ, ಸರಿಯಾಗಿ ಚಿಕಿತ್ಸೆ ಸಿಗದೇ ಖಾಸಗಿ ಆಸ್ಪತ್ರೆಗಳಲ್ಲಿ ಸಾವುಗಳು ಸಂಭವಿಸುತ್ತಿವೆ ಎನ್ನುವ ದೂರಿನ ಬಗ್ಗೆ ಖಾಸಗಿ ಆಸ್ಪತ್ರೆಗಳು ಗಂಭೀರವಾಗಿ ಪರಿಗಣಿಸಬೇಕು. ಖಾಸಗಿ ಆಸ್ಪತ್ರೆಗಳಿಗೆ ಬರುವ ಯಾವುದೇ ರೋಗಿಗಳು ಮತ್ತು ಆ ರೋಗಿಯ ಸಂಬಂಧಿಕರೊಂದಿಗೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯು ಸಹನೆ, ಸಂಯಮ ಮತ್ತು ತಾಳ್ಮೆಯಿಂದ ನಡೆದುಕೊಳ್ಳಬೇಕು. ದುರ್ವರ್ತನೆ ತೋರಬಾರದು. ಮಾನವೀಯತೆಯಿಂದ ನಡೆದುಕೊಳ್ಳಬೇಕು. ಲೋಪ ಎಸಗಿರುವುದು ಕಂಡುಬಂದಲ್ಲಿ ಯಾರೇ ಆಗಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಮಾತನಾಡಿ, ವೈದ್ಯರನ್ನು ದೇವರ ಸಮಾನ ಎಂದು ನಮ್ಮ ಸಮಾಜವು ವೈದ್ಯರಿಗೆ ಗೌರವಯುತ ಸ್ಥಾನ ನೀಡಿದೆ. ಕೆಲವು ವೈದ್ಯರು ಮತ್ತು ಅವರ ಆಸ್ಪತ್ರೆಗಳಲ್ಲಿನ ಸಿಬ್ಬಂದಿ ತೋರುವ ನಿರ್ಲಕ್ಷ್ಯದಿಂದಾಗಿ ಸಾವುಗಳು ಸಂಭವಿಸಿ ಇಡೀ ವೈದ್ಯ ಸಮೂಹವನ್ನೇ ಕೆಟ್ಟ ದೃಷ್ಟಿಯಿಂದ ನೋಡುವಂತಾಗುತ್ತದೆ. ವೈದ್ಯರು ಮತ್ತು ಸಾರ್ವಜನಿಕ ಮಧ್ಯೆ ಇರುವ ನಂಬಿಕೆಗೆ ಧಕ್ಕೆ ಬಾರದ ಹಾಗೆ ಮತ್ತು ಸಾರ್ವಜನಿಕರಿಗೆ ವೈದ್ಯರ ಮೇಲೆ ವಿಶ್ವಾಸ ಬರುವ ಹಾಗೆ ಎಲ್ಲಾ ವೈದ್ಯರು ಮತ್ತು ಆಯಾ ಆಸ್ಪತ್ರೆಗಳಲ್ಲಿನ ಸಿಬ್ಬಂದಿಯು ಪ್ರಾಮಾಣಿಕಯಿಂದ, ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲದಂತೆ ಕಾರ್ಯ ನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಡಿಎಚ್‌ಒ ಡಾ. ಶಂಕರ್‌ ನಾಯ್ಕ ಮಾತನಾಡಿ, ಖಾಸಗಿ ಆಸ್ಪತ್ರೆಗಳು ಕೆಪಿಎಂಇ ಕಾಯ್ದೆಯ ಅನುಸಾರವೇ ಇರಬೇಕು. ನೋಂದಣಿ ಸಮಯದಲ್ಲಿ ಯಾವ ವೈದ್ಯರು ಮತ್ತು ಯಾವ ಸಿಬ್ಬಂದಿಯನ್ನು ಡಿಕ್ಲೆರೇಷನ್ ಮಾಡಲಾಗಿರುತ್ತದವೋ ಅದೇ ರೀತಿಯ ವೈದ್ಯರು ಮತ್ತು ಅವಶ್ಯಕ ಸಿಬ್ಬಂದಿಯನ್ನು ಆಸ್ಪತ್ರೆಯು ಹೊಂದಿರಬೇಕು. ಇಲ್ಲದಿದ್ದರೆ ಪರವಾನಿಗೆ ರದ್ದುಪಡಿಸಲಾಗುವುದು.

ಯಾವುದೇ ಖಾಸಗಿ ಆಸ್ಪತ್ರೆಗಳು ಕೆಪಿಎಂಇ ಕಾಯ್ದೆಯನ್ನು ಉಲ್ಲಂಘಿಸಿರುವುದು ಗೊತ್ತಾದಲ್ಲಿ ಅಂತಹ ಆಸ್ಪತ್ರೆಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಆಸ್ಪತ್ರೆಯಲ್ಲಿನ ಬಯೋಮೆಡಿಕಲ್ ತ್ಯಾಜ್ಯವನ್ನು ನಿಯಮಾನುಸಾರ ವಿಲೆಗೆ ಕ್ರಮವಹಿಸದಿದ್ದಲ್ಲಿ ಸಹ ಕ್ರಿಮಿನಲ್ ಮೊಕದ್ದಮೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಖಾಸಗಿ ಆಸ್ಪತ್ರೆಯ ಎಲ್ಲಾ ಕೋಣೆಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರವನ್ನು ಪ್ರದರ್ಶಿಸಿ ಅದೇ ರೀತಿ ಪಾಲನೆ ಮಾಡಬೇಕು. ನಿಗದಿಪಡಿಸಿದ ದರಕ್ಕಿಂತ ಅನವಶ್ಯಕವಾಗಿ ಹೆಚ್ಚಿನ ಹಣ ಪಡೆಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆ ಏರಿಕೆ; ಮಾರುಕಟ್ಟೆ ದರ ಇಂದು ಹೀಗಿದೆ

ಅಪ್ರಾಪ್ತ ವಯಸ್ಸಿನ ಮಹಿಳೆಯು ಗರ್ಭಿಣಿ ಎಂದು ಗೊತ್ತಾದಲ್ಲಿ ಈ ಬಗ್ಗೆ ಕೂಡಲೇ 1098 ಅಥವಾ ಆರೋಗ್ಯ ಇಲಾಖೆ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಬೇಕು. ಗಂಡಾಂತರ ಗರ್ಭಿಣಿ ಎಂದು ತಿಳಿದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಸಾಂಕ್ರಾಮಿಕ ರೋಗಗಳು, ನಾಯಿ ಕಡಿತ, ಹಾವು ಕಡಿತ ಪ್ರಕರಣಗಳ ಬಗ್ಗೆ ಸಹ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎನ್ನುವ ನಿಯಮವನ್ನು ಖಾಸಗಿ ಆಸ್ಪತ್ರೆಗಳಲ್ಲಿನ ವೈದ್ಯರು ಮತ್ತು ಸಿಬ್ಬಂದಿಯು ತಪ್ಪದೇ ಪಾಲನೆ ಮಾಡಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಯಿತು.

ಆಸ್ಪತ್ರೆಗಳಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ಪ್ರಕರಣಗಳು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಕೆಪಿಎಂಇ ಕಾಯಿದೆ ಅನುಸಾರ ಕಾರ್ಯನಿರ್ವಹಿಸದೇ ನಿಯಮ ಉಲ್ಲಂಘಿಸಿ ಲೋಪ ಎಸಗಿರುವುದು ಕಂಡುಬಂದಲ್ಲಿ ಕೆಪಿಎಂಇ ಕಾಯಿದೆ ಅಡಿ ಕ್ರಮ ಜರುಗಿಸಲಾಗುವುದು ಎಂದು ಸಭೆಯಲ್ಲಿ ಎಚ್ಚರಿಕೆ ನೀಡಲಾಯಿತು.

ಕೆಪಿಎಂಇ ಕಾಯಿದೆ ಅಡಿಯಲ್ಲಿ ನೋಂದಣಿ ಆಗಿರುವ ಸಂದರ್ಭದಲ್ಲಿ ಖಾಸಗಿ ಆಸ್ಪತ್ರಯ ವೈದ್ಯರು ಹಾಗೂ ಸಿಬ್ಬಂದಿಯ ಹಾಜರಾತಿ ಮತ್ತು ವೇತನದ ವಿವರಗಳನ್ನು ಪರಿಶೀಲಿಸಲು ತಾಲೂಕುಮಟ್ಟದ ತಂಡಗಳನ್ನು ರಚಿಸಿ ಪರಿಶೀಲಿಸಿ ವರದಿಯನ್ನು ಸಲ್ಲಿಸುವಂತೆ ಸಹ ಸಭೆಯಲ್ಲಿ ಸೂಚಿಸಲಾಯಿತು.

ಇದನ್ನೂ ಓದಿ: Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

ಸಭೆಯಲ್ಲಿ ಐಎಂಎ ಅಧ್ಯಕ್ಷ ಡಾ. ಶ್ರೀನಿವಾಸ ದೇಶಪಾಂಡೆ ಹಾಗೂ ಜಿಲ್ಲೆಯ ವಿವಿಧ ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ಆರೋಗ್ಯ ಇಲಾಖೆಯ ಎಲ್ಲ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಮತ್ತು ಇತರರು ಇದ್ದರು.

Continue Reading

ಆರೋಗ್ಯ

ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

ಊಟದ ಮೊದಲು, ಅನಂತರ ಚಹಾ, ಕಾಫಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಟೀ ಮತ್ತು ಕಾಫಿಯಲ್ಲಿ ಇರುವ ಕೆಫೀನ್ ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಕಾಫಿ, ಟೀ ಮೇಲಿನ ಅವಲಂಬನೆಯನ್ನು ಹೆಚ್ಚಿಸುತ್ತದೆ ಎಂದು ಐಸಿಎಂಆರ್ ಸಂಶೋಧಕರು (ICMR Dietary Guidelines) ತಿಳಿಸಿದ್ದಾರೆ.

VISTARANEWS.COM


on

By

ICMR Dietary Guidelines
Koo

ಊಟದ ಮೊದಲು ಮತ್ತು ಅನಂತರ (Before And After Meals) ಚಹಾ (tea) ಅಥವಾ ಕಾಫಿಯನ್ನು (coffee) ಸೇವಿಸಲೇಬಾರದು ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ತನ್ನ ಆರೋಗ್ಯಕರ ಜೀವನಕ್ಕಾಗಿ ಆಹಾರ ಕ್ರಮದ ಕುರಿತಾಗಿ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ (ICMR Dietary Guidelines) ಹೇಳಿದೆ. ಟೀ ಮತ್ತು ಕಾಫಿಯಲ್ಲಿ ಇರುವ ಕೆಫೀನ್ (caffeine) ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಕಾಫಿ, ಟೀ ಮೇಲಿನ ಅವಲಂಬನೆಯನ್ನು ಹೆಚ್ಚಿಸುತ್ತದೆ ಎಂದು ಐಸಿಎಂಆರ್ ಸಂಶೋಧಕರು ತಿಳಿಸಿದ್ದಾರೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸಂಶೋಧಕರು ಚಹಾ ಮತ್ತು ಕಾಫಿ ಸೇವನೆಯಲ್ಲಿ ಮಿತವಾಗಿರುವಂತೆ ಸಲಹೆ ನೀಡಿದ್ದಾರೆ. ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿರುವ ಈ ಎರಡು ಪಾನೀಯಗಳು ಆರೋಗ್ಯಕರ ಅಭ್ಯಾಸವಲ್ಲ ಎಂದು ತಿಳಿಸಿದ್ದಾರೆ.

ವೈದ್ಯಕೀಯ ಸಂಸ್ಥೆಯು ಇತ್ತೀಚೆಗೆ 17 ಹೊಸ ಆಹಾರ ಮಾರ್ಗಸೂಚಿಗಳನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್ (NIN) ಸಹಭಾಗಿತ್ವದಲ್ಲಿ ಪರಿಚಯಿಸಿದೆ. ಇದು ಭಾರತದಾದ್ಯಂತ ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ಮಾರ್ಗಸೂಚಿಗಳು ವೈವಿಧ್ಯಮಯ ಆಹಾರ ಮತ್ತು ಸಕ್ರಿಯ ಜೀವನಶೈಲಿಯ ಮಹತ್ವವನ್ನು ಒತ್ತಿಹೇಳುತ್ತವೆ.

ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಗುರುತಿಸುವಾಗ, ವೈದ್ಯಕೀಯ ತಜ್ಞರು ಸಂಭಾವ್ಯ ಆರೋಗ್ಯದ ಕಾಳಜಿಯಿಂದಾಗಿ ಚಹಾ ಮತ್ತು ಕಾಫಿಯ ಅತಿಯಾದ ಸೇವನೆಯ ವಿರುದ್ಧ ಎಚ್ಚರಿಕೆ ನೀಡಿದ್ದಾರೆ.

ಯಾಕೆ ಒಳ್ಳೆಯದಲ್ಲ?

ಐಸಿಎಂಆರ್ ಸಂಶೋಧಕರು ಟೀ ಮತ್ತು ಕಾಫಿಯು ಕೆಫೀನ್ ಅನ್ನು ಒಳಗೊಂಡಿರುತ್ತದೆ, ಇದು ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಶಾರೀರಿಕ ಅವಲಂಬನೆಯನ್ನು ಪ್ರೇರೇಪಿಸುತ್ತದೆ ಎಂದು ವಿವರಿಸಿದ್ದಾರೆ.

ಮಾರ್ಗಸೂಚಿಗಳು ಜನಪ್ರಿಯ ಪಾನೀಯಗಳ ಕೆಫೀನ್ ಅಂಶದ ಮೇಲೆ ಬೆಳಕು ಚೆಲ್ಲಿದೆ. 150 ಮಿಲಿ ಕಪ್ ಕುದಿಸಿದ ಕಾಫಿಯು 80 – 120 ಮಿಲಿ ಗ್ರಾಂ ಕೆಫೀನ್ ಅನ್ನು ಹೊಂದಿರುತ್ತದೆ. ಇನ್ ಸ್ಟೆಂಟ್ ಕಾಫಿ 50 – 65 ಮಿಲಿ ಗ್ರಾಂ ಮತ್ತು ಚಹಾವು 30 – 65 ಮಿಲಿ ಗ್ರಾಂ ಕೆಫೀನ್ ಹೊಂದಿರುತ್ತದೆ ಎಂದು ಐಸಿಎಂಆರ್ ತಿಳಿಸಿದೆ.


ಎಷ್ಟು ಸೇವಿಸಬಹುದು?

ಐಸಿಎಂಆರ್ ಪ್ರತಿದಿನ ಕೇವಲ 300 ಮಿಲಿ ಗ್ರಾಂ ಕೆಫೀನ್ ಸೇವನೆ ಮಾಡಬಹುದು ಎಂದು ಹೇಳಿದೆ. ಟೀ, ಕಾಫಿಯಲ್ಲಿರುವ ಕೆಫೀನ್ ಅಂಶ ದೇಹದಲ್ಲಿ ಕಬ್ಬಿಣವನ್ನು ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುವ ಕಾರಣ ಊಟಕ್ಕೆ ಮೊದಲು ಮತ್ತು ಅನಂತರ ಕನಿಷ್ಠ ಒಂದು ಗಂಟೆ ಚಹಾ ಅಥವಾ ಕಾಫಿಯನ್ನು ತ್ಯಜಿಸಲು ವೈದ್ಯಕೀಯ ಸಂಸ್ಥೆ ಸಲಹೆ ನೀಡಿದೆ.

ಕೆಫೀನ್‌ಗಳು ಹೊಟ್ಟೆಯಲ್ಲಿ ಕಬ್ಬಿಣವನ್ನು ಹಿಡಿದಿಟ್ಟುಕೊಳ್ಳುತ್ತದೆ. ಇದರಿಂದ ದೇಹಕ್ಕೆ ಕಬ್ಬಿಣವನ್ನು ಸರಿಯಾಗಿ ಹೀರಿಕೊಳ್ಳಲು ಕಷ್ಟವಾಗುತ್ತದೆ. ಇದು ಕಬ್ಬಿಣದ ಕೊರತೆ ಮತ್ತು ರಕ್ತಹೀನತೆಯಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅತಿಯಾದ ಕಾಫಿ ಸೇವನೆಯು ಅಧಿಕ ರಕ್ತದೊತ್ತಡ ಮತ್ತು ಹೃದಯದ ಆರೋಗ್ಯಕ್ಕೂ ಒಳ್ಳೆಯದಲ್ಲ ಎಂದು ಹೇಳಿದೆ.

ಇದನ್ನೂ ಓದಿ: ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

ಬ್ಲ್ಯಾಕ್‌ ಚಹಾದಿಂದ ಪ್ರಯೋಜನ

ಹಾಲು ಇಲ್ಲದೆ ಚಹಾವನ್ನು ಕುಡಿಯುವುದರಿಂದ ರಕ್ತ ಪರಿಚಲನೆಯಲ್ಲಿ ಸುಧಾರಣೆ, ರಕ್ತನಾಳಗಳ ಸಮಸ್ಯೆ ಮತ್ತು ಹೊಟ್ಟೆಯ ಕ್ಯಾನ್ಸರ್‌ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಐಸಿಎಂಆರ್ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಆಹಾರದಲ್ಲಿ ಏನಿರಬೇಕು?

ಆಹಾರಗಳಲ್ಲಿ ಹಣ್ಣು, ತರಕಾರಿ, ಧಾನ್ಯ, ನೇರ ಮಾಂಸ ಮತ್ತು ಸಮುದ್ರಾಹಾರವನ್ನು ಶಿಫಾರಸು ಮಾಡಿರುವ ಐಸಿಎಂಆರ್ ಸಂಶೋಧಕರು ತೈಲ, ಸಕ್ಕರೆ ಮತ್ತು ಉಪ್ಪಿನ ಸೇವನೆಯನ್ನು ಸೀಮಿತಗೊಳಿಸುವಂತೆ ಸೂಚಿಸಿದ್ದಾರೆ.

Continue Reading

ದೇಶ

Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

Crowd Funding: ರಾಜಸ್ಥಾನದ ಜೈಪುರದಲ್ಲಿ ಮಗುವಿನ ಚಿಕಿತ್ಸೆಗೆ ಸಾರ್ವಜನಿಕರು ಅಭೂತಪೂರ್ವಾಗಿ ಸ್ಪಂದಿಸಿದ್ದಾರೆ. ಸೊಂಟದ ಕೆಳಗೆ ಸಂಪೂರ್ಣ ಸ್ವಾಧೀನ ಕಳೆದುಕೊಂಡ ಮಗುವಿನ ಚಿಕಿತ್ಸೆಗಾಗಿ 17.5 ಕೋಟಿ ರೂ. ಬೇಕಾಗಿತ್ತು. ಸುಮಾರು 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹವಾಗಿದ್ದು, ಮಗುವಿಗೆ ಚಿಕಿತ್ಸೆ ನೀಡಲಾಗಿದೆ. ಉಳಿದ ಮೊತ್ತವನ್ನು ವರ್ಷದೊಳಗೆ ಮೂರು ಕಂತಿಗಳಲ್ಲಿ ಪಾವತಿಸಬಹುದಾದ ಅವಕಾಶವಿದೆ. ಸದ್ಯ ಸಾರ್ವಜನಿಕರ ಮಾನವೀಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Crowd Funding
Koo

ಜೈಪುರ: ಮಾನವೀಯತೆ ಇನ್ನೂ ಜೀವಂತ ಇದೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ. ರಾಜಸ್ಥಾನದ 22 ತಿಂಗಳ ಮಗುವಿನ ಚಿಕಿತ್ಸೆಗೆ ಸ್ಪಂದಿಸಿದ ಅನೇಕರು ಭರಪೂರ ದೇಣಿಗೆ ನೀಡಿದ್ದಾರೆ. ಕ್ರಿಕೆಟ್‌ ಅಟಗಾರರಿಂದ ಹಿಡಿದು, ನಟರು, ತರಕಾರಿ ಮಾರುವವರು, ಬೀದಿಬದಿ ವ್ಯಾಪಾರಿಗಳು ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಸೊಂಟದ ಕೆಳಗೆ ಸಂಪೂರ್ಣ ಸ್ವಾಧೀನ ಕಳೆದುಕೊಂಡ ಮಗುವಿನ ಚಿಕಿತ್ಸೆಗಾಗಿ ಸುಮಾರು 17.5 ಕೋಟಿ ರೂ. ಮೊತ್ತದ ಇಂಜೆಕ್ಷನ್‌ ನೀಡಬೇಕಾಗಿದ್ದು, ಇದಕ್ಕಾಗಿ ಇವರೆಲ್ಲ ಒಂದಾಗಿದ್ದಾರೆ. ತಮ್ಮ ಕೈಲಾದ ಸಹಾಯ ಮಾಡಿ ಮಗುವಿನ ನೆರವಿಗೆ ಧಾವಿಸಿದ್ದಾರೆ (Crowd Funding).

ರಾಜಸ್ಥಾನದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನರೇಶ್‌ ಶರ್ಮಾ ಅವರ ಪುತ್ರ ಹೃದಯಾಂಶ್‌ ಶರ್ಮಾ (22 ತಿಂಗಳು) ಅಪರೂಪದ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (Spinal muscular atrophy) ಎಂಬ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಕಾರಣದಿಂದ ಆತನ ಸೊಂಟದ ಕೆಳಭಾಗ ಸಂಪೂರ್ಣ ನಿಷ್ಕ್ರೀಯವಾಗಿತ್ತು. ಇದನ್ನು ವಾಸಿ ಮಾಡಲು, ಸಂಪೂರ್ಣ ಗುಣಮುಖನಾಗಲು ವಿಶ್ವದ ಅತ್ಯಂತ ದುಬಾರಿ ಔಷಧಿಗಳಲ್ಲಿ ಒಂದಾದ ಜೀನ್ ಥೆರಪಿ ಇಂಜೆಕ್ಷನ್‌ ಜೊಲ್ಗೆನ್ಸ್ಮಾ (Zolgensma)ದ ಸಿಂಗಲ್ ಡೋಸ್ ಪಡೆದುಕೊಳ್ಳಬೇಕು ಎಂದು ವೈದ್ಯರು ಸೂಚಿಸಿದ್ದರು. ಅತ್ಯಂತ ದುಬಾರಿಯಾದ ಇದರ ಬೆಲೆ ಅಂದಾಜು 17.5 ಕೋಟಿ ರೂ.

ದೇಣಿಗೆ ಸಂಗ್ರಹಕ್ಕೆ ಮುಂದಾದ ಪೊಲೀಸರು

ಇಷ್ಟೊಂದು ದುಬಾರಿ ಮೊತ್ತ ಭರಿಸಲು ನರೇಶ್‌ ಶರ್ಮಾ ಅವರ ಕುಟುಂಬಕ್ಕೆ ಸಾಧ್ಯವಿರಲಿಲ್ಲ. ಈ ಹಿನ್ನೆಲೆಯಲ್ಲಿ ನೆರವಿಗೆ ಧಾವಿಸಿದ ರಾಜಸ್ಥಾನ ಪೊಲೀಸರು ಸಾವರ್ಜನಿಕ ದೇಣಿಗೆ ಸಂಗ್ರಹಕ್ಕೆ ಮುಂದಾದರು. ಮಗುವಿಗೆ 2 ವರ್ಷ ತುಂಬುವ ಮೊದಲೇ ಈ ಚಿಕಿತ್ಸೆ ನಡೆಯಬೇಕಿರುವುದರಿಂದ ಪೊಲೀಸರು ಫೆಬ್ರವರಿಯಲ್ಲಿ ಕ್ರೌಡ್‌ ಫಡಿಂಗ್‌ ಅಭಿಯಾನ ಆರಂಭಿಸಿದರು. ಈ ಅಭಿಯಾನಕ್ಕೆ ಸೂಕ್ತ ಸ್ಪಂದನೆ ದೊರೆಯಿತು. ಸೆಲೆಬಿಟಿಗಳಾದ ಕ್ರಿಕೆಟಿಗ ದೀಪಕ್‌ ಚಹರ್‌ ಮತ್ತು ಬಾಲಿವುಡ್‌ ನಟ, ಬಹಭಾಷಾ ಕಲಾವಿದ ಸೋನು ಸೂದ್‌ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಈ ವಿಚಾರವನ್ನು ಹಂಚಿಕೊಂಡು ನೆರವು ನೀಡಲು ಮನವಿ ಮಾಡಿದರು.

ಹರಿದು ಬಂದ ನೆರವು

ಬಳಿಕ ಜೈಪುರದ ವಿವಿಧ ಕಡೆಗಳಿಂದ ನೆರವು ಹರಿದು ಬರತೊಡಗಿತು. ಅಂಗಡಿಯವರು, ವಿದ್ಯಾರ್ಥಿಗಳು, ಗೃಹಣಿಯರು, ತರಕಾರಿ, ಹಣ್ಣು ಮಾರಾಟಗಾರರು, ಬೀದಿ ಬದಿ ವ್ಯಾಪಾರಿಗಳು ಹೀಗೆ ಎಲ್ಲರೂ ನೆರವಿನ ಹಸ್ತ ಚಾಚಿದರು. ವಿವಿಧ ಎನ್‌ಜಿಒಗಳು ಮತ್ತು ಸಂಸ್ಥೆಗಳು ಕೂಡ ಈ ಅಭಿಯಾನಕ್ಕೆ ಕೈ ಜೋಡಿಸಿದವು. ʼʼರಾಜಸ್ಥಾನದಲ್ಲಿ ಕ್ರೌಡ್‌ ಫಡಂಗ್‌ಗೆ ಈ ರೀತಿಯ ಸ್ಪಂದನೆ ದೊರೆಯುತ್ತಿರುವುದು ಇದು ಮೊದಲ ಬಾರಿʼʼ ಎಂದು ಅಭಿಯಾನದಲ್ಲಿ ತೊಡಗಿಸಿಕೊಂಡಿರುವವರು ಅಭಿಪ್ರಾಯಪಡುತ್ತಾರೆ.

3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

3 ತಿಂಗಳ ಅವಧಿಯಲ್ಲಿ ಸುಮಾರು 9 ಕೋಟಿ ರೂ. ಸಂಗ್ರಹವಾಗಿದೆ. ಇದೀಗ ಜೈಪುರದ ಜೆ.ಕೆ. ಲಾನ್‌ ಆಸ್ಪತ್ರೆಯಲ್ಲಿ ಹೃದಯಾಂಶ್‌ಗೆ ಇಂಜೆಕ್ಷನ್‌ ನೀಡಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಉಳಿದ ಮೊತ್ತವನ್ನು ವರ್ಷದೊಳಗೆ ಮೂರು ಕಂತಿಗಳಲ್ಲಿ ಪಾವತಿಸಬಹುದಾದ ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ.

ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ ಎನ್ನುವುದು ಆನುವಂಶಿಕ ಅಸ್ವಸ್ಥತೆಯಾಗಿದ್ದು, ಇದರಲ್ಲಿ ಬೆನ್ನುಹುರಿ ಮತ್ತು ಮೆದುಳಿನ ಕಾಂಡದಲ್ಲಿನ ನರ ಕೋಶಗಳ ಕೊರತೆಯೊಂದಾಗಿ ವ್ಯಕ್ತಿಗೆ ಸ್ನಾಯುಗಳ ಚಲನೆಯನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ಇದು ಸ್ನಾಯು ದೌರ್ಬಲ್ಯಕ್ಕೆ ಕಾರಣವಾಗುತ್ತದೆ ಮತ್ತು ಕೈಕಾಲುಗಳ ಚಲನೆ ಮತ್ತು ಉಸಿರಾಟದ ಮೇಲೂ ಪರಿಣಾಮ ಬೀರುತ್ತದೆ. ಇದರ ಚಿಕಿತ್ಸೆಗಾಗಿ ಬಳಸುವ ಜೊಲ್ಗೆನ್ಸ್ಮಾ ಇಂಜೆಕ್ಷನ್‌ ಅನ್ನು ಸ್ವಿಸ್ ಫಾರ್ಮಾ ದೈತ್ಯ ನೊವಾರ್ಟಿಸ್ (Novartis) ತಯಾರಿಸುತ್ತದೆ.

ಇದನ್ನೂ ಓದಿ: kodagu News : ಒಮ್ಮಿಂದೊಮ್ಮೆಗೇ ಜೋರಾಯಿತು ನೋವು; ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ ಸ್ಟಾಫ್‌ ನರ್ಸ್‌

Continue Reading
Advertisement
SBI Rates
ವಾಣಿಜ್ಯ20 mins ago

SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

EPF Withdrawal Rule
ಮನಿ ಗೈಡ್36 mins ago

EPF Withdraw Rule: ಪಿಎಫ್‌ ಮುಂಗಡ ಹಣ ಪಡೆಯುವುದು ಈಗ ಮತ್ತಷ್ಟು ಸುಲಭ; ಹೊಸ ಬದಲಾವಣೆಯ ಸಂಪೂರ್ಣ ಮಾಹಿತಿ

IND vs AUS Test
ಕ್ರೀಡೆ52 mins ago

IND vs AUS Test: ಈ ಬಾರಿಯ ಬಾರ್ಡರ್– ಗಾವಸ್ಕರ್ ಟೆಸ್ಟ್​ ಸರಣಿಯಲ್ಲಿ ಭಾರತೀಯರಿಗೆ ಸಿಗಲಿದೆ ವಿಶೇಷ ಆಸನ ವ್ಯವಸ್ಥೆ

Karnataka Weather
ಕರ್ನಾಟಕ1 hour ago

Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

Amit Shah
ದೇಶ1 hour ago

Amit Shah: ಭಾರತದ ಜತೆ ಪಿಒಕೆ ವಿಲೀನ ಮಾಡುವುದೇ ನಮ್ಮ ಗುರಿ, ಬದ್ಧತೆ; ಅಮಿತ್‌ ಶಾ ಘೋಷಣೆ

Prajwal Revanna Case Will SIT team go abroad for arrest Prajwal
ಕ್ರೈಂ1 hour ago

Prajwal Revanna Case: ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

Rajkummar Rao
ಸಿನಿಮಾ1 hour ago

Rajkummar Rao: ಮುಂಬಯಿಗೆ ಬಂದು ಶಾರುಕ್‌ ಮನೆ ಮುಂದೆ ದಿನವಿಡೀ ಕಾದಿದ್ದರಂತೆ ನಟ ರಾಜ್‌ಕುಮಾರ್ ರಾವ್‌!

North East Graduate Constituency Election Congress party leaders and workers Meeting in Yadgiri
ರಾಜಕೀಯ2 hours ago

MLC Election: ಪರಿಷತ್ ಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರಿಗೆ ದರ್ಶನಾಪುರ ಮನವಿ

T20 World Cup 2024
ಕ್ರೀಡೆ2 hours ago

T20 World Cup 2024: ಭಾರತ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ; ಕಾರಣ ಏನು?

MLC Election
ಕರ್ನಾಟಕ2 hours ago

MLC Election: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಫೈನಲ್‌; ಬಂಡಾಯವಾಗಿ ಬಿಜೆಪಿ ಅಭ್ಯರ್ಥಿ ನಾಮಪತ್ರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ12 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ14 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌