Site icon Vistara News

ಅಯ್ಯಪ್ಪ ಮಾಲಾಧಾರಿಗಳಿಗೆ ಕೋವಿಡ್‌ ಟೆಸ್ಟ್‌; ಸೋಂಕಿತರ ಸಂಖ್ಯೆ ಡಬಲ್‌ ಆದ್ರೆ ನ್ಯೂಇಯರ್‌ಗೆ ಟಫ್‌ ರೂಲ್ಸ್‌!

Covid test for Ayyappa maladhari there will be tough rules for the New Year

ಬೆಂಗಳೂರು: ಲಕ್ಷಾಂತರ ಜನರನ್ನು ಬಲಿ ಪಡೆದಿದ್ದ ನೋವೆಲ್‌ ಕೊರೊನಾ ವೈರಸ್‌ (Covid Virus) ಮತ್ತೆ ಸಕ್ರಿಯಗೊಳ್ಳುತ್ತಿದೆ. ದೇಶದ ವಿವಿಧೆಡೆ ಕೋವಿಡ್‌ ರೂಪಾಂತರಿ ಉಲ್ಬಣ ಗೊಳ್ಳುತ್ತಿದೆ. ಸದ್ಯ ನೆರೆಯ ಕೇರಳದಲ್ಲಿ ಕೋವಿಡ್ ಉಪ ತಳಿ ಜೆಎನ್‌ 1 (COVID Subvariant JN.1) ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ (Health Department) ಹೈ ಅಲರ್ಟ್‌ ಆಗಿದೆ. ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಕೋವಿಡ್‌ ಟೆಸ್ಟಿಂಗ್‌ (Covid Testing) ಆರಂಭಿಸಲಾಗುತ್ತಿದೆ.

ಜ್ವರ, ಶೀತ, ಕೆಮ್ಮಿನಂತಹ ರೋಗ ಲಕ್ಷಣಗಳು ಕಂಡು ಬಂದರೆ ಅಂತಹವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ನಿರ್ಧಾರಿಸಲಾಗಿದೆ. ರಾಜ್ಯದಲ್ಲಿ ಜ್ವರ ಹಾಗೂ ಶೀತ ಪ್ರಕರಣಗಳು ಹೆಚ್ಚಳ ಹಿನ್ನೆಲೆ 10 ಜನರಲ್ಲಿ ಒಬ್ಬರ ಗಂಟಲು ದ್ರವ್ಯ ಜಿನೋಮಿಕ್ ಸಿಕ್ವೆನ್ಸ್‌ಗೆ ರವಾನೆ ಮಾಡಲಾಗುತ್ತದೆ.

ಮುಖ್ಯವಾಗಿ ಕೇರಳಕ್ಕೆ ಸಾವಿರಾರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಭೇಟಿ ನೀಡುತ್ತಿದ್ದಾರೆ. ರಾಜ್ಯದಿಂದಲೂ ಭಕ್ತರು ಹೋಗಿರುತ್ತಿದ್ದಾರೆ. ಹೀಗಾಗಿ ಕೇರಳಕ್ಕೆ ಹೋಗಿ ಬಂದವರಲ್ಲಿ ರೋಗದ ಲಕ್ಷಣಗಳು ಕಂಡು ಬಂದರೆ ಅವರಿಗೆ ಕೋವಿಡ್ ಪರೀಕ್ಷೆಗೆ ಸೂಚನೆ ನೀಡಲಾಗುತ್ತದೆ.

ಒಂದು ವೇಳೆ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾದರೆ, ನ್ಯೂಇಯರ್‌ಗೆ ಕೆಲ ಕಠಿಣ ಕ್ರಮಕೈಗೊಳ್ಳಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಹೊಸ ರೂಪಾಂತರಿ ವೈರಸ್ ಪತ್ತೆಗೆ ತಂಡಗಳ ರಚನೆ ಮಾಡಲಾಗಿದೆ. ಒಂದು ವೇಳೆ JN.1 ವೈರಸ್ ದೃಢಪಟ್ಟಲ್ಲಿ ದೊಡ್ಡ ಸಂಕಷ್ಟ ಎದುರಾಗುತ್ತದೆ. ಸೋಂಕಿತರ ಸಂಖ್ಯೆ ಏರಿಕೆಯಾದರೆ ಮತ್ತೆ ಮಾಸ್ಕ್‌ ಕಡ್ಡಾಯ ಮಾಡಲಿದ್ದಾರೆ. ಶೀತ, ಜ್ವರ ಇದ್ದವರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕೆಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೇರಳಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ.

ಕರ್ನಾಟಕದಲ್ಲಿ ಈವರೆಗೆ 58 ಕೋವಿಡ್ ಪಾಸಿಟಿವ್ ಕೇಸ್ ಇವೆ. ಈ ಪೈಕಿ 11 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ಕು ತಿಂಗಳಿನಲ್ಲಿ ಕೊರೊನಾದಿಂದ ಒಬ್ಬರು ಸಾವನ್ನಪ್ಪಿದ್ದು, ಈಗ ಕರೊನಾ ಹೆಚ್ಚಾಗುತ್ತದೆ ಎಂಬ ಬಗ್ಗೆ ಮಾಹಿತಿಯಿದೆ. ಹೀಗಾಗಿ ಕೇಂದ್ರದ ಅಧಿಕಾರಿಗಳ ಜತೆ ನಮ್ಮ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ತಿಳಿಸಿದ್ದಾರೆ. ಐಎಲ್‌ಐ ಹಾಗೂ ಸಾರಿ ಪ್ರಕರಣ ಕಂಡು ಬಂದರೆ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು. ಕೊರೊನಾ ಲಕ್ಷಣ ಕಂಡು ಬಂದರೆ ಕಡ್ಡಾಯ ಪರೀಕ್ಷೆಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೋವಿಡ್‌ ಎದುರಿಸಲು ಸಿದ್ಧ

ರಾಜ್ಯದಲ್ಲಿ ಕೋವಿಡ್ ಆತಂಕ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸಿ.ಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ರಾಜ್ಯ ಸರ್ಕಾರವು ಕೋವಿಡ್‌ ಎದುರಿಸಲು ಸಿದ್ಧವಿದೆ. ಆರೋಗ್ಯ ಸಚಿವರ ಜತೆ ಮಾತಾಡಿದ್ದೇ‌ನೆ. ತಜ್ಞರ ಜತೆ ಸಭೆ ಮಾಡಲು ಸೂಚಿಸಿದ್ದೇನೆ. ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧವಾಗಿದೆ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version