ಚಿಕ್ಕೋಡಿ/ಆನೇಕಲ್: ಇಲ್ಲಿನ ರಾಯಬಾಗ ತಾಲೂಕಿನ ನಿಪನಾಳ ಗ್ರಾಮದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ (Cow Slaughter) ಮಾಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಶನಿವಾರ ತಡರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ.
ಗ್ರಾಮದ ಮಹೇಶ ತಳವಾರ ಎಂಬುವರ ಮನೆಯಲ್ಲಿ ಗೋಹತ್ಯೆ ಮಾಡಿ ಮಾಂಸ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ದಾಳಿಯಲ್ಲಿ ಆಕಳ ಮಾಂಸ ಕಡಿದು ಸಾಗಾಟಕ್ಕೆ ಯತ್ನಿಸಿರುವುದು ಪತ್ತೆಯಾಗಿದೆ. ಈ ಕುರಿತಂತೆ ಮಹೇಶ ತಳವಾರ, ವಿಠ್ಠಲ ತಳವಾರ, ಪೀರಸಾಬ್ ನದಾಪ್ ಎಂಬುವರನ್ನು ರಾಯಬಾಗ ಪೊಲೀಸರು ಬಂಧಿಸಿದ್ದಾರೆ.
ಆನೇಕಲ್‌ನಲ್ಲಿ ಮುಂದುವರಿದ ಗೋಮಾಂಸ ಮಾರಾಟ
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಗೌರೇನಹಳ್ಳಿಯ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಮನೆಯೊಂದರ ಮೇಲೆ ಆನೇಕಲ್ ಪೊಲೀಸರು ದಾಳಿ ನಡೆಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಇದೇ ಗ್ರಾಮದಲ್ಲಿ ಗೌ ಗ್ಯಾನ್ ಸಂಸ್ಥೆಯಿಂದ 100ಕ್ಕೂ ಹೆಚ್ಚು ಗೋವುಗಳ ರಕ್ಷಣೆ ಮಾಡಲಾಗಿತ್ತು. ಗ್ರಾಮದಲ್ಲಿ ಎಲ್ಲೆಂದರಲ್ಲಿ ಗೋಮಾಂಸ ಮಾರಾಟ ಹಿನ್ನೆಲೆಯಲ್ಲಿ ಆನೇಕಲ್ ಇನ್ಸ್ಪೆಕ್ಟರ್ ಚಂದ್ರಪ್ಪ ಮತ್ತವರ ತಂಡವು ಗೋಮಾಂಸ ಮಾರಾಟದ ಅಡ್ಡೆಗಳ ಮೇಲೆ ದಾಳಿ ನಡೆಸಿದೆ.
ಇದನ್ನೂ ಓದಿ | Cow Slaughter | ಚಿಕ್ಕಮಗಳೂರಲ್ಲಿ ಗೋಹತ್ಯೆ ಮಾಡಿದರೆ ಕರೆಂಟ್ ಕಟ್, ಆಸ್ತಿ ದಾಖಲೆ ವಶ