ಕರ್ನಾಟಕ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ? ಸುಳಿವು ಬಿಚ್ಚಿಟ್ಟ ಸಿ.ಪಿ.ಯೋಗೇಶ್ವರ್
ರಾಮನಗರದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ಆಗಬಹುದು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಚರ್ಚೆಗಳು ನಡೆಯುತ್ತಿರುವ ನಡುವೆ ಮೈತ್ರಿ ಬಗ್ಗೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸುಳಿವು ನೀಡಿದ್ದಾರೆ. ಈಗಾಗಲೇ ಎಲ್ಲಾ ಕಡೆ ಮಾಧ್ಯಮಗಳಲ್ಲೂ ಮೈತ್ರಿ ಬಗ್ಗೆ ಚರ್ಚೆಯಾಗುತ್ತಿದೆ. ಹಾಗಾಗಿ ಹೊಂದಾಣಿಕೆ ಆಗಬಹುದು ಎಂದು ಸಿ.ಪಿ.ಯೋಗೇಶ್ವರ್ ಹೇಳಿರುವುದು ಕುತೂಹಲ ಮೂಡಿಸಿದೆ.
ರಾಮನಗರದಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ನೇತೃತ್ವದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆ ಬಳಿಕ ಮಾತನಾಡಿರುವ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅತಿ ಹೆಚ್ಚು ಸಂಸದರನ್ನು ಗೆಲ್ಲಿಸಬೇಕು. ಅಭ್ಯರ್ಥಿ ಆಯ್ಕೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು. ಹೈಕಮಾಂಡ್ ಸ್ಪರ್ಧೆ ಮಾಡು ಎಂದರೆ ಮಾಡುವೆ. ಒಂದಷ್ಟು ರಾಜಕೀಯ ಬದಲಾವಣೆ ಆಗಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | MLA training: ಶಾಸಕರ ತರಬೇತಿಗೆ ಗಣ್ಯರ ಆಹ್ವಾನದ ಬಗ್ಗೆ ಆಕ್ಷೇಪ; ತಿರುಗೇಟು ನೀಡಿದ ಸ್ಪೀಕರ್ ಖಾದರ್
ಜೆಡಿಎಸ್ ಜತೆ ಮೈತ್ರಿ ಬಗ್ಗೆ ಮಾತನಾಡಿರುವ ಅವರು, ಮೈತ್ರಿ ಆಗಬಹುದು ಎಂದುಕೊಂಡಿದ್ದೇನೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಈಗಾಗಲೇ ಎಲ್ಲಾ ಕಡೆ ಮಾಧ್ಯಮಗಳಲ್ಲೂ ಈ ಬಗ್ಗೆ ಚರ್ಚೆ ಆಗುತ್ತಿದೆ. ಹಾಗಾಗಿ ಹೊಂದಾಣಿಕೆ ಆಗಬಹುದು ಎಂದು ಎನಿಸಿಸುತ್ತಿದೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಗೆ ಸಿದ್ಧತೆ
2024ರ ಲೋಕಸಭಾ ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಶುಕ್ರವಾರ ಆಯೋಜಿಸಲಾಗಿತ್ತು. ಈ ವೇಳೆ ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಸಿ.ಪಿ.ಯೋಗೇಶ್ವರ್, ಬಿಜೆಪಿ ವಕ್ತಾರ ಅಶ್ವತ್ಥ ನಾರಾಯಣಗೌಡ ಸೇರಿ ರಾಮನಗರ, ಮಾಗಡಿ ಕ್ಷೇತ್ರದ ಪರಾಜಿತ ಅಭ್ಯರ್ಥಿಗಳು, ಬಿಜೆಪಿ ಪ್ರಮುಖ ಮುಖಂಡರು, ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ | BJP Karnataka: 100 ದಿನ ಅವಕಾಶ ಕೊಡಿ ನಾನೇನು ಅಂತ ತೋರಿಸ್ತೀನಿ: ರಾಜ್ಯ ಬಿಜೆಪಿ ಅಧ್ಯಕ್ಷರಾಗಲು ವಿ. ಸೋಮಣ್ಣ ರೆಡಿ
ಚುನಾವಣೆಗೆ ಪಕ್ಷ ಸಂಘಟನೆ ರೂಪಿಸುವ ದೃಷ್ಟಿಯಿಂದ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು. ಯೋಗೇಶ್ವರ್‌ರಿಂದ ಜಿಲ್ಲೆಯ ಕುರಿತ ಮಾಹಿತಿಯನ್ನು ಸದಾನಂದಗೌಡರು ಪಡೆದು, ಎಲ್‌ಕ್ಷನ್‌ನಲ್ಲಿ ಪಕ್ಷದ ಗೆಲುವಿಗಾಗಿ ಕಾರ್ಯಕರ್ತರು ಸಂಘಟಿತವಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.
ಕರ್ನಾಟಕ
MB Patil : ಬೆಂಗಳೂರಿನಲ್ಲಿ 800 ಕೋಟಿ ರೂ. ಹೂಡಲು ಕ್ರಿಪ್ಟನ್ ಸೊಲ್ಯೂಷನ್ಸ್ ಒಲವು: ಎಂ.ಬಿ. ಪಾಟೀಲ್
MB Patil : ಅಮೆರಿಕ ಪ್ರವಾಸದಲ್ಲಿರುವ ಭಾರಿ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ ಅವರು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪನಿಯ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿ, ಅಲ್ಲಿಯ ಸೌಲಭ್ಯಗಳನ್ನು ವೀಕ್ಷಿಸಿದ್ದಾರೆ. ಅಲ್ಲದೆ, ಈ ವೇಳೆ ಹೂಡಿಕೆ ಸಂಬಂಧ ಮಾತುಕತೆಯನ್ನೂ ನಡೆಸಿದ್ದಾರೆ.
ಟೆಕ್ಸಾಸ್: ಬೆಂಗಳೂರಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ (Bommasandra Industrial Area) ನೂತನ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ (ಪಿಸಿಬಿ) ಉತ್ಪಾದನಾ ಘಟಕವನ್ನು ಆರಂಭಿಸಲು ಅಮೆರಿಕದ ಮುಂಚೂಣಿ ಕಂಪನಿಯಾದ ಕ್ರಿಪ್ಟನ್ ಸೊಲ್ಯೂಷನ್ಸ್ (Krypton Solutions) ಮುಂದೆ ಬಂದಿದ್ದು, 100 ಮಿಲಿಯನ್ ಡಾಲರ್ (million dollars) (800 ಕೋಟಿ ರೂ.) ಬಂಡವಾಳ ಹೂಡಲು ಉತ್ಸಾಹ ತೋರಿದೆ. ಜತೆಗೆ ಈ ಕಂಪನಿಯು ಮೈಸೂರು ಮತ್ತು ಚಾಮರಾಜನಗರದಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ಪರಿಶೀಲಿಸಲು ಒಪ್ಪಿಕೊಂಡಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ (MB Patil) ಹೇಳಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಎಂ.ಬಿ. ಪಾಟೀಲ್, ಕಂಪನಿಯ ಅಧ್ಯಕ್ಷ ಮತ್ತು ಸಿಇಒ ಸುರೇಶ್ ಪಟೇಲ್ ಮತ್ತು ಇತರ ಉನ್ನತಾಧಿಕಾರಿಗಳೊಂದಿಗೆ ಈ ಸಂಬಂಧ ಸೋಮವಾರ ಚರ್ಚಿಸಲಾಗಿದೆ. ಅದು ಸ್ಥಳೀಯ ಸಹಭಾಗಿತ್ವಕ್ಕೆ ಆಸಕ್ತಿ ಹೊಂದಿದ್ದು, ಕೌಶಲ್ಯಪೂರ್ಣ ಮಾನವ ಸಂಪನ್ಮೂಲದ ಖಾತ್ರಿಯನ್ನು ನಮ್ಮಿಂದ ಬಯಸಿದೆ ಎಂದು ಹೇಳಿದ್ದಾರೆ.
ಕಂಪನಿಯು ಟೆಕ್ಸಾಸ್‌ನಲ್ಲಿ ಹೊಂದಿರುವ 40 ಸಾವಿರ ಚದರ ಮೀಟರ್ ವಿಸ್ತೀರ್ಣದ ಉತ್ಪಾದನಾ ಘಟಕಕ್ಕೂ ಈ ಸಂದರ್ಭದಲ್ಲಿ ಭೇಟಿ ನೀಡಿದ್ದು, ಅಲ್ಲಿರುವ ಸೌಲಭ್ಯಗಳನ್ನು ವೀಕ್ಷಿಸಲಾಗಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದೆಬಂದರೆ, ಅಗತ್ಯ ಸೌಲಭ್ಯಗಳನ್ನು ತ್ವರಿತ ಗತಿಯಲ್ಲಿ ಒದಗಿಸಲಾಗುವುದು. ಈ ಸಂಬಂಧದ ಪ್ರಾಥಮಿಕ ಚರ್ಚೆ ಈಗಾಗಲೇ ಮುಗಿದಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ, ಸೆಮಿಕಂಡಕ್ಟರ್ ಕ್ಷೇತ್ರದ ದೈತ್ಯ ಕಂಪನಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಜತೆಗೂ ಮಾತುಕತೆ ನಡೆಸಲಾಗಿದೆ. ಅದು ಬೆಂಗಳೂರಿನಲ್ಲಿರುವ ತನ್ನ ಆರ್ & ಡಿ ಕೇಂದ್ರದ ಚಟುವಟಿಕೆಯನ್ನು ವಿಸ್ತರಿಸುವ ಬದ್ಧತೆಯನ್ನು ತೋರಿದೆ. ಅಮೆರಿಕದ ಆಚೆಗೆ ಕಂಪನಿಯು ಹೊಂದಿರುವ ಅತಿದೊಡ್ಡ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದಾರೆ.
ಸಂಶೋಧನೆ ಬಗ್ಗೆ ಚರ್ಚೆ
ಈ ಸಭೆಯಲ್ಲಿ ಅನಲಾಗ್ ಮತ್ತು ಎಂಬೆಡೆಡ್ ಸೆಮಿಕಂಡಕ್ಟರ್ ಕುರಿತ ಸಂಶೋಧನೆಯನ್ನು ಕೈಗೆತ್ತಿಕೊಳ್ಳುವ ಬಗ್ಗೆಯೂ ಚರ್ಚಿಸಲಾಗಿದೆ. ಇದಕ್ಕೆ ಬೆಂಗಳೂರಿನ ವೈಟ್ ಫೀಲ್ಡಿನಲ್ಲಿರುವ ಸೆಮಿಕಂಡಕ್ಟರ್ ಸೂಕ್ತ ಸ್ಥಳವಾಗಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಜತೆಗೆ ಹೂಡಿಕೆಗೆ ಇರುವ ಅಡಚಣೆಗಳನ್ನು ನಿವಾರಿಸಲು ರಾಜ್ಯ ಸರ್ಕಾರ ಹೊಂದಿರುವ ಬದ್ಧತೆಯನ್ನು ಅವರಿಗೆ ತಿಳಿಸಲಾಗಿದೆ. ಭೇಟಿಯ ಸಂದರ್ಭದಲ್ಲಿ ಕಂಪನಿಯು ಹೊಂದಿರುವ 300 ಎಂಎಂ ವೇಫರ್ ಫ್ಯಾಬ್ ಉತ್ಪಾದನಾ ಘಟಕವನ್ನು ವೀಕ್ಷಿಸಲಾಯಿತು ಎಂದು ಸಚಿವ ಎಂ.ಬಿ. ಪಾಟೀಲ್ ವಿವರಿಸಿದ್ದಾರೆ.
ಮೇಲಿನ ಕಂಪನಿಗಳ ಜತೆಗೆ, ಟೆಕ್ಸಾಸ್‌ನಲ್ಲೇ ಕೇಂದ್ರ ಕಚೇರಿ ಹೊಂದಿರುವ ಇ.ಆರ್.ಪಿ. ಲಾಜಿಕ್ ಕಂಪನಿಯೊಂದಿಗೂ ಚರ್ಚಿಸಲಾಯಿತು. ಸ್ಯಾಪ್ ಕೌಶಲ್ಯದಲ್ಲಿ ಪರಿಣತಿ ಹೊಂದಿರುವ ಅದು ಬೆಂಗಳೂರಿನ ಉನ್ನತ ಶಿಕ್ಷಣ ಸಂಸ್ಥೆಗಳೊಂದಿಗೆ ಕೆಲಸ ಮಾಡುವ ಉತ್ಸಾಹ ತೋರಿಸುತ್ತಿದೆ. ಈ ಕಂಪನಿಯು ಈಗಾಗಲೇ ಹೈದರಾಬಾದ್, ಚೆನ್ನೈ, ಸೇಲಂ ಮುಂತಾದ ಕಡೆ ಸಕ್ರಿಯವಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಮಾತುಕತೆಯಲ್ಲಿ ಕ್ರಿಪ್ಟನ್ ಕಂಪನಿಯ ಪರವಾಗಿ ಸಿಒಒ ದೀಪಕ್ ಪಟೇಲ್, ಸಿಎಂಒ ಮಹೇಶ್ ಪಟೇಲ್, ಉಪಾಧ್ಯಕ್ಷ ಮುಕೇಶ್ ಪಟೇಲ್, ಆನಂದ್ ಪಟೇಲ್, ಹಿತೇಶ್ ಭಕ್ತಾ, ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪನಿಯ ಪರವಾಗಿ ಜನರಲ್ ಮ್ಯಾನೇಜರ್ ಅಮಿಚಾಯ್ ರೋನ್, ಉಪಾಧ್ಯಕ್ಷ ಸ್ಟೀವ್ ಬೋನರ್, ಇಆರ್ ಪಿಎಲ್ ಪರವಾಗಿ ಕಣ್ಣನ್ ಶ್ರೀನಿವಾಸನ್ ಭಾಗವಹಿಸಿದ್ದರು.
ಇದನ್ನೂ ಓದಿ: ST Reservation : ಎಸ್‌ಟಿಗೆ ಕುರುಬ ಸಮುದಾಯವನ್ನು ಸೇರ್ಪಡೆ ಮಾಡಬೇಕಿರುವುದು ಕೇಂದ್ರ: ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಐಟಿ ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಇದ್ದರು.
ಕರ್ನಾಟಕ
Kalaburagi News: ಮುಂದಿನ ವಾರ ರಾಜ್ಯಕ್ಕೆ ಬರ ಅಧ್ಯಯನ ತಂಡ : ಕೃಷಿ ಸಚಿವ ಚೆಲುವರಾಯಸ್ವಾಮಿ
Kalaburagi News: ರಾಜ್ಯದಲ್ಲಿ 161 ತೀವ್ರ ಮತ್ತು 34 ಸಾಧಾರಣ ಹೀಗೆ ಒಟ್ಟು 195 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಿದ ಹಿನ್ನಲೆಯಲ್ಲಿ ಬರಗಾಲ ಪರಿಸ್ಥಿತಿ ಅರಿಯಲು ಕೇಂದ್ರ ಸರ್ಕಾರವು ಬರ ಅಧ್ಯಯನ ತಂಡಗಳನ್ನು ಕಳುಹಿಸುವುದಾಗಿ ಮಾಹಿತಿ ನೀಡಿದೆ. ಇದೇ ಅಕ್ಟೋಬರ್ 10 ರೊಳಗೆ ತಂಡಗಳು ಆಗಮಿಸಲಿವೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಕಲಬುರಗಿ: ರಾಜ್ಯದಲ್ಲಿ ಬರಗಾಲ (Drought) ಪರಿಸ್ಥಿತಿ ಅಧ್ಯಯನಗೈಯಲು ಕೇಂದ್ರದಿಂದ ಮೂರು ತಂಡಗಳು (3 Teams) ಮುಂದಿನ ವಾರದಲ್ಲಿ ರಾಜ್ಯಕ್ಕೆ ಆಗಮಿಸುತ್ತಿವೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದರು.
ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆಯ ವಿಭಾಗೀಯ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ 161 ತೀವ್ರ ಮತ್ತು 34 ಸಾಧಾರಣ ಹೀಗೆ ಒಟ್ಟು 195 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಿದ ಹಿನ್ನಲೆಯಲ್ಲಿ ಬರಗಾಲ ಪರಿಸ್ಥಿತಿ ಅರಿಯಲು ಕೇಂದ್ರ ಸರ್ಕಾರವು ಬರ ಅಧ್ಯಯನ ತಂಡಗಳನ್ನು ಕಳುಹಿಸುವುದಾಗಿ ಮಾಹಿತಿ ನೀಡಿದೆ. ಇದೇ ಅಕ್ಟೋಬರ್ 10 ರೊಳಗೆ ತಂಡಗಳು ಆಗಮಿಸಲಿವೆ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ: Bed Bugs: ಪ್ಯಾರಿಸ್‌ನಲ್ಲಿ ಸಿಕ್ಕಾಪಟ್ಟೆ ತಿಗಣೆ ಕಾಟ! ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಎಂಟ್ರಿ ಕೊಟ್ಟ ಫ್ರಾನ್ಸ್ ಸರ್ಕಾರ
ಒಂದೆಡೆ ಅತಿವೃಷ್ಟಿ ಮತ್ತೊಂದೆಡೆ ಅನಾವೃಷ್ಟಿ ಪರಿಸ್ಥಿತಿಯಿದೆ. ಹೆಚ್ಚಿನ ಪ್ರಮಾಣದಲ್ಲಿ ಬರಗಾಲವಿದೆ. ಬೆಳೆ ಹಾನಿ ಸಮೀಕ್ಷೆ ನಡೆದಿದ್ದು, ಈಗಾಗಲೇ ಶೇ. 95 ರಷ್ಟು ಬೆಳೆ ಹಾನಿ ಸಮೀಕ್ಷೆಯಾಗಿದೆ. ತಂಡಗಳು ಆಗಮಿಸುವ ಹೊತ್ತಿಗೆ ಸಮೀಕ್ಷೆ ಪೂರ್ಣಗೊಂಡು ವರದಿ ಅಂತಿಮಗೊಳ್ಳಲಿದೆ. ಪ್ರಾಥಮಿಕ ವರದಿ ಪ್ರಕಾರ ಈಗಾಗಲೇ 40 ಲಕ್ಷ ಹೆಕ್ಟೇರ್ ದಲ್ಲಿ ಸುಮಾರು 28 ಸಾವಿರ ಕೋ. ರೂ ಹಾನಿ ಅಂದಾಜಿಸಲಾಗಿದೆ. 4,000 ಕೋಟಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದು ವಿವರಣೆ ನೀಡಿದರು.
ನರೇಗಾ ಕೂಲಿ ಕಾರ್ಮಿಕರ ಕೆಲಸದ ದಿನ 100 ರಿಂದ 150 ಕ್ಕೆ ಹೆಚ್ಚಿಸಲಾಗುವುದು. ಬರಗಾಲ ಘೋಷಣೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗುತ್ತದೆ. ಪ್ರತಿ ವಾರ ಕಮಿಟಿ ಸಭೆ ಕರೆದು ಪರಿಹಾರ ಕಾರ್ಯ ಉಸ್ತುವಾರಿ ನೋಡಿಕೊಳ್ಳಲಿದೆ ಎಂದ ಅವರು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಪರಿಣಾಮ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗುತ್ತಿದೆ ಎಂದರು.
ಕಳೆದ ವರ್ಷ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ ಜಿಲ್ಲೆಯಲ್ಲಿ ತೊಗರಿ ಬೆಳೆ ನೆಟೆ ರೋಗಕ್ಕೆ ತುತ್ತಾಗಿದ್ದರಿಂದ ಹಿಂದಿನ ಸರ್ಕಾರ ಪರಿಹಾರ ಘೋಷಣೆ ಮಾಡಿತ್ತಾದರು, ಅನುದಾನ ಬಿಡುಗಡೆ ಮಾಡಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೆ ಎರಡು ಹಂತದಲ್ಲಿ 4 ಜಿಲ್ಲೆಗಳ 2,37,860 ರೈತರಿಗೆ 148 ಕೋಟಿ ರೂ. ಪರಿಹಾರ ನೀಡಿದೆ. ಇದರಲ್ಲಿ ಕಲಬುರಗಿ ಜಿಲ್ಲೆಯ 1,65,027 ರೈತರಿಗೆ 120.66 ಕೋಟಿ ರೂ. ಪರಿಹಾರ ಸೇರಿದೆ. ಇನ್ನು ಬಾಕಿ 74 ಕೋಟಿ ರೂ. ಪರಿಹಾರ ನೀಡಬೇಕಿದ್ದು, ಅದನ್ನು ಶೀಘ್ರ ರೈತರ ಖಾತೆಗೆ ಪಾವತಿಸಲಾಗುವುದು ಎಂದರು.
ಇದನ್ನೂ ಓದಿ: Asian Games : ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ದಾಖಲೆ ಬರೆದ ಅನ್ನುರಾಣಿ
ನವೋದ್ಯಮ ಯೋಜನೆಯಡಿ ಹೊಸ ಎಫ್.ಪಿ.ಓಗಳಿಗೆ 5-20 ಲಕ್ಷ ರೂಪಾಯಿ ವರೆಗಿದ್ದ ಸಾಲದ ನೆರವನ್ನು 20-50 ಲಕ್ಷ ರೂ.ಗಳಿಗೆ ಏರಿಕೆ ಮಾಡಿದ್ದು, ಇದಕ್ಕಾಗಿ 10 ಕೋಟಿ ಮೀಸಲಿಡಲಾಗಿದೆ. ಬೃಹತ್ ಕಟಾವ್ ಹಬ್ (ಹಾರ್ವೆಸ್ಟರ್ ಹಬ್) ಸ್ಥಾಪನೆಗೆ 50 ಕೋಟಿ ರೂ. ಮೀಸಲಿಟ್ಟಿದ್ದು, ರಾಜ್ಯದಾದ್ಯಂತ 100 ಹಬ್ ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದರು.
ಬೆಳೆ ವಿಮೆ ಮಾರ್ಪಾಡು
ಬೆಳೆ ವಿಮೆಯನ್ನು ಈಗ ಖಾಸಗಿ ಕಂಪನಿಯೇ ಉಸ್ತುವಾರಿಯಾಗಿದ್ದು, ಸಮರ್ಪಕವಾಗಿ ಬೆಳೆ ಹಾನಿಗೆ ತಕ್ಕ ಪರಿಹಾರ ದೊರಕುತ್ತಿಲ್ಲ ಎಂಬುದಾಗಿ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಈ ಮೊದಲಿನಂತೆ ಮುಂದಿನ ವರ್ಷದಿಂದ ಸರ್ಕಾರದಿಂದಲೇ ಬೆಳೆ ವಿಮೆ ನಿರ್ವಹಿಸಲು ಚಿಂತನೆ ನಡೆದಿದೆ ಎಂದ ಸಚಿವರು, ಕೃಷಿ ಹೊಂಡ ನಿರ್ಮಾಣ ಮಾಡುವ ಕೃಷಿ ಭಾಗ್ಯ ಯೋಜನೆ ಮತ್ತೆ ಜಾರಿಗೆ ತರಲಾಗುತ್ತಿದೆ. ಇದಕ್ಕಾಗಿ ಈ ವರ್ಷ 100 ಕೋಟಿ ರೂ. ಅನುದಾನ ಮೀಸಲಿರಿಸಿದ್ದು, ಮುಂದಿನ ವರ್ಷ ಇನ್ನೂ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಕರ್ನಾಟಕ
ST Reservation : ಎಸ್‌ಟಿಗೆ ಕುರುಬ ಸಮುದಾಯವನ್ನು ಸೇರ್ಪಡೆ ಮಾಡಬೇಕಿರುವುದು ಕೇಂದ್ರ: ಸಿಎಂ ಸಿದ್ದರಾಮಯ್ಯ
St Reservation : ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸುವಂತೆ ಕೇಂದ್ರಕ್ಕೆ ಒತ್ತಾಯ ಮಾಡಲಾಗಿದೆ. ರಾಜಕೀಯ ಶಕ್ತಿ ಬೆಳೆದು ಎಲ್ಲರಿಗೂ ಅಧಿಕಾರದಲ್ಲಿ ಪಾಲು ಸಿಗಬೇಕು. ಸ್ವಾತಂತ್ರ್ಯ ದೊರೆತು 76 ವರ್ಷಗಳಾದರೂ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿ: ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಎಲ್ಲರಿಗೂ ಸಾಮಾಜಿಕ ನ್ಯಾಯ (Social Justice) ದೊರೆತಿಲ್ಲ. ಇನ್ನೂ ಕೂಡ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಿಲ್ಲ. ದೇಶದಲ್ಲಿ ಹಾಗೂ ಕರ್ನಾಟಕದಲ್ಲಿ ಈಗಲೂ ಇಂಥ ಸ್ಥಿತಿ ಇದೆ. ಮುಖ್ಯವಾಹಿನಿಗೆ ಬರದೇ ಸಮಸಮಾಜದ (Equal Society) ನಿರ್ಮಾಣ ಸಾಧ್ಯವಿಲ್ಲ. ಇನ್ನು ಕುರುಬ ಸಮುದಾಯದವರು ಸೇರಿದಂತೆ ಇನ್ನೂ ಅನೇಕ ಸಮುದಾಯಗಳನ್ನು ಎಸ್‌ಟಿಗೆ (ST Reservation) ಸೇರಿಸಬೇಕು ಎಂದು ಕೇಂದ್ರಕ್ಕೆ ಶಿಫಾರಸು ಮಾಡಿದ್ದೇವೆ. ಮುಂದಿನ ನಿರ್ಧಾರವನ್ನು ಕೇಂದ್ರ ಸರ್ಕಾರ (Central Government) ತೆಗೆದುಕೊಳ್ಳಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳುವ ಮೂಲಕ ಈ ವಿಚಾರವನ್ನು ಕೇಂದ್ರದ ಅಂಗಳಕ್ಕೆ ದೂಡಿದ್ದಾರೆ.
ಬೆಳಗಾವಿಯ ನೆಹರೂ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ಮಂಗಳವಾರ ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್‌ನ 9ನೇ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿ ವ್ಯವಸ್ಥೆಯ ಸಮಾಜದಲ್ಲಿ ವಾಸ್ತವಿಕ ಅಂಶಗಳನ್ನು ಅರ್ಥ ಮಾಡಿಕೊಂಡು ಅದರಂತೆ ನಡೆಯಬೇಕಾದುದ್ದು ನಮ್ಮ ಕರ್ತವ್ಯ. ಈ ದೃಷ್ಟಿಯಿಂದ ಇಂಥ ಸಂಘಟನೆ, ಸಮಾವೇಶಗಳು ಅತ್ಯಂತ ಅವಶ್ಯಕ. ಅಧಿಕಾರ ವಿಕೇಂದ್ರಿರಣವಾಗಿ, ಗ್ರಾಮ ಸ್ವರಾಜ್ಯವಾಗಬೇಕು ಎಂದು ಗಾಂಧೀಜಿ ಹೇಳಿದ್ದರು ಎಂಬುದನ್ನು ಸ್ಮರಿಸಿದರು.
ಸಮಾಜದ ಪ್ರಗತಿಗೆ ರಾಜಕೀಯ ಪ್ರಾತಿನಿಧ್ಯ ಅತ್ಯಗತ್ಯ
ಕುರುಬ ಸಮಾಜ ಸಂಘಟಿತವಾಗಿ ಉತ್ತಮ ಕೆಲಸ ಮಾಡಿದೆ. ರಾಜಕೀಯ ಶಕ್ತಿ ಬೆಳೆದು ಎಲ್ಲರಿಗೂ ಅಧಿಕಾರದಲ್ಲಿ ಪಾಲು ಸಿಗಬೇಕು. ಯಾವುದೇ ಸಮಾಜದ ಪ್ರಗತಿಗೆ ರಾಜಕೀಯ ಪ್ರಾತಿನಿಧ್ಯ ಅತ್ಯಗತ್ಯ. ನಿಮ್ಮ ಪರವಾಗಿ ಧ್ವನಿ ಎತ್ತುವವರು ಇಲ್ಲದಿದ್ದಾಗ ಆ ಸಮುದಾಯ ಹಿಂದುಳಿಯುತ್ತದೆ. ಸಂಘಟನೆ ಮಾಡಿ, ರಾಜಕೀಯವಾಗಿ ಬೆಳೆಯುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ: Caste Census Report : ಜಾತಿಗಣತಿ ವರದಿ ಬಿಡುಗಡೆಗೆ ಮೊದಲು ನನಗೆ ಬರಬೇಕಲ್ಲವೇ? ಪ್ರತಿಪಕ್ಷಗಳಿಗೆ ತಿವಿದ ಸಿಎಂ ಸಿದ್ದರಾಮಯ್ಯ!
ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ
ಎಲ್ಲ ಜಾತಿಯವರನ್ನೂ ಒಳಗೊಂಡು ಸರ್ಕಾರವನ್ನು ನಡೆಸುವಂತಹ ಶಕ್ತಿ ಕೊಡು ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅನೇಕ ರಾಜ್ಯಗಳಲ್ಲಿ ಕುರುಬ ಸಮುದಾಯದವರು ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದಲ್ಲಿಯೂ ಇದ್ದಾರೆ. ಕಲಬುರಗಿ, ಬೀದರ್, ಯಾದಗಿರಿಯಲ್ಲಿ ಗೊಂಡ, ರಾಜಗೊಂಡ ಕುರುಬ ಸಮುದಾಯದವರು ಎಸ್‌ಟಿಗೆ ಸೇರಿದರೆ, ಕೊಡಗು ಜಿಲ್ಲೆಯಲ್ಲಿ ಎಲ್ಲ ಕುರುಬರು ಎಸ್‌ಟಿಗೆ ಸೇರಿದ್ದಾರೆ. ಕಲಬುರಗಿ, ಬೀದರ್, ಯಾದಗಿರಿಯಲ್ಲಿ ಕುರುಬರು ಮತ್ತು ಗೊಂಡ ಸಮುದಾಯದವರು ಒಂದೇ ಆಗಿದ್ದು, ಈ ಸಮುದಾಯಗಳನ್ನು ಎಸ್‌ಟಿಗೆ ಸೇರಿಸಬೇಕು ಎಂದು ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಈಗ ಈ ವಿಚಾರವು ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ಗೊಲ್ಲರು, ಕುರುಬರು, ಕೋಳಿ ಸಮಾಜವು ಸೇರಿದಂತೆ ವಿವಿಧ ಸಮಾಜಗಳನ್ನು ಎಸ್‌ಟಿ ಸಮುದಾಯಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕ
Mangalore News: 70, 80 ವರ್ಷದ ಇಬ್ಬರು ವೃದ್ಧ ಸಹೋದರಿಯರು ಆತ್ಮಹತ್ಯೆಗೆ ಶರಣು
Mangalore News: ಮಂಗಳೂರಿನಲ್ಲಿ ಕೌಟುಂಬಿಕ ವಿಚಾರಕ್ಕೆ ಮನನೊಂದು ವೃದ್ಧ ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳೂರು: ಕೌಟುಂಬಿಕ ವಿಚಾರಕ್ಕೆ ಮನನೊಂದು ವೃದ್ಧ ಸಹೋದರಿಯರಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ (Mangalore News) ಕದ್ರಿ ಕಂಬಳ ಎಂಬಲ್ಲಿ ನಡೆದಿದೆ.
ಜಗನ್ನಾಥ್ ಭಂಡಾರಿ ಎಂಬುವವರ ಪತ್ನಿ ಲತಾ ಭಂಡಾರಿ (70) ಹಾಗೂ ಆಕೆಯ ಅಕ್ಕ ಸುಂದರಿ ಶೆಟ್ಟಿ (80) ಆತ್ಮಹತ್ಯೆ ಮಾಡಿಕೊಂಡವರು. ಜಗನ್ನಾಥ ಭಂಡಾರಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಸಹೋದರಿಯರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂತರ ಜಗನ್ನಾಥ ಭಂಡಾರಿ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಕದ್ರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ | Attempt to murder : ಮೊಬೈಲ್ ಫ್ಲಾಶ್ ಮಾಡಲ್ಲ ಎಂದವನಿಗೆ ಲಾಂಗ್‌ನಿಂದ ಹೊಡೆದು ಅಟ್ಟಾಡಿಸಿದ ಕಳ್ಳಿ!
ಬಿಜಿಎಸ್ ಕಾಲೇಜಿನ ಉಪನ್ಯಾಸಕ ನೇಣಿಗೆ ಶರಣು; ಸಾವಿನ ಸುತ್ತ ಅನುಮಾನದ ಹುತ್ತ
ಚಿಕ್ಕಬಳ್ಳಾಪುರ: ಇಲ್ಲಿನ ಅವಲಗುರ್ಕಿ ಗ್ರಾಮದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಉಪನ್ಯಾಸಕರೊಬ್ಬರು (Lecturer Death) ಮೃತಪಟ್ಟಿದ್ದಾರೆ. ಸುದರ್ಶನ್ (25) ಮೃತ ಉಪನ್ಯಾಸಕ.
ಸುದರ್ಶನ್ ಬಾಗೇಪಲ್ಲಿ ಮೂಲದ ನಿವಾಸಿ ಆಗಿದ್ದಾರೆ. ಬಿಜಿಎಸ್ ಕಾಲೇಜಿನಲ್ಲಿ ಗಣಿತ ವಿಭಾಗದ ಉಪನ್ಯಾಸಕನಾಗಿದ್ದರು. ಕಾಲೇಜು ಸಮೀಪದ ಆವಲಗುರ್ಕಿ ಗ್ರಾಮದಲ್ಲೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇದೇ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹವು ಪತ್ತೆಯಾಗಿದೆ.
ಇದನ್ನೂ ಓದಿ: Namma Metro: ಮೆಟ್ರೋ ಟ್ರ್ಯಾಕ್‌ನಲ್ಲಿ ಲಾಕ್ ಆದ ಮೆಂಟೈನ್ಸ್ ವೆಹಿಕಲ್! ಮೇಲೆತ್ತಲು ಕ್ರೇನ್ ಬಳಕೆ
ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದ ಮಹಿಳೆ ಸಾವು
ಮಂಗಳೂರು: ಇಲ್ಲಿನ ಸುಳ್ಯ ಬೆಳ್ಳಾರೆ ಸಮೀಪದ ಶೇಣಿ ಎಂಬಲ್ಲಿ ವಿಷಕಾರಿ ಹಣ್ಣಿನ (Poison juice) ಜ್ಯೂಸ್ ಕುಡಿದು ಅಸ್ವಸ್ಥಗೊಂಡಿದ್ದ ಮಹಿಳೆಯೊಬ್ಬರು (Mangaluru News) ಮೃತಪಟ್ಟಿದ್ದಾರೆ. ಶೇಣಿಯ ಕುಳ್ಳಾಜೆ ನಿವಾಸಿ ಲೀಲಾವತಿ (35) ಮೃತ ದುರ್ದೈವಿ.
ಲೀಲಾವತಿ ವಾರದ ಹಿಂದೆ ಮೈರೋಲ್ ಎಂಬ ಕಾಡಿನ ಹಣ್ಣು ತಂದಿದ್ದರು. ಆದರೆ ಅದು ಮೈರೋಲ್ ಹಣ್ಣಿನಂತೇ ಹೋಲುವ ವಿಷದ ಹಣ್ಣಾಗಿತ್ತು. ಇದು ತಿಳಿಯದೆ ಆ ಹಣ್ಣಿನಲ್ಲಿ ಜ್ಯೂಸ್ ಮಾಡಿ ಲೀಲಾವತಿ ಹಾಗೂ ಆಕೆ ತಂದೆ ಕುಡಿದಿದ್ದರು. ಜ್ಯೂಸ್ ಕುಡಿಯುತ್ತಿದ್ದಂತೆ ಅಸ್ವಸ್ಥಗೊಂಡಿದ್ದರು.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ವಾಂತಿ, ಭೇದಿಯಾಗಿ ಸುಸ್ತು, ಆಯಾಸದಿಂದ ಬಳಲುತ್ತಿದ್ದ ಲೀಲಾವತಿಯನ್ನು ಕೂಡಲೇ ಸುಳ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಜೀವ ಬಿಟ್ಟಿದ್ದಾಳೆ. ಜ್ಯೂಸ್ ಕುಡಿದಿದ್ದ ಲೀಲಾವತಿ ತಂದೆಯವರು ಚೇತರಿಸಿಕೊಳ್ಳುತ್ತಿದ್ದಾರೆ.
-
ದೇಶ23 hours ago
Viral Video: ಫ್ರಿಡ್ಜ್ ಡೋರ್ ತೆಗೆಯಲು ಹೋದ 4 ವರ್ಷದ ಬಾಲಕಿಗೆ ಕರೆಂಟ್ ಶಾಕ್, ಸ್ಥಳದಲ್ಲೇ ಸಾವು
-
ಪ್ರಮುಖ ಸುದ್ದಿ18 hours ago
Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!
-
ದೇಶ24 hours ago
K Annamalai: ಲೇಡಿ ರಿಪೋರ್ಟರ್ ಜತೆ ಅಣ್ಣಾಮಲೈ ಕಿರಿಕ್! ಆಕೆ ಕೇಳಿದ ಪ್ರಶ್ನೆಗೆ ರೇಗಿದ ಬಿಜೆಪಿ ನಾಯಕ
-
ಕಿರುತೆರೆ8 hours ago
BBK Season 10 : ಅಕ್ಟೋಬರ್ 8 ರಿಂದ ಬಿಗ್ ಬಾಸ್ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?
-
ದೇಶ13 hours ago
Raid On NewsClick: ನ್ಯೂಸ್ಕ್ಲಿಕ್ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ, ಏನಿದು ಕೇಸ್?
-
ಕರ್ನಾಟಕ10 hours ago
Namma Metro: ಮೆಟ್ರೋ ಟ್ರ್ಯಾಕ್‌ನಲ್ಲಿ ಲಾಕ್ ಆದ ಮೆಂಟೈನ್ಸ್ ವೆಹಿಕಲ್! ಮೇಲೆತ್ತಲು ಕ್ರೇನ್ ಬಳಕೆ
-
ಕ್ರೈಂ14 hours ago
4 ವರ್ಷದಿಂದ ಇಬ್ಬರು ಪುತ್ರಿಯರ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿಯ ಬಂಧನ; ಇವನೆಂಥಾ ತಂದೆ?
-
ಉತ್ತರ ಕನ್ನಡ9 hours ago
Karwar Tunnel Route : ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಸುರಂಗ ಮಾರ್ಗ ಕೊನೆಗೂ ಸಂಚಾರ ಮುಕ್ತ!