ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಚರ್ಚೆಗಳು ನಡೆಯುತ್ತಿರುವ ನಡುವೆ ಮೈತ್ರಿ ಬಗ್ಗೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸುಳಿವು ನೀಡಿದ್ದಾರೆ. ಈಗಾಗಲೇ ಎಲ್ಲಾ ಕಡೆ ಮಾಧ್ಯಮಗಳಲ್ಲೂ ಮೈತ್ರಿ ಬಗ್ಗೆ ಚರ್ಚೆಯಾಗುತ್ತಿದೆ. ಹಾಗಾಗಿ ಹೊಂದಾಣಿಕೆ ಆಗಬಹುದು ಎಂದು ಸಿ.ಪಿ.ಯೋಗೇಶ್ವರ್ ಹೇಳಿರುವುದು ಕುತೂಹಲ ಮೂಡಿಸಿದೆ.
ರಾಮನಗರದಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ನೇತೃತ್ವದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆ ಬಳಿಕ ಮಾತನಾಡಿರುವ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅತಿ ಹೆಚ್ಚು ಸಂಸದರನ್ನು ಗೆಲ್ಲಿಸಬೇಕು. ಅಭ್ಯರ್ಥಿ ಆಯ್ಕೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು. ಹೈಕಮಾಂಡ್ ಸ್ಪರ್ಧೆ ಮಾಡು ಎಂದರೆ ಮಾಡುವೆ. ಒಂದಷ್ಟು ರಾಜಕೀಯ ಬದಲಾವಣೆ ಆಗಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | MLA training: ಶಾಸಕರ ತರಬೇತಿಗೆ ಗಣ್ಯರ ಆಹ್ವಾನದ ಬಗ್ಗೆ ಆಕ್ಷೇಪ; ತಿರುಗೇಟು ನೀಡಿದ ಸ್ಪೀಕರ್ ಖಾದರ್
ಜೆಡಿಎಸ್ ಜತೆ ಮೈತ್ರಿ ಬಗ್ಗೆ ಮಾತನಾಡಿರುವ ಅವರು, ಮೈತ್ರಿ ಆಗಬಹುದು ಎಂದುಕೊಂಡಿದ್ದೇನೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಈಗಾಗಲೇ ಎಲ್ಲಾ ಕಡೆ ಮಾಧ್ಯಮಗಳಲ್ಲೂ ಈ ಬಗ್ಗೆ ಚರ್ಚೆ ಆಗುತ್ತಿದೆ. ಹಾಗಾಗಿ ಹೊಂದಾಣಿಕೆ ಆಗಬಹುದು ಎಂದು ಎನಿಸಿಸುತ್ತಿದೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಗೆ ಸಿದ್ಧತೆ
2024ರ ಲೋಕಸಭಾ ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಶುಕ್ರವಾರ ಆಯೋಜಿಸಲಾಗಿತ್ತು. ಈ ವೇಳೆ ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಸಿ.ಪಿ.ಯೋಗೇಶ್ವರ್, ಬಿಜೆಪಿ ವಕ್ತಾರ ಅಶ್ವತ್ಥ ನಾರಾಯಣಗೌಡ ಸೇರಿ ರಾಮನಗರ, ಮಾಗಡಿ ಕ್ಷೇತ್ರದ ಪರಾಜಿತ ಅಭ್ಯರ್ಥಿಗಳು, ಬಿಜೆಪಿ ಪ್ರಮುಖ ಮುಖಂಡರು, ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ | BJP Karnataka: 100 ದಿನ ಅವಕಾಶ ಕೊಡಿ ನಾನೇನು ಅಂತ ತೋರಿಸ್ತೀನಿ: ರಾಜ್ಯ ಬಿಜೆಪಿ ಅಧ್ಯಕ್ಷರಾಗಲು ವಿ. ಸೋಮಣ್ಣ ರೆಡಿ
ಚುನಾವಣೆಗೆ ಪಕ್ಷ ಸಂಘಟನೆ ರೂಪಿಸುವ ದೃಷ್ಟಿಯಿಂದ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು. ಯೋಗೇಶ್ವರ್‌ರಿಂದ ಜಿಲ್ಲೆಯ ಕುರಿತ ಮಾಹಿತಿಯನ್ನು ಸದಾನಂದಗೌಡರು ಪಡೆದು, ಎಲ್‌ಕ್ಷನ್‌ನಲ್ಲಿ ಪಕ್ಷದ ಗೆಲುವಿಗಾಗಿ ಕಾರ್ಯಕರ್ತರು ಸಂಘಟಿತವಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.