ಬೆಂಗಳೂರು: ಲಿಂಗಾಯತ ಸಿಎಂಗಳು ಭ್ರಷ್ಟರು ಎಂಬ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Karnataka Election) ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆ ಏ.29 ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದೆ.
ಲಿಂಗಾಯತ ಸಿಎಂಗಳು ಭ್ರಷ್ಟರು ಎಂದು ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಉತ್ತರ ಕರ್ನಾಟಕ ಜನಶಕ್ತಿ ಸೇನಾ ಅಧ್ಯಕ್ಷ ಶಂಕರ್ ಸೇಠ್ ಹಾಗೂ ಮಲ್ಲಯ್ಯ ಹಿರೇಮಠ್ ಅವರು ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಏ.29 ವಿಚಾರಣೆ ನಡೆಸಲು 42ನೇ ಎಸಿಎಂಎಂ (ಜನಪ್ರತಿನಿಧಿಗಳ ಕೋರ್ಟ್) ದಿನಾಂಕ ನಿಗದಿ ಪಡಿಸಿದೆ.
ಇದನ್ನೂ ಓದಿ | Karnataka Election 2023: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯಾರಾಗ್ತಾರೆ ಸಿಎಂ; ಏನಂದ್ರು ಪ್ರಿಯಾಂಕಾ ಗಾಂಧಿ?
ಲಿಂಗಾಯತ ಸಿಎಂಗಳು ಭ್ರಷ್ಟಾಚಾರ ಎಸಗಿ, ರಾಜ್ಯವನ್ನು ಹಾಳು ಮಾಡಿದ್ದಾರೆ ಎಂದು ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲಿಂಗಾಯತ ಸಮುದಾಯ ಆಕ್ರೋಶ ವ್ಯಕ್ತಪಡಿಸಿತ್ತು. ಹಾಗೆಯೇ ಬಿಜೆಪಿ ನಾಯಕರು ಕೂಡ ತೀವ್ರ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಸಿದ್ದರಾಮಯ್ಯ ವಿರುದ್ಧ ಲಿಂಗಾಯತ ಯುವ ವೇದಿಕೆಯ ಕಾನೂನು ಘಟಕದಿಂದ ಚುನಾವಣೆ ಆಯೋಗಕ್ಕೆ ದೂರು ಕೂಡ ನೀಡಲಾಗಿತ್ತು.