Site icon Vistara News

Criminal politics | ಕಾಂಗ್ರೆಸ್‌ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ, ಲೆಕ್ಕ ಹಾಕಿಕೊಳ್ಳಲಿ ಎಂದ ಸಿಎಂ ಬೊಮ್ಮಾಯಿ

CM meets piyush goel

ನವ ದೆಹಲಿ: ಕಾಂಗ್ರೆಸ್‌ನಲ್ಲಿ ಎಷ್ಟು ಜನ ರೌಡಿ ಶೀಟರ್ ಇದ್ದಾರೆ ಎಂದು ಲೆಕ್ಕ ಹಾಕಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಸೈಲೆಂಟ್ ಸುನಿಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ‌ ವಿಚಾರದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮಯ ಕೇಳಿದ್ದು, ನಾಳೆ ಸಮಯ ದೊರೆಯುವ ವಿಶ್ವಾಸವಿದೆ ಎಂದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನೆಗೆ ಆಹ್ವಾನಿಸಲಾಗುವುದು ಹಾಗೂ ಭೂಪೇಂದ್ರ ಯಾದವ್ ಅವರೊಂದಿಗೆ ಪರಿಸರ ಸಂಬಂಧಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ಭೂಪೇಂದ್ರ ಯಾದವ್‌ ಅವರನ್ನು ಭೇಟಿಯಾದರು

ಕೇಂದ್ರ ಕಾರ್ಮಿಕ ಸಚಿವರ ಭೇಟಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದರು ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಬೃಹತ್ ಮತ್ತು ಮಧ್ಯಮ ನೀರಾವರಿ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು

ವಾಣಿಜ್ಯ ಸಚಿವ ಪಿಯೂಷ್‌ ಗೋಯೆಲ್‌ ಭೇಟಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಜವಳಿ ವಾಣಿಜ್ಯ ಮತ್ತು ಕೈಗಾರಿಕೆ ಗ್ರಾಹಕ ವ್ಯವಹಾರಗಳ ಸಚಿವಾಲಯ ಹಾಗೂ ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪಿಯೂಷ್ ಗೋಯಲ್ ರವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಬೃಹತ್ ಮತ್ತು ಮಧ್ಯಮ ನೀರಾವರಿ, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಹಾಗೂ ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.

Exit mobile version