Criminal politics | ಬಿಜೆಪಿಗೆ ನಾನು ಕಾಣೊಲ್ಲ, ಅವರಿಗೆ ರೌಡಿಗಳು, ಗೂಂಡಾಗಳು, ದುಡ್ಡಿರೋರೇ ಬೇಕು ಎಂದ ಮುತಾಲಿಕ್‌ - Vistara News

ಕರ್ನಾಟಕ

Criminal politics | ಬಿಜೆಪಿಗೆ ನಾನು ಕಾಣೊಲ್ಲ, ಅವರಿಗೆ ರೌಡಿಗಳು, ಗೂಂಡಾಗಳು, ದುಡ್ಡಿರೋರೇ ಬೇಕು ಎಂದ ಮುತಾಲಿಕ್‌

ಬಿಜೆಪಿಗೆ ಈಗ ಹಿಂದುತ್ವಕ್ಕಾಗಿ ಕೆಲಸ ಮಾಡಿದವರು ಬೇಕಾಗಿಲ್ಲ. ರೌಡಿಗಳಿಗೆ, ದುಡ್ಡಿದ್ದವರಿಗೆ ಮಣೆ ಹಾಕುತ್ತಿದೆ. ಇದು ಶೋಭೆಯಲ್ಲ (Criminal politics) ಎಂದಿದ್ದಾರೆ ಪ್ರಮೋದ್‌ ಮುತಾಲಿಕ್‌.

VISTARANEWS.COM


on

pramod muthalik
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕೊಪ್ಪಳ: ʻʻಬಿಜೆಪಿಗೆ ರೌಡಿಗಳು, ಗೂಂಡಾಗಳು, ದುಡ್ಡಿದ್ದವರು ಮಾತ್ರ ಕಾಣಿಸುತ್ತಾರೆ. ಪ್ರಮೋದ್‌ ಮುತಾಲಿಕ್ ಕಾಣೋದಿಲ್ಲʼʼ- ಹೀಗೆಂದು ಗರಂ (Criminal politics) ಆಗಿ ಹೇಳಿದ್ದಾರೆ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌.

ಹನುಮ ಜಯಂತಿ ಹಿನ್ನೆಲೆಯಲ್ಲಿ ಕೊಪ್ಪಳದ ಅಂಜನಾದ್ರಿಗೆ ಆಗಮಿಸಿದ ಪ್ರಮೋದ್ ಮುತಾಲಿಕ್ ಅವರು ರೌಡಿಗಳ ಸೇರ್ಪಡೆ ವಿಚಾರದಲ್ಲಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಬಿಜೆಪಿಗೆ ಇದು ಶೋಭೆಯಲ್ಲ ಎಂದರು.

ʻʻದುಡ್ಡಿದ್ದವರನ್ನು, ರೌಡಿಗಳನ್ನು, ಗೂಂಡಾಗಳನ್ನು ಪಕ್ಷದೊಳಗೆ ಸೇರಿಸಿಕೊಳ್ಳುತ್ತೀದ್ದೀರಿ. ತ್ಯಾಗ, ಬಲಿದಾನ, ಶ್ರಮ ವಹಿಸಿದ ಹಿಂದೂ ಪ್ರಖರ ಕಾರ್ಯಕರ್ತರು ನಿಮಗೆ ಕಾಣುತ್ತಿಲ್ಲ. ನಮ್ಮ ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಸಿದ್ದಲಿಂಗಶ್ರೀ ಹಾಗೂ ನಾನು ರಾಜಕೀಯ ಪ್ರವೇಶ ನಿರ್ಧಾರ ಮಾಡಿದರೆ ನಾವು ನಿಮಗೆ ಕಾಣುವುದಿಲ್ಲ, ರೌಡಿಗಳು ಗೂಂಡಾಗಳು ಕಾಣುತ್ತಾರೆʼʼ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ʻʻಇಡೀ ಸಮಾಜದ ಸ್ವಾಸ್ಥ್ಯವನ್ನು, ನೈತಿಕತೆಯನ್ನು ಕೆಡಿಸುತ್ತಿರೋದು ಸರಿಯಲ್ಲʼʼ ಎಂದಿರುವ ಅವರು ಇದಕ್ಕೆಲ್ಲ ಸೆಡ್ಡು ಹೊಡೆಯುವಂತೆ ಹಿಂದೂ ಸಂಘಟನೆಗಳ ಒಕ್ಕೂಟದಿಂದ 25 ಪ್ರಖರ ಹಿಂದೂವಾದಿ ಅಭ್ಯರ್ಥಿಗಳನ್ನು ಕಣಕ್ಕಿಸುತ್ತೇವೆ ಎಂದರು. ಇದರಲ್ಲಿ ಐದು ಜನ ಸ್ವಾಮೀಜಿಗಳು ಈಗಾಗಲೇ ತಯಾರಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

೧೦೦ ಕೋಟಿ ಕೊಟ್ಟಿದ್ದಕ್ಕೆ ಅಭಿನಂದನೆ
ʻʻಕೊಪ್ಪಳದ ಗಂಗಾವತಿಯ ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ 100 ಕೋಟಿ ರೂ. ಕೊಟ್ಟಿದ್ದಕ್ಕೆ ಸರ್ಕಾಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಅಂಜನಾದ್ರಿಯನ್ನು ಚುನಾವಣೆ ಹಿನ್ನೆಲೆಯಲ್ಲಿ ಅಭಿವೃದ್ಧಿ ಮಾಡದೆ ಧಾರ್ಮಿಕ, ರಾಷ್ಟ್ರೀಯತೆ ಹಿನ್ನೆಲೆಯಲ್ಲಿ ಮಾಡಬೇಕುʼʼ ಎಂದರು ಅವರು.

ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶ ಬೇಡ
ʻʻಅಂಜನಾದ್ರಿ ಕ್ಷೇತ್ರದ ಆವರಣದಲ್ಲಿ 500 ಮೀಟರ್ ಅಂತರದಲ್ಲಿ ಅನ್ಯ ಧರ್ಮಿಯರ ವ್ಯಾಪಾರ, ವ್ಯವಹಾರಕ್ಕೆ ಅವಕಾಶ ಕೊಡಬಾರದು. ಒಂದು ವೇಳೆ ಅವಕಾಶ ಕೊಟ್ಟರೆ ನಮ್ಮ ಹನುಮ ಭಕ್ತರು ಅದಕ್ಕೆ ಉತ್ತರ ಕೊಡುತ್ತಾರೆʼʼ ಎಂದು ಸವಾಲು ಹಾಕಿದ ಪ್ರಮೋದ್‌ ಮುತಾಲಿಕ್‌, ʻʻಚುನಾವಣೆಗೋಸ್ಕರ ಅದು ಮಾಡ್ತೀವಿ , ಇದು ಮಾಡ್ತೀವಿ ಅಂತ ಬೊಗಳೆ‌ ಬಿಡಬೇಡಿ. ಪ್ರಾಮಾಣಿಕವಾಗಿ ಹನುಮ ಸ್ಥಳಕ್ಕೆ ಮಾನ್ಯತೆ ಕೊಡಬೇಕುʼʼ ಎಂದು ಆಗ್ರಹಿಸಿದರು.

ಇದನ್ನೂ ಓದಿ | ವಿಸ್ತಾರ ವಿಶೇಷ | ಡಿಸೆಂಬರ್‌ ಅಂತ್ಯಕ್ಕೆ ಶ್ರೀರಾಮ ಸೇನೆ 25 ಅಭ್ಯರ್ಥಿಗಳ ಘೋಷಣೆ: BJP ನಿದ್ದೆಗೆಡಿಸಿದ ಮುತಾಲಿಕ್‌ ನಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Latest

ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಹುಣಸೂರು: ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ತಾಲ್ಲೂಕು ಕುರುಬರ ಅಭಿವೃದ್ಧಿ ಸಮಿತಿ ಇವರ ವತಿಯಿಂದ ಹುಣಸೂರಿನ ಕನಕ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಗಣಪತಿ ದೇವಸ್ಥಾನ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವಸ್ಥಾನವನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ನಮ್ಮ ಸರ್ಕಾರ ಜನಪರವಾದ ಕೆಲಸ ಮಾಡಿದ್ದು, 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡಬೇಕಾದರೆ ಬಸವಣ್ಣ, ಅಂಬೇಡ್ಕರ್, ಗಾಂಧೀಜಿ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎಲ್ಲರಿಗೂ ಸಮಾನ ಅವಕಾಶಗಳು, ಜಾತಿ ವರ್ಗ ರಹಿತವಾದ ಸಮಾಜ ನಿರ್ಮಾಣ ಸರ್ಕಾರದ ಉದ್ದೇಶ. ಎಲ್ಲರಿಗೂ ಸಮಾನ ಅವಕಾಶಗಳು, ಜಾತಿ ವರ್ಗ ರಹಿತವಾದ ಸಮಾಜ ನಿರ್ಮಾಣವಾಗಬೇಕೆನ್ನುವುದು ನಮ್ಮ ಸರ್ಕಾರದ ಉದ್ದೇಶ. ಇತಿಹಾಸ ತಿಳಿಯದವರು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಮೌಢ್ಯಗಳಿಂದ ದೂರವಿದ್ದು, ಜಾತಿ, ವರ್ಗಗಳನ್ನು ಬಿಟ್ಟಾಗ ಬಸವಣ್ಣನವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

ಬಸವಣ್ಣನವರು ಸಮಾಜದ ಜಾತಿವ್ಯವಸ್ಥೆ ಮತ್ತು ಅಸಮಾನತೆಗಳನ್ನು ಹೋಗಲಾಡಿಸಲು ಹೋರಾಡಿದ ಸಮಾಜ ಸುಧಾರಕರು. ಮೌಢ್ಯಗಳಿಂದ ದೂರವಿರುವ , ಜಾತಿ ಮತ್ತು ವರ್ಗರಹಿತ ಸಮಾಜ ನಿರ್ಮಾಣವನ್ನು ಅವರು ಬಯಸಿದ್ದರು. ಬಸವಣ್ಣನವರು ಮೇಲ್ಜಾತಿಗೆ ಸೇರಿದವರಾದರೂ, ಸಮಾಜದ ಕಟ್ಟಕಡೆಯ ಅಸ್ಪೃಶ್ಯತೆಯ ಜಾತಿಯಲ್ಲಿ ಹುಟ್ಟಿದವನು ಎಂದು ಹೇಳಿಕೊಳ್ಳುತ್ತಿದ್ದರು. ಬಸವಾದಿ ಶರಣರು ಸಮಾಜ ಪರಿವರ್ತನೆಗೆ ಪೂರ್ಣ ಪ್ರಮಾಣದಲ್ಲಿ ಸಫಲರಾಗಲಿಲ್ಲ. ಬಸವ ವಿಚಾರಗಳು ಹಿಂದೆಯೂ, ಇಂದಿಗೂ, ಭವಿಷ್ಯದಲ್ಲಿಯೂ ಪ್ರಸ್ತುತವಾಗಿದೆ. ಮನುಷ್ಯ ಸಮಾಜ ನಿರ್ಮಾಣ ಮಾಡಲು ಬಯಸಿದ ಬಸವಣ್ಣನವರು ಒಬ್ಬ ಮಾನವತಾವಾದಿ ಎಂದರು.

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ಸಾಮಾಜಿಕ ನ್ಯಾಯವನ್ನು ಬಸವಣ್ಣನವರು ಪ್ರತಿಪಾದಿಸುತ್ತಿದ್ದರು ಮತ್ತು ಇವುಗಳನ್ನೇ ನಮ್ಮ ಸಂವಿಧಾನವೂ ಪ್ರತಿಪಾದಿಸುತ್ತವೆ ಎಂದು ವಿವರಿಸಿದರು.

Continue Reading

Latest

ಕೃಷ್ಣಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್-ಡಿಎಂಕೆ ಅಭ್ಯರ್ಥಿಗಳ ಪರ ಸಚಿವ ಈಶ್ವರ ಖಂಡ್ರೆ ಪ್ರಚಾರ

VISTARANEWS.COM


on

ಕೃಷ್ಣಗಿರಿ: ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿ ಮಾತು ತಪ್ಪಿದ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿ ಯುವಜನರ ಆಕಾಂಕ್ಷೆಗಳಿಗೆ ತಣ್ಣೀರೆರೆಚಿದ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರ ವಚನಭ್ರಷ್ಟವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೃಷ್ಣಗಿರಿಯಲ್ಲಿಂದು ಕಾಂಗ್ರೆಸ್ -ಡಿಎಂಕೆ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಅವರು, ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿದೇಶದಿಂದ ಕಪ್ಪುಹಣ ತರುವುದಾಗಿ, 2022ರ ಹೊತ್ತಿಗೆ ಸರ್ವರಿಗೂ ಸೂರು ಎಂದು ಘೋಷಿಸಿದ ಪ್ರಧಾನಿ ನುಡಿದಂತೆ ನಡೆಯಲೇ ಇಲ್ಲ ಎಂದು ಟೀಕಿಸಿದರು.

ಕೇಂದ್ರ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರ, ಸಾಂವಿಧಾನಿಕ ಸ್ವಾಯತ್ತ ಸಂಸ್ಥೆಗಳಾದ ಇ.ಡಿ, ಸಿಬಿಐ, ಐ.ಟಿ. ಮೊದಲಾದ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ದಕ್ಷಿಣ ರಾಜ್ಯಗಳ ಬಗ್ಗೆ ಮಲತಾಯಿ ಧೋರಣೆ ತಳೆದಿದೆ. ದಕ್ಷಿಣ ರಾಜ್ಯಗಳಿಗೆ ಅದರಲ್ಲೂ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಕ್ಕೆ ತೆರಿಗೆಯ ಪಾಲು, ಅನುದಾನ, ಜಿಎಸ್ಟಿ ಪರಿಹಾರ, ಬರ, ಪ್ರವಾಹ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ ಎಂದೂ ದೂಷಿಸಿದರು.
ಪ್ರಧಾನಿ ಮೋದಿ ಸರ್ಕಾರ ಕ್ಷೇತ್ರ ಪುನರ್ವಿಂಗಡಣೆಯಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಕಡಿತ ಮಾಡುವ ಮೂಲಕ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಮಾಡಲು ಸಂಚು ನಡೆಸಿತ್ತು. ಈಗ ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರುವ ಕೆಲಸ ಮಾಡುತ್ತಿದೆ. ಆ ಮೂಲಕ ಸಾಮಾಜಿಕ ಸಂರಚನೆಯನ್ನೇ ಹಾಳು ಮಾಡುವ ಪ್ರಯತ್ನ ಮಾಡುತ್ತಿದೆ, ಸಮಾಜವನ್ನು ಭಾಷೆ, ಧರ್ಮದ ಹೆಸರಲ್ಲಿ ಒಡೆಯಲು ಪ್ರಯತ್ನಿಸುತ್ತಿದೆ. ಇದು ಸಂವಿಧಾನಕ್ಕೆ ಅಪಾಯಕಾರಿ ಎಂದರು.

ರಾಜಕೀಯ ಲಾಭಕ್ಕಾಗಿ ನಾಟಕ ಮಾಡುವ, ಸುಳ್ಳು ಹೇಳುವ ಭಾರತೀಯ ಜನತಾ ಪಕ್ಷ ಹಾಗೂ ಮಿತ್ರಪಕ್ಷಗಳ ನಿಜಬಣ್ಣ ಈಗ ಬಯಲಾಗಿದೆ. ಜನರು ಜಾಗೃತರಾಗಿದ್ದಾರೆ. ಹೀಗಾಗಿ ತಮಿಳುನಾಡು ಜನತೆ ಸಾಮಾಜಿಕ ನ್ಯಾಯಕ್ಕಾಗಿ, ತಮ್ಮ ನಾಡಿನ ಹಿರಿಮೆ, ಸಂಸ್ಕೃತಿ, ಸಂಪ್ರದಾಯ ಮತ್ತು ಭಾಷೆಯ ರಕ್ಷಣೆಗಾಗಿ ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿಕೂಟಕ್ಕೆ ಮತನೀಡುತ್ತಾರೆ ಎಂದು ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ 2023ರಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ನಮ್ಮ ಸರ್ಕಾರ ಎಲ್ಲ 5 ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದ್ದು ನುಡಿದಂತೆ ನಡೆದಿದ್ದೇವೆ. ಪ್ರತಿ ವರ್ಷ 53 ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡುತ್ತಿದೆ. ಈ ಗ್ಯಾರಂಟಿಗಳಿಂದ 1 ಕೋಟಿ ಕುಟುಂಬಗಳು ಬಡತನ ರೇಖೆಯಿಂದ ಮೇಲೆ ಬಂದಿವೆ. ಮಹಿಳೆಯರ ಆರ್ಥಿಕ ಸಬಲೀಕರಣವಾಗಿದೆ. ಕರ್ನಾಟಕದ ತಲಾದಾಯ ದೇಶದಲ್ಲೇ ಅತ್ಯುತ್ತಮವಾಗಿರುವುದಕ್ಕೆ ಈ ಗ್ಯಾರಂಟಿಗಳು ಕಾರಣ ಎಂದರು.

ರಾಜಕೀಯ ಸ್ವಾರ್ಥಕ್ಕಾಗಿ ಸಮಾಜದ ಸ್ವಾಸ್ಥ್ಯ ಕದಡುವ ಶಕ್ತಿಗಳನ್ನು ತಮಿಳುನಾಡು ಜನತೆ ದೂರ ಇಡುತ್ತಾರೆ. ದೆಹಲಿಯಿಂದ ಪರೋಕ್ಷವಾಗಿ ಆಡಳಿತ ನಡೆಸುವ ವ್ಯವಸ್ಥೆ ಅವರಿಗೆ ಬೇಕಿಲ್ಲ. ಈ ಬಾರಿ ಮತ್ತೆ ಡಿಎಂ.ಕೆ, ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೃಷ್ಣಗಿರಿ ಕಾಂಗ್ರೆಸ್ ಅಭ್ಯರ್ಥಿ ಚಲ್ಲಕುಮಾರ್, ಹಿರಿಯ ನಾಯಕರಾಗಿದ್ದು, ಸಂಸತ್ ಸದಸ್ಯರಾಗಿ ಅದ್ಭುತ ಕಾರ್ಯ ಮಾಡಿದ್ದಾರೆ. ರೈಲ್ವೆ, ಹೆದ್ದಾರಿ, ಸೇತುವೆ ಮೊದಲಾದ ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಪ್ರಾಮಾಣಿಕತೆ, ದಕ್ಷತೆಗೆ ಹೆಸರಾದ ಚಲ್ಲಕುಮಾರ್ ಗೆಲ್ಲಿಸಿ ಎಂದರು.
ಸುದ್ದಿಗೋಷ್ಠಿಯಲ್ಲಿ ಅಭ್ಯರ್ಥಿ ಚಲ್ಲಕುಮಾರ್, ರೇಣುಕಾಪ್ರಸನ್ನ ಮತ್ತಿತರರು ಭಾಗಿಯಾಗಿದ್ದರು.

Continue Reading

Latest

ಮಹಿಳಾ ಮೀಸಲು ಮಸೂದೆ ಕಾಂಗ್ರೆಸ್‌ ಪಕ್ಷದ ಕನಸು ಮತ್ತು ಕೂಸು: ಡಿ.ಕೆ.ಶಿವಕುಮಾರ್

VISTARANEWS.COM


on

ಬೆಂಗಳೂರು, ಏ.19: ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ ಮಾಡಲು ಹೋದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗಿದೆ. ಇಂಡಿಯಾ ಒಕ್ಕೂಟಕ್ಕೆ ಜಯವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯಿಸಿದರು.
ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಹಾಗೂ ಕ್ಷೇತ್ರ ವಿಂಗಡಣೆ ವಿರುದ್ದ ಪ್ರತಿಭಟಿಸಿದ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳ ಹೋರಾಟಕ್ಕೆ, ಪ್ರಜಾಪ್ರಭುತ್ವಕ್ಕೆ ಸಿಕ್ಕಂತಹ ದೊಡ್ಡ ಜಯ. ಮಹಿಳೆಯರ ಪರವಾಗಿ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಒಕ್ಕೂಟ ನಿಂತಿದೆ. ಇಲ್ಲಿ ಯಾರಿಗೂ ಅವಮಾನವಾಗಿಲ್ಲ” ಎಂದರು.
ಸಂವಿಧಾನ ತಿದ್ದುಪಡಿ ಮಾಡುವಾಗ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಮಹಿಳಾ ಮೀಸಲಾತಿ ಕಾಯ್ದೆ ಕಾಂಗ್ರೆಸ್ ಪಕ್ಷದ ಕನಸು ಮತ್ತು ಕೂಸು. ಇದರ ಪರವಾಗಿ ಕೆಲಸ ಮಾಡಿದ್ದು ಕಾಂಗ್ರೆಸ್ ಪಕ್ಷ. ಆದರೆ ಈಗ ಬಿಜೆಪಿ ಸರ್ಕಾರ ಮಾಡಿರುವ ನಿರ್ಧಾರ ಸರಿಯಾದ ಸಮಯವಲ್ಲ. ನಮ್ಮದು ಹಿಟ್ಲರ್ ಆಡಳಿತವಲ್ಲ” ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳ ಜೊತೆ ಚರ್ಚೆ ನಡೆಸಬೇಕಿತ್ತು. ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲೇ ತರುವ ಪ್ರಮೇಯವೇನಿತ್ತು. ಇಂಡಿಯಾ ಒಕ್ಕೂಟದ ಎಲ್ಲಾ ಸದಸ್ಯರಿಗೆ ನಾನು ಶುಭಾಶಯಗಳನ್ನು ತಿಳಿಸುತ್ತೇನೆ ಎಂದೂ ಶಿವಕುಮಾರ್‌ ಹೇಳಿದ್ದಾರೆ.
ಸೋಲುತ್ತದೆ ಎಂದರೂ ಬಿಲ್ ತಂದಿದ್ದು ಬಿಜೆಪಿ
ವಿಪಕ್ಷಗಳ ವಿರುದ್ದ ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ಬಿಲ್ ಸೋಲುತ್ತದೆ ಎಂದು ಗೊತ್ತಿದ್ದರೂ ತಂದವರು ಅವರು. ಅವರುಗಳು ಮಹಿಳಾ ವಿರೋಧಿಗಳು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಪ್ರತಿನಿಧಿಗಳಲ್ಲವೇ? ಇವರುಗಳು ಜನರಿಂದ ಗೆದ್ದಿಲ್ಲವೇ? ಅವರುಗಳು ಇದರ ಬಗ್ಗೆ ಮಾತನಾಡಬೇಕಿತ್ತು, ಚರ್ಚೆ ಮಾಡಬೇಕಿತ್ತು. ಮಹಿಳಾ ಮೀಸಲಾತಿ ಬಿಲ್ ಅವರ ಆಸ್ತಿಯಲ್ಲ. ದೇಶದ ಆಸ್ತಿ” ಎಂದರು.
“ಈ ಹಿಂದೆ ರಾಜೀವ್ ಗಾಂಧಿಯವರು ಶೇ 50 ರಷ್ಟು ಮೀಸಲಾತಿ ತಂದಿದ್ದರು. ಸೋನಿಯಾಗಾಂಧಿ ಅವರ ನೇತೃತ್ವದಲ್ಲಿ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗಿತ್ತು. ಈ ಬಿಲ್ ಅಡಿಯಲ್ಲಿ ದಕ್ಷಿಣ ಭಾರತದ ಕ್ಷೇತ್ರಗಳನ್ನು ಕತ್ತರಿಸಿ ಉತ್ತರ ಭಾರತದ ಕ್ಷೇತ್ರಗಳನ್ನು ಹೆಚ್ಚು ಮಾಡಲು ಹೊರಟಿರುವುದು ಸರಿಯಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ನಮ್ಮನ್ನೆಲ್ಲಾ ಕರೆದು ಚರ್ಚೆ ಮಾಡಬೇಕಿತ್ತು” ಎಂದು ಹೇಳಿದರು.

Continue Reading

Latest

ಸಾಧ್ವಿ ಸೈಲ್ ಮಿಸ್ ವರ್ಲ್ಡ್ ಪ್ರಶಸ್ತಿ ಗೆಲ್ಲಲಿ: ಸಿಎಂ ಸಿದ್ದರಾಮಯ್ಯ ಆಶಯ

VISTARANEWS.COM


on

ಬೆಂಗಳೂರು: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿ ಸೈಲ್ ಅವರು 61ನೇ ಸಾಲಿನ ‘ಫೆಮಿನಾ ಮಿಸ್ ಇಂಡಿಯಾ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತಮ್ಮದೇ ಪಕ್ಷದ ಶಾಸಕರ ಪುತ್ರಿಯೊಬ್ಬರು ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೃತ್ಪೂರ್ವಕ ಅಭಿನಂದನೆ ತಿಳಿಸಿದ್ದಾರೆ.
ತಮ್ಮ ‘ಎಕ್ಸ್’ ಸಂದೇಶದಲ್ಲಿ ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ “ಫೆಮಿನಾ ಮಿಸ್ ಇಂಡಿಯಾ -2026” ಕಿರೀಟ ಮುಡಿಗೇರಿಸಿಕೊಂಡಿರುವ ಕಾರವಾರದ ಕಾಂಗ್ರೆಸ್ ಶಾಸಕರಾದ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರಿಗೆ ಅಭಿನಂದನೆಗಳು.
ತಮ್ಮ ಮಗಳ ಈ ಸಾಧನೆಯನ್ನು ಖುದ್ದು ಸತೀಶ್ ಸೈಲ್ ಅವರೇ ನನ್ನೊಂದಿಗೆ ಹಂಚಿಕೊಂಡು, ಹರ್ಷ ವ್ಯಕ್ತಪಡಿಸಿದರು. ಮಗಳ ಕನಸುಗಳಿಗೆ ಬೆಂಬಲವಾಗಿ ನಿಂತಿರುವ ಅವರನ್ನು ಕೂಡ ಇದೇ ವೇಳೆ ಅಭಿನಂದಿಸಿದೆ. 2027ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಸಾಧ್ವಿ ಪ್ರತಿನಿಧಿಸಲಿದ್ದು, ಅಲ್ಲಿಯೂ ಗೆಲುವು ಸಾಧಿಸಿ ಜಾಗತಿಕ ಮಟ್ಟದಲ್ಲಿ ರಾಜ್ಯದ ಕೀರ್ತಿ ರಾರಾಜಿಸುವಂತಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಒಡಿಶಾದ ಭುವನೇಶ್ವರದಲ್ಲಿ ಏಪ್ರಿಲ್ 18ರಂದು ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ‘ಫೆಮಿನಾ ಮಿಸ್ ಇಂಡಿಯಾ ಫಿನಾಲೆ ಸ್ಪರ್ಧೆ ಜರುಗಿತ್ತು. ಗೆಲುವು ಸಾಧಿಸಿದ ನಂತರ ಸಾಧ್ವಿ ಸೈಲ್ ತಮ್ಮ ತಂದೆಯ ಜೊತೆ ವಿಡಿಯೋ ಕಾಲ್​​​ನಲ್ಲಿ ಮಾತನಾಡಿದ್ದ ಸುದ್ದಿ ವೈರಲ್‌ ಆಗಿ ಗಮನ ಸೆಳೆದಿತ್ತು.

Continue Reading
Advertisement
Latest12 ನಿಮಿಷಗಳು ago

ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ: ಸಿಎಂ ಸಿದ್ದರಾಮಯ್ಯ

Latest25 ನಿಮಿಷಗಳು ago

ಕೃಷ್ಣಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್-ಡಿಎಂಕೆ ಅಭ್ಯರ್ಥಿಗಳ ಪರ ಸಚಿವ ಈಶ್ವರ ಖಂಡ್ರೆ ಪ್ರಚಾರ

Latest37 ನಿಮಿಷಗಳು ago

ಸಿಇಟಿ ಪರೀಕ್ಷೆ: ವಸ್ತ್ರ ಸಂಹಿತೆ ಕಡ್ಡಾಯ; ಅಭ್ಯರ್ಥಿಗಳೂ ಈ ಸೂಚನೆಗಳನ್ನು ಪಾಲಿಸಿದರೆ ಕ್ಷೇಮ

Latest59 ನಿಮಿಷಗಳು ago

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ

Latest3 ಗಂಟೆಗಳು ago

ಬೆಂಗಳೂರಿಗರಿಗೆ ಬಿಗ್ ಅಲರ್ಟ್: ನಗರದಲ್ಲಿ ‘ಹೀಟ್ ವೇವ್’ ಭೀತಿ, ಮಧ್ಯಾಹ್ನ ಹೊರಬರುವ ಮುನ್ನ ಎಚ್ಚರ!

Latest3 ಗಂಟೆಗಳು ago

ಅಕ್ಷಯ ತೃತೀಯದಂದು ದಾಖಲೆ ಮಟ್ಟಕ್ಕೆ ಚಿನ್ನ ಖರೀದಿ! ಸೇಲ್‌ ಆದ ಬಂಗಾರ ಎಷ್ಟು ಕೆಜಿ ಗೊತ್ತಾ?

Latest21 ಗಂಟೆಗಳು ago

ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

Latest22 ಗಂಟೆಗಳು ago

ಮಹಿಳಾ ಮೀಸಲು ಮಸೂದೆ ಕಾಂಗ್ರೆಸ್‌ ಪಕ್ಷದ ಕನಸು ಮತ್ತು ಕೂಸು: ಡಿ.ಕೆ.ಶಿವಕುಮಾರ್

ಅವಿಭಾಗೀಕೃತ22 ಗಂಟೆಗಳು ago

ಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್; 15 ಸಾವು, ಹಲವರ ಸ್ಥಿತಿ ಗಂಭೀರ

ದೇಶ22 ಗಂಟೆಗಳು ago

ದೇಶದ ಪ್ರಧಾನಿಗೆ ಕೈಯಾರ ಚುರುಮುರಿ ಕೊಟ್ಟರೂ ಇಲ್ಲ ಖುಷಿ! ಆ ತಪ್ಪು ಮಾಡಬಾರದಿತ್ತು ಅಂದ ವ್ಯಾಪಾರಿ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌