Site icon Vistara News

Crocodile Attack: ಕೃಷ್ಣಾ ನದಿಯಲ್ಲಿ ಬಾಲಕನನ್ನು ಎಳೆದೊಯ್ದ ಮೊಸಳೆ

Crocodile Attack

ರಾಯಚೂರು: ಕೃಷ್ಣಾ ನದಿಯಲ್ಲಿ ಬಾಲಕನನ್ನು ಮೊಸಳೆ ಎಳೆದೊಯ್ದ ಘಟನೆ ರಾಯಚೂರು ತಾಲೂಕಿನ ಗಂಜಳ್ಳಿ ಗ್ರಾಮದಲ್ಲಿ ನಡೆದಿದೆ. ಕುರಿಗಳಿಗೆ ನೀರು ಕುಡಿಸಲು ನದಿಗೆ ಇಳಿದಿದ್ದ ಬಾಲಕನನ್ನು ಮೊಸಳೆ ಬಲಿ (Crocodile Attack) ಪಡೆದಿದೆ. ಗಂಜಳ್ಳಿ ಗ್ರಾಮದ ವಿಶ್ವ (12) ಮೃತ ಬಾಲಕ. ಸ್ಥಳಕ್ಕೆ ರಾಯಚೂರು ಗ್ರಾಮಾಂತರ ಪೋಲಿಸರು ದೌಡಾಯಿಸಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿಯಿಂದ ಬಾಲಕನ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.

ಮಹಿಳೆ ಕಾಲಿನ ಮೇಲೆ ಹರಿದ ಬಸ್ ಚಕ್ರ

ವಿಜಯಪುರ: ಬಸ್ ಹತ್ತುವ ವೇಳೆ ಆಯುತಪ್ಪಿ ಬಿದ್ದ ಮಹಿಳೆ ಕಾಲಿನ ಮೇಲೆ ಬಸ್ ಚಕ್ರ ಹರಿದ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆ ಕಾಲಿಗೆ ತೀವ್ರ ಗಾಯಗಳಾಗಿವೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸಾಲುಟಗಿ ಗ್ರಾಮದ ಸಾವಿತ್ರಿಬಾಯಿ ಬಿರಾದಾರ ಗಾಯಗೊಂಡವರು. ವಿಜಯಪುರದಿಂದ ಇಂಡಿಗೆ ತೆರಳುವ KA 28 F 2492 ಸಂಖ್ಯೆಯ ಬಸ್ ಹರಿದಿದ್ದರಿಂದ ಮಹಿಳೆ ಗಾಯಗೊಂಡಿದ್ದು, ಅವರನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Road Accident: ಬೈಕ್‌ಗಳ ಅಪಘಾತ; ಮಗನ ಕಣ್ಣೆದುರೇ ರಕ್ತಕಾರಿ ತಾಯಿ ಮೃತ್ಯು; ಮೂವರು ಗಂಭೀರ

ಮೂಡಿಗೆರೆಯಲ್ಲಿ ಮೆಸ್ಕಾಂ ಲಾರಿ-ಓಮ್ನಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ಚಿಕ್ಕಮಗಳೂರು: ಮೆಸ್ಕಾಂ ಲಾರಿ- ಓಮ್ನಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿ, 9ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ (Road Accident) ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್-ಕೊಟ್ಟಿಗೆಗಾರ ಮಧ್ಯೆ ನಡೆದಿದೆ. ಮೆಸ್ಕಾಂ ಲಾರಿ- ಓಮ್ನಿ ಡಿಕ್ಕಿಯಾದ ಬಳಿಕ ಹಿಂದಿನಿಂದ ವೇಗವಾಗಿ ಬಂದ ಓಮ್ನಿಗೆ ಆಲ್ಟೋ ಕಾರು ಕೂಡ ಡಿಕ್ಕಿಯಾಗಿದೆ. ಇದರಿಂದ ಓಮ್ನಿಯಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಆಲ್ಟೋ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚನ್ನಪಟ್ಟಣ ಗ್ರಾಮದ ಹಂಪಯ್ಯ (65), ಪ್ರೇಮ (58), ಮಂಜಯ್ಯ (60), ಪ್ರಭಾಕರ್ (45) ಮೃತರು. ಆಲ್ಟೊ ಕಾರಿನಲ್ಲಿದ್ದ ನಾಗರಾಜಯ್ಯ, ಪೂಜಾ, ಸೃಜನ್, ಚಂದನ್, ವೀರೇಶ್, ಮಂಜುನಾಥ್, ಅಕ್ಕಮ್ಮ ಗಾಯಾಳುಗಳು.

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಓಮ್ನಿ ಹಾಗೂ ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ಹೋಗುತ್ತಿದ್ದ ಮೆಸ್ಕಾಂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಮೂರು ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಪ್ರಾಣ ಬಿಟ್ಟಿದ್ದಾರೆ. ಲಾರಿ ಡಿಕ್ಕಿಯ ರಭಸಕ್ಕೆ ಓಮ್ನಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಆಲ್ಟೋ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.

ಇದನ್ನೂ ಓದಿ | ಹನಿ ಟ್ರ್ಯಾಪ್‌ ಮಾಡಿ ಕೋಲ್ಕತಾಗೆ ಕರೆಸಿಕೊಂಡು ಬಾಂಗ್ಲಾದೇಶ ಸಂಸದನ ಕೊಲೆ; ಚರ್ಮ ಸುಲಿದು, ದೇಹ ಪೀಸ್‌ ಪೀಸ್‌

ಓವರ್‌ಟೇಕ್ ಮಾಡಲು ಹೋಗಿ ಅಪಘಾತ ನಡೆದಿದ್ದು, ಗಾಯಾಳುಗಳಿಗೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version