Site icon Vistara News

Crop Loss Compensation: ನೆಟೆ ರೋಗದಿಂದ ತೊಗರಿ ಬೆಳೆ ನಷ್ಟ; ಹೆಕ್ಟೇರ್‌ಗೆ 10 ಸಾವಿರ ರೂಪಾಯಿ ಪರಿಹಾರ

Crop Loss Compensation

ಬೆಂಗಳೂರು: ಬೀದರ್‌, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆಗೆ ಸಂಭವಿಸಿದ ಬೆಳೆಹಾನಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸರ್ಕಾರವು ಪ್ರತಿ ಹೆಕ್ಟೇರ್‌ಗೆ 10,000 ರೂ. ಗಳಂತೆ ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಗರಿಷ್ಠ 2 ಹೆಕ್ಟೇರ್‌ಗೆ ಸೀಮಿತಗೊಳಿಸಿ ಬಾಧಿತ ರೈತರಿಗೆ ಒಟ್ಟು 223 ಕೋಟಿ ರೂಪಾಯಿ ಪರಿಹಾರ (Crop Loss Compensation) ಘೋಷಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಕಲಬುರಗಿ ಜಿಲ್ಲಾ ಪ್ರವಾಸದಿಂದ ಹಿಂತಿರುಗಿದ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಈ ತೀರ್ಮಾನ ಕೈಗೊಂಡಿದ್ದಾರೆ.

ಬೀದರ್‌, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಹಾಗೂ ತದನಂತರ ನವೆಂಬರ್ ತಿಂಗಳಿನಲ್ಲಿ ತಲೆದೋರಿದ ಒಣ, ಶುಷ್ಕ ವಾತಾವರಣದಿಂದ ತೊಗರಿ ಬೆಳೆಯಲ್ಲಿ ಸಂಕೀರ್ಣ ನೆಟೆ ರೋಗ ಮೂರು ಜಿಲ್ಲೆಗಳಲ್ಲಿ ಉಲ್ಬಣಗೊಂಡು ಬೆಳೆಹಾನಿಯಾಗಿತ್ತು.

ಕಲಬುರಗಿ ಜಿಲ್ಲೆಯಲ್ಲಿ ಸುಮಾರು 1.98 ಲಕ್ಷ ಹೆಕ್ಟೇರ್, ಬೀದರ್‌ ಜಿಲ್ಲೆಯಲ್ಲಿ ಸುಮಾರು 0.145 ಲಕ್ಷ ಹೆಕ್ಟೇರ್ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಸುಮಾರು 0.1028 ಲಕ್ಷ ಹೆಕ್ಟೇರ್ ಒಟ್ಟಾರೆಯಾಗಿ 2.2278 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ತೊಗರಿ ಬೆಳೆ ಸಂಕೀರ್ಣ ನೆಟೆ ರೋಗಕ್ಕೆ ಹಾನಿಯಾಗಿರುವುದು ವರದಿಯಾಗಿತ್ತು. ಹಾನಿಗೊಳಗಾದ ರೈತರ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರವು ಇದನ್ನು “ವಿಶೇಷ ಪ್ರಕರಣ”ವೆಂದು ತೀರ್ಮಾನಿಸಿ ಪರಿಹಾರ ಘೋಷಿಸಿದೆ.

ಇದನ್ನೂ ಓದಿ | Flower Show: ಜ.26ರಿಂದ 29ರವರೆಗೆ ಶಿವಮೊಗ್ಗದಲ್ಲಿ ಫಲಪುಷ್ಪ ಪ್ರದರ್ಶನ

Exit mobile version