Site icon Vistara News

CRZ Order: ಕಾರವಾರ ಕಡಲ ತೀರದ ಅಭಿವೃದ್ಧಿ ಕಾಮಗಾರಿಗಳ ಮೇಲೆ ಸಿಆರ್‌ಝಡ್ ಕರಿ ನೆರಳು

Karwar Beach CRZ Order

#image_title

ಕಾರವಾರ: ಜಿಲ್ಲೆಯ ಸುಂದರ ಕಡಲ ತೀರಗಳ ಪೈಕಿ ಒಂದಾದ ಕಾರವಾರ ಕಡಲ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಹಲವು ಕಾಮಗಾರಿಗಳನ್ನು ಮಾಡಲಾಗಿತ್ತು. ಆದರೆ ಸಿಆರ್‌ಝಡ್ ಆದೇಶ (CRZ Order) ಇದೀಗ ಪ್ರವಾಸಿ ಚಟುವಟಿಕೆಗಳ ಹಿನ್ನಡೆಗೆ ಕಾರಣವಾಗಲಿದೆ ಎನ್ನುವ ಆತಂಕ ಕೆಲವರಲ್ಲಿ ಕಾಡತೊಡಗಿದೆ.

ಕಾರವಾರದ ರವೀಂದ್ರನಾಥ್ ಠಾಗೋರ್ ಕಡಲ ತೀರ ವಿಶಾಲವಾದ ಕಡಲ ತೀರವಾಗಿದ್ದರೂ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಸರ್ಕಾರ ಯಾವುದೇ ಕಾರ್ಯಗಳನ್ನು ಮಾಡಿಲ್ಲ ಎನ್ನುವ ಆರೋಪ ಕೇಳಿ ಬಂದಿತ್ತು. ಹಲವು ವರ್ಷಗಳ ಹಿಂದೆ ಪ್ರವಾಸಿಗರನ್ನು ಆಕರ್ಷಿಸಲು ಕಾರವಾರದ ಕಡಲ ತೀರದಲ್ಲಿ ಪುಟಾಣಿ ರೈಲು, ಹೋಟೆಲ್ ಗಳಿದ್ದರೂ, ನಂತರದ ದಿನದಲ್ಲಿ ಎಲ್ಲವೂ ಹಾಳಾಗಿತ್ತು. ಆದರೂ ಸರ್ಕಾರ ಮತ್ತೆ ಹೊಸ ಚಟುವಟಿಕೆಗಳನ್ನು ಪ್ರಾರಂಭಿಸುವಲ್ಲಿ ಆಸಕ್ತಿ ತೋರಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿತ್ತು.

ಇದನ್ನೂ ಓದಿ: Lokayukta Raid : ಕೆಎಸ್‌ಡಿಎಲ್‌ ಅಧ್ಯಕ್ಷ ಸ್ಥಾನಕ್ಕೆ ಮಾಡಾಳು ವಿರೂಪಾಕ್ಷಪ್ಪ ರಾಜೀನಾಮೆ, ಸಿಎಂ ಸೂಚನೆ ಬೆನ್ನಲ್ಲೇ ರಿಸೈನ್‌

ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಸಚಿವರಾಗಿದ್ದ ಆರ್ ವಿ ದೇಶಪಾಂಡೆಯವರು, ಅಂದಿನ ಜಿಲ್ಲಾಧಿಕಾರಿಗಳಾಗಿದ್ದ ಎಸ್ ಎಸ್ ನಕುಲ್ ಅವರು ಕಾರವಾರದ ಪ್ರವಾಸೋದ್ಯಮ ಬೆಳವಣಿಗೆಗೆ ಕಡಲ ತೀರದಲ್ಲಿ ಫುಡ್ ಕೋರ್ಟ್, ರೆಸ್ಟೋರೆಂಟ್, ರಾಕ್ ಗಾರ್ಡನ್ ಸೇರಿದಂತೆ ಹಲವು ಚಟುವಟಿಕೆಗಳಿಗೆ ಅವಕಾಶ ನೀಡಿದ್ದರು. ಟೆಂಡರ್ ಮೂಲಕವೇ ಈ ಚಟುವಟಿಕೆಗೆ ಅವಕಾಶ ನೀಡಿದ್ದು ಇಂದು ಸಾವಿರಾರು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆದರೆ ಕಡಲ ತೀರದಲ್ಲಿ ಸಿಆರ್‌ಝಡ್ ನಿಯಮ ಉಲ್ಲಂಘಿಸಿ ಕಾಮಗಾರಿ ಮಾಡಲಾಗಿದೆ ಎಂದು ಸ್ಥಳೀಯರು ರಾಷ್ಟ್ರೀಯ ಹಸಿರು ಪೀಠದ ಮೊರೆ ಹೋಗಿದ್ದು, ಅಲ್ಲಿಂದ ರಾಜ್ಯ ಸಿಆರ್‌ಝಡ್ ಇಲಾಖೆಗೆ ಕ್ರಮಕೈಗೊಳ್ಳುವಂತೆ ಆದೇಶಿಸಲಾಗಿದೆ ಎನ್ನಲಾಗಿದೆ. ಸದ್ಯ ಸ್ಥಳೀಯ ಸಿ.ಆರ್.ಜೆಡ್ ನವರು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ತಿಳಿಸಿದ್ದು ಕಡಲ ತೀರದಲ್ಲಿ ನಿರ್ಮಾಣವಾದ ಕಾಮಗಾರಿಗಳನ್ನು ತೆರವು ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: Holi 2023 : ಹೋಳಿ ಹಬ್ಬದ ವಿಶೇಷ ಮಾಲ್ಪುವಾ ಮಾಡುವುದು ಹೇಗೆ? ಇಲ್ಲಿದೆ ನೋಡಿ ರೆಸಿಪಿ

ಕಾರವಾರದ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರಮುಖವಾಗಿ ರಾಕ್ ಗಾರ್ಡನ್ ಫುಡ್ ಕೋರ್ಟ್, ರೆಸ್ಟೋರೆಂಟ್‌ಗಳು ಸಹಕಾರಿಯಾಗಿದ್ದವು. ಇದೀಗ ಈ ಕಾಮಗಾರಿಗಳ ಮೇಲೆ ಸಿ.ಆರ್.ಜೆಡ್ ಕರಿ ನೆರಳು ಬಿದ್ದಿರುವುದು ಒಂದೊಮ್ಮೆ ಈ ಕಾಮಗಾರಿ ತೆರವು ಮಾಡಿದರೆ ಕಾರವಾರದ ಪ್ರವಾಸೋದ್ಯಮದ ಮೇಲೆ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಸಿಆರ್‌ಝಡ್ ತನ್ನ ನಿಯಮಗಳನ್ನು ಪ್ರವಾಸೋದ್ಯಮ ಅಭಿವೃದ್ಧಿಗಾದರೂ ಸಡಿಲಗೊಳಿಸಬೇಕು. ಕಾರವಾರದ ಕಡಲ ತೀರದಲ್ಲಿರುವ ಪ್ರವಾಸಿ ಚಟುವಟಿಕೆಗಳನ್ನೇ ನಂಬಿ ಹಲವರು ಉದ್ಯೋಗವನ್ನು ಕಂಡುಕೊಂಡಿದ್ದು ಒಂದೊಮ್ಮೆ ಇದನ್ನು ತೆರವು ಮಾಡಿದರೆ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಜಿಲ್ಲಾಡಳಿತ, ಸರ್ಕಾರ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುವುದು ಕೆಲವರ ಆಗ್ರಹವಾಗಿದೆ.

ಇದನ್ನೂ ಓದಿ: Kabzaa Movie: ʻಕಬ್ಜʼ ಸಿನಿಮಾದಲ್ಲಿ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌: ಹೊಸ ಪೋಸ್ಟರ್‌ ಔಟ್‌!

Exit mobile version