ರಾಜ್ಯ ಸರ್ಕಾರಿ ನೌಕರರಿಗೆ ಜುಲೈನಿಂದ ಶೇ.23 ವೇತನ ಹೆಚ್ಚಳ ಮಾಡಿ: ಸಿ.ಎಸ್‌.ಷಡಾಕ್ಷರಿ ಒತ್ತಾಯ - Vistara News

ಕರ್ನಾಟಕ

ರಾಜ್ಯ ಸರ್ಕಾರಿ ನೌಕರರಿಗೆ ಜುಲೈನಿಂದ ಶೇ.23 ವೇತನ ಹೆಚ್ಚಳ ಮಾಡಿ: ಸಿ.ಎಸ್‌.ಷಡಾಕ್ಷರಿ ಒತ್ತಾಯ

ಬೆಂಗಳೂರಿನಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಮಾತನಾಡಿದ್ದಾರೆ.

VISTARANEWS.COM


on

Govt Employees
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯ ಸರ್ಕಾರ ಶೀಘ್ರ 7ನೇ ವೇತನ ಆಯೋಗದ ವರದಿ ಪಡೆದು ವೇತನ ಹೆಚ್ಚಳ, ಒಪಿಎಸ್‌ ಜಾರಿ ಸೇರಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು. ಕೇಂದ್ರ ಸರ್ಕಾರ, ಕೇರಳ ಸೇರಿ 22 ರಾಜ್ಯಗಳಲ್ಲಿ ಕರ್ನಾಟಕಕ್ಕಿಂತ ಹೆಚ್ಚು ವೇತನ ಸರ್ಕಾರಿ ನೌಕರರಿಗೆ ಸಿಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಶೇ. 17 ಮಧ್ಯಂತರ ಪರಿಹಾರ ನೌಕರರಿಗೆ ಸಿಕ್ಕಿದೆ. ಉಳಿದ ಶೇ.23 ವೇತನವನ್ನು ಜುಲೈ 27ರಿಂದ ಕೊಡಬೇಕು ಎಂದು ರಾಜ್ಯ ಸರ್ಕಾರವನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಒತ್ತಾಯಿಸಿದರು.

ನಗರದ ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ (Govt Employees Conference) ಮಾತನಾಡಿದ ಅವರು, ರಾಜ್ಯದಲ್ಲಿ 2.5 ಲಕ್ಷ ಹುದ್ದೆಗಳು ಖಾಲಿ ಇರುವುದರಿಂದ ಸರ್ಕಾರಿ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಹೀಗಾಗಿ ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡಿದರು.

2017ರಲ್ಲಿ ನಾನು ಶಿವಮೊಗ್ಗ ಜಿಲ್ಲಾಧ್ಯಕ್ಷನಾಗಿದ್ದಾಗ, ಸಿದ್ದರಾಮಯ್ಯ ಅವರು 6ನೇ ವೇತನ ಆಯೋಗವನ್ನು ಜಾರಿ ಮಾಡಿದ್ದರು. ಘೋಷಣೆಯಾದ ಕೇವಲ 8 ತಿಂಗಳಲ್ಲಿ ಶ್ರೀನಿವಾಸಮೂರ್ತಿ ಅವರಿಂದ ವರದಿ ಪಡೆದು, ನೌಕರರಿಗೆ ಅತಿ ಹೆಚ್ಚಿನ ಪ್ರಮಾಣದ ಫಿಟ್‌ಮೆಂಟ್‌ (ಶೇ.30) ನೀಡಿದ ಹೆಗ್ಗಳಿಕೆ ಸಿದ್ದರಾಮಯ್ಯ ಅವರದ್ದಾಗಿದೆ. ಇದೀಗ ಮತ್ತೊಮ್ಮೆ ಆ ದಾಖಲೆಯನ್ನು ಮುರಿಯುವ ಅವಕಾಶ ಮುಖ್ಯಮಂತ್ರಿಗಳಿಗೆ ಸಿಕ್ಕಿದೆ. ಹೀಗಾಗಿ ಶೀಘ್ರ ವೇತನ ಆಯೋಗದ ವರದಿ ಪಡೆದು ನೌಕರರ ಬೇಡಿಕೆ ಈಡೇರಿಸಬೇಕು ಎಂದು ಕೋರಿದರು.

ಇದನ್ನೂ ಓದಿ | 7ನೇ ವೇತನ ಆಯೋಗದ ವರದಿ ಬಂದ ನಂತರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌: ಸಿಎಂ ಭರವಸೆ

ರಾಜ್ಯ ಸರ್ಕಾರಿ ನೌಕರರ ಸಂಘ 1920ರಲ್ಲಿ ಸ್ಥಾಪನೆಯಾಗಿ‌ ಇವತ್ತಿಗೆ 103 ವರ್ಷಗಳು ಪೂರೈಸಿದೆ. ಸ್ವಾತಂತ್ರ್ಯ ಪೂರ್ವದ ಸಂಘಟನೆ ಯಾವುದಾದರೂ ಇದ್ದರೆ ಅದು, ರಾಜ್ಯ ಸರ್ಕಾರಿ ನೌಕರರ ಸಂಘವಾಗಿದೆ. 31 ಜಿಲ್ಲೆಗಳಲ್ಲಿ 184 ತಾಲೂಕುಗಳಲ್ಲಿ ಸಂಘದ ಘಟಕಗಳಿದ್ದು, ರಾಜ್ಯದ 6 ಲಕ್ಷ ನೌಕರರು ಸದಸ್ಯತ್ವ ಹೊಂದಿದ್ದಾರೆ ಎಂದು ತಿಳಿಸಿದರು.

ನೌಕರರು ನಿಜವಾದ ದೇಶಪ್ರೇಮಿಗಳು, ದೇಶ ಕಟ್ಟುವಲ್ಲಿ ನೌಕರರ ಪಾತ್ರ ಅನನ್ಯವಾಗಿದೆ. 1957ರಿಂದ ಇಲ್ಲಿಯವರೆಗೆ 6 ವೇತನ ಆಯೋಗಗಳು ರಚನೆಯಾಗಿವೆ. ಇವತ್ತು 7ನೇ ವೇತನ ಆಯೋಗ ಪಡೆಯುವ ಹಂತದಲ್ಲಿ ಇದ್ದೇವೆ. ಹಲವಾರು ಅಧ್ಯಕ್ಷರು ಅವರವರ ಕಾಲದಲ್ಲಿ ನೌಕರರ ಪರ ಕೆಲಸಗಳನ್ನು ಮಾಡಿದ್ದಾರೆ ಎಂದು ಹೇಳಿದರು.

ಸರ್ಕಾರದ ಕಾರ್ಯಾಂಗದ ಭಾಗವಾಗಿರುವ ನೌಕರರಿಗೂ ಕುಟುಂಬವಿದೆ, ಹಲವು ಸಮಸ್ಯೆಗಳಿವೆ. ಆದರೆ ಆಳುವ ಸರ್ಕಾರಗಳು, ನೌಕರರಿಗೆ ವೇತನ, ಭತ್ಯೆಗಳನ್ನು ನೀಡುವಲ್ಲಿ ವಿಳಂಬ ಮಾಡಿದ ಸಂದರ್ಭದಲ್ಲಿ ಹೋರಾಟದ ಮೂಲಕ ನೌಕರರು ಹಕ್ಕುಗಳನ್ನು ಪಡೆದಿದ್ದಾರೆ. ಆದರೆ, ಇತ್ತೀಚೆಗೆ ನಾವು ಸರ್ಕಾರದ ವಿರುದ್ಧ ಏಕಾಏಕಿ ಯಾವುದೇ ಹೋರಾಟ, ಮುಷ್ಕರ ಮಾಡಿಲ್ಲ. ನಮ್ಮ ಸಂಘದಲ್ಲಿ ಒಂದು ಸಂಪ್ರದಾಯವಿದೆ. ಮಾತುಕತೆ, ಸಂಧಾನದ ಮೂಲಕ ನಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಡುತ್ತೇವೆ. ಹೀಗಾಗಿ ಈ ರೀತಿಯ ಸಮ್ಮೇಳನಗಳನ್ನು ಮಾಡುತ್ತಿದ್ದೇವೆ. ಈ ರೀತಿಯ ಸಮ್ಮೇಳನ ಇತಿಹಾಸದಲ್ಲೇ ಮೊದಲು. ಇದಕ್ಕೆ ಕಾರಣ, ಸಂಘದ ಪದಾಧಿಕಾರಿಗಳಾಗಿದ್ದಾರೆ ಎಂದು ಹೇಳಿದರು.

2017ರಲ್ಲಿ ಸಿದ್ದರಾಮಯ್ಯ ಅವರು ಇದೇ ರೀತಿಯ ಸಮ್ಮೇಳನ ಉದ್ಘಾಟಿಸಿದ್ದರು. ಕಳೆದ ಏಳು ವರ್ಷಗಳಿಂದ ಇಂತಹ ಸಮ್ಮೇಳನ ನಾವು ಮಾಡಿರಲಿಲ್ಲ. ಇವತ್ತು ನೌಕರರ ಸಂಘ, ತಾಲೂಕು, ಹೋಬಳಿ, ಹಳ್ಳಿ ಮಟ್ಟಕ್ಕೆ ತಲುಪಿದೆ. ರಾಜ್ಯದ ವಿವಿಧೆಡೆಯಿಂದ ಸಮಾವೇಶಕ್ಕೆ ನೌಕರರು ಆಗಮಿಸಿರುವುದು ಸಂತಸ ತಂದಿದೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ, ಸಚಿವರಾದ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಶೇಷಯ್ಯ, ಭೈರಪ್ಪ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಶೀನಿವಾಸ ತಿಮ್ಮೇಗೌಡ, ಖಜಾಂಚಿ ಡಾ: ಸಿದ್ದರಾಮಣ್ಣ, ರಾಜ್ಯ ಮಟ್ಟದ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

VISTARANEWS.COM


on

ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟದ ವೇಳೆ ಪ್ರವಾಸಿ ಮಹಿಳೆ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಚೆನ್ನೈ ಮೂಲದ ಜಿನ್ಶು (33) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ದುಬಾರೆ ಶಿಬಿರದಲ್ಲಿ ಆನೆಗಳನ್ನು ಕಾವೇರಿ ನದಿಯಲ್ಲಿ ಸ್ನಾನ ಮಾಡಿಸಲು ಕರೆದೊಯ್ಯಲಾಗಿತು. ಈ ವೇಳೆ ಮಾರ್ತಾಂಡ ಆನೆಗೆ ಕಂಜನ್ ಆನೆ ತಿವಿದ ಪರಿಣಾಮ, ನಿಯಂತ್ರಣ ತಪ್ಪಿದ ಆನೆ ಪ್ರವಾಸಿ ಮಹಿಳೆಯ ಮೇಲೆ ಬಿದ್ದಿದೆ ಎನ್ನಲಾಗಿದೆ.

ಆನೆ ಕೆಳಗೆ ಸಿಲುಕಿದ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಶಿಬಿರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading
Advertisement
Latest18 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest20 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest22 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest24 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest4 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest5 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌