CT Ravi : ಉರಿ ಗೌಡ, ದೊಡ್ಡ ನಂಜೇ ಗೌಡರು ಟಿಪ್ಪುವ‌ನ್ನು ಕೊಂದಿದ್ದಕ್ಕೆ ಐತಿಹಾಸಿಕ ದಾಖಲೆ ಇದೆ ಎಂದ ಸಿ.ಟಿ. ರವಿ - Vistara News

ಕರ್ನಾಟಕ

CT Ravi : ಉರಿ ಗೌಡ, ದೊಡ್ಡ ನಂಜೇ ಗೌಡರು ಟಿಪ್ಪುವ‌ನ್ನು ಕೊಂದಿದ್ದಕ್ಕೆ ಐತಿಹಾಸಿಕ ದಾಖಲೆ ಇದೆ ಎಂದ ಸಿ.ಟಿ. ರವಿ

ಉರಿ ಗೌಡ ಮತ್ತು ದೊಡ್ಡ ನಂಜೇಗೌಡರು ಟಿಪ್ಪುವನ್ನು ಕೊಂದಿದ್ದಕ್ಕೆ ದಾಖಲೆ ಇದೆ. ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಪರಿಶೀಲಿಸಿದರೆ ಅದು ಸಿಗಲಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ (CT Ravi) ಹೇಳಿದ್ದಾರೆ.

VISTARANEWS.COM

on

It is a matter of pride that Congress has compared me to Nanjegowda says CT Ravi Tipu Sultan updates
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ʻʻಉರಿ ಗೌಡ, ನಂಜೇ ಗೌಡ ಟಿಪ್ಪುವನ್ನು ಕೊಂದರು ಎನ್ನುವುದಕ್ಕೆ ಐತಿಹಾಸಿಕ ದಾಖಲೆ ಇದೆʼʼ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi) ಹೇಳಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ಅವರು, ʻʻಒಕ್ಕಲಿಗರು ವೀರರಾಗಿರಬಾರದಾ? ಟಿಪ್ಪುವನ್ನು ಮೈಸೂರು ಹುಲಿ ಎಂದು ಬಿಂಬಿಸಲಾಗುತ್ತಿದೆ. ಅವನೇನು ಹುಲಿ ಕೊಂದಿದ್ನಾ? ಅವನು ಒಬ್ಬ ನೌಕರನ ಮಗ ಅಷ್ಟೆʼʼ ಎಂದು ಹೇಳಿದ ಅವರು, ಉರಿ ಗೌಡ ದೊಡ್ಡ ನಂಜೇ ಗೌಡರು ಟಿಪ್ಪುವ‌ನ್ನು ಕೊಂದರು ಎಂಬುದಕ್ಕೆ ಐತಿಹಾಸಿಕ ದಾಖಲೆ ಇವೆ. ಅದು ಹೊರಗೆ ಬರಲಿ ಎಂದು ಹೇಳಿದರು.

ʻʻಶ್ರೀರಂಗಪಟ್ಟಣದಲ್ಲಿರುವ ಜಾಮಿಯಾ ಮಸೀದಿ ಹಿಂದೆ ಅದು ಮೂಡಲಬಾಗಿಲ ದೇವಾಲಯ ಆಗಿತ್ತು. ಮಸೀದಿ ಇರೋ ಜಾಗದಲ್ಲಿ ಹಿಂದೂ ದೇವಾಲಯದ ಕುರುಹು ಇದೆ ಎಂದಾದರೆ ಉರಿ ಗೌಡ, ದೊಡ್ಡ ನಂಜೇಗೌಡರು ಟಿಪ್ಪುವನ್ನ ಕೊಂದರು ಎಂಬುದು ಸತ್ಯವಾಗುತ್ತದೆ. ಜಾಮೀಯಾ ಮಸೀದಿ ಬಳಿ ಪರಿಶೀಲನೆ ನಡೆಸಲಿ. ಅಲ್ಲಿ ಕುರುಹುಗಳಿದ್ದರೆ ಒಪ್ಪಿಕೊಳ್ಳಲಿʼʼ ಎಂದು ಸಿ.ಟಿ. ರವಿ ಹೇಳಿದರು.

ʻʻನಾವು ಬಾಬರಿ ಮಸೀದಿ ಹಾಗೂ ದತ್ತ ಪೀಠದ ವಿಚಾರದಲ್ಲಿ ನಡೆದುಕೊಂಡ ರೀತಿಯಲ್ಲೇ ಜಾಮೀಯ ಮಸೀದಿಯಲ್ಲಿ ದೇವಾಲಯ ಪುನರುತ್ಥಾನ ಮಾಡಲು ಒಂದು ಕಡೆ ಕೋರ್ಟ್ ಮತ್ತೊಂದು ಕಡೆ ಜನಾಂದೋಲನ ರೂಪಿಸುತ್ತಿದ್ದೇವೆ. ಅದನ್ನ ಕೇವಲ ಬಲಪ್ರದರ್ಶನದಿಂದ ಮಾಡೋದಾದ್ರೆ ಅದು ಜಾಸ್ತಿ ಸಮಯ ತೆಗೆದುಕೊಳ್ಳುವುದಿಲ್ಲʼʼ ಎಂದು ಸಿ.ಟಿ ರವಿ ನುಡಿದರು.

ʻʻಬಿಜೆಪಿಯ ವಿಜಯ ಯಾತ್ರೆಯಲ್ಲಿ ನಾವು ನಮ್ಮ ಡಬಲ್ ಸರ್ಕಾರದ ಯೋಜನೆಗಳನ್ನು ಜನರ ಮುಂದಿಡೋ ಯತ್ನ ಮಾಡ್ತಿದ್ದೀವಿ. ಕಾಂಗ್ರೆಸ್‌ನವರು ಜನರಿಗೆ ಗ್ಯಾರಂಟಿ ಕಾರ್ಡ್ ಕೊಡ್ತಿಲ್ಲ. ಬದಲಾಗಿ ಸುಳ್ಳಿನ ಕಾರ್ಡ್ ಕೊಡ್ತಿದೆ. ಯಾಕಂದ್ರೆ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳನ್ನು ನೋಡಿದರೆ ಗೊತ್ತಾಗುತ್ತದೆʼʼ ಎಂದು ಹೇಳಿದ ಸಿ.ಟಿ. ರವಿ ಅವರು, ಅವರ ಗ್ಯಾರಂಟಿ ಕಾರ್ಡ್‌ ಏನಂದ್ರೆ, ಅವರದು ಕುಕ್ಕರ್ ಬ್ಲಾಸ್ಟ್ ಪರವಾಗಿ ನಿಲ್ಲುವ ಗ್ಯಾರಂಟಿ. ಹಿಂದೂ ಕಾರ್ಯಕರ್ತರ ಹತ್ಯೆಯಾಗೋದು ಗ್ಯಾರಂಟಿʼʼ ಎಂದು ಲೇವಡಿ ಮಾಡಿದರು.

ʻʻಮಂಡ್ಯದಲ್ಲಿ ರಾಜಕೀಯ ಬದಲಾವಣೆ ಗಾಳಿ ಬೀಸುತ್ತದೆ. ನಾಲ್ಕರಿಂದ ಐದು ಸೀಟ್‌ಗಳಲ್ಲಿ ನಾವು ಗೆಲ್ಲಲಿದ್ದೇವೆ.
ಮಂಡ್ಯದ ಹೆಸರು ಹೇಳಿಕೊಂಡು ರಾಜಕಾರಣ ಮಾಡಿದವರು ಅವರ ಕುಟುಂಬವನ್ನು ಬೆಳೆಸಿಕೊಂಡರು. ಮೈಷುಗರ್ ಸಕ್ಕರೆ ಕಾರ್ಖಾನೆ ಪುನಶ್ವೇತನ ಆಗಿಯೇ ಆಗುತ್ತದೆʼʼ ಎಂದು ಹೇಳಿದರು.

ಇದನ್ನೂ ಓದಿ : Lokayukta Raid : ಕಾಂಗ್ರೆಸ್‌ ಸರ್ಕಾರ ಇದ್ದಿದ್ರೆ ಈ ತರ ರೇಡ್‌ ಆಗ್ತಾನೇ ಇರ್ಲಿಲ್ಲ ಎಂದ ಬಿಜೆಪಿ ನಾಯಕ ಸಿ.ಟಿ. ರವಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಗಲಕೋಟೆ

Road Accident : ಕ್ರೂಸರ್‌- ಬಸ್‌ ನಡುವೆ ಭೀಕರ ಅಪಘಾತ; ಮೂವರು ಸಾವು, ಐವರು ಗಂಭೀರ

Road Accident : ಚಾಲಕನ ನಿರ್ಲಕ್ಷ್ಯಕ್ಕೆ ಕ್ರೂಸರ್ ವಾಹನ ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕ್ರೂಸರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆಗೆ ಹೋದವರು ಮಸಣ ಸೇರಿದ್ದಾರೆ.

VISTARANEWS.COM

on

By

Road Accident
Koo

ಬಾಗಲಕೋಟೆ: ಬಾಗಲಕೋಟೆಯ ಜಮಖಂಡಿ ತಾಲೂಕಿನ ರೆಹಮದ್ಪುರ್ ಗ್ರಾಮದಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಬಸ್‌ ಹಿಂಭಾಗಕ್ಕೆ ಕ್ರೂಸರ್ ರಭಸವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟರೆ, ಐವರು ಗಂಭೀರ ಗಾಯಗೊಂಡಿದ್ದಾರೆ.

ಜಮಖಂಡಿ ತಾಲೂಕಿನ ರೆಹಮದ್ಪುರ್ ಗ್ರಾಮದಿಂದ ಮಹಾರಾಷ್ಟ್ರದ ತಾಜಗಾಂವಗೆ ಮದುವೆಗಾಗಿ ಕ್ರೂಸರ್‌ ವಾಹನದಲ್ಲಿ ಹೊರಟ್ಟಿದ್ದರು. ಕ್ರೂಸರ್‌ನಲ್ಲಿ ಸುಮಾರು 13 ಜನರಿದ್ದರು. ಮದುವೆ ಖುಷಿಯಲ್ಲಿದ್ದವರು ಮಸಣ ಸೇರಿದ್ದಾರೆ. ಮಹಾರಾಷ್ಟ್ರದ ಜತ್ತ ಸಮೀಪ ನಿನ್ನೆ ಬುಧವಾರ ದುರ್ಘಟನೆ ನಡೆದಿದ್ದು‌ ತಡವಾಗಿ ಬೆಳಕಿಗೆ ಬಂದಿದೆ.

ರೆಹಮದ್ಪುರ್ ಗ್ರಾಮದ ನಿವಾಸಿ ಭಾಗ್ಯಶ್ರೀ ಅಕ್ಕನ ಮದುವೆ ಎಂದು ಖುಷಿಯಲ್ಲಿದ್ದಳು. ಆದರೆ ಡಿಕ್ಕಿ ರಭಸಕ್ಕೆ ಭಾಗ್ಯಶ್ರೀ (18) ನರಳಾಡಿ ಪ್ರಾಣಬಿಟ್ಟಿದ್ದಾಳೆ. ಅನುಸೂಯ (55), ಉಜ್ವಲ (23)ಎಂಬುವವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನಿವೇದಿತಾ (22) ಸೇರಿ ಹಲವರ ಸ್ಥಿತಿ ಚಿಂತಾಜನಕವಾಗಿದೆ.

ಗಾಯಾಳುಗಳನ್ನು ಮಿರಜ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕ್ರೂಸರ್ ಚಾಲಕನ ಅಜಾಗರೂಕತೆ ಕಾರಣ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ರೆಹಮದ್ಪುರ, ಅಡಿಹುಡಿ, ಲೋಕಾಪುರ ಮತ್ತಿ ಹಲಗಲಿ ಗ್ರಾಮದವರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Self Harming : ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಸೈಕಲ್‌ಗೆ ಗುದ್ದಿದ ಕಾರು, ನರಳಾಡಿ ವ್ಯಕ್ತಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಬಲಿ

ಹಾಸನ: ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ಧನಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸೈಕಲ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನ ನಗರದ ಡೈರಿ ಸರ್ಕಲ್ ಬಳಿ ಅಪಘಾತ (Road Accident) ನಡೆದಿದೆ. ಶ್ರೀರಾಮನಗರದ ನಿವಾಸಿ ಆನಂದ್ (60) ಮೃತ ದುರ್ದೈವಿ.

ಕಾಟೀಹಳ್ಳಿ ಕಡೆಯಿಂದ ಬಂದ ಕಾರು ತಿರುವಿನಲ್ಲಿ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಹಾರಿ ಬಿದ್ದ ಆನಂದ್‌ ಅವರ ಮುಖವೇ ಅಪ್ಪಚ್ಚಿ ಆಗಿತ್ತು. ತಲೆಗೆ ಗಂಭೀರವಾಗಿ ಗಾಯವಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆನೇಕಲ್‌ನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ

ಬೆಂಗಳೂರು ಹೊರವಲಯದ ಆನೇಕಲ್-ಅತ್ತಿಬೆಲೆ ಮುಖ್ಯರಸ್ತೆಯ ಮಾಯಸಂದ್ರ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಬೈಕ್ ಸವಾರ ಬಲಿಯಾಗಿದ್ದಾರೆ. ಮಧುಸೂಧನ್ ಮೃತ ದುರ್ದೈವಿ. ಬುಧವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮಧುಸೂಧನ್‌ ಕೆಲಸ ಮುಗಿಸಿಕೊಂಡು ಅತ್ತಿಬೆಲೆಯಿಂದ ಆನೇಕಲ್ ಕಡೆಗೆ ಬರುವಾಗ ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ.

ಈ ವೇಳೆ ತಲೆಯ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಮಧುಸೂದನ್‌ರನ್ನು ಕೂಡಲೇ ಸ್ಥಳೀಯರು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಮಾಡಿ ಪರಾರಿ ಆಗಿರುವ ವಾಹನಕ್ಕೆ ಹುಡುಕಾಟ ನಡೆಸಿದ್ದಾರೆ.

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಲಾರಿ

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕಕ್ಕೆ ಬಿದ್ದಿದ್ದೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ಮಾನೀರು ಕ್ರಾಸ್ ಬಳಿ ಘಟನೆ ನಡೆದಿದೆ. ಕುಮಟಾದಿಂದ ಅಂಕೋಲಾದತ್ತ ಉಸುಕು ತುಂಬಿಕೊಂಡು ಲಾರಿ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಪಕ್ಕದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಬಿದ್ದಿದೆ.

ಲಾರಿ ಗುದ್ದಿದ ರಭಸಕ್ಕೆ ರಸ್ತೆಯ ತಡೆಗೋಡೆ ಕಿತ್ತುಹೋಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಂದಕ್ಕೆ ಬಿದ್ದ ಗಾಡಿಯನ್ನು ಮೇಲಕ್ಕೆತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Jai Shree Ram slogan: ಹಿಂದೂ ವಿರೋಧಿ ಕೃತ್ಯಗಳಿಗೆ ರಾಹುಲ್ ಗಾಂಧಿ ಕುಮ್ಮಕ್ಕು: ಜೋಶಿ ಕಿಡಿ

Jai Shree Ram slogan: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ, ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ, ಈಗ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ… ಇದೆಲ್ಲದ್ದಕ್ಕೂ ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಮುಸ್ಲಿಂ ಓಲೈಕೆಯಲ್ಲಿ ತೊಡಗಿರುವುದೇ ಕಾರಣ. ಈ ಘಟನೆಗಳು ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುವುದನ್ನು ಸ್ಪಷ್ಟಪಡಿಸುತ್ತಿವೆ ಎಂದು ಸಚಿವ ಪ್ರಹ್ಲಾದ್‌ ಜೋಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM

on

Jai Shree Ram slogan Rahul Gandhi instigated anti Hindu activities says Pralhad Joshi
Koo

ಹುಬ್ಬಳ್ಳಿ: ರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್‌ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ (Rahul Gandhi) ಕಾರಣ. ಬೆಂಗಳೂರಲ್ಲಿ ಜೈಶ್ರೀರಾಮ್‌ ಘೋಷಣೆ (Jai Shree Ram slogan) ಕೂಗಿದ್ದಕ್ಕೆ ಹಲ್ಲೆ ಮಾಡಲಾದ ಪ್ರಕರಣವೂ ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದಲೇ ಆಗಿರುವುದು ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಕಿಡಿಕಾರಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಲ್ಹಾದ್‌ ಜೋಶಿ, ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲಿನ ಹಲ್ಲೆ ಪ್ರಕರಣವನ್ನು ಕಟುವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ಇದೆಲ್ಲ ಆಗುತ್ತಿದೆ ಎಂದು ಹರಿಹಾಯ್ದಿದ್ದಾರೆ.

ರಾಹುಲ್ ಮುಸ್ಲಿಂ ಲೀಗ್ ಧ್ವಜ ಹಿಡಿದಿದ್ದೇ ಕಾರಣ

ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ವಯನಾಡಲ್ಲಿ ತಮ್ಮ ಪಕ್ಷದ ಧ್ವಜ ಬಿಟ್ಟು, ಮುಸ್ಲಿಂ ಲೀಗ್ ಧ್ವಜ ಹಿಡಿದು ನಾಮಪತ್ರ ಸಲ್ಲಿಸಿ ಬಂದಿದ್ದಾರೆ. ಕಾಂಗ್ರೆಸ್‌ನವರ ಇಂಥ ನಡೆ ದೇಶ ವಿದ್ರೋಹಿ ಕೃತ್ಯಗಳಿಗೆ ಕುಮ್ಮಕ್ಕು ಕೊಟ್ಟಿದೆ ಎಂದು ಪ್ರಲ್ಹಾದ್‌ ಜೋಶಿ ಆರೋಪಿಸಿದರು.

ಈ ಹಿಂದೆ ಹಿಂದೂಗಳ ಹತ್ಯೆ, ಹಿಂದೂ ಮಹಿಳೆಯರ ಅತ್ಯಾಚಾರಕ್ಕೆ ಮುಸ್ಲಿಂ ಲೀಗ್ ಕರೆ ಕೊಟ್ಟಿತ್ತು. ಇಂಥ ಒಂದು ವಿದ್ರೋಹಿ ಕೃತ್ಯಗಳ ಪರ ಇರುವ ಮುಸ್ಲಿಂ ಲೀಗ್ ಧ್ವಜ ಹಿಡಿದು ಚುನಾವಣೆಗೆ ಇಳಿದಿದ್ದಾರೆ ರಾಹುಲ್ ಗಾಂಧಿ ಎಂದು ಪ್ರಲ್ಹಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಹಿಂದೂ ವಿರೋಧಿ ಪಕ್ಷ

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ, ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ, ಈಗ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ… ಇದೆಲ್ಲದ್ದಕ್ಕೂ ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಮುಸ್ಲಿಂ ಓಲೈಕೆಯಲ್ಲಿ ತೊಡಗಿರುವುದೇ ಕಾರಣ. ಈ ಘಟನೆಗಳು ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುವುದನ್ನು ಸ್ಪಷ್ಟಪಡಿಸುತ್ತಿವೆ ಎಂದು ಸಚಿವ ಜೋಶಿ ಹೇಳಿದರು.

ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಉಗ್ರವಾದಿ ಕೃತ್ಯ, ಭಯೋತ್ಪಾದನೆಗೆ ಪ್ರೋತ್ಸಾಹ ಸಿಗುತ್ತಿದೆ. ಜನ ಜಾಗೃತರಾಗಬೇಕು ಎಂದು ಸಚಿವ ಪ್ರಲ್ಹಾದ್‌ ಜೋಶಿ ಜೋಶಿ ಕರೆ ನೀಡಿದರು.

ಕಾರು ಅಡ್ಡಗಟ್ಟಿ ಮುಸ್ಲಿಂ ಯುವಕರ ಪುಂಡಾಟ!

ಶ್ರೀ ರಾಮನವಮಿ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಹಿಂದು ಯುವಕರು ತೆರಳುತ್ತಿದ್ದಾಗ, ಜೈ ಶ್ರೀರಾಮ್ ಎಂದು ಕೂಗಿದ್ದಾರೆ. ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ಮುಸ್ಲಿಂ ಯುವಕರು, “ಜೈ ಶ್ರೀರಾಮ್‌ ಹೇಳಬಾರದು, ಅಲ್ಲಾಹ್ ಅಂತ ಹೇಳಬೇಕು” ಎಂದು ಹಿಂದು ಯುವಕರ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಬುಧವಾರವೇ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಬೈಕ್‌ನಲ್ಲಿ ಬಂದ ಯುವಕರು, ಜೈ ಶ್ರೀ ರಾಮ್ ಇಲ್ಲಾ… ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿದ್ದಾರೆ. ಇದಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಇದೇ ವೇಳೆ ನಾವು ನಿಮ್ಮ ಹಬ್ಬದಲ್ಲಿ ಹೀಗೆ ಮಾಡುತ್ತೇವಾ ಎಂದು ಹಿಂದು ಯುವಕರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಗಲಾಟೆ ನಡೆದಿದೆ.

ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲು

ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಡಿ. ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ನೇಹಿತರಾದ ವಿನಾಯಕ ಮತ್ತು ರಾಹುಲ್ ಜತೆ ಚಿಕ್ಕಬೆಟ್ಟಹಳ್ಳಿ ರಸ್ತೆಯಲ್ಲಿ ಮಧ್ಯಾಹ್ನ ಕಾರಿನಲ್ಲಿ ಹೋಗುತ್ತಿದ್ದೆ. ಕಾರಿನ ಮುಂದೆ ಶ್ರೀರಾಮನ ಧ್ವಜ ಕಟ್ಟಿದ್ದನ್ನು ನೋಡಿದ ಇಬ್ಬರು ಮುಸ್ಲಿಂ ಯುವಕರು, ನಮ್ಮ ಬಳಿ ಬಂದು, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ಅಲ್ಲಾ ಹು ಅಕ್ಬರ್” ಎಂದು ಕೂಗಬೇಕು ಎಂದು ಒತ್ತಾಯಿಸಿದರು. ನಾವು ಹಾಗೆ ಕೂಗುವುದಿಲ್ಲವೆಂದು ಹೇಳಿದಾಗ, ನಮ್ಮ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದು, ರಾಹುಲ್ ತಲೆಗೆ ಪೆಟ್ಟು ಬಿದ್ದು ಮೂಗಿನಿಂದ ರಕ್ತಸ್ರಾವವಾಗಿದೆ. ಹೇಗೋ ನಾವು ಅಲ್ಲಿಂದ ತಪ್ಪಿಸಿಕೊಂಡು ಬಂದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ನಾಲ್ವರ ಬಂಧನ

ಹಲ್ಲೆ ಪ್ರಕರಣಕ್ಕೆ (Assault Case) ಸಂಬಂಧಿಸಿ ನಾಲ್ಕು ಮಂದಿ ಆರೋಪಿಗಳನ್ನು (Culprits) ಪೊಲೀಸರು ಬಂಧಿಸಿದ್ದಾರೆ. ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಿಂದು ಯುವಕರ (Hindu youth) ಮೇಲೆ ಬುಧವಾರ ಸಂಜೆ ಹಲ್ಲೆ ಮಾಡಿದ್ದವರ ಪೈಕಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎ1 ಫರ್ಮಾನ್, ಎ2 ಸಮೀರ್ ಹಾಗೂ ಮತ್ತಿಬ್ಬರನ್ನು ಬಂಧಿಸಲಾಗಿದೆ. ಒಟ್ಟು ನಾಲ್ವರು ಆರೋಪಿಗಳ ಪೈಕಿ ಇಬ್ಬರು ಅಪ್ರಾಪ್ತರಾಗಿದ್ದಾರೆ. ಸದ್ಯ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ.

“ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರೋದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಪ್ರಮುಖ ಆರೋಪಿ ಫರ್ಮಾನ್. ತನಿಖೆ ಮುಂದುವರೆದಿದೆ. ಮತ್ತೆ ಯಾರಾದರೂ ಭಾಗಿಯಾಗಿದ್ದಾರಾ ಎಂದು ಪರಿಶೀಲಿಸಲಾಗುತ್ತಿದೆ” ಎಂದು ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿಪ್ರಸಾದ್ ಹೇಳಿಕೆ ನೀಡಿದ್ದಾರೆ.

“ಆರೋಪಿಗಳು ಬೈಕ್‌ನಲ್ಲಿ ಹೋಗುತ್ತಿರಬೇಕಾದರೆ ಕಾರನ್ನ ಗಮನಿಸಿದ್ದಾರೆ. ಕಾರಲ್ಲಿ ಬಾವುಟ ಹಿಡಿದು ಹೋಗ್ತಿರೋದು ನೋಡಿ ವಾಪಸ್ಸು ಬಂದಿದ್ದಾರೆ. ಕಾರನ್ನು ಅಡ್ಡ ಹಾಕಿ ಗಲಾಟೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಗಾಂಜಾ ನಶೆಯಲ್ಲಿ ಹಲ್ಲೆ ಮಾಡಿದ್ರಾ ಯುವಕರು?

ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಯುವಕರು ಗಲಾಟೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಯುವಕರು ಗಾಂಜಾ ಸೇವನೆ ಮಾಡಿದ್ದರೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕಾಗಿ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮಾಡಿಸಲು ಪೊಲೀಸರು ಮುಂದಾಗಿದ್ದಾರೆ.

Continue Reading

ಕ್ರೈಂ

Road Accident : ಸೈಕಲ್‌ಗೆ ಗುದ್ದಿದ ಕಾರು, ನರಳಾಡಿ ವ್ಯಕ್ತಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಬಲಿ

Road Accident : ಪ್ರತ್ಯೇಕ ಕಡೆಗಳಲ್ಲಿ ಸಂಭವಿಸಿದ ಅಪಘಾತದಲ್ಲಿ ಸವಾರರಿಬ್ಬರು ಮೃತಪಟ್ಟಿದ್ದಾರೆ. ಹಾಸನದಲ್ಲಿ ಕಾರೊಂದು ಸೈಕಲ್‌ಗೆ ಡಿಕ್ಕಿ ಹೊಡೆದಿದ್ದು, ನೆಲಕ್ಕೆ ಬಿದ್ದ ಸವಾರ ಮೃತಪಟ್ಟರೆ, ಆನೇಕಲ್‌ನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಕಾರವಾರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕಕ್ಕೆ ಉರುಳಿದೆ.

VISTARANEWS.COM

on

By

Road Accident
Koo

ಹಾಸನ: ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ಧನಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸೈಕಲ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನ ನಗರದ ಡೈರಿ ಸರ್ಕಲ್ ಬಳಿ ಅಪಘಾತ (Road Accident) ನಡೆದಿದೆ. ಶ್ರೀರಾಮನಗರದ ನಿವಾಸಿ ಆನಂದ್ (60) ಮೃತ ದುರ್ದೈವಿ.

ಕಾಟೀಹಳ್ಳಿ ಕಡೆಯಿಂದ ಬಂದ ಕಾರು ತಿರುವಿನಲ್ಲಿ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಹಾರಿ ಬಿದ್ದ ಆನಂದ್‌ ಅವರ ಮುಖವೇ ಅಪ್ಪಚ್ಚಿ ಆಗಿತ್ತು. ತಲೆಗೆ ಗಂಭೀರವಾಗಿ ಗಾಯವಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Self Harming : ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಆನೇಕಲ್‌ನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ

ಬೆಂಗಳೂರು ಹೊರವಲಯದ ಆನೇಕಲ್-ಅತ್ತಿಬೆಲೆ ಮುಖ್ಯರಸ್ತೆಯ ಮಾಯಸಂದ್ರ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಬೈಕ್ ಸವಾರ ಬಲಿಯಾಗಿದ್ದಾರೆ. ಮಧುಸೂಧನ್ ಮೃತ ದುರ್ದೈವಿ. ಬುಧವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮಧುಸೂಧನ್‌ ಕೆಲಸ ಮುಗಿಸಿಕೊಂಡು ಅತ್ತಿಬೆಲೆಯಿಂದ ಆನೇಕಲ್ ಕಡೆಗೆ ಬರುವಾಗ ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ.

ಈ ವೇಳೆ ತಲೆಯ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಮಧುಸೂದನ್‌ರನ್ನು ಕೂಡಲೇ ಸ್ಥಳೀಯರು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಮಾಡಿ ಪರಾರಿ ಆಗಿರುವ ವಾಹನಕ್ಕೆ ಹುಡುಕಾಟ ನಡೆಸಿದ್ದಾರೆ.

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಲಾರಿ

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕಕ್ಕೆ ಬಿದ್ದಿದ್ದೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ಮಾನೀರು ಕ್ರಾಸ್ ಬಳಿ ಘಟನೆ ನಡೆದಿದೆ. ಕುಮಟಾದಿಂದ ಅಂಕೋಲಾದತ್ತ ಉಸುಕು ತುಂಬಿಕೊಂಡು ಲಾರಿ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಪಕ್ಕದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಬಿದ್ದಿದೆ.

ಲಾರಿ ಗುದ್ದಿದ ರಭಸಕ್ಕೆ ರಸ್ತೆಯ ತಡೆಗೋಡೆ ಕಿತ್ತುಹೋಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಂದಕ್ಕೆ ಬಿದ್ದ ಗಾಡಿಯನ್ನು ಮೇಲಕ್ಕೆತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Jai Shree Ram slogan: ಬೆಂಗಳೂರಿನಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿರುವ ಸಿದ್ದರಾಮಯ್ಯ, ಡಿಕೆಶಿ: ಅಶೋಕ್‌ ಆರೋಪ

Jai Shree Ram slogan: ರಾತ್ರಿ ಘಟನೆಗೆ ಸರ್ಕಾರವೇ ಕಾರಣ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಓಲೈಕೆ ರಾಜಕಾರಣವನ್ನು ಮಾಡುತ್ತಿದ್ದಾರೆ. ವಿಧಾನಸೌಧಕ್ಕೆ ಬಂದು ಪಾಕಿಸ್ತಾನ ಜಿಂದಾಬಾದ್ ಅಂತ ಕೂಗುತ್ತಾರೆ. ಈಗ ರಾಮ ಜಪ ಮಾಡುವವರನ್ನು ತಡೆದು, ಹಲ್ಲೆ ನಡೆಸಿ, ಅಲ್ಲಾಹು ಅಕ್ಬರ್ ಅಂತ ಕೂಗುವಂತೆ ಒತ್ತಾಯ ಮಾಡುತ್ತಾರೆ. ಸಿಎಂ ಸಿದ್ದರಾಮಯ್ಯ. ಡಿ.ಕೆ. ಶಿವಕುಮಾರ್‌ ಅವರು ಬೆಂಗಳೂರಿನಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿದ್ದಾರೆ ಎಂದು ಆರ್‌. ಅಶೋಕ್‌ ಕಿಡಿಕಾರಿದ್ದಾರೆ.

VISTARANEWS.COM

on

Jai Shree Ram slogan Siddaramaiah and DK Shivakumar are nurturing terrorists in Bengaluru accuses Ashok
Koo

ಬೆಂಗಳೂರು: ಇಲ್ಲಿನ ವಿದ್ಯಾರಣ್ಯಪುರದ ಚಿಕ್ಕ ಬೆಟ್ಟಳ್ಳಿ ಮಸೀದಿ ಬಳಿ ಬುಧವಾರ ಜೈ ಶ್ರೀರಾಮ್ ಎಂದು ಕೂಗಿದ್ದಕ್ಕೆ (Jai Shree Ram slogan) ಕಾರಿನಲ್ಲಿ ಹೋಗುತ್ತಿದ್ದ ಹಿಂದು ಯುವಕರ ಮೇಲೆ ಮುಸ್ಲಿಂ ಯುವಕರು ನಡೆಸಿರುವ ಹಲ್ಲೆ ಪ್ರಕರಣಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ. ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ (R Ashok) ಪ್ರತಿಕ್ರಿಯೆ ನೀಡಿ, ಈ ಘಟನೆಗೆ ಸರ್ಕಾರವೇ ಕಾರಣ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರ ಓಲೈಕೆ ರಾಜಕಾರಣವೇ ಕಾರಣ ಎಂದು ಕಿಡಿಕಾರಿದ್ದಾರೆ.

ಬುಧವಾರ ಶ್ರೀರಾಮನವಮಿ (Ram Navami) ಇದ್ದಿದ್ದರಿಂದ ಜೈ ಶ್ರೀರಾಮ್ ಎಂದು ಕೂಗುತ್ತಾ ಹಿಂದು ಯುವಕರು ಕಾರಿನಲ್ಲಿ ಹೋಗುತ್ತಿದ್ದಾಗ, ಅವರನ್ನು ಅಡ್ಡಗಟ್ಟಿದ ಮುಸ್ಲಿಂ ಯುವಕರ ತಂಡ ಅವಾಚ್ಯ ಶಬ್ದಗಳಿಂದ ಬೈದಿದ್ದಲ್ಲದೆ, ಹಲ್ಲೆಯನ್ನೂ ನಡೆಸಿತ್ತು. ಇದಕ್ಕೀಗ ರಾಜಕೀಯ ತಿರುವು ಸಿಕ್ಕಿದ್ದು, ಇಂತಹ ಘಟನೆಗೆ ಕಾಂಗ್ರೆಸ್‌ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ ಎಂದು ಅಶೋಕ್‌ ಗುಡುಗಿದ್ದಾರೆ.

ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿರುವ ಆರ್. ಅಶೋಕ್, ರಾತ್ರಿ ಘಟನೆಗೆ ಸರ್ಕಾರವೇ ಕಾರಣ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಓಲೈಕೆ ರಾಜಕಾರಣವನ್ನು ಮಾಡುತ್ತಿದ್ದಾರೆ. ವಿಧಾನಸೌಧಕ್ಕೆ ಬಂದು ಪಾಕಿಸ್ತಾನ ಜಿಂದಾಬಾದ್ ಅಂತ ಕೂಗುತ್ತಾರೆ. ಈಗ ರಾಮ ಜಪ ಮಾಡುವವರನ್ನು ತಡೆದು, ಹಲ್ಲೆ ನಡೆಸಿ, ಅಲ್ಲಾಹು ಅಕ್ಬರ್ ಅಂತ ಕೂಗುವಂತೆ ಒತ್ತಾಯ ಮಾಡುತ್ತಾರೆ. ಸಿಎಂ ಸಿದ್ದರಾಮಯ್ಯ. ಡಿ.ಕೆ. ಶಿವಕುಮಾರ್‌ ಅವರು ಬೆಂಗಳೂರಿನಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿದ್ದಾರೆ. ಇಂಥವರನ್ನು ಡಿಕೆಶಿ “ದೆ ಆರ್ ಮೈ ಬ್ರದರ್ಸ್” ಎಂದು ಹೇಳಿಕೊಳ್ಳುತ್ತಾರೆ ಎಂದು ಕಿಡಿಕಾರಿದರು.

ಕುಕ್ಕರ್‌ನಲ್ಲಿ ಬಾಂಬ್ ಇಟ್ಟವರು ಇವರಿಗೆ ಬ್ರದರ್ಸ್ ಆಗುತ್ತಾರೆ. ಈಗ ಯಾಕೆ ಮೌನವಾಗಿದ್ದೀರಿ? ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಏನೋ ಹೇಳಿಕೆ ಕೊಟ್ಟರು ಎಂದು ಅವರ ಮೇಲೆ ಬಿದ್ದಿರಿ. ರಾತ್ರಿಯಿಂದ ಯಾಕೆ ಮೌನವಾಗಿದ್ದೀರಿ? ಮಾತನಾಡಿ ಡಿಕೆಶಿಯವರೇ? ಪೊಲೀಸರಿಗೆ ಧಮ್ಕಿ ಹಾಕ್ತೀರಾ? ಇಂಥ ಘಟನೆ ನಡೆದರೂ ಕ್ರಮ ಕೈಗೊಳ್ಳಬೇಡಿ ಅಂತ ಹೇಳುತ್ತೀರಾ? ಇದೇ ಕಾರಣಕ್ಕಾಗಿಯೇ ಆ ಸಮುದಾಯದವರು ದಿನ ಬೆಳಗಾದರೆ ಇಂಥದ್ದೊಂದು ಕೃತ್ಯಗಳನ್ನು ಮಾಡುತ್ತಲೇ ಬರುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಓಲೈಕೆ ಮಾಡಿ ಬಹುಸಂಖ್ಯಾತರನ್ನು ಕಡೆಗಣಿಸುತ್ತಿದ್ದೀರಿ. ಬಹುಸಂಖ್ಯಾತರು ನಿಮಗೆ ಬುದ್ಧಿ ಕಲಿಸುತ್ತಾರೆ. ಈ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲೂ ಸೋಲಿಸಿ, ನಿಮಗೆ ಪಾಠ ಕಲಿಸುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದರು.

ಪೊಲೀಸರಿಗೆ ರಾಜ್ಯದಲ್ಲಿ ಸ್ವತಂತ್ರವಾಗಿ ನಿರ್ವಹಣೆ ಮಾಡಲು ಬಿಡುತ್ತಿಲ್ಲ. ಡಿ.ಕೆ. ಶಿವಕುಮಾರ್‌ ಅವರು ತಮ್ಮ ಬ್ರದರ್ಸ್‌ ರಕ್ಷಣೆಗಾಗಿ ನಿಂತಿದ್ದಾರೆ ಎಂದು ಅಶೋಕ್‌ ಕಿಡಿಕಾರಿದರು.

ಕಾರು ಅಡ್ಡಗಟ್ಟಿ ಮುಸ್ಲಿಂ ಯುವಕರ ಪುಂಡಾಟ!

ಶ್ರೀ ರಾಮನವಮಿ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಹಿಂದು ಯುವಕರು ತೆರಳುತ್ತಿದ್ದಾಗ, ಜೈ ಶ್ರೀರಾಮ್ ಎಂದು ಕೂಗಿದ್ದಾರೆ. ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ಮುಸ್ಲಿಂ ಯುವಕರು, “ಜೈ ಶ್ರೀರಾಮ್‌ ಹೇಳಬಾರದು, ಅಲ್ಲಾಹ್ ಅಂತ ಹೇಳಬೇಕು” ಎಂದು ಹಿಂದು ಯುವಕರ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಬುಧವಾರವೇ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಬೈಕ್‌ನಲ್ಲಿ ಬಂದ ಯುವಕರು, ಜೈ ಶ್ರೀ ರಾಮ್ ಇಲ್ಲಾ… ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿದ್ದಾರೆ. ಇದಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಇದೇ ವೇಳೆ ನಾವು ನಿಮ್ಮ ಹಬ್ಬದಲ್ಲಿ ಹೀಗೆ ಮಾಡುತ್ತೇವಾ ಎಂದು ಹಿಂದು ಯುವಕರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಗಲಾಟೆ ನಡೆದಿದೆ.

ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲು

ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಡಿ. ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ನೇಹಿತರಾದ ವಿನಾಯಕ ಮತ್ತು ರಾಹುಲ್ ಜತೆ ಚಿಕ್ಕಬೆಟ್ಟಹಳ್ಳಿ ರಸ್ತೆಯಲ್ಲಿ ಮಧ್ಯಾಹ್ನ ಕಾರಿನಲ್ಲಿ ಹೋಗುತ್ತಿದ್ದೆ. ಕಾರಿನ ಮುಂದೆ ಶ್ರೀರಾಮನ ಧ್ವಜ ಕಟ್ಟಿದ್ದನ್ನು ನೋಡಿದ ಇಬ್ಬರು ಮುಸ್ಲಿಂ ಯುವಕರು, ನಮ್ಮ ಬಳಿ ಬಂದು, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ಅಲ್ಲಾ ಹು ಅಕ್ಬರ್” ಎಂದು ಕೂಗಬೇಕು ಎಂದು ಒತ್ತಾಯಿಸಿದರು. ನಾವು ಹಾಗೆ ಕೂಗುವುದಿಲ್ಲವೆಂದು ಹೇಳಿದಾಗ, ನಮ್ಮ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದು, ರಾಹುಲ್ ತಲೆಗೆ ಪೆಟ್ಟು ಬಿದ್ದು ಮೂಗಿನಿಂದ ರಕ್ತಸ್ರಾವವಾಗಿದೆ. ಹೇಗೋ ನಾವು ಅಲ್ಲಿಂದ ತಪ್ಪಿಸಿಕೊಂಡು ಬಂದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ನಾಲ್ವರ ಬಂಧನ

ಹಲ್ಲೆ ಪ್ರಕರಣಕ್ಕೆ (Assault Case) ಸಂಬಂಧಿಸಿ ನಾಲ್ಕು ಮಂದಿ ಆರೋಪಿಗಳನ್ನು (Culprits) ಪೊಲೀಸರು ಬಂಧಿಸಿದ್ದಾರೆ. ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಿಂದು ಯುವಕರ (Hindu youth) ಮೇಲೆ ಬುಧವಾರ ಸಂಜೆ ಹಲ್ಲೆ ಮಾಡಿದ್ದವರ ಪೈಕಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎ1 ಫರ್ಮಾನ್, ಎ2 ಸಮೀರ್ ಹಾಗೂ ಮತ್ತಿಬ್ಬರನ್ನು ಬಂಧಿಸಲಾಗಿದೆ. ಒಟ್ಟು ನಾಲ್ವರು ಆರೋಪಿಗಳ ಪೈಕಿ ಇಬ್ಬರು ಅಪ್ರಾಪ್ತರಾಗಿದ್ದಾರೆ. ಸದ್ಯ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ.

“ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರೋದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಪ್ರಮುಖ ಆರೋಪಿ ಫರ್ಮಾನ್. ತನಿಖೆ ಮುಂದುವರೆದಿದೆ. ಮತ್ತೆ ಯಾರಾದರೂ ಭಾಗಿಯಾಗಿದ್ದಾರಾ ಎಂದು ಪರಿಶೀಲಿಸಲಾಗುತ್ತಿದೆ” ಎಂದು ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿಪ್ರಸಾದ್ ಹೇಳಿಕೆ ನೀಡಿದ್ದಾರೆ.

“ಆರೋಪಿಗಳು ಬೈಕ್‌ನಲ್ಲಿ ಹೋಗುತ್ತಿರಬೇಕಾದರೆ ಕಾರನ್ನ ಗಮನಿಸಿದ್ದಾರೆ. ಕಾರಲ್ಲಿ ಬಾವುಟ ಹಿಡಿದು ಹೋಗ್ತಿರೋದು ನೋಡಿ ವಾಪಸ್ಸು ಬಂದಿದ್ದಾರೆ. ಕಾರನ್ನು ಅಡ್ಡ ಹಾಕಿ ಗಲಾಟೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಗಾಂಜಾ ನಶೆಯಲ್ಲಿ ಹಲ್ಲೆ ಮಾಡಿದ್ರಾ ಯುವಕರು?

ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಯುವಕರು ಗಲಾಟೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಯುವಕರು ಗಾಂಜಾ ಸೇವನೆ ಮಾಡಿದ್ದರೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕಾಗಿ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮಾಡಿಸಲು ಪೊಲೀಸರು ಮುಂದಾಗಿದ್ದಾರೆ.

Continue Reading
Advertisement
Road Accident
ಬಾಗಲಕೋಟೆ2 mins ago

Road Accident : ಕ್ರೂಸರ್‌- ಬಸ್‌ ನಡುವೆ ಭೀಕರ ಅಪಘಾತ; ಮೂವರು ಸಾವು, ಐವರು ಗಂಭೀರ

Raj Kundra Shilpa Shetty
ಕ್ರೈಂ16 mins ago

Raj Kundra: ಬಿಟ್‌ಕಾಯಿನ್‌ ಪೋಂಜಿ ಸ್ಕೀಮ್‌; ಇಡಿಯಿಂದ ರಾಜ್‌ ಕುಂದ್ರಾ ₹97 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Jai Shree Ram slogan Rahul Gandhi instigated anti Hindu activities says Pralhad Joshi
ರಾಜಕೀಯ31 mins ago

Jai Shree Ram slogan: ಹಿಂದೂ ವಿರೋಧಿ ಕೃತ್ಯಗಳಿಗೆ ರಾಹುಲ್ ಗಾಂಧಿ ಕುಮ್ಮಕ್ಕು: ಜೋಶಿ ಕಿಡಿ

Road Accident
ಕ್ರೈಂ32 mins ago

Road Accident : ಸೈಕಲ್‌ಗೆ ಗುದ್ದಿದ ಕಾರು, ನರಳಾಡಿ ವ್ಯಕ್ತಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಬಲಿ

Abhradeep Saha
ಸಿನಿಮಾ44 mins ago

Abhradeep Saha: ʻಕೆಜಿಎಫ್ʼ ಸಿನಿಮಾವನ್ನು ಕಿರುಚಾಡುತ್ತಲೇ ಹಾಡಿ ಹೊಗಳಿದ್ದ ಯೂಟ್ಯೂಬರ್ ನಿಧನ

Aamir Khan Deepfake video promoting a political party viral
ಬಾಲಿವುಡ್46 mins ago

Aamir Khan: ಕಾಂಗ್ರೆಸ್‌ಗೆ ಮತ ನೀಡಿ ಎಂದು ಆಮೀರ್ ಖಾನ್ ಮನವಿ ಮಾಡಿದರೆ? ಎಫ್‌ಐಆರ್‌ ಏಕೆ?

VVPAT Verification
ದೇಶ57 mins ago

VVPAT Verification: ಇವಿಎಂ-ವಿವಿಪ್ಯಾಟ್‌ ತಾಳೆಯ ಪ್ರಕ್ರಿಯೆ ತಿಳಿಸಿ; ಆಯೋಗಕ್ಕೆ ಸುಪ್ರೀಂ ಸೂಚನೆ

Jai Shree Ram slogan Siddaramaiah and DK Shivakumar are nurturing terrorists in Bengaluru accuses Ashok
ಕರ್ನಾಟಕ59 mins ago

Jai Shree Ram slogan: ಬೆಂಗಳೂರಿನಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿರುವ ಸಿದ್ದರಾಮಯ್ಯ, ಡಿಕೆಶಿ: ಅಶೋಕ್‌ ಆರೋಪ

IPL 2024
ಕ್ರಿಕೆಟ್1 hour ago

IPL 2024: ಭಾರತ ಕ್ರಿಕೆಟ್​ಗೆ ನಿಮ್ಮ ಕೊಡುಗೆ ಏನು? ಹರ್ಷ ಭೋಗ್ಲೆಗೆ ಪ್ರಶ್ನೆ ಮಾಡಿದ ಮಾಜಿ ಆಟಗಾರ

Self Harming In chitradurga
ಚಿತ್ರದುರ್ಗ1 hour ago

Self Harming : ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ2 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ4 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ5 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ6 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ7 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌