Site icon Vistara News

Cyber Crime: ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

A trader lost more than three and a half lakhs by opening a WhatsApp group message

ಗದಗ: ವಾಟ್ಸ್ಆ್ಯಪ್‌ ಗ್ರೂಪ್‌ಗೆ (WhatsApp Group) ಬಂದಿದ್ದ ಮೆಸೇಜ್‌ವೊಂದನ್ನು ತೆರೆದು ನೋಡಿದ ವ್ಯಾಪಾರಿಯೊಬ್ಬರು ತಮ್ಮ ಖಾತೆಯಲ್ಲಿದ್ದ ಮೂರೂವರೆ ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿದ್ದಾರೆ. ಸೈಬರ್‌ (Cyber Crime) ವಂಚಕರು ಹಣ ಲಪಟಾಯಿಸಿದ್ದಾರೆ. ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: World Food Safety Day: ಆಹಾರ ಸುರಕ್ಷತೆಗಾಗಿ ನಾವು ಏನು ಮಾಡಬಹುದು?

ಅನಿಲ್‌ ಮಲ್ಲಪ್ಪ ಚಿನ್ನಾಪುರ ಎಂಬುವವರೇ ಸೈಬರ್‌ ವಂಚನೆಗೆ ಒಳಗಾದ ವ್ಯಕ್ತಿ. ನಗರದ ಜಿ.ಎಸ್. ಪಾಟೀಲ್‌ ಲೇಔಟ್‌ನಲ್ಲಿ ವಾಸವಾಗಿರುವ ಇವರು, ಮೊದಲು ಜಿ.ಎಸ್. ಪಾಟೀಲ್‌ ಲೇಔಟ್‌ ವಾಟ್ಸ್ಆ್ಯಪ್‌ ಗ್ರೂಪ್‌ನಲ್ಲಿ ಯುನಿಯನ್ ಬ್ಯಾಂಕ್‌ನ ಎಪಿಕೆ ಹೆಸರಿನಲ್ಲಿ ಬಂದಿದ್ದ ಲಿಂಕ್ ಮೆಸೇಜ್ ಅನ್ನು ತೆರದು ನೋಡಿದ್ದಾರೆ. ಇದಾದ ಬಳಿಕ ಮರುದಿನ ಫೋನ್‌ ಕರೆಯೊಂದು ಬಂದಿದೆ. ಯೂನಿಯನ್ ಬ್ಯಾಂಕ್ ಮುಖ್ಯಸ್ಥ ಎಂದು ಕರೆ ಮಾಡಿದ ವ್ಯಕ್ತಿಯು, ನಿಮ್ಮ ಬ್ಯಾಂಕ್ ಖಾತೆ ಡಿಆಕ್ಟಿವೇಟ್‌ ಆಗಿದೆ ಎಂದು ಕೆಲವು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಇದಾದ ಅರ್ಧಗಂಟೆಯಲ್ಲೇ ಅನಿಲ್‌ ಅವರ ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಮೊದಲ ಹಂತದಲ್ಲಿ 50 ಸಾವಿರ ರೂ, 2ನೇ ಹಂತದಲ್ಲಿ 2,25,000 ರೂ. ಹೀಗೆ ಒಟ್ಟು 3,74,998 ರೂಗಳನ್ನು ಸೈಬರ್‌ ವಂಚಕರು ಎಗರಿಸಿದ್ದಾರೆ.

ಈ ಕುರಿತು ಸೈಬರ್‌ ವಂಚನೆಗೆ ಒಳಗಾದ ಅನಿಲ್ ನಗರದ ರಾಜೀವ್‌ ಗಾಂಧಿ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ವೇಳೆ ಖಾತೆಯಿಂದ ಎಗರಿಸಿದ ಹಣ‌ವು ತಮಿಳುನಾಡು ಹಾಗೂ ಬಾಂಗ್ಲಾದೇಶದ ಬ್ಯಾಂಕ್‌ ಖಾತೆಗಳಿಗೆ‌ ಜಮೆ ಆಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ.

ಇದನ್ನೂ ಓದಿ: Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

ಸೈಬರ್‌ ಕ್ರೈಂ ಸಹಾಯವಾಣಿಗೆ ದೂರು ನೀಡಲು ಮುಂದಾದ ಅನಿಲ್‌ ಅವರಿಗೆ ತಾಂತ್ರಿಕ ತೊಂದರೆ ಎದುರಾದ ಹಿನ್ನೆಲೆಯಲ್ಲಿ ತಡವಾಗಿ ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

Exit mobile version