Cyclone Biporjoy: ಬಿಪರ್‌ಜಾಯ್‌ ಚಂಡಮಾರುತದಿಂದ ಮಳೆ; ಮುಂಗಾರು ಮತ್ತಷ್ಟು ದೂರ - Vistara News

ಕರ್ನಾಟಕ

Cyclone Biporjoy: ಬಿಪರ್‌ಜಾಯ್‌ ಚಂಡಮಾರುತದಿಂದ ಮಳೆ; ಮುಂಗಾರು ಮತ್ತಷ್ಟು ದೂರ

ಬಿಪರ್‌ಜಾಯ್‌ ಚಂಡಮಾರುತ (cyclone biporjoy) ಸೃಷ್ಟಿಸಿರುವ ಗಾಳಿಯು ತೇವಾಂಶವನ್ನು ಚದುರಿಸುವುದರಿಂದ ಈಗಾಗಲೇ ರೂಪುಗೊಂಡಿರುವ ಮೋಡಗಳು ಕೂಡ ಚದುರಲಿವೆ. ಇದರ ಪ್ರಭಾವದಿಂದ ಮುಂಗಾರು ಕೂಡ ಪ್ರಬಲವಾಗಿರದೇ ದುರ್ಬಲವಾಗುವ ಸಾಧ್ಯತೆ ಇದೆ.

VISTARANEWS.COM


on

cyclone biparjoy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ʼಬಿಪರ್‌ಜಾಯ್ʼ ಚಂಡಮಾರುತ (Cyclone Biporjoy) ಸೃಷ್ಟಿಯಾಗಿದ್ದು, ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ.

ಮೋಚಾ ಸೈಕ್ಲೋನ್ ನಂತರ ಸೃಷ್ಟಿಯಾಗಿರುವ ಬಿಪರ್‌ಜಾಯ್‌ ಚಂಡಮಾರುತದ ಪರಿಣಾಮ ಕರ್ನಾಟಕದ ವಿವಿಧೆಡೆ ನಾಳೆಯಿಂದ ಜೂನ್ 10ರವರೆಗೆ ಮೂರು ದಿನ ಜೋರು ಮಳೆಯಾಗಬಹುದು. ಈ ಸೈಕ್ಲೋನ್‌ ವೇಗ ಆರಂಭದಲ್ಲಿ ಪ್ರತಿ ಗಂಟೆಗೆ 45-55 ಕಿಲೋ ಮೀಟರ್ ಇರಲಿದ್ದು, ಗರಿಷ್ಠ 145-155 ಕಿಲೋಮೀಟರ್‌ವರೆಗಿನ ವೇಗದಿಂದ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡ, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ 2-3 ದಿನ ಮಳೆ ಜೊತೆಗೆ ಸಮುದ್ರದಲ್ಲಿ ಭಾರಿ ಅಲೆಗಳ ಎಚ್ಚರಿಕೆ ನೀಡಲಾಗಿದೆ. 4 ದಿನ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಚಂಡಮಾರುತದ ಪರಿಣಾಮದಿಂದ ಮುಂಗಾರು ತಡವಾಗಲಿದೆ. ಮುಂಗಾರು 4 ದಿನ ತಡವಾಗಿ ಕೇರಳ ಪ್ರವೇಶ ಮಾಡಲಿದೆ. ಸಾಮಾನ್ಯವಾಗಿ ಜೂನ್‌ ಮೊದಲ ವಾರದಲ್ಲಿ ಮುಂಗಾರು ಕೇರಳ ಪ್ರವೇಶ ಮಾಡುತ್ತಿತ್ತು. ಈ ಬಾರಿ ಅದೂ ತಡವಾಗಿದೆ. ಚಂಡಮಾರುತ ಸೃಷ್ಟಿಸಿರುವ ಗಾಳಿಯು ತೇವಾಂಶವನ್ನು ಚದುರಿಸುವುದರಿಂದ ಈಗಾಗಲೇ ರೂಪುಗೊಂಡಿರುವ ಮೋಡಗಳು ಕೂಡ ಚದುರಲಿವೆ. ಇದರ ಪ್ರಭಾವದಿಂದ ಮುಂಗಾರು ಕೂಡ ಪ್ರಬಲವಾಗಿರದೇ ದುರ್ಬಲವಾಗುವ ಸಾಧ್ಯತೆ ಇದೆ.

ಬಿಪರ್‌ಜಾಯ್‌ ಚಂಡಮಾರುತ ನೇರವಾಗಿ ಕರಾವಳಿಯನ್ನು ಅಪ್ಪಳಿಸುವುದಿಲ್ಲ. ಸಮುದ್ರ ತೀರದಿಂದ ಸ್ವಲ್ಪ ದೂರದಲ್ಲಿರಲಿದೆ. ಆದ್ದರಿಂದ ಹೆಚ್ಚಿನ ಅಪಾಯವಿಲ್ಲ. ಆದರೆ ಇದು ನೈರುತ್ಯ ಅರಬಿ ಸಮುದ್ರದಲ್ಲಿ ಸೃಷ್ಟಿಯಾಗಿದ್ದು, ಮಳೆಮಾರುತಗಳನ್ನು ಭಾರತದ ತೀರದಿಂದ ಆಚೆಗೆ ಹಾರಿಸಲಿದೆ. ಹೀಗಾಗಿ ಮಳೆ ಕೊರತೆಯಾಗಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

ಇದನ್ನೂ ಓದಿ: Monsoon Forecast 2023 : ಮುಂಗಾರು ಮಳೆಯನ್ನು ಹವಾಮಾನ ಇಲಾಖೆ ಹೇಗೆ ನಿರ್ಧರಿಸುತ್ತದೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Kodagu News: ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

Kodagu News: ಕೊಡಗು ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 25ನೇ ವರ್ಷದ ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ದೊರೆಯಿತು.

VISTARANEWS.COM


on

Kodagu Gowda Premier League Cricket Tournament inauguration
Koo

ಮಡಿಕೇರಿ: ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ 25ನೇ ವರ್ಷದ ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ (Kodagu News) ಚಾಲನೆ ದೊರೆಯಿತು.

ಕಾರ್ಯಕ್ರಮವನ್ನು ವಿಧಾನಸಭೆ ಮಾಜಿ ಸ್ಪೀಕರ್‌ ಕೆ.ಜಿ. ಬೋಪಯ್ಯ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೊಡಗು ಗೌಡ ಯುವ ವೇದಿಕೆಯು ಕ್ರೀಡಾಕೂಟದ ಆಯೋಜನೆಯೊಂದಿಗೆ ಉತ್ತಮ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಇದನ್ನೂ ಓದಿ: LSG vs CSK: ಗೆಲುವಿನ ಹಳಿ ಏರೀತೇ ಲಕ್ನೋ?; ಚೆನ್ನೈ ಎದುರಾಳಿ

ಮಡಿಕೇರಿ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಮಾತನಾಡಿ, ಕೊಡಗು ಗೌಡ ಯುವ ವೇದಿಕೆ ಈ ಹಿಂದೆ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸುತ್ತಿತ್ತು. ಪ್ರಸ್ತುತ ಕ್ರೀಡಾ ಪ್ರತಿಭೆಗಳ ಬೆಳವಣಿಗೆಗೆ ಪೂರಕವಾಗಿ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆಗೆ ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.

ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಅಧ್ಯಕ್ಷತೆ ವಹಿಸಿದ್ದರು.

ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಆಕರ್ಷಕ ಟ್ರೋಫಿಯನ್ನು ಅನಾವರಣಗೊಳಿಸಲಾಯಿತು.

ಇದೇ ಸಂದರ್ಭದಲ್ಲಿ ಗಣ್ಯರು ಪಂದ್ಯಾವಳಿಯ ಆಕರ್ಷಕ ಟ್ರೋಫಿಯನ್ನು ಅನಾವರಣ ಗೊಳಿಸಿದರು. ಮಡಿಕೇರಿಯ ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ಬ್ಯಾಟಿಂಗ್‌ ಮಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು.

ಇದನ್ನೂ ಓದಿ: Navya Naveli Nanda: ಆರಾಧ್ಯ ಬಚ್ಚನ್‌ ನನಗಿಂತ ಹೆಚ್ಚು ಬುದ್ಧಿವಂತೆ ಎಂದ ಶ್ವೇತಾ ಬಚ್ಚನ್ ಮಗಳು!

ಈ ಸಂದರ್ಭದಲ್ಲಿ ರಣಜಿ ಕ್ರಿಕಟ್ ಆಟಗಾರ ಸುಳ್ಯಕೋಡಿ ರಿಷಿ ಬೋಪಣ್ಣ, ವೇದಿಕೆಯ ಸ್ಥಾಪಕಾಧ್ಯಕ್ಷ ಪೊನ್ನಚ್ಚನ ಮಧು ಸೋಮಣ್ಣ, ಗೌರವ ಸಲಹೆಗಾರ ಕಟ್ಟೆಮನೆ ಸೋನಾಜಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಬೆಂಗಳೂರು

Bengaluru News: ಬೆಂಗಳೂರಿನಲ್ಲಿ ಏ. 24ರಂದು ಭಾಷಾ ಉತ್ಸವ

Bengaluru News: ಬೆಂಗಳೂರಿನ ಹಲಸೂರಿನಲ್ಲಿರುವ ಸೆಂಟ್‌ ಆನ್ಸ್‌ ಮಹಿಳಾ ಪದವಿ ಕಾಲೇಜಿನಲ್ಲಿ ಚಿಗುರು ಕನ್ನಡ ಸಂಘದ ವತಿಯಿಂದ ವಿಸ್ತಾರ ನ್ಯೂಸ್‌ ಸಹಯೋಗದಲ್ಲಿ ಏ. 24 ರಂದು ಬುಧವಾರ ಬೆಳಿಗ್ಗೆ 10 ಗಂಟೆಗೆ ಭಾಷಾ ಉತ್ಸವ 2024 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

VISTARANEWS.COM


on

Bhasha Utsav 2024 programme on 24th April
Koo

ಬೆಂಗಳೂರು: ಬೆಂಗಳೂರಿನ ಹಲಸೂರಿನಲ್ಲಿರುವ ಸೆಂಟ್‌ ಆನ್ಸ್‌ ಮಹಿಳಾ ಪದವಿ ಕಾಲೇಜಿನಲ್ಲಿ ಚಿಗುರು ಕನ್ನಡ ಸಂಘದ ವತಿಯಿಂದ ಏ. 24ರಂದು ಬುಧವಾರ ಬೆಳಗ್ಗೆ 10 ಗಂಟೆಗೆ ಭಾಷಾ ಉತ್ಸವ 2024 (Bhasha Utsav 2024) ಕಾರ್ಯಕ್ರಮವನ್ನು (Bengaluru News) ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: Gold Rate Today: ಬಂಗಾರ ಕೊಳ್ಳುವವರಿಗೆ ತುಸು ರಿಲೀಫ್‌, ಬಹುದಿನಗಳ ನಂತರ ಬೆಲೆ ಇಳಿಕೆ; ಇಂದಿನ ದರ ಹೀಗಿದೆ

ʼವಿಸ್ತಾರ ನ್ಯೂಸ್‌ʼ ಸಹಯೋಗದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಖಿಲ ಭಾರತ ಹಳ್ಳಿಕಾರ್‌ ತಳಿ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಬಿಗ್‌ಬಾಸ್‌ ಕನ್ನಡ 10 ಸ್ಪರ್ಧಿ ವರ್ತೂರ್‌ ಸಂತೋಷ್‌ ಕುಮಾರ್‌ ಎಸ್‌. ಪಾಲ್ಗೊಳ್ಳುವರು. ಸೆಂಟ್‌ ಆನ್ಸ್‌ ಮಹಿಳಾ ಪದವಿ ಕಾಲೇಜಿನ ಕಾರ್ಯದರ್ಶಿ ರೆ.ಸಿ. ಡಾ. ಮಾರ್ಗರೇಟ್‌ ಫಾತೀಮ ಮೇರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯೆ ಪ್ರೊ, ನಿಶಾ ಜೋಸೆಫ್‌, ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಪ್ರಮೀಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಉತ್ತರ ಕನ್ನಡ

Lok Sabha Election 2024: ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಬಿಜೆಪಿಗೆ ಮತ ನೀಡಿ: ಕಾಗೇರಿ ಮನವಿ

Lok Sabha Election 2024: ಹೊನ್ನಾವರ ತಾಲೂಕಿನ ವಿವಿಧ ಕಡೆಗಳಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಚುನಾವಣಾ ಪ್ರಚಾರ ನಡೆಸಿದರು.

VISTARANEWS.COM


on

Uttara Kannada Lok Sabha Constituency BJP candidate Vishweshwara Hegade Kageri election campaign in Honnavara
Koo

ಹೊನ್ನಾವರ: ರಾಮ ಮಂದಿರ (Ram Mandir) ನಿರ್ಮಾಣ ಮಾಡಿ ನೂರಾರು ವರ್ಷದ ಕನಸನ್ನು ನನಸು ಮಾಡಿದ ಮೋದಿಜಿಯವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಲು ಪ್ರಭು ಶ್ರೀರಾಮನನ್ನು ನೆನೆದು ಕಮಲದ ಹೂವಿಗೆ ಮತ ಹಾಕಬೇಕು ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ (Lok Sabha Election 2024) ಮಾಡಿದರು.

ಹೊನ್ನಾವರ ತಾಲೂಕಿನ ಮಂಕಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಯೋಧ್ಯೆಯ ರಾಮ ಮಂದಿರವನ್ನು ನಿರ್ಮಿಸಿ 500 ವರ್ಷಗಳ ಕನಸು ನನಸಾಗಿದೆ. ಮೋದಿಜಿ, ಯೋಗಿಜಿಯಿಂದ ಇದು ಸಾಧ್ಯವಾಗಿದೆ. ಅಂತಹ ಪ್ರಧಾನಿಯನ್ನು ಮತ್ತೊಮ್ಮೆ ಗೆಲ್ಲಿಸಬೇಕು. ಅದಕ್ಕೆ ಪೂರಕವೆಂಬಂತೆ ಇಲ್ಲಿಯೂ ಅತಿ ಹೆಚ್ಚಿನ ಮತಗಳಿಂದ ನನ್ನನ್ನು ಗೆಲ್ಲಿಸುತ್ತೀರಿ ಎಂಬ ನಂಬಿಕೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯ ಬೂತ್ ಮಟ್ಟದ, ಶಕ್ತಿ ಕೇಂದ್ರ, ಮಹಾ ಶಕ್ತಿ ಎಲ್ಲಾ ಪ್ರಮುಖರು ರಾಮನಿಗಾಗಿ, ಮೋದಿಗಾಗಿ ಪೂರ್ಣ ಶ್ರಮ ವಹಿಸಿ, ಕಮಲದ ಹೂವಿನ ಗೆಲುವಿಗಾಗಿ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: Gold Rate Today: ಬಂಗಾರ ಕೊಳ್ಳುವವರಿಗೆ ತುಸು ರಿಲೀಫ್‌, ಬಹುದಿನಗಳ ನಂತರ ಬೆಲೆ ಇಳಿಕೆ; ಇಂದಿನ ದರ ಹೀಗಿದೆ

ಈ ಹಿಂದೆ ಮನಮೋಹನ್ ಸಿಂಗ್ ಇದ್ದಾಗ ಕೇವಲ ಹಗರಣಗಳೇ ನಡೆದಿದ್ದವು. ಆದರೆ ಈಗ 10 ವರ್ಷದ ಆಡಳಿತ ಅವಧಿಯಲ್ಲಿ ಯಾವ ಹಗರಣವೂ ಇಲ್ಲ. ಪಾರದರ್ಶಕ ಆಡಳಿತ ನೀಡಿ ಭ್ರಷ್ಟಾಚಾರ ಮುಕ್ತ ಮಾಡಲಾಗಿದೆ. ಮೋದಿಯವರ ಆಡಳಿತದಲ್ಲಿ ಅಭಿವೃದ್ಧಿಗೆ ಮಾತ್ರ ಪ್ರಾಶಸ್ತ್ಯ ನೀಡಲಾಗುತ್ತಿದೆ ಎಂದ ಕಾಗೇರಿ, ರಾಜ್ಯದ ಗ್ಯಾರಂಟಿ ಯೋಜನೆ ಸಮರ್ಪಕ ವಿತರಣೆ ಆಗುತ್ತಿಲ್ಲ. ಮೋದಿಯವರ ಗ್ಯಾರಂಟಿ ಎದುರು ರಾಜ್ಯದ ಗ್ಯಾರಂಟಿ ಠುಸ್ ಆಗಲಿದೆ ಎಂದರು.

ಜೆಡಿಎಸ್, ಬಿಜೆಪಿ ಮೈತ್ರಿ ಶಕ್ತಿಯಿಂದ ರಾಜ್ಯದಲ್ಲಿ 28 ಕ್ಕೆ 28 ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ಇದೇ ವೇಳೆ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಹೊನ್ನಾವರದ ಪ್ರಚಾರದ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪೇ ಗೌಡ ಅವರನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಹಕಾರ ಕೇಳಿದರು. ಮೈತ್ರಿ ಮಾತುಕತೆಯಂತೆ ಬಿಜೆಪಿಯ ಗೆಲುವಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪೇ ಗೌಡ ತಿಳಿಸಿದರು.

ಇದನ್ನೂ ಓದಿ: Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

ಚುನಾವಣಾ ಪ್ರಚಾರದ ಭರಾಟೆಯ ನಡುವೆಯೇ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಡಗುಂಜಿ ಮಹಾಗಣಪತಿ ದೇವಸ್ಥಾನ, ಗುಣವಂತೆಯ ಶಂಭುಲಿಂಗೇಶ್ವರ ದೇವಸ್ಥಾನ, ವೀರ ವೆಂಕಟರಮಣ ಜಾತ್ರಾ ಮಹೋತ್ಸವಕ್ಕೆ ಭೇಟಿ ನೀಡಿ ದೇವರ ಆಶೀರ್ವಾದವನ್ನು ಪಡೆದುಕೊಂಡರು. ರಾಮ ನವಮಿಯ ನಿಮಿತ್ತ ರಾಮತೀರ್ಥಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದರು.

Continue Reading

ಮೈಸೂರು

Lok Sabha Election 2024: ಡಿ.ಕೆ. ಸುರೇಶ್ ಗೆಲುವಿಗಾಗಿ ಚಾಮುಂಡಿ ಬೆಟ್ಟ ಹತ್ತಿ ಪ್ರಾರ್ಥಿಸಿದ ಅಭಿಮಾನಿಗಳು

Lok Sabha Election 2024: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಗೆಲುವು ಸಾಧಿಸಲಿ ಎಂದು ಅವರ ಅಭಿಮಾನಿಗಳು ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ಮೆಟ್ಟಿಲು ಹತ್ತಿ ಪ್ರಾರ್ಥನೆ ಸಲ್ಲಿಸಿದರು.

VISTARANEWS.COM


on

Bangalore Rural Lok Sabha Constituency Congress candidate DK Suresh fans prayed in sri Chamundeshwari hill
Koo

ಮೈಸೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ (Lok Sabha Election 2024) ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಗೆಲುವು ಸಾಧಿಸಲಿ ಎಂದು ಅವರ ಅಭಿಮಾನಿಗಳು ಚಾಮುಂಡೇಶ್ವರಿ ಬೆಟ್ಟದ ಮೆಟ್ಟಿಲು ಹತ್ತಿ ಪ್ರಾರ್ಥನೆ ಸಲ್ಲಿಸಿದರು.

ಡಿ.ಕೆ. ಬ್ರದರ್ಸ್ ಅಭಿಮಾನಿ ಬಳಗದ ಸುಮಾರು 300 ಸದಸ್ಯರು ಗುರುವಾರ ಬೆಳಗ್ಗೆ ಮೈಸೂರಿನಲ್ಲಿ ಶ್ರೀ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಆ ಮೂಲಕ ಡಿ.ಕೆ ಸುರೇಶ್ ಅವರು ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸಬೇಕು, ರಾಜ್ಯದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಬೇಕು ಎಂದು ಪ್ರಾರ್ಥಿಸಿದರು.

ಇದನ್ನೂ ಓದಿ: LSG vs CSK: ಗೆಲುವಿನ ಹಳಿ ಏರೀತೇ ಲಕ್ನೋ?; ಚೆನ್ನೈ ಎದುರಾಳಿ

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಾದಯಾತ್ರಿಗಳು. ಡಿ.ಕೆ. ಸುರೇಶ್ ಅವರು ಮತ್ತೊಮ್ಮೆ ಸಂಸದರಾಗಿ ಆಯ್ಕೆಯಾಗಬೇಕು ಎಂದು ಸಣ್ಣ ಮಕ್ಕಳಿಂದ ದೊಡ್ಡವರವರೆಗೂ ಎಲ್ಲರೂ ಹರಕೆ ಹೊತ್ತು ಬಂದಿದ್ದೇವೆ. ನಮ್ಮಂತಹ ಗದ್ದೆ, ಹೊಲ ಇಲ್ಲದವರಿಗೆ ಪ್ರತಿ ತಿಂಗಳು ಕಾಂಗ್ರೆಸ್ ಸರ್ಕಾರ 2 ಸಾವಿರ ರೂ. ನೀಡುತ್ತಿದೆ. ಜತೆಗೆ ಅನ್ನಭಾಗ್ಯ ಯೋಜನೆ ಮೂಲಕ ಅಕ್ಕಿ ನೀಡುತ್ತಿದ್ದಾರೆ. ಇದರಿಂದ ನಮ್ಮ ಸಂಸಾರವನ್ನು ನಡೆಸಲು ಸಹಾಯವಾಗುತ್ತಿದೆ. ಸರ್ಕಾರದ ಈ ಯೋಜನೆಗಳು ನಮಗೆ ಅನುಕೂಲವಾಗಿವೆ. ಈ ಯೋಜನೆಗಳಿಂದ ರಾಜ್ಯಕ್ಕೆ ಯಾವುದೇ ತೊಂದರೆ ಇಲ್ಲ. ಬಿಜೆಪಿ ನಮ್ಮಂತಹ ಬಡವರಿಗಾಗಿ ಏನು ಮಾಡಿದೆ?

ಇದನ್ನೂ ಓದಿ: Navya Naveli Nanda: ಆರಾಧ್ಯ ಬಚ್ಚನ್‌ ನನಗಿಂತ ಹೆಚ್ಚು ಬುದ್ಧಿವಂತೆ ಎಂದ ಶ್ವೇತಾ ಬಚ್ಚನ್ ಮಗಳು!

ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಶಕ್ತಿ ತುಂಬುವಂತಹ ಕಾರ್ಯಕ್ರಮವನ್ನು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಉಚಿತ ಬಸ್ ವ್ಯವಸ್ಥೆ, 2 ಸಾವಿರ ಹಣ, ಉಚಿತ ವಿದ್ಯುತ್ ಸೌಕರ್ಯ, ಅನ್ನಭಾಗ್ಯ ಯೋಜನೆ ಎಲ್ಲವನ್ನು ಜಾರಿ ಮಾಡಿದ್ದಾರೆ. ಆ ಮೂಲಕ ನುಡಿದಂತೆ ನಡೆದಿದೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಕು ಎಂದು ನಾವು ಮನವಿ ಮಾಡುತ್ತೇವೆ ಎಂದು ತಿಳಿಸಿದರು.

Continue Reading
Advertisement
Kodagu Gowda Premier League Cricket Tournament inauguration
ಕ್ರೀಡೆ12 mins ago

Kodagu News: ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

Bhasha Utsav 2024 programme on 24th April
ಬೆಂಗಳೂರು15 mins ago

Bengaluru News: ಬೆಂಗಳೂರಿನಲ್ಲಿ ಏ. 24ರಂದು ಭಾಷಾ ಉತ್ಸವ

Uttara Kannada Lok Sabha Constituency BJP candidate Vishweshwara Hegade Kageri election campaign in Honnavara
ಉತ್ತರ ಕನ್ನಡ18 mins ago

Lok Sabha Election 2024: ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಬಿಜೆಪಿಗೆ ಮತ ನೀಡಿ: ಕಾಗೇರಿ ಮನವಿ

Bangalore Rural Lok Sabha Constituency Congress candidate DK Suresh fans prayed in sri Chamundeshwari hill
ಮೈಸೂರು22 mins ago

Lok Sabha Election 2024: ಡಿ.ಕೆ. ಸುರೇಶ್ ಗೆಲುವಿಗಾಗಿ ಚಾಮುಂಡಿ ಬೆಟ್ಟ ಹತ್ತಿ ಪ್ರಾರ್ಥಿಸಿದ ಅಭಿಮಾನಿಗಳು

Lok Sabha Elections-2024
Lok Sabha Election 202425 mins ago

Lok sabha election: 2019ರಲ್ಲಿ 77 ಕ್ಷೇತ್ರಗಳಲ್ಲಿ ಪ್ರಯಾಸದ ಗೆಲುವು ಕಂಡಿದ್ದ ಬಿಜೆಪಿ; ಎಲ್ಲೆಲ್ಲಿ ಎಂಬ ಮಾಹಿತಿ ಇಲ್ಲಿದೆ

Sweet potatoes have the ability to control diabetes and prevent cancer
ಆರೋಗ್ಯ26 mins ago

Sweet Potatoes: ಗೆಣಸಿಗೆ ಮಧುಮೇಹ ನಿಯಂತ್ರಿಸುವ, ಕ್ಯಾನ್ಸರ್ ತಡೆಯುವ ಸಾಮರ್ಥ್ಯವಿದೆ!

Fact Check
Fact Check38 mins ago

Fact Check: ಮತದಾನ ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ? ವಾಸ್ತವ ಹೀಗಿದೆ

Paris Olympics 2024
ಕ್ರೀಡೆ49 mins ago

Paris Olympics 2024: ಒಲಿಂಪಿಕ್ಸ್​ಗಾಗಿ ಸರ್ಕಾರಿ ಕಟ್ಟಡದಿಂದ ನೂರಾರು ವಲಸಿಗರ ತೆರವು

Fraud Case
ಬೆಂಗಳೂರು1 hour ago

Fraud Case : ಚಿಟ್‌ ಫಂಡ್‌ ಹೆಸರಿನಲ್ಲಿ ದಂಪತಿ ಕೋಟ್ಯಂತರ ರೂ. ವಂಚನೆ; ಬೀದಿಗೆ ಬಿದ್ದರು ಚೀಟಿದಾರರು

Food poisoning 45 people fall ill after consuming drink buttermilk
ತುಮಕೂರು1 hour ago

Food poisoning: ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಮಂದಿ ಅಸ್ವಸ್ಥ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌