ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ 15ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಕೂಡ ರಾಜ್ಯದ ಹಲವೆಡೆ ಮಾಂಡೌಸ್ ಸೈಕ್ಲೋನ್ ತನ್ನ ಪ್ರಭಾವ ತೋರಿಸಲಿದೆ. ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಬಹುದು. ಗರಿಷ್ಠ ಉಷ್ಣಾಂಶ 24 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಷಿಯಸ್ ಇರಬಹುದು. ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚಳಿ ಜತೆಗೆ ಅಲ್ಲಲ್ಲಿ ತುಂತು ಮಳೆಯಾಗಬಹುದು.
ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ನಾಳೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ | Cyclone Mandous | ಶೀತಗಾಳಿ, ಮಳೆಯಿಂದಾಗಿ ಮಕ್ಕಳು, ವೃದ್ಧರಿಗೆ ತೊಂದರೆ; ಎಚ್ಚರ ವಹಿಸಲು ಆರೋಗ್ಯ ಸಚಿವರ ಸಲಹೆ