Site icon Vistara News

Cyclone Mandous | ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

cyclone mandous

ಬೆಂಗಳೂರು: ಮ್ಯಾಂಡಸ್‌ ಚಂಡಮಾರುತದ ಎಫೆಕ್ಟ್‌ನಿಂದಾಗಿ ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಉಂಟಾಗಿರುವ ತೀವ್ರ ತರದ ಮ್ಯಾಂಡಸ್‌ ಚಂಡಮಾರುತದಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ, ಚಳಿಯ ಜೊತೆಗೆ ಮಳೆ ಸುರಿಯಲಿದೆ. ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಇನ್ನೂ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಚಿತ್ರದುರ್ಗ, ರಾಮನಗರ, ಮಂಡ್ಯ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ | Cyclone Mandous | ಬೆಂಗಳೂರು, ಗಡಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆ, ಗಾಳಿ, ಚಳಿ

ಉಳಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು ಜೆಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮ್ಯಾಂಡಸ್‌ ಚಂಡಮಾರುತದ ಪರಿಣಾಮದಿಂದ ಸಿಲಿಕಾನ್ ಸಿಟಿಯ ತಾಪಮಾನ ಇಳಿಕೆಯಾಗಿದ್ದು, ಮೋಡ ಕವಿದ ವಾತಾವರಣ ಹಾಗೂ ಕೆಲ ಭಾಗಗಳಲ್ಲಿ ಮಳೆ ಸುರಿಯುತ್ತಿದೆ. ರಾತ್ರಿ ತಾಪಮಾನ 18 ಡಿಗ್ರಿ ಸೆಂಟಿಗ್ರೇಡ್‌ವರೆಗೂ ಇಳಿಕೆಯಾಗಿದೆ. ಮುಂಜಾನೆ ಮಳೆ ಸುರಿದು ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.

ಇದನ್ನೂ ಓದಿ | Cyclone Mandous | ಮಾಂಡೌಸ್‌ ಅಬ್ಬರ; ಡಿ.12ರಂದು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ

Exit mobile version