Site icon Vistara News

Cyclone Mandous | ಕರಾವಳಿಯಲ್ಲಿ ಮಾಂಡೌಸ್ ಅಬ್ಬರ: ಲಂಗರು ಹಾಕಿದ ಬೋಟುಗಳು

Karwar Port Cyclone Mandous deep sea

ಕಾರವಾರ: ಕರಾವಳಿಯಲ್ಲಿ ಮಾಂಡೌಸ್ ಚಂಡಮಾರುತದ (Cyclone Mandous) ಅಬ್ಬರದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆ ಸ್ಥಗಿತಗೊಂಡಿದೆ. ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟುಗಳು ಸುರಕ್ಷಿತ ಪ್ರದೇಶಗಳಲ್ಲಿ ಆಶ್ರಯ ಪಡೆದುಕೊಂಡಿವೆ.

ರಾಜ್ಯದ ಸರ್ವಋತು ಬಂದರು ಖ್ಯಾತಿಯ ಕಾರವಾರದ ಬಂದರು ಪ್ರದೇಶದಲ್ಲಿ ತಮಿಳುನಾಡು ಮೂಲದ 20ಕ್ಕೂ ಅಧಿಕ ಬೋಟುಗಳು ಲಂಗರು ಹಾಕಿ ನಿಂತಿವೆ. ಆಳಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ವೇಗವಾಗಿ ಗಾಳಿ ಬೀಸುತ್ತಿದ್ದು ಮೀನುಗಾರಿಕೆ ನಡೆಸಲು ಅಪಾಯಕಾರಿಯಾಗಿದೆ. ಈ ನಿಟ್ಟಿನಲ್ಲಿ ಮೀನುಗಾರಿಕಾ ಇಲಾಖೆಯು ಮುನ್ನೆಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಜಿಲ್ಲೆ, ಹೊರ ಜಿಲ್ಲೆ ಸೇರಿದಂತೆ ಹೊರ ರಾಜ್ಯದ ಆಳ ಸಮುದ್ರ ಮೀನುಗಾರಿಕಾ ಬೋಟುಗಳು ಸಹ ಸೋಮವಾರ (ಡಿ.೧೨) ರಾತ್ರಿಯಿಂದಲೇ ದಡದತ್ತ ವಾಪಸಾಗುತ್ತಿವೆ.

ಜಿಲ್ಲೆಯ ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದ್ದು, ಇನ್ನೆರಡು ದಿನ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದ್ದು, ತೀರ ಪ್ರದೇಶದ ನಿವಾಸಿಗಳಿಗೂ ಸಹ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ | Cyclone Mandous | ಡಿ.15ರವರೆಗೂ ಮಳೆ, ಒಳನಾಡು- ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Exit mobile version