Site icon Vistara News

Cyclone Mocha:: ಬೆಂಗಳೂರಿನಲ್ಲಿ ಇನ್ನೊಂದು ವಾರ ಮಳೆ ಸಾಧ್ಯತೆ

Rain

ಬೆಂಗಳೂರು: ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಪರಿಣಾಮ ನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ (weather alert) ನೀಡಿದೆ.

ಮೋಚಾ ಚಂಡಮಾರುತದ ಪರಿಣಾಮ ತಮಿಳುನಾಡು ಭಾಗದಲ್ಲಿ ಆಗಲಿದೆ. ವಾಯುಭಾರ ಕುಸಿತವಾಗಿ ಚಂಡಮಾರುತವಾಗಿ ಮಾರ್ಪಾಡಾಗಲಿದೆ. ರಾಜಧಾನಿ ಹಾಗೂ ಸುತ್ತಮುತ್ತಲಿನ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ತುಂತುರು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದಲ್ಲಿ‌ ಜೋರು ಮಳೆಯಾಗಬಹುದು. ಪಶ್ಚಿಮಘಟ್ಟದ ಜಿಲ್ಲೆಗಳಿಗೆ ಮೇ 8, 9ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಲ್ಲಿ ಇನ್ನೊಂದು ವಾರ ಸಾಧಾರಣ, ಕೆಲವೊಮ್ಮೆ ಕೆಲ ಪ್ರದೇಶದಲ್ಲಿ ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ.

ಮೋಡ ಕವಿದ ವಾತಾವರಣ ಹಾಗೂ ಮಳೆಯ ಪರಿಣಾಮದಿಂದಾಗಿ ಇಂದು ಪ್ರಧಾನ ಮಂತ್ರಿಯವರು ಭಾಗವಹಿಸುತ್ತಿರುವ ರೋಡ್‌ ಶೋ ಕಾರ್ಯಕ್ರಮದಲ್ಲೂ ತುಸು ಬದಲಾವಣೆಯಾಗುವ ಸಾಧ್ಯತೆ ಇದೆ. ಹೆಲಿಕಾಪ್ಟರ್‌ಗೆ ಬದಲಾಗಿ ಅವರು ರಸ್ತೆಯ ಮೂಲಕ ಆಗಮಿಸಲಿದ್ದಾರೆ ಎಂದು ಊಹಿಸಲಾಗಿದೆ.

ಇದನ್ನೂ ಓದಿ: Cyclone Mocha: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ, ಇನ್ನೂ 5 ದಿನ ಮಳೆ

Exit mobile version