ಮಂಗಳೂರು: ಗ್ಯಾಸ್ ಸಿಲಿಂಡರ್ ಒಂದು ಸ್ಫೋಟಗೊಂಡು ಮನೆಯೊಂದು ಸಂಪೂರ್ಣ ಸುಟ್ಟುಹೋದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ.
ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರ ಮನೆ ಬೆಂಕಿಗಾಹುತಿಯಾಗಿದ್ದು, ಅವರು ಮನೆಯಿಂದ ಹೊರಗೋಡಿ ಬಂದು ಬಚಾವಾಗಿದ್ದಾರೆ. ದೀಪಾ ಅವರು ಮನೆಯಲ್ಲಿ ಒಬ್ಬರೇ ಇದ್ದಾಗ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ. ಬೆಂಕಿ ಕಾಣಿಸುತ್ತಿದ್ದಂತೆ ದೀಪಾ ಅವರು ಹೊರಗಡೆ ಓಡಿ ಹೋಗಿ ಅಪಾಯದಿಂದ ಪಾರಾಗಿದ್ದಾರೆ.
ಗ್ಯಾಸ್ ಸಿಲಿಂಡರ್ ದೊಡ್ಡ ಸದ್ದಿನೊಂದಿಗೆ ಸ್ಫೋಟಗೊಂಡಿದ್ದು, ಇದರ ಶಬ್ದದಿಂದ ಜನರು ಬೆಚ್ಚಿ ಬಿದ್ದು ಓಡಿಬಂದಿದ್ದಾರೆ. ಸ್ಫೋಟದಿಂದ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಮನೆ ಸಂಪೂರ್ಣ ಸುಟ್ಟು ಹೋಗಿದೆ. ಕೆಲವು ಗೋಡೆಗಳು ಬಿರುಕುಬಿಟ್ಟಿವೆ. ಪುತ್ತೂರು ಅಗ್ನಿಶಾಮಕ ದಳದ ವಾಹನ ಆಗಮಿಸಿ ಅಗ್ನಿಶಮನ ಕಾರ್ಯ ನಡೆಸುತ್ತಿದೆ.
ಇದನ್ನೂ ಓದಿ | Cylinder Blast | ಎರಡು ಗ್ಯಾಸ್ ಸಿಲಿಂಡರ್ ಸ್ಫೋಟ: ಮನೆ ಜಖಂ, ಮೂವರು ಕೂದಲೆಳೆ ಅಂತರದಲ್ಲಿ ಪಾರು