Site icon Vistara News

Cylinder Blast | ಅಯ್ಯಪ್ಪ ಭಕ್ತರಿಗೆ ಉಪಾಹಾರ ಸಿದ್ಧಪಡಿಸುವ ವೇಳೆ ಸಿಲಿಂಡರ್ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Cylinder Blast

ಹುಬ್ಬಳ್ಳಿ: ಇಲ್ಲಿನ ವೀರಾಪೂರ ಓಣಿಯ ಕರಿಯಮ್ಮ ದೇವಸ್ಥಾನದಲ್ಲಿ ಸಿಲಿಂಡರ್‌ ಸ್ಫೋಟಗೊಂಡು (Cylinder Blast) ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಯ್ಯಪ್ಪ ಮಾಲಾಧಾರಿಗಳಿಗೆ ಉಪಾಹಾರ ಸಿದ್ಧಪಡಿಸಲು ಅಡುಗೆ ಕೋಣೆಯಲ್ಲಿ ಸಿಲಿಂಡರ್‌ ಇರಿಸಲಾಗಿತ್ತು. ಈ ವೇಳೆ ಸಿಲಿಂಡರ್‌ ಸ್ಫೋಟಗೊಂಡಿದ್ದು, ಅಡುಗೆ ಕೋಣೆಯಲ್ಲಿದ್ದ ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಿಲಿಂಡರ್‌ ಸ್ಫೋಟಕ್ಕೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Winter care | ಚಳಿಗಾಲದಲ್ಲಿ ನೈಸರ್ಗಿಕವಾಗಿ ದೇಹವನ್ನು ಬೆಚ್ಚಗಿಡುವ ಆಹಾರಗಳಿವು!

Exit mobile version