ಬೆಂಗಳೂರು: 2023-24ನೇ ಸಾಲಿನ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (Film Festival) ಬ್ರ್ಯಾಂಡ್ ಅಂಬಾಸಿಡರ್ ಆಗಿ ನಟ ಡಾಲಿ ಧನಂಜಯ್ (Daali Dhananjaya) ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು (BIFFes) ಫೆಬ್ರವರಿ 29ರಿಂದ ಮಾರ್ಚ್ 7ರವರೆಗೆ ನಡೆಯುವ ನಡೆಯಲಿದೆ.
ಈ ಬಗ್ಗೆ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಜೆಸಿಂತ ಆದೇಶ ಹೊರಡಿಸಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಆಯೋಜಿಸುತ್ತಿದ್ದು, ಅದರಂತೆ 2023-24ನೇ ಸಾಲಿನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಫೆಬ್ರವರಿ 29 ರಿಂದ ಮಾರ್ಚ್ 07ರವರೆಗೆ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ | Kannada New Movie: ನಶಾ ಜಗತ್ತಿನ ಝಲಕ್‌ಗಳೊಂದಿಗೆ ಝಗಮಗಿಸಿತು `ಕೈಲಾಸ’ ಟ್ರೈಲರ್!
ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭ ಫೆ. 29ರಂದು ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮುಂಭಾಗ ಹಾಗೂ ಸಮಾರೋಪ ಸಮಾರಂಭವನ್ನು ಮಾರ್ಚ್ 7ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಲಾಗಿದೆ. ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರಕ್ಕಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ಚಿತ್ರೋತ್ಸವದ ರಾಯಭಾರಿಯನ್ನಾಗಿ (Brand Ambassador) ನೇಮಿಸಲಾಗಿದೆ ತಿಳಿಸಿದ್ದಾರೆ.
ಡಾಲಿ ಧನಂಜಯ್ ನಿರ್ಮಾಣದ ಸಿನಿಮಾಗೆ ʻಹಿಟ್ಲರ್ ಕಲ್ಯಾಣʼದ ಬೆಡಗಿ ನಾಯಕಿ!
ಬೆಂಗಳೂರು: ʻವಿದ್ಯಾಪತಿʼಯಾಗಿರುವ ನಾಗಭೂಷಣ್‌ಗೆ ಜೋಡಿ ಸಿಕ್ಕಾಗಿದೆ. ʻಉಪಾಧ್ಯಕ್ಷʼ ಸುಂದರಿ ಈಗ ಡಾಲಿ ಬಳಗ ಸೇರ್ಪಡೆಯಾಗಿದ್ದಾರೆ. ನಟರಾಕ್ಷಸ ಡಾಲಿ ಧನಂಜಯ್ ಒಡೆತನದ ಡಾಲಿ ಪಿಕ್ಚರ್ಸ್ ʻಟಗರು ಪಲ್ಯʼ ಸಕ್ಸೆಸ್ ಬಳಿಕ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿರುವುದು ಗೊತ್ತೇ ಇದೆ. ಮತ್ತೊಮ್ಮೆ ಧನು ಹಾಗೂ ನಾಗಭೂಷಣ್ ಕೈ ಜೋಡಿಸಿದ್ದು, ಈ ಚಿತ್ರಕ್ಕೆ ʻವಿದ್ಯಾಪತಿʼ ಎಂಬ ಟೈಟಲ್ ಇಡಲಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಫಸ್ಟ್ ಲುಕ್ ರಿಲೀಸ್ ಮಾಡಿದ್ದ ಚಿತ್ರತಂಡ ಇಂದು ನಾಯಕಿಯನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ.
ಹೀರೊ ಆಗಿ ಅದೃಷ್ಟ ಪರೀಕ್ಷೆಗಿಳಿದ ಚಿಕ್ಕಣ್ಣನಿಗೆ ʻಉಪಾಧ್ಯಕ್ಷʼ ಸಿನಿಮಾದಲ್ಲಿ ನಾಯಕಿ ಮಿಂಚಿದ್ದ ಮಲೈಕಾ ವಸೂಪಾಲ್ ಈಗ ವಿದ್ಯಾಪತಿಗೆ ಜೋಡಿಯಾಗಿದ್ದಾರೆ. ʻಹಿಟ್ಲರ್ ಕಲ್ಯಾಣʼ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಮಲೈಕಾ ʻಉಪಾಧ್ಯಕ್ಷʼ ಚಿತ್ರದ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟಿದ್ದರು. ಮೊದಲ ಸಿನಿಮಾವೇ ಅವರಿಗೆ ದೊಡ್ಡ ಸಕ್ಸೆಸ್ ತಂದುಕೊಟ್ಟಿದೆ. ಉಪಾಧ್ಯಕ್ಷ ಸಿನಿಮಾದಲ್ಲಿ ಇವರ ನಟನೆ ನೋಡಿ ಮೆಚ್ಚಿಕೊಂಡಿರುವ ವಿದ್ಯಾಪತಿ ಟೀಂ ತಮ್ಮ ತಂಡಕ್ಕೆ ಅವರನ್ನು ಸ್ವಾಗತಿಸಿದೆ.
ವಿದ್ಯಾಪತಿ ಸಿನಿಮಾದಲ್ಲಿ ಮಲೈಕಾ ʻವಿದ್ಯಾʼ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದು, ಸಿಂಪಲ್ ಆಗಿರುವ ಹೋಮ್ಲಿ ಹುಡುಗಿಯಾಗಿ ಕಾಣಿಸಿಕೊಳ್ಳಲಿದ್ದಾರಂತೆ. ಈ ಹಿಂದೆ ʻಇಕ್ಕಟ್ʼ ಸಿನಿಮಾ ಮೂಲಕ ಭರವಸೆ ಹುಟ್ಟಿಸಿದ್ದ ಇಶಾಂ ಮತ್ತು ಹಸೀಂ ಖಾನ್ ವಿದ್ಯಾಪತಿ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ.
ಇದನ್ನೂ ಓದಿ: Vidyapati Movie: ನಾಗಭೂಷಣ್ ಈಗ ‘ವಿದ್ಯಾಪತಿ’; ಡಾಲಿ ಪಿಕ್ಚರ್ಸ್‌ನ 4ನೇ ಸಿನಿಮಾ ಅನೌನ್ಸ್
ಆಕ್ಷನ್ ಕಾಮಿಡಿ ಕಥಾಹಂದರ ಹೊಂದಿರುವ ವಿದ್ಯಾಪತಿ ಚಿತ್ರದಲ್ಲಿ ನಾಗಭೂಷಣ್ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆ್ಯಕ್ಷನ್ ವಿದ್ಯಾಪತಿ ಸಿನಿಮಾಕ್ಕಿದೆ. ಮಾರ್ಚ್ ತಿಂಗಳಿನಿಂದ ವಿದ್ಯಾಪತಿ ನಾಯಕಿ ಮಲೈಕಾ ವಸೂಪಾಲ್ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ.