ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ (Moral Policing) ಪ್ರಕರಣ ವರದಿಯಾಗಿದೆ. ಹಿಂದೂ ಯುವತಿಯರ ಜತೆಗೆ ಬೀಚ್‌ಗೆ ತೆರಳಿದ ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಮೇಲೆ ದುಷ್ಕರ್ಮಿಗಳ ತಂಡದಿಂದ ಹಲ್ಲೆ (crime news) ನಡೆದಿದೆ.
ಮಂಗಳೂರಿನ ಪ್ರತಿಷ್ಠಿತ ಎಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್‌ನ ವಿದ್ಯಾರ್ಥಿಗಳು ಪಣಂಬೂರು ಬೀಚ್‌ಗೆ ವಿಹಾರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ತಂಡವೊಂದು ಇವರನ್ನು ಹಿಂಬಾಲಿಸಿ ಬಂದಿದ್ದು, ಹಲ್ಲೆ (assault case) ನಡೆಸಿದೆ.
ಬೀಚ್‌ಗೆ 6 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿಹಾರಕ್ಕೆ ತೆರಳಿದ್ದರು. ತಂಡದಲ್ಲಿ 4 ಮಂದಿ ಹಿಂದೂ ವಿದ್ಯಾರ್ಥಿನಿಯರಿದ್ದು, ಇತರ ಇಬ್ಬರು ಮುಸ್ಲಿಂ ಯುವಕರಿದ್ದರು. ಈ ವೇಳೆ ತಂಡವೊಂದು ಇವರನ್ನು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ತಡೆದು ನಿಲ್ಲಿಸಿ ಹಲ್ಲೆ ನಡೆಸಿದೆ. ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಹಲ್ಲೆಗೊಳಗಾಗಿದ್ದಾರೆ. ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ಘಟನೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಭಜರಂಗ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್
ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ನೀಡಲಾಗಿದೆ. ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟೀಸ್ ನೀಡಲಾಗಿದ್ದು, ಇಂದು ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂವರು ಹಿಂದೂ ಕಾರ್ಯಕರ್ತರಿಗೆ ಗಡೀಪಾರಿಗೆ ಸಿದ್ಧತೆ ನಡೆಸಲಾಗಿದ್ದು, ಅಧಿಕೃತವಾಗಿ ಒಂದು ವರ್ಷ ಕಾಲ ಗಡೀಪಾರು ಆದೇಶ ಸಾಧ್ಯತೆ ಇದೆ. ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್‌ಗಿರಿ ಕೇಸ್‌ಗಳಲ್ಲಿ ಈ ಮೂವರು ಭಾಗಿಯಾಗಿದ್ದರು. ಸುಲ್ತಾನ್ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ನಡೆಸಿದ್ದರು. ಹೀಗಾಗಿ ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್‌ಗಳಿಂದ ಗಡೀಪಾರಿಗೆ ವರದಿ ನೀಡಲಾಗಿದೆ.
ಇದನ್ನೂ ಓದಿ: Karnataka Budget 2023: ನೈತಿಕ ಪೊಲೀಸ್‌ಗಿರಿ ತಡೆಯಲು ಕಠಿಣ ಕ್ರಮ, ಪೊಲೀಸರಿಗೆ ಸುಸಜ್ಜಿತ ವಸತಿಗೆ ಆದ್ಯತೆ