Site icon Vistara News

ಮಂಗಳೂರು ಬಜ್ಪೆ ಏರ್‌ಪೋರ್ಟ್‌ಗೆ ಬಿಎಂಟಿಸಿ ಮಾದರಿ ಬಸ್‌ ಸೌಕರ್ಯ

ಬಿಎಂಟಿಸಿ

ಮಂಗಳೂರು: ಮಂಗಳೂರು ನಗರ ಹಾಗೂ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಡುವೆ ಸಾರಿಗೆ ಬಸ್‌ ಸೌಕರ್ಯ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಎಂಟಿಸಿ ಸಾರಿಗೆ ವ್ಯವಸ್ಥೆ ಕಲ್ಪಿಸಿದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಮಂಗಳೂರಿನಲ್ಲಿ ಬಸ್ ಸೌಕರ್ಯ‌ಕ್ಕೆ ಕ್ರಮ ಕೈಗೊಳ್ಳಲು ಸಾರಿಗೆ ಸಚಿವ ಶ್ರೀರಾಮುಲು ಸೂಚಿಸಿದ್ದಾರೆ.

ಕೋವಿಡ್‌ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳ ಕಾರ್ಯಾಚರಣೆ ಕಡಿಮೆ ಇರುವುದರಿಂದ, ಮಂಗಳೂರಿನಿಂದ ಅಲ್ಲಿನ ವಿಮಾನ ನಿಲ್ದಾಣಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಬಿಎಂಟಿಸಿಯಿಂದ ಮೂರು ಬಸ್‌ಗಳನ್ನು ಹಸ್ತಾಂತರಿಸಲು ಹಾಗೂ ಕೆಎಸ್‌ಆರ್‌ಟಿಸಿ ವತಿಯಿಂದ ಸೇವೆ ನಿರ್ವಹಿಸಲು ಕ್ರಮ ಕೈಗೊಳ್ಳಲು ಸಚಿವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಹೀಗಾಗಿ ಮುಂದಿನ ಮಂಡಳಿಗಳ ಸಭೆಯಲ್ಲಿ ಈ ಪ್ರಸ್ತಾವನೆ ಮಂಡಿಸಿ ಅನುಮತಿ ಪಡೆಯಲು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಎಸ್. ಪುಷ್ಪ ಪತ್ರ ಬರೆದಿದ್ದಾರೆ.

ಇದನ್ನೂ ಓದಿ | ವಿಸ್ತಾರ Fact Check | ಕಾರಿನ ಗಾಜು ಒರೆಸಿದ ಹುಡುಗ FASTagನಿಂದ ಹಣ ಲಪಟಾಯಿಸಿದನೇ?

Exit mobile version