Site icon Vistara News

ಸ್ಯಾನಿಟರಿ ಪ್ಯಾಡ್‌ನಲ್ಲಿ ಅಕ್ರಮ ಚಿನ್ನ! ಮಂಗಳೂರು ಏರ್‌ ಪೋರ್ಟ್‌ನಲ್ಲಿ₹ 1.3 ಕೋಟಿ ಮೌಲ್ಯದ ಬಂಗಾರ ಜಪ್ತಿ

ಮಂಗಳೂರು ವಿಮಾನ ನಿಲ್ದಾಣ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣಗಳಲ್ಲಿ ಬಂಧಿತರಿಂದ ₹ 1.3 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ ಮಾಡಿದ್ದಾರೆ. ಬಂಧಿತರನ್ನು ವಶಕ್ಕೆ ಪಡೆದುಕೊಂಡಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ದುಬೈನಿಂದ ಆಗಮಿಸಿದ ಮಹಿಳೆಯೊಬ್ಬಳು ಅಕ್ರಮವಾಗಿ ಚಿನ್ನವನ್ನು ಸಾಗಾಟ ಮಾಡುತ್ತಿದ್ದಳು. ಆಕೆಯ ಬಳಿಯಿಂದ ₹ 87 ಲಕ್ಷ ಮೌಲ್ಯದ ಚಿನ್ನ ಪತ್ತೆಯಾಗಿದೆ. ಇವಳು ಒಳ ಉಡುಪು ಹಾಗೂ ಸ್ಯಾನಿಟರಿ ಪ್ಯಾಡ್‌ನಲ್ಲಿ ಚಿನ್ನವನ್ನು ಅಡಗಿಸಿಟ್ಟಿದ್ದಳು.

ಈ ನಡುವೆ, ಕೇರಳ ಮೂಲದ ಪ್ರಯಾಣಿಕರು ಬೇರೆ ಬೇರೆ ವಿಮಾನದಲ್ಲಿ ಬಂದಿಳಿದಿದ್ದರು. ಅನುಮಾನ ಬಂದು ಅವರನ್ನು ಪರಿಶೀಲನೆಗೆ ಒಳಪಡಿಸಿದಾಗ ಯುವಕನೊಬ್ಬನಲ್ಲಿ 50 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆಯಾಗಿದೆ.

ಇದನ್ನೂ ಓದಿ: Nepal Plane Crash: ನೇಪಾಳ ವಿಮಾನ ಪತನಗೊಂಡ ಸ್ಥಳ ಪತ್ತೆ; 22 ಪ್ರಯಾಣಿಕರ ಸುಳಿವಿಲ್ಲ

Exit mobile version