ಮಂಗಳೂರು: ರಾಜ್ಯದ ವಿವಿಧೆಡೆ ಹಿಜಾಬ್ ವಿವಾದ ತಣ್ಣಗಾಗುತ್ತಿದ್ದರೂ ದಕ್ಷಿಣ ಕನ್ನಡ ಜಿಲ್ಲೆ ಕೆಲವೆಡೆ ಇನ್ನೂ ಅಲ್ಲಲ್ಲಿ ಕಾಣುತ್ತಲೇ ಇದೆ. ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಇನ್ನೂ ನಿಂತಿಲ್ಲ. ಕೋರ್ಟ್ ಆದೇಶ ಹಾಗೂ ಸರ್ಕಾರದ ಸತತ ಸೂಚನೆ ನಂತರವೂ ಪಾಲನೆ ಮಾಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿದೆ.
ಹಿಜಾಬ್ ವಿವಾದ ತಣ್ಣಗಾದರೂ ಪ್ರತಿ 6 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದರು. ಇದಕ್ಕೆ ಕಾಲೇಜಿನ ಇತರೆ ವಿದ್ಯಾರ್ಥಿಗಳು ಆಕ್ಷೇಪಿಸಿದ್ದರು. ಇದರಿಂದ ಕಾಲೇಜಿನಲ್ಲಿ ಸಂಘರ್ಷ ಸಾಧ್ಯತೆ ಇದೆ ಎಂದು ಕಾಲೇಜಿನ ಅಧ್ಯಾಪಕರೂ ತಿಳಿಸಿದ್ದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
Hijab Controversy | ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದದ ಕಿಡಿ
ಕಾಲೇಜಿಗೆ ಬಂದ 16 ವಿದ್ಯಾರ್ಥಿನಿಯರು
ವಿಶ್ವವಿದ್ಯಾಲಯದ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರಿಯುತ್ತಲೇ ಇದೆ. ಹಿಜಾಬ್ ಧರಿಸಲು ಅವಕಾಶ ಇಲ್ಲದಿದ್ದರೂ 16 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದರು.
ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸುವಂತಿಲ್ಲ ಎಂದು ಈಗಾಗಲೆ ನಿರ್ಬಂಧ ಹೇರಲಾಗಿದೆ. ನಿರ್ಬಂಧದ ಮಧ್ಯೆ ಮತ್ತೆ ಗುರುವಾರ ಕಾಲೇಜಿಗೆ ಹಿಜಾಬ್ ಧರಿಸಿ ಆಗಮಿಸಿದರು. ಒಳಪ್ರವೇಶಿಸಲು ಅನುಮತಿ ನೀಡುವಂತೆ ಕೇಳಿದರು. ಪ್ರಾಂಶುಪಾಲರು ಪ್ರವೇಶ ನಿರಾಕರಿಸಿದ ಹಿನ್ನೆಲೆ ಕಾಲೇಜು ಲೈಬ್ರರಿ ಬಳಿಯಲ್ಲೇ ವಿದ್ಯಾರ್ಥಿನಿಯರು ಬಹಳ ಹೊತ್ತು ಕುಳಿತಿದ್ದರು.