ಬೆಂಗಳೂರು: ತುಳು ಭಾಷೆಯನ್ನು (Tulu Language) ದೇಶದ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬ ಬೇಡಿಕೆ ಇರುವಾಗಲೆ, ಕರ್ನಾಟಕದ ಎರಡನೆ ಅಧಿಕೃತ ಭಾಷೆಯಾಗಿ ತುಳುವನ್ನು ಘೋಷಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. “ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ,ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ. ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ : Explainer: ಹಿಂದಿ ರಾಷ್ಟ್ರಭಾಷೆ ಹೌದೋ, ಅಲ್ಲವೋ?
ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕೆಂದು ಅನೇಕ ವರ್ಷಗಳಿಂದಲೂ ಬೀಡಿಕೆ ಕೇಳಿಬಂದಿದೆ. ಅನೇಕ ಪ್ರತಿಭಟನೆಗಳೂ ನಡೆದಿವೆ.