Love Case : ಮೂಡುಬಿದರೆಯಿಂದ ಮಿಸ್‌ ಆಗಿದ್ದ ವಿದ್ಯಾರ್ಥಿನಿ ಪ್ರೇಮಿ ಜತೆ ಮದುವೆಯಾಗಿ ಪತ್ತೆ! - Vistara News

ದಕ್ಷಿಣ ಕನ್ನಡ

Love Case : ಮೂಡುಬಿದರೆಯಿಂದ ಮಿಸ್‌ ಆಗಿದ್ದ ವಿದ್ಯಾರ್ಥಿನಿ ಪ್ರೇಮಿ ಜತೆ ಮದುವೆಯಾಗಿ ಪತ್ತೆ!

Love Case : ಅವಳು ಕೊಲ್ಲೂರಿನ ಹುಡುಗಿ, ಅವನು ಬೈಂದೂರಿನ ಹುಡುಗ. ಆಕೆ ಕಾಲೇಜಿಗೆಂದು ಹಾಸ್ಟೆಲ್‌ನಿಂದ ಹೋದವಳು ನಾಪತ್ತೆಯಾಗಿದ್ದಳು. ಈಗ ಅವರಿಬ್ಬರು ಕೇರಳದಲ್ಲಿ ಮದುವೆಯಾಗಿ ಪತ್ತೆಯಾಗಿದ್ದಾರೆ.

VISTARANEWS.COM


on

Love Case Adira
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೂಡಬಿದಿರೆ: ಕಾಲೇಜಿಗೆ ಹೋಗಿದ್ದ ವಿದ್ಯಾರ್ಥಿನಿಯೊಬ್ಬಳು (College Student) ಮನೆಗೆ ಮರಳದೆ ನಾಪತ್ತೆಯಾಗಿದ್ದಳು. ಈಗ ಆಕೆ ತನ್ನ ಪ್ರಿಯಕರನ ಜತೆ ಕೇರಳದಲ್ಲಿ ಪತ್ತೆಯಾಗಿದ್ದಾಳೆ (Found in Kerala). ಅವರಿಬ್ಬರೂ ಮದುವೆ ಮಾಡಿಕೊಂಡಿದ್ದಾರೆ (Love Case) ಎಂದು ತಿಳಿದುಬಂದಿದೆ. ಇದು ಕೊಲ್ಲೂರಿನ ಹುಡುಗಿ, ಬೈಂದೂರಿನ ಹುಡುಗನ ಪ್ರೇಮ ಕಥೆ. ಆಕೆ ನಾಪತ್ತೆಯಾಗಿದ್ದು ಮೂಡುಬಿದರೆಯಿಂದ (Moodbidre college) ಪೊಲೀಸರು ಹುಡುಕಿದಾಗ ಸಿಕ್ಕಿದ್ದು ಕೇರಳದಲ್ಲಿ.

ಉಡುಪಿ ಜಿಲ್ಲೆಯ ಕೊಲ್ಲೂರಿನ ನಿವಾಸಿಯಾಗಿರುವ ಆದಿರಾ 19 ವರ್ಷದ ಹುಡುಗಿ. ಆಕೆ ಈಗ ಮೂಡುಬಿದರೆಯ ಆಳ್ವಾಸ್‌ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಪಿಟಿ ಅಧ್ಯಯನ ನಡೆಸುತ್ತಿದ್ದಾಳೆ. ಆಕೆಗೆ ಹಿಂದಿನಿಂದಲೂ ಒಬ್ಬ ಹುಡುಗನ ಜತೆ ಪ್ರೀತಿ ಇತ್ತು. ಅವನು ಬೈಂದೂರಿನವನು.

ಅವರಿಬ್ಬರ ಪ್ರೀತಿ ಬಗ್ಗೆ ಸಂಶಯ ಹೊಂದಿದ್ದ ಮನೆಯವರು ಆಕೆಯ ಮನಸ್ಸು ತಿಳಿಯಾಗಲಿ, ಇದೆಲ್ಲ ಮರೆಯಲಿ ಎಂದು ಹೇಳಿ ಪಿಯುಸಿ ಬಳಿಕ ಆಕೆಯನ್ನು ಮೂಡುಬಿದರೆ ಕಾಲೇಜಿಗೆ ಸೇರಿಸಿದ್ದಳು. ಆಲ್ಲಿ ಆಕೆ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು.

ಮನೆಯವರು ಆಕೆಯನ್ನು ಮೂಡುಬಿದರೆ ಕಾಲೇಜಿಗೆ ಹಾಕಿದ್ದರೂ ಹುಡುಗ ಮತ್ತು ಹುಡುಗಿ ನಡುವೆ ಸಂಬಂಧ ಕಟ್‌ ಆಗಿರಲಿಲ್ಲ. ಬಹುಶಃ ಅವರು ವ್ಯವಸ್ಥಿತವಾಗಿ ಸಂಪರ್ಕದಲ್ಲಿದ್ದರು. ಕಳೆದ ಫೆಬ್ರವರಿ 23ರ ಶುಕ್ರವಾರ ಬೆಳಿಗ್ಗೆ 7.45ಕ್ಕೆ ಆದಿರಾ ಹಾಸ್ಟೆಲ್‌ನಿಂದ ಆಳ್ವಾಸ್‌ ಬಸ್‌ನಲ್ಲಿ ಹೊರಟಿದ್ದಾರೆ. ಆಕೆ ಮೂಡುಬಿದಿರೆ ಕನ್ನಡಭವನದ ಬಳಿ ಇಳಿದಿದ್ದಳು. ಅಲ್ಲಿಂದ ಆಕೆ ಕಾಲೇಜಿಗೆ ಹೋಗಬೇಕಾಗಿತ್ತು. ಆದರೆ, ಆಕೆ ಕಾಲೇಜಿಗೆ ಹೋಗಿರಲಿಲ್ಲ.

ಕಾಲೇಜಿಗೂ ಇಲ್ಲ, ಹಾಸ್ಟೆಲ್‌ಗೂ ಇಲ್ಲ, ಮನೆಗೂ ಹೋಗಲಿಲ್ಲ. ಹೀಗೆ ದಿಢೀರ್‌ ನಾಪತ್ತೆಯಾಗಿರುವ ಆದಿರಾ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಯಿತು.

ಇದನ್ನೂ ಓದಿ: Chaithra Hebbar : ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್‌ ನಿಗೂಢ ನಾಪತ್ತೆ; ಯಾರು ಈ ಶಾರುಖ್‌ ಶೇಖ್‌?

ಪೊಲೀಸರು ಆಕೆ ಕನ್ನಡ ಭವನದ ಬಳಿ ಇಳಿದ ನಂತರ ಎಲ್ಲಿ ಹೋದಳು ಎಂಬ ಬಗ್ಗೆ ಫೂಟೇಜ್‌ಗಳನ್ನು ಚೆಕ್‌ ಮಾಡಿದಾಗ ಆಕೆ ಮತ್ತು ಒಬ್ಬ ಹುಡುಗ ಜತೆಯಾಗಿದ್ದು, ಅವರ ಜತೆಯಾಗಿ ಹೋಗಿದ್ದು ಕಂಡುಬಂದಿದೆ. ಇವರ ಚಲನವಲನಗಳ ಜಾಡು ಹಿಡಿದ ಮೂಡುಬಿದರೆ ಪೊಲೀಸರು ಅವರನ್ನು ಕೇರಳದಲ್ಲಿ ಪತ್ತೆ ಹಚ್ಚಿದ್ದಾರೆ.

ಅಷ್ಟು ಹೊತ್ತಿಗೆ ಅವರಿಬ್ಬರೂ ಮದುವೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಅವರನ್ನು ಮೂಡುಬಿದರೆಗೆ ಕರೆತಂದು ಹೆತ್ತವರನ್ನು ಕರೆಸಿ ಮಾತುಕತೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

K Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

K Vasantha Bangera: ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಬುಧವಾರ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

K Vasantha Bangera
Koo

ಮಂಗಳೂರು: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ (79) ಅವರು (K Vasantha Bangera) ಬುಧವಾರ ಸಂಜೆ ನಿಧನರಾದರು. ದೀರ್ಘ ಕಾಲದ ಆನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ವಸಂತ ಬಂಗೇರ ಅವರು, ಬೆಳ್ತಂಗಡಿ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದರು.

ಇತ್ತೀಚೆಗೆ ಬಂಗೇರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ನಿರಂತರ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಇಬ್ಬರು ಪುತ್ರಿಯರು, ಬಂದು ವರ್ಗದವರನ್ನು ಅಗಲಿದ್ದಾರೆ. ಗುರುವಾರ ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದ್ದು, ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ. ವಸಂತ ಬಂಗೇರ ಅವರು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕುವೆಟ್ಟು ಗ್ರಾಮದಲ್ಲಿ ಕೇದೆ ಸುಬ್ಬ ಪೂಜಾರಿ ಹಾಗೂ ದೇವಕಿ ದಂಪತಿಯ ಪುತ್ರರಾಗಿ ವಸಂತ ಬಂಗೇರ ಅವರು 1946ರ ಜನವರಿ 15ರಂದು ಜನಿಸಿದ್ದರು. ಬೆಳ್ತಂಗಡಿಯ ಬೋರ್ಡ್ ಹೈಸ್ಕೂಲಿನಲ್ಲಿ ತಮ್ಮ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮುಗಿಸಿದ ಅವರು ಮುಲ್ಕಿ, ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪಿಯುಸಿ ಮುಗಿಸಿದರು.

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಚುನಾವಣೆಗೆ ನಿಂತು ಗೆಲವು ಸಾಧಿಸಿ ದಾಖಲೆ ಬರೆದಿದ್ದರು. 1983 ಮತ್ತು 1985ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಆ ನಂತರ 1989ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತು ಸೋಲು ಕಂಡಿದ್ದರು. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಗೆದ್ದಿದ್ದರು. ನಂತರ 1999 ಮತ್ತು 2004ರಲ್ಲಿ ಈ ಕ್ಷೇತ್ರ ಬಿಜೆಪಿ ಪಾಲಾಗಿತ್ತು. ಜೆಡಿಎಸ್‌ನಿಂದ ಸ್ಪರ್ಧಿಸಿದ ವಂಸತ ಬಂಗೇರ ಅವರನ್ನು ಅವರ ಸಹೋದರ ಪ್ರಭಾಕರ ಬಂಗೇರ ಸೋಲಿಸಿದ್ದರು. ಆ ನಂತರ 2008ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ವಸಂತ ಬಂಗೇರ ಸಹೋದರನನ್ನು ಸೋಲಿಸಿದರು. ಇನ್ನು 2013ರಲ್ಲಿ ವಸಂತ ಬಂಗೇರ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಬಿಜೆಪಿಯ ರಂಜನ್ ಗೌಡ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ | EVMs Damage: ಚುನಾವಣಾ ಸಿಬ್ಬಂದಿ ಇದ್ದ ಬಸ್‌ನಲ್ಲಿ ಬೆಂಕಿ ಅವಘಡ; ಮತಯಂತ್ರಗಳು ಡ್ಯಾಮೇಜ್‌

2013ರಲ್ಲಿ ಐದನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಂತ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಸಣ್ಣ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಬೆಳ್ತಂಗಡಿ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರ್ಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ.

Continue Reading

ಕರ್ನಾಟಕ

Palthady Ramakrishna Achar: ತುಳು ಸಾಹಿತಿ, ವಿದ್ವಾಂಸ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Palthady Ramakrishna Achar: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಪೆರುವಾಜೆಯಲ್ಲಿರುವ ತಮ್ಮ ಮಗಳ ಮನೆಯಲ್ಲಿದ್ದ ಆಚಾರ್‌ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರು ಉಂಟಾಗಿತ್ತು. ತಕ್ಷಣ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

Palthady Rama krishna achar
Koo

ಪುತ್ತೂರು: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ(Tulu Sahitya academy)ಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್(Palthady Ramakrishna Achar) ಅವರು ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಪೆರುವಾಜೆಯಲ್ಲಿರುವ ತಮ್ಮ ಮಗಳ ಮನೆಯಲ್ಲಿದ್ದ ಆಚಾರ್‌ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರು ಉಂಟಾಗಿತ್ತು. ತಕ್ಷಣ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಮೃತದೇಹವನ್ನು ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಇಂದು ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಪೆಲತ್ತಾಜೆಯಲ್ಲಿ ಹುಟ್ಟಿ ಹೆಚ್ಚಿನ ಕಾಲವನ್ನು ಪಾಲ್ತಾಡಿಯಲ್ಲಿ ಕಳೆದು ನಿವೃತ್ತಿಯ ಬಳಿಕ ಪುತ್ತೂರಿನ ಬೆದ್ರಾಳದಲ್ಲಿ ನೆಲೆಸಿದ್ದರು.ಬೆಟ್ಟಂಪಾಡಿ, ಪಾಣಾಜೆ ಹಿ.ಪ್ರಾ. ಶಾಲೆ, ಬೆಳ್ಳಾರೆ ಬೋರ್ಡ್‌ ಹೈಸ್ಕೂಲ್ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದರು. ಅನಂತರ ಉಜಿರೆಯ ಸರಕಾರಿ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಟಿ.ಸಿ.ಎಚ್‌ ಡಿಪ್ಲೊಮಾ ಮಾಡಿದರು. 1963ರಲ್ಲಿ ಕುಂತೂರು ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಕರಾಗಿ ಸೇವೆಗೆ ಸೇರಿದರು. ಕೆಯ್ಯೂರು, ಕಾವು ಮಾಟ್ನೂರು, ಸಾಮೆತ್ತಡ್ಕ ಮೊದಲಾದ ಕಡೆ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ಈ ಮಧ್ಯೆ ಪದವಿ ಶಿಕ್ಷಣ ಪಡೆದು ಬಿ.ಎಡ್‌ ಪದವಿ ಪಡೆದರು. ಅನಂತರ ಧಾರವಾಡ ವಿಶ್ವವಿದ್ಯಾಲಯದಿಂದ ಎಂ.ಎ (ಕನ್ನಡ) ಸ್ನಾತಕೋತ್ತರ ಪದವಿ ಪಡೆದರು. ಹಿಂದಿಯಲ್ಲಿ ರಾಷ್ಟ್ರ ಭಾಷಾವಿಶಾರದಾ ಪದವಿಯನ್ನು ಪೂರ್ಣಗೊಳಿಸಿದ್ದರು. ನಿವೃತ್ತಿ ಆದ ಬಳಿಕ ಸವಣೂರಿನ ವಿದ್ಯಾರಶ್ಮಿ ಶಿಕ್ಷಕ ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಗೌರವ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ವಿಶ್ರಾಂತ ಜೀವನ ನಡೆಸುತ್ತಿದ್ದರು.

ಮಕ್ಕಳ ಕವನ ಸಂಕಲನ, ಕಥಾ ಸಂಕಲನ, ಸಂವಹನ ಮಾಧ್ಯಮವಾಗಿ ಜಾನಪದ, ಜಾನಪದ ಪರಿಸರ, ಜಾನಪದ ವೈದ್ಯ, ಜಾನಪದ ಕುಣಿತ, ದೈವಾರಾಧನೆ, ತುಳುನಾಡಿನ ಸಮಗ್ರ ಪ್ರದರ್ಶನ ಕಲೆ ಮತ್ತು ಸಾಕಷ್ಟು ಧ್ವನಿಸುರುಳಿಗಳಿಗೆ ಸಾಹಿತ್ಯವನ್ನು ಒದಗಿಸಿದ ಪಾಲ್ತಾಡಿ ತುಳು ಭಾಷೆಯ ಬೆಳವಣಿಗೆಯಲ್ಲಿ ವಿಶೇಷ ಪಾತ್ರವಹಿಸಿದರು. ತುಳು ಜಾನಪದ ಕೂಡುಕಟ್ಟು ಅಧ್ಯಕ್ಷರಾಗಿ, ತುಳು ಅಕಾಡಮಿ ರಿಜಿಸ್ಟ್ರಾರ್‌ ಆಗಿ, ಬಾಲವನ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಸಾರ್ವಜನಿಕ ಆಟಿ ಉತ್ಸವ, ಕೆಡ್ಡಸ ಕೂಟವನ್ನು ಪರಿಚಯಿಸಿದ ಹಿರಿಮೆ ಇವರದ್ದು. ಪಠ್ಯಪುಸ್ತಕ ರಚನಾ ಸಮಿತಿ ಸದಸ್ಯರಾಗಿ, ತುಳು ಡಿಪ್ಲೊಮಾ ಕೋರ್ಸ್‌ಗಳಿಗೆ ಪಠ್ಯ ರಚನೆಕಾರರಾಗಿ, ತುಳು ಭಾಷೆಯನ್ನು ಎಂಟನೇ ಪರಿಚ್ಛೇದ ಸೇರಿಸಬೇಕು ಎಂಬ ಆಗ್ರಹದಲ್ಲಿ ಮುಂಚೂಣಿಯಲ್ಲಿ ನಿಂತು ಶ್ರಮಿಸಿದವರು.

ಇದನ್ನೂ ಓದಿ: Flights cancelled: 300 ಸಿಬ್ಬಂದಿ ಸಾಮೂಹಿಕ ರಜೆ; 86 ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನಗಳು ಕ್ಯಾನ್ಸಲ್‌

1979ರಲ್ಲಿ “ಬಾಂಗ್ಲಾ ವಿಜಯ’ ಎಂಬ ಯಕ್ಷಗಾನ ಪ್ರಸಂಗ ಕೃತಿ ಪ್ರಕಟಿಸುವ ಮೂಲಕ ಸಾಹಿತ್ಯ ಕ್ಷೇತ್ರದ ಸೇವೆಯಲ್ಲಿ ತೊಡಗಿದ್ದರು. ವಿವಿಧ ಪತ್ರಿಕೆ-ನಿಯತ ಕಾಲಿಕೆಗಳಲ್ಲಿ ಕತೆ ಕವಿತೆಗಳು ಪ್ರಕಟವಾಗಿವೆ. ಕನ್ನಡ ಸಂಘ, ತುಳು ಸಂಘ, ಯಕ್ಷಗಾನ ಸಂಘ, ಸಮುದಾಯ ಸಂಘ ಇಂತಹ ಕೂಟಗಳನ್ನು ಆರಂಭಿಸಿ ತುಳು ಭಾಷೆಯ ಬೆಳವಣಿಗಾಗಿ ಶ್ರಮಿಸಿ ದರು.

Continue Reading

ಕ್ರೈಂ

Murder Case: ಪ್ರಿಯತಮೆ ಎದುರೇ ಮಹಿಳೆಯ ಅತ್ಯಾಚಾರ ಮಾಡಿ ಕೊಂದ ಪಾಪಿ!

Murder Case: ಕೃತ್ಯ ಎಸಗುವ ಮುನ್ನ ಮಹಿಳೆಗೆ ಚೆನ್ನಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿ ಕೊಲೆ (woman murder case) ಮಾಡಲಾಗಿದೆ. ಸಂಜೀವಪ್ಪ ಹಾಗೂ ಆತನ ಪ್ರಿಯತಮೆ ರಾಮಾಂಜಿನಮ್ಮ ಜೊತೆಗೂಡಿ ಈ ಕೊಲೆ ಕೃತ್ಯ ಎಸಗಿದ್ದಾರೆ.

VISTARANEWS.COM


on

chikkaballapur woman murder case
Koo

ಚಿಕ್ಕಬಳ್ಳಾಪುರ: ತನ್ನ ಪ್ರಿಯತಮೆಯ (lover) ಎದುರೇ ಇನ್ನೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ (Physical abuse) ಬರ್ಬರವಾಗಿ ಕೊಲೆ ಮಾಡಿದ (woman Murder case) ಪಾಪಿ ಪ್ರಿಯತಮನನ್ನು ಪೊಲೀಸರು (Chikkaballapur crime news) ಬಂಧಿಸಿದ್ದಾರೆ. ಕೃತ್ಯಕ್ಕೆ ಸಹಕಾರ ನೀಡಿದ ಪ್ರಿಯತಮೆಯನ್ನೂ ಹೆಡೆಮುರಿ ಕಟ್ಟಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಕೊನಗಾನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಅಲುಮೇಲಮ್ಮ (40) ವರ್ಷ ಕೊಲೆಯಾದ‌ ಮಹಿಳೆ‌. ಸಂಜೀವಪ್ಪ ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿ. ಕೃತ್ಯ ಎಸಗುವ ಮುನ್ನ ಮಹಿಳೆಗೆ ಚೆನ್ನಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿ ಕೊಲೆ (woman murder case) ಮಾಡಲಾಗಿದೆ. ಸಂಜೀವಪ್ಪ ಹಾಗೂ ಆತನ ಪ್ರಿಯತಮೆ ರಾಮಾಂಜಿನಮ್ಮ ಜೊತೆಗೂಡಿ ಈ ಕೊಲೆ ಕೃತ್ಯ ಎಸಗಿದ್ದಾರೆ.

ಸಂಜೀವಪ್ಪ ಹಾಗೂ ರಾಮಾಂಜಿನಮ್ಮ ನಡುವೆ ಅನೈತಿಕ‌ ಸಂಬಂಧವಿತ್ತು. ಇಬ್ಬರ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅಲುಮೇಲಮ್ಮ ಅಡ್ಡಿಯಾಗಿದ್ದಳು. ಇದರಿಂದ ಆಕ್ರೋಶಗೊಂಡ ಇಬ್ಬರೂ ಸೇರಿ ಕೊಲೆ ಮಾಡಿರುವ ಅನುಮಾನವಿದೆ. ನಾಲ್ಕು ದಿನಗಳಿಂದ ಅಲುಮೇಲಮ್ಮ ಗ್ರಾಮದಲ್ಲಿ ಕಾಣಿಸಿರಲಿಲ್ಲ. ರಾಮಾಂಜಿನಮ್ಮ ವರ್ತನೆ‌ಯಿಂದ ಅನುಮಾನಗೊಂಡ ಗ್ರಾಮಸ್ಥರು ಆಕೆಯನ್ನು ವಿಚಾರಿಸಿಕೊಂಡಾಗ ಸತ್ಯ ಬಾಯಿಬಿಟ್ಟಿದ್ದಾಳೆ.

ಊರಿನ ಹೊರಗಿನ ಕಾಡುಪ್ರದೇಶದಲ್ಲಿ ಅಲುಮೇಲಮ್ಮ ಶವ ಪತ್ತೆಯಾಗಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದೂರು ದಾಖಲಿಸಿಕೊಂಡ‌ ಕೂಡಲೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಜಿ ಪ್ರಿಯಕರನಿಂದ ಮಹಿಳೆಯ ಕೊಲೆ, ಕಾರಣ ನಿಗೂಢ

ಬೆಂಗಳೂರು: ರಾಜಧಾನಿಯ ಸುಂಕದಕಟ್ಟೆಯ ಬಳಿ ಮಹಿಳೆಯೊಬ್ಬರು ಮಾಜಿ ಪ್ರಿಯಕರನಿಂದ (woman Murder Case) ಕೊಲೆಯಾಗಿದ್ದಾರೆ. ನಿನ್ನೆ ರಾತ್ರಿ 9:40ರ ಸುಮಾರಿಗೆ ಈ ಹತ್ಯೆ ನಡೆದಿದೆ. ದಿವ್ಯಾ (30) ಕೊಲೆಯಾದ ಮಹಿಳೆ.

ತನ್ನ ಜೊತೆಗಿದ್ದ ಪ್ರಿಯಕರ ಶಾಂತಕುಮಾರ್ ಎಂಬಾತನಿಂದ ದಿವ್ಯಾ ಕೊಲೆಯಾಗಿದ್ದಾರೆ. ನಾಲ್ಕು ವರ್ಷದ ಹಿಂದೆ ಶಾಂತಕುಮಾರ್ ಜೊತೆ ಬಂದಿದ್ದ ದಿವ್ಯಾ ಈ ಮೊದಲು ಕಾಮಾಕ್ಷಿಪಾಳ್ಯದಲ್ಲಿ ಮನೆ ಮಾಡಿದ್ದರು. ಅನಂತರ ಇಬ್ಬರ ಮಧ್ಯೆ ಜಗಳವಾಗಿದ್ದು, ಇದರಿಂದ ಶಾಂತಕುಮಾರ್‌ನನ್ನು ದಿವ್ಯಾ ಬಿಟ್ಟುಬಿಟ್ಟಿದ್ದರು. ಇಬ್ಬರೂ ಮದುವೆಯಾಗಿದ್ದರೇ ಇಲ್ಲವೇ ಎಂಬ ಬಗ್ಗೆ ಅನುಮಾನವಿದೆ.

5 ದಿನದ ಹಿಂದೆ ಸುಂಕದಕಟ್ಟೆಯ ಸೊಲ್ಲಾಪುರಂ ಲೇ ಔಟ್‌ನಲ್ಲಿ ದಿವ್ಯಾ ಬಾಡಿಗೆ ಮನೆ ಮಾಡಿದ್ದರು. ಈಕೆ ಮನೆ ಮಾಡಿದ್ದ ಬಗ್ಗೆ ತಿಳಿದುಕೊಂಡಿದ್ದ ಶಾಂತಕುಮಾರ್ ರಾತ್ರಿ 9:30ರ ಸುಮಾರಿಗೆ ಬಾಡಿಗೆ ಮನೆ ಸಮೀಪ ಬಂದಿದ್ದ. ಅನಂತರ ಚಾಕುವಿನ ಮೂಲಕ ದಿವ್ಯಳ ಎದೆ ಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದಾನೆ. ಇಬ್ಬರೂ ಮೂಲತಃ ಬಿಡದಿಯವರು.

“ರಾತ್ರಿ 9:30 ಸುಮಾರಿಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ನಡೆದಿದೆ. ಕೊಲೆಯಾದ ಮಹಿಳೆ ದಿವ್ಯ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದಳು. 35 ವರ್ಷದ ಶಾಂತಕುಮಾರ್ ಎಂಬಾತನಿಂದ ಕೊಲೆಯಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ” ಎಂದು ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಹೇಳಿದ್ದಾರೆ.

ಮೆಡಿಕಲ್‌ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣ!

ಮಂಗಳೂರು: ಖಾಸಗಿ ಮೆಡಿಕಲ್ ಕಾಲೇಜೊಂದರ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ (toilet video) ಮಾಡಿಕೊಂಡಿರುವ ಘಟನೆಯೊಂದು ವರದಿಯಾಗಿದ್ದು, ಅಪ್ರಾಪ್ತ ವಯಸ್ಸಿನ ವ್ಯಕ್ತಿಯನ್ನು ಈ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

toilet video shooting in mangalore

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಮೇ‌ 6ರಂದು ನಡೆದಿರುವ ಘಟನೆ ಇದಾಗಿದೆ. ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತ ಯುವಕ, ಬಳಿಕ ಲೇಡಿಸ್ ಟಾಯ್ಲೆಟ್‌ಗೆ ಹೋಗಿ ಮೊಬೈಲ್ ಇಟ್ಟಿದ್ದ. ಲೇಡಿಸ್ ಟಾಯ್ಲೆಟ್ ಒಳಗಿನಿಂದ ಮೊಬೈಲ್ ರಿಂಗ್ ಆಗುತ್ತಿರುವುದು ಕೇಳಿಸಿ ವಾಚ್‌ಮನ್ ಪರಿಶೀಲನೆ ಮಾಡಿದಾಗ ಮೊಬೈಲ್ ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಬಂದರು ಪೊಲೀಸ್ ಠಾಣೆಗೆ ಕಾಲೇಜಿನ ವಾಚ್‌ಮನ್ ದೂರು ನೀಡಿದ್ದರು. ಕಾಲೇಜಿನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು ಹದಿನೇಳು ವರ್ಷದ ಅಪ್ರಾಪ್ತ ಯುವಕನಿಂದ ಕೃತ್ಯ ನಡೆದಿದೆ. ಕಾಲೇಜಿನ ಸುತ್ತಮುತ್ತವೇ ಈತ ಸುಳಿದಾಡುತ್ತಿದ್ದುದು ಪತ್ತೆಯಾಗಿದೆ. ಯುವಕನನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಇತ್ತೀಚೆಗೆ ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ (Nethrajyothi College udupi) ಮೂವರು ಮುಸ್ಲಿಂ ವಿದ್ಯಾರ್ಥಿನಿಯರು (Three Muslim students) ಟಾಯ್ಲೆಟ್‌ನಲ್ಲಿ ಮೊಬೈಲ್‌ (Udupi Toilet Video) ಇಟ್ಟು ಇತರ ಹೆಣ್ಣುಮಕ್ಕಳು ಶೌಚಾಲಯ ಬಳಸುವುದನ್ನು ಚಿತ್ರೀಕರಿಸಿಕೊಂಡ (mobile shooting at Ladies toilet) ಪ್ರಕರಣವನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಈ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದಲ್ಲದೆ, ರಾಷ್ಟ್ರೀಯ ಸುದ್ದಿಯಾಗಿಯೂ ಬಿತ್ತರಗೊಂಡಿತ್ತು.

ಇದನ್ನೂ ಓದಿ: Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ಅಟ್ಟಾಡಿಸಿ ಕೊಲೆ

Continue Reading

ಕ್ರೈಂ

Toilet Video: ಮೆಡಿಕಲ್‌ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣ!

Toilet Video: ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಮೇ‌ 6ರಂದು ನಡೆದಿರುವ ಘಟನೆ ಇದಾಗಿದೆ. ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತ ಯುವಕ, ಬಳಿಕ ಲೇಡಿಸ್ ಟಾಯ್ಲೆಟ್‌ಗೆ ಹೋಗಿ ಮೊಬೈಲ್ ಇಟ್ಟಿದ್ದ.

VISTARANEWS.COM


on

toilet video shooting in mangalore
Koo

ಮಂಗಳೂರು: ಖಾಸಗಿ ಮೆಡಿಕಲ್ ಕಾಲೇಜೊಂದರ (Private Medical College) ಲೇಡಿಸ್ ಟಾಯ್ಲೆಟ್‌ನಲ್ಲಿ (Ladies toilet) ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ (Toilet Video) ಚಿತ್ರೀಕರಣ ಮಾಡಿಕೊಂಡಿರುವ ಘಟನೆಯೊಂದು ವರದಿಯಾಗಿದ್ದು, ಅಪ್ರಾಪ್ತ ವಯಸ್ಸಿನ ವ್ಯಕ್ತಿಯನ್ನು ಈ ಪ್ರಕರಣದಲ್ಲಿ ಪೊಲೀಸರು (Crime news) ಬಂಧಿಸಿದ್ದಾರೆ.

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಮೇ‌ 6ರಂದು ನಡೆದಿರುವ ಘಟನೆ ಇದಾಗಿದೆ. ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತ ಯುವಕ, ಬಳಿಕ ಲೇಡಿಸ್ ಟಾಯ್ಲೆಟ್‌ಗೆ ಹೋಗಿ ಮೊಬೈಲ್ ಇಟ್ಟಿದ್ದ. ಲೇಡಿಸ್ ಟಾಯ್ಲೆಟ್ ಒಳಗಿನಿಂದ ಮೊಬೈಲ್ ರಿಂಗ್ ಆಗುತ್ತಿರುವುದು ಕೇಳಿಸಿ ವಾಚ್‌ಮನ್ ಪರಿಶೀಲನೆ ಮಾಡಿದಾಗ ಮೊಬೈಲ್ ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಬಂದರು ಪೊಲೀಸ್ ಠಾಣೆಗೆ ಕಾಲೇಜಿನ ವಾಚ್‌ಮನ್ ದೂರು ನೀಡಿದ್ದರು. ಕಾಲೇಜಿನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು ಹದಿನೇಳು ವರ್ಷದ ಅಪ್ರಾಪ್ತ ಯುವಕನಿಂದ ಕೃತ್ಯ ನಡೆದಿದೆ. ಕಾಲೇಜಿನ ಸುತ್ತಮುತ್ತವೇ ಈತ ಸುಳಿದಾಡುತ್ತಿದ್ದುದು ಪತ್ತೆಯಾಗಿದೆ. ಯುವಕನನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಇತ್ತೀಚೆಗೆ ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ (Nethrajyothi College udupi) ಮೂವರು ಮುಸ್ಲಿಂ ವಿದ್ಯಾರ್ಥಿನಿಯರು (Three Muslim students) ಟಾಯ್ಲೆಟ್‌ನಲ್ಲಿ ಮೊಬೈಲ್‌ (Udupi Toilet Video) ಇಟ್ಟು ಇತರ ಹೆಣ್ಣುಮಕ್ಕಳು ಶೌಚಾಲಯ ಬಳಸುವುದನ್ನು ಚಿತ್ರೀಕರಿಸಿಕೊಂಡ (mobile shooting at Ladies toilet) ಪ್ರಕರಣವನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಈ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದಲ್ಲದೆ, ರಾಷ್ಟ್ರೀಯ ಸುದ್ದಿಯಾಗಿಯೂ ಬಿತ್ತರಗೊಂಡಿತ್ತು.

ಮಾಜಿ ಪ್ರಿಯಕರನಿಂದ ಮಹಿಳೆಯ ಕೊಲೆ, ಕಾರಣ ನಿಗೂಢ

ಬೆಂಗಳೂರು: ರಾಜಧಾನಿಯ ಸುಂಕದಕಟ್ಟೆಯ ಬಳಿ ಮಹಿಳೆಯೊಬ್ಬರು ಮಾಜಿ ಪ್ರಿಯಕರನಿಂದ (woman Murder Case) ಕೊಲೆಯಾಗಿದ್ದಾರೆ. ನಿನ್ನೆ ರಾತ್ರಿ 9:40ರ ಸುಮಾರಿಗೆ ಈ ಹತ್ಯೆ ನಡೆದಿದೆ. ದಿವ್ಯಾ (30) ಕೊಲೆಯಾದ ಮಹಿಳೆ.

ತನ್ನ ಜೊತೆಗಿದ್ದ ಪ್ರಿಯಕರ ಶಾಂತಕುಮಾರ್ ಎಂಬಾತನಿಂದ ದಿವ್ಯಾ ಕೊಲೆಯಾಗಿದ್ದಾರೆ. ನಾಲ್ಕು ವರ್ಷದ ಹಿಂದೆ ಶಾಂತಕುಮಾರ್ ಜೊತೆ ಬಂದಿದ್ದ ದಿವ್ಯಾ ಈ ಮೊದಲು ಕಾಮಾಕ್ಷಿಪಾಳ್ಯದಲ್ಲಿ ಮನೆ ಮಾಡಿದ್ದರು. ಅನಂತರ ಇಬ್ಬರ ಮಧ್ಯೆ ಜಗಳವಾಗಿದ್ದು, ಇದರಿಂದ ಶಾಂತಕುಮಾರ್‌ನನ್ನು ದಿವ್ಯಾ ಬಿಟ್ಟುಬಿಟ್ಟಿದ್ದರು. ಇಬ್ಬರೂ ಮದುವೆಯಾಗಿದ್ದರೇ ಇಲ್ಲವೇ ಎಂಬ ಬಗ್ಗೆ ಅನುಮಾನವಿದೆ.

5 ದಿನದ ಹಿಂದೆ ಸುಂಕದಕಟ್ಟೆಯ ಸೊಲ್ಲಾಪುರಂ ಲೇ ಔಟ್‌ನಲ್ಲಿ ದಿವ್ಯಾ ಬಾಡಿಗೆ ಮನೆ ಮಾಡಿದ್ದರು. ಈಕೆ ಮನೆ ಮಾಡಿದ್ದ ಬಗ್ಗೆ ತಿಳಿದುಕೊಂಡಿದ್ದ ಶಾಂತಕುಮಾರ್ ರಾತ್ರಿ 9:30ರ ಸುಮಾರಿಗೆ ಬಾಡಿಗೆ ಮನೆ ಸಮೀಪ ಬಂದಿದ್ದ. ಅನಂತರ ಚಾಕುವಿನ ಮೂಲಕ ದಿವ್ಯಳ ಎದೆ ಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದಾನೆ. ಇಬ್ಬರೂ ಮೂಲತಃ ಬಿಡದಿಯವರು.

“ರಾತ್ರಿ 9:30 ಸುಮಾರಿಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ನಡೆದಿದೆ. ಕೊಲೆಯಾದ ಮಹಿಳೆ ದಿವ್ಯ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದಳು. 35 ವರ್ಷದ ಶಾಂತಕುಮಾರ್ ಎಂಬಾತನಿಂದ ಕೊಲೆಯಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ” ಎಂದು ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಹೇಳಿದ್ದಾರೆ.

ಅಟ್ಟಾಡಿಸಿ ಕೊಚ್ಚಿ ರೌಡಿಶೀಟರ್‌ ಕೊಲೆ

Murder Case

ಬೆಂಗಳೂರು: ನಡು ರಸ್ತೆಯಲ್ಲೇ ರೌಡಿಶೀಟರ್‌ನ ಅಟ್ಟಾಡಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಭೀಕರ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ರೌಡಿಶೀಟರ್‌ ಪ್ರಾಣ ಬಿಟ್ಟಿದ್ದು, ಘಟನಾ ಸ್ಥಳಕ್ಕೆ ಬಾಣಸವಾಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರ್ತಿಗೇಯನ್ (40) ಕೊಲೆಯಾದವ. ಮೃತ ವ್ಯಕ್ತಿ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್, ಬಾಣಸವಾಡಿ ಪೊಲೀಸ್ ಠಾಣೆಯ ರೌಡಿ ಶೀಟ್‌ ದಾಖಲಾಗಿತ್ತು. ಎರಡು ವರ್ಷಗಳ ಹಿಂದೆ ರೌಡಿಶೀಟ್‌ನಿಂದ ಕೈ ಬಿಡಲಾಗಿತ್ತು. ಈ ಹಿಂದೆ ಬಾಣಸವಾಡಿ ಪೊಲೀಸರಿಂದ ರೌಡಿಶೀಟರ್‌ ಕಾರ್ತಿಗೇಯನ್ ಗಡಿಪಾರಾಗಿದ್ದ. ಮತ್ತೆ ಬೆಂಗಳೂರಿಗೆ ಬಂದು‌ ಬಾಣಸವಾಡಿಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಕಚೇರಿ ತೆರೆದಿದ್ದ. ಆದರೆ, ಮಂಗಳವಾರ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ಅಟ್ಟಾಡಿಸಿ ಕೊಲೆ

Continue Reading
Advertisement
Hindu Girl
ದೇಶ6 mins ago

Hindu Girl: ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಇಬ್ರಾಹಿಂ ವಿರುದ್ಧ ಕೇಸ್

Monty Panesar
ಕ್ರಿಕೆಟ್21 mins ago

Monty Panesar: ರಾಜಕೀಯಕ್ಕೆ ಎಂಟ್ರಿ ಕೊಟ್ಟು ಒಂದೇ ವಾರದಲ್ಲಿ ಗುಡ್​ ಬೈ ಹೇಳಿದ ಇಂಗ್ಲೆಂಡ್​ ಸ್ಪಿನ್ನರ್

Murder Case
ಕರ್ನಾಟಕ22 mins ago

Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Virat Kohli
ಕ್ರೀಡೆ59 mins ago

Virat Kohli: ಪಂಜಾಬಿ ಮಾತನಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Poonch Terrorists
ದೇಶ1 hour ago

Poonch Terrorists: ಪೂಂಚ್‌ನಲ್ಲಿ ಸೇನೆ ಮೇಲೆ ದಾಳಿ ಮಾಡಿದ 3 ಉಗ್ರರ ಫೋಟೊ ರಿಲೀಸ್; ಹತ್ಯೆಗೆ ಪ್ಲಾನ್!

Prajwal Revanna Case
ಕರ್ನಾಟಕ1 hour ago

Prajwal Revanna Case: ಎಸ್‌ಐಟಿ ಮೇಲೆ ಕೇಸ್‌ ಹಾಕ್ತೇನೆ, ಶೀಘ್ರವೇ ಪೆನ್‌ಡ್ರೈವ್‌ ಪ್ರೊಡ್ಯುಸರ್‌ ಹೆಸರು ಹೇಳ್ತೇನೆ ಎಂದ ದೇವರಾಜೇಗೌಡ

Lok Sabha Election 2024 Pralhada Joshi who came out of the election frenzy
ಹುಬ್ಬಳ್ಳಿ1 hour ago

Lok Sabha Election 2024: ಅಬ್ಬಾ! ಅಂತೂ ಮುಗೀತು ಪುಟ್ಟಾ ಮಹಾಯುದ್ಧ ಎಂದ ಪ್ರಲ್ಹಾದ್‌ ಜೋಶಿ!

Dogs Attack
ದೇಶ2 hours ago

Dogs Attack: ನಾಯಿಗಳು ದಾಳಿ ಮಾಡಲು ಬಂದರೆ ಏನು ಮಾಡಬೇಕು? ಹೇಗೆ ರಕ್ಷಿಸಿಕೊಳ್ಳಬೇಕು?

Covishield
ದೇಶ2 hours ago

Covishield: ಭಾರತದಲ್ಲಿ ಕೋವಿಶೀಲ್ಡ್‌ ಸೈಡ್‌ ಎಫೆಕ್ಟ್‌ನ ಎಲ್ಲ ಮಾಹಿತಿ ಬಹಿರಂಗ ಎಂದ ಕಂಪನಿ, ಉತ್ಪಾದನೆಯೂ ಸ್ಥಗಿತ!

RCB vs PBKS
ಕ್ರೀಡೆ2 hours ago

RCB vs PBKS: ಪಂಜಾಬ್​-ಆರ್​ಸಿಬಿ ಸೆಣಸಾಟ; ಸೋತವರು ಟೂರ್ನಿಯಿಂದ ಔಟ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ17 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌