Love Failure : ಹುಬ್ಬಳ್ಳಿ ಬಳಿಕ ಮಂಗಳೂರಿನಲ್ಲಿ ಪ್ರೇಮ ವೈಫಲ್ಯಕ್ಕೆ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಪಾಗಲ್‌ ಪ್ರೇಮಿ - Vistara News

ದಕ್ಷಿಣ ಕನ್ನಡ

Love Failure : ಹುಬ್ಬಳ್ಳಿ ಬಳಿಕ ಮಂಗಳೂರಿನಲ್ಲಿ ಪ್ರೇಮ ವೈಫಲ್ಯಕ್ಕೆ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಪಾಗಲ್‌ ಪ್ರೇಮಿ

Love Failure : ಯುವತಿ ಮಸೇಜ್‌ ಮಾಡಲಿಲ್ಲ ಎಂದು ಸಿಟ್ಟಾದ ಪಾಗಲ್‌ ಪ್ರೇಮಿಯೊಬ್ಬ ಕ್ಲಾಸ್‌ ರೂಮಿಗೆ ತೆರಳಿ ಕತ್ತರಿಯಿಂದ ಇರಿದಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾದ ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.

VISTARANEWS.COM


on

love failure
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ (Love Failure) ಮರೆಯಾಗುವ ಮುನ್ನವೇ ಮಂಗಳೂರಿನಲ್ಲಿ ಮತ್ತೊಬ್ಬ ಯುವಕ ಪ್ರೇಮ ವೈಫಲ್ಯಕ್ಕೆ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಘಟನೆ ನಡೆದಿದೆ.

ನಿನ್ನೆ ಸೋಮವಾರ ಮುಂಜಾನೆ ಮೂಡಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ಘಟನೆ ನಡೆದಿದೆ. ತುಮಕೂರು ಮೂಲದ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ಯುವತಿ ಆಳ್ವಾಸ್‌ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದಳು.

ಈ ಮಂಜುನಾಥ್ ಹಾಗು ಹಲ್ಲೆಗೊಳಗಾದ ಯುವತಿ ಪಿಯುಸಿ ತನಕ ಜತೆಯಲ್ಲೇ ವಿದ್ಯಾಭ್ಯಾಸ ಮಾಡಿದ್ದರು. ಬಳಿಕ ಮಂಜುನಾಥ್‌ ಕಾಲೇಜು ತೊರೆದು ಮನೆಗೆ ತೆರಳಿದ್ದ. ಯುವತಿ ಮೆಸೇಜ್‌ಗೆ ಉತ್ತರಿಸುತ್ತಿಲ್ಲ ಎಂದು ಕೋಪಗೊಂಡ ಮಂಜುನಾಥ್‌ ತುಮಕೂರಿನಿಂದ ಮೂಡಬಿದರೆಗೆ ಬಂದಿದ್ದ.

ಆದರೆ ಯುವತಿ ಮಂಜುನಾಥ್‌ನನ್ನು ಭೇಟಿ ಮಾಡಲು ನಿರಾಕರಿಸಿದ್ದಳು. ಇದರಿಂದ ಮತ್ತಷ್ಟು ಕೆರಳಿದ ಮಂಜುನಾಥ್‌ ಕಾಲೇಜಿಗೆ ನುಗ್ಗಿ ತರಗತಿಯಲ್ಲಿದ್ದ ಯುವತಿಗೆ ಕತ್ತರಿಯಿಂದ ಇರಿದಿದ್ದಾನೆ. ಘಟನೆಯಲ್ಲಿ ಯುವತಿಯ ಮುಖಕ್ಕೆ ಗಾಯವಾಗಿದೆ.

ಕೂಡಲೇ ಇತರೆ ವಿದ್ಯಾರ್ಥಿಗಳು ಮಂಜುನಾಥ್‌ನನ್ನು ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಜುನಾಥ್‌ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Self harming : ಶಿವಮೊಗ್ಗದಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

ಬಾಗಲಕೋಟೆ: ಮದುವೆಗೆ ಪೋಷಕರು ವಿರೋಧಿಸಿದಕ್ಕೆ ಪ್ರೇಮಿಗಳಿಬ್ಬರು (Love Case) ನೇಣಿಗೆ ಶರಣಾಗಿದ್ದಾರೆ. ಬಾಗಲಕೋಟೆಯ ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ ಗ್ರಾಮದಲ್ಲಿ ಘಟನೆ ನಡೆದಿದೆ.

ಸಚಿನ್ ದಳವಾಯಿ, ಪ್ರಿಯಾ ಮಡಿವಾಳರ ಮೃತ ಪ್ರೇಮಿಗಳು. ಇವರಿಬ್ಬರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಮನೆಯಲ್ಲಿ ಇವರಿಬ್ಬರ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಇದರಿಂದ ಮನನೊಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ.

ಮಹಾಲಿಂಗಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ .ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಈ ನಾಲ್ಕು ಜಿಲ್ಲೆಗಳಿಗೆ ಎಚ್ಚರಿಕೆ

Rain News: ಕರಾವಳಿ, ಮಲೆನಾಡು ಭಾಗದಲ್ಲಿ ವರುಣ ಸೈಲೆಂಟ್‌ ಆಗಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯು ವೈಲೆಂಟ್‌ ಆಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Karnataka Weather Forecast) ಸಾಧ್ಯತೆಯಿದ್ದು, ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಮಧ್ಯಮ ಮಳೆಯಾದರೆ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಕೋಲಾರ, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಮಧ್ಯಮದಿಂದ ಕೂಡಿದ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನಲ್ಲಿ ರಾಯಚೂರು, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

ಬೆಂಗಳೂರಲ್ಲಿ ವ್ಯಾಪಕ ಮಳೆ ಎಚ್ಚರಿಕೆ

ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗದ್ದೆಯಲ್ಲಿ ನಾಟಿ ಮಾಡುತ್ತಿದ್ದಾಗಲೇ ಬಡಿದ ಸಿಡಿಲು; 15 ಮಂದಿ ಆಸ್ಪತ್ರೆ ಪಾಲು

Karnataka Weather Forecast : ಹಲವು ದಿನದಿಂದ ಬಿಡುವು ಕೊಟ್ಟಿದ್ದ ವರುಣ ಮತ್ತೆ (Rain News) ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಹಾಸನದಲ್ಲಿ ಸಿಡಿಲು ಬಡಿದು 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Karnataka weather forecast
Koo

ಚಿಕ್ಕಬಳ್ಳಾಪುರ/ಹಾಸನ: ಗದ್ದೆಯಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಮಳೆ (Karnataka Weather Forecast) ಜತೆಗೆ ಸಿಡಿಲು ಬಡಿದು ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಸುಮಾರು ಹದಿನೈದು ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಕೋರ್ಲಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ.

ಕೆ.ಬಿ.ಚಂದ್ರು ಎಂಬುವವರಿಗೆ ಸೇರಿದ ಗದ್ದೆಯಲ್ಲಿ 25 ಮಂದಿ ನಾಟಿ ಮಾಡುತ್ತಿದ್ದರು. ಈ ವೇಳೆ ಗುಡುಗು, ಸಿಡಿಲು ಸಹಿತ ದಿಢೀರ್ ಮಳೆ ಶುರುವಾಗಿತ್ತು. ಭತ್ತದ ಗದ್ದೆಯಲ್ಲಿ ನಾಟಿ ಮಾಡುತ್ತಿದ್ದ ವೇಳೆಯೇ ಸಿಡಿಲಾಘಾತಕ್ಕೆ ಲತಾ (35) ಎಂಬುವವರ ಸ್ಥಿತಿ ಗಂಭೀರವಾಗಿದೆ.

ರೇಣುಕಾ (49), ಸವಿತಾ (45), ಸುಮಿತ್ರ (51), ರೇಣುಕಮ್ಮಾ (55), ನೇತ್ರ (40), ನಿರ್ಮಲ (51), ವೀಣಾ (35), ಅನಿತಾ (55) ಸೇರಿ ಹದಿನೈದು ಮಂದಿಗೆ ಸಿಡಿಲು ಬಡಿದಿದೆ. ಎಲ್ಲರಿಗೂ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಿಂಗಳ ಬಳಿಕ ಚಿಕ್ಕಬಳ್ಳಾಪುರದಲ್ಲಿ ವರುಣ ಪ್ರತ್ಯಕ್ಷ

ಇಷ್ಟು ದಿನ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು, ಉತ್ತರ ಒಳನಾಡಿನ ಸುತ್ತಮುತ್ತ ಮಳೆಯು ಅಬ್ಬರಿಸಿತ್ತು. ದಕ್ಷಿಣ ಒಳನಾಡಿನಲ್ಲಿ ಕಣ್ಮರೆಯಾಗಿದ್ದ ಮಳೆಯು ಇದೀಗ ಕಳೆದೆರಡು ದಿನಗಳಿಂದ‌ ವ್ಯಾಪಿಸಿದೆ. ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮಳೆರಾಯ ಮುಖ ಮಾಡಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದು ತಿಂಗಳಿನಿಂದ ಬಿಡುವು ಕೊಟ್ಟಿದ್ದ ಮಳೆಯು ಭಾನುವಾರ ರಾತ್ರಿ ಇಡೀ ಗುಡುಗು, ಮಿಂಚು ಸಮೇತ ಸುರಿದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿದ್ದ ರೈತರು ಸಂತಸಗೊಂಡಿದ್ದರು.

ಇದನ್ನೂ ಓದಿ: Bengaluru Rains : ಬೃಹತ್‌ ಗಾತ್ರದ ಮರದ ಕೊಂಬೆಗಳು ಬಿದ್ದು 6 ಮಂದಿಗೆ ಗಾಯ; ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್

ನಾಳೆ ಚಾಮರಾಜನಗರ, ರಾಮನಗರದಲ್ಲಿ ಭಾರಿ ಮಳೆ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ. ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಶುಷ್ಕ ಹವಾಮಾನ ಇರಲಿದೆ. ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

Karnataka Rain : ನಿನ್ನೆ ಮಧ್ಯರಾತ್ರಿ ಸುರಿದ ಮಳೆಗೆ (Bengaluru Rain) ನಾನಾ ಅವಾಂತರವೇ ಸೃಷ್ಟಿಯಾಗಿದೆ. ಬೆಂಗಳೂರು-ಹೊಸೂರು ಹೆದ್ದಾರಿ ಹಾಗೂ ಡ್ಯಾಡಿಸ್ ಗಾರ್ಡನ್ ಲೇಔಟ್‌ ಜಲಾವೃತಗೊಂಡಿದೆ. ಜನರು ಹೊರಬರಲು ಆಗದೆ ಸಂಕಷ್ಟ ಎದುರಿಸುತ್ತಿದ್ದಾರೆ.

VISTARANEWS.COM


on

By

karnataka rain weather forecast
Koo

ಬೆಂಗಳೂರು ಗ್ರಾಮಾಂತರ: ಕಳೆದ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ (Karnataka Rain) ಬೆಂಗಳೂರು ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ನಾಲ್ಕೈದು ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಗೆ (Bengaluru rain) ಬೆಂಗಳೂರು-ಹೊಸೂರು ಹೈವೆ ಕೆರೆಯಂತಾಗಿದೆ. ಬೆಂಗಳೂರು ಹೊಸೂರು ಹೆದ್ದಾರಿಯ ಸಿಲ್ಕ್ ಬೊರ್ಡ್ ಜಂಕ್ಷನ್‌ನಲ್ಲಿ ಮೂರ್ನಾಲ್ಕು ಅಡಿಗಳಷ್ಟು ಮಳೆ ನೀರು ನಿಂತಿದೆ.

ಜಲಾವೃತಗೊಂಡ ರಸ್ತೆಯ ನೀರಿನಲ್ಲಿಯೇ ಜನರು ಓಡಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹೆದ್ದಾರಿ ಜಲಾವೃತದಿಂದಾಗಿ ಸೋಮವಾರ ಬೆಳಗ್ಗೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಜಾಮ್‌ ಜತೆಗೆ ಕೆರೆಯಂತಾದ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು. ಮೆಟ್ರೋ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಹೊರಹೋಗಲು ಯಾವುದೇ ಸೂಕ್ತ ವ್ಯವಸ್ಥೆ ಇಲ್ಲ. ಇದರಿಂದಾಗಿ ರಸ್ತೆಯೆಲ್ಲ ಜಲಾವೃತಗೊಂಡಿತ್ತು. ಪ್ರತಿ ಬಾರಿ ಮಳೆ ಬಂದಾಗ ಸಿಲ್ಕ್ ಬೋರ್ಡ್ ಜಂಕ್ಷನ್‌ ಜಲಾವೃತಗೊಳ್ಳಲಿದೆ.

ಇದನ್ನೂ ಓದಿ: Heavy Rain: ಸಿಲಿಕಾನ್‌ ಸಿಟಿಯಲ್ಲಿ ಮಳೆಯ ಅಬ್ಬರ; ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ

ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

ಭಾರಿ ಮಳೆಗೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಹೆಬ್ಬಗೋಡಿಯ ಕಮ್ಮಸಂದ್ರದ ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ ಹಾಕಲಾಗಿದೆ. ಕಳೆದ ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಬಡಾವಣೆ ಸಂಪೂರ್ಣ ಜಲಾವೃತಗೊಂಡಿದೆ. ಮನೆಯಿಂದ ಹೊರಬರಲಾಗದೆ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಾರು ಮನೆಗಳಿರುವ ಡ್ಯಾಡಿಸ್ ಗಾರ್ಡನ್ ಲೇಔಟ್‌ನಲ್ಲಿ ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ಅವಾಂತರವೇ ಸೃಷ್ಟಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ತಂಡ ದೌಡಾಯಿಸಿದ್ದು, ನಿವಾಸಿಗಳನ್ನು ಸುರಕ್ಷಿತವಾಗಿ ಮನೆಯಿಂದ ಹೊರಕರೆತರುತ್ತಿದ್ದಾರೆ.

ಕಾಲೇಜು ಆವರಣದಲ್ಲಿ ಜಲಾವೃತ

ಬೆಂಗಳೂರು ಗ್ರಾಮಾಂತರದ ಆನೇಕಲ್ ಪಟ್ಟಣದ ಗೋಪಾಲರಾಜು ಕಾಲೇಜು ಜಲಾವೃತಗೊಂಡಿದೆ. ಬೆಳಗಿನ ಜಾವ ಕಾಲೇಜಿಗೆ ಬಂದ ವಿದ್ಯಾರ್ಥಿಗಳು ಪರದಾಡಿದರು. ಆನೇಕಲ್ ಪಟ್ಟಣದ ಏಕೈಕ ಸರ್ಕಾರಿ ಡಿಗ್ರಿ ಕಾಲೇಜು ಇದಾಗಿದ್ದು, ಮಳೆಗೆ ಕಾಲೇಜು ಒಳಗಡೆ ಹೋಗಲು ಆಗದೆ ವಿದ್ಯಾರ್ಥಿಗಳು ಸಂಕಷ್ಟ ಎದುರಿಸಿದ್ದರು. ಪುರಸಭೆ ಅಧಿಕಾರಿಗಳು ಸರಿಪಡಿಸಿ ಕೊಡುವಂತೆ ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Murder Case: ಅಟ್ಟಾಡಿಸಿಕೊಂಡು ಹೋಗಿ ಮಾರಾಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್‌ನ ಕೊಲೆ

Murder Case: ನಟೋರಿಯಸ್ ರೌಡಿ ಶೀಟರ್ ಉಳ್ಳಾಲದ ಕಡಪ್ಪಾರ‌ ಸಮೀರ್‌ನನ್ನು ಅಟ್ಟಾಡಿಸಿ ಕೊಲೆ ಮಾಡಲಾಗಿದೆ. ಟಾರ್ಗೆಟ್‌ ಇಲ್ಯಾಸ್‌ ಕೊಲೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸಮೀರ್‌ನನ್ನು ದುಷ್ಕರ್ಮಿಗಳ ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ ಮಾಡಿದೆ. ಈ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಎಂಬಲ್ಲಿ ಭಾನುವಾರ (ಆಗಸ್ಟ್‌ 11) ರಾತ್ರಿ ನಡೆದಿದೆ.

VISTARANEWS.COM


on

Murder Case
Koo

ಮಂಗಳೂರು: ನಟೋರಿಯಸ್ ರೌಡಿ ಶೀಟರ್ ಉಳ್ಳಾಲದ ಕಡಪ್ಪಾರ‌ ಸಮೀರ್‌ನನ್ನು ಅಟ್ಟಾಡಿಸಿ ಕೊಲೆ ಮಾಡಲಾಗಿದ್ದು, ದುಷ್ಕರ್ಮಿಗಳ ಅಟ್ಟಹಾಸಕ್ಕೆ ಮಂಗಳೂರು ಬೆಚ್ಚಿ ಬಿದ್ದಿದೆ. ಟಾರ್ಗೆಟ್‌ ಇಲ್ಯಾಸ್‌ ಕೊಲೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸಮೀರ್‌ನನ್ನು ದುಷ್ಕರ್ಮಿಗಳ ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ ಮಾಡಿದೆ. ಈ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಎಂಬಲ್ಲಿ ಭಾನುವಾರ (ಆಗಸ್ಟ್‌ 11) ರಾತ್ರಿ ನಡೆದಿದೆ (Murder Case).

ಸಮೀರ್‌ ಕಾರಿನಲ್ಲಿ ತಾಯಿ ಮತ್ತು ಕುಟುಂಬದ ಸದಸ್ಯರೊಂದಿಗೆ ಕಲ್ಲಾಪುವಿನ ರೆಸ್ಟೋರೆಂಟ್‌ಗೆ ಊಟಕ್ಕೆಂದು ಆಗಮಿಸಿದ್ದ ವೇಳೆ ತಂಡ ದಾಳಿ ನಡೆಸಿದೆ. ಸಮೀರ್‌ನನ್ನು ಹಿಂಬಾಲಿಸಿಕೊಂಡು ಬಂದಿದ್ದ ತಂಡ ತಲವಾರಿನಿಂದ ಹಲ್ಲೆ ನಡೆಸಿದೆ. ಕೂಡಲೇ ತಪ್ಪಿಸಿಕೊಳ್ಳಲು ಸಮೀರ್‌ ಸ್ಥಳದಿಂದ ಓಡಿದ್ದಾನೆ. ಇಷ್ಟಕ್ಕೆ ಸುಮ್ಮನಾಗದ ಐವರಿದ್ದ ತಂಡ ಆತನನ್ನು ಅಟ್ಟಾಡಿಸಿಕೊಂಡು ಹೋಗಿ ತಲವಾರಿನಿಂದ ಕಡಿದು ಹತ್ಯೆ ಮಾಡಿದೆ. ಸದ್ಯ ಹತ್ಯೆ ನಡೆಸಿ ಪರಾರಿಯಾದ ಗುಂಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇತ್ತೀಚೆಗೆ ಮಂಗಳೂರು ಕಾರಾಗೃಹದಲ್ಲಿ ಸಮೀರ್‌ ಮೇಲೆ ಸಹ ಕೈದಿಗಳಿಂದ ದಾಳಿ‌ ನಡೆದಿತ್ತು. ವಾರದ ಹಿಂದೆ ಜಾಮೀನಿನ ಮೇಲೆ ಜೈಲಿನಿಂದ ಆತ ಹೊರ ಬಂದಿದ್ದ. ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. 2018ರಲ್ಲಿ ರೌಡಿಶೀಟರ್‌ ಟಾರ್ಗೆಟ್‌ ಇಲ್ಯಾಸ್‌ನನ್ನು ಜೆಪ್ಪುವಿನ ಫ್ಲ್ಯಾಟ್‌ ಒಂದರಲ್ಲಿ ಇದೀಗ ಕೊಲೆಯಾದ ಶಮೀರ್‌, ದಾವುದ್‌, ರಿಯಾಝ್‌, ಅಬ್ದುಲ್‌ ಖಾದರ್‌, ಉಮ್ಮರ್‌ ನವಾಫ್‌, ಮೊಹಮ್ಮದ್‌ ನಝೀರ್‌, ನೌಷಾದ್‌, ಅಝ್ಗರ್‌ ಆಲಿ ಮತ್ತಿತರರು ಸೇರಿ ಹತ್ಯೆ ನಡೆಸಿದ್ದರು.

ಬೋರ್‌ವೆಲ್ ಲಾರಿ ಚಾಲಕನೊಬ್ಬನ ಶವ ಪತ್ತೆ

ಬೆಂಗಳೂರು: ಪರಪ್ಪನ ಅಗ್ರಹಾರದ ಎಸಿಇಎಸ್ ಲೇಔಟ್‌ನಲ್ಲಿ ಭಾನುವಾರ ರಾತ್ರಿ ಬೋರ್‌ವೆಲ್ ಲಾರಿ ಚಾಲಕನೊಬ್ಬನ ಶವ ಪತ್ತೆಯಾಗಿದೆ. ತಮಿಳುನಾಡಿನ ತಿರ್ಚಿ ಮೂಲದ ಸುರೇಶ್ (43) ಕೊಲೆಯಾದ ವ್ಯಕ್ತಿ.

ನಿನ್ನೆ ರಾತ್ರಿ ಸುಮಾರು 11:30ರ ಸುಮಾರಿಗೆ ನಡೆದಿರುವ ಹತ್ಯೆ ಶಂಕೆ ವ್ಯಕ್ತವಾಗಿದೆ. ಮುಖದ ಮೇಲೆ ಕಬ್ಬಿಣದ ರಾಡ್ ನಿಂದ ಹೊಡೆದು ಹತ್ಯೆ ಮಾಡಲಾಗಿದೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎನ್ನುವುದು ತಿಳಿದು ಬಂದಿಲ್ಲ ಈ ಬಗ್ಗೆ ತನಿಖೆ ನಡೆಯುತ್ತಿದೆ. ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಯ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೆಟ್ರೋಲ್ ಕಳ್ಳರ ಹಾವಳಿ

ಆನೇಕಲ್: ಪಟ್ಟಣದಲ್ಲಿ ಪೆಟ್ರೋಲ್ ‌ಕಳ್ಳರ ಹಾವಳಿ ಆರಂಭವಾಗಿದೆ. ಬೆಂಗಳೂರು ಹೊರವಲಯದ ಆನೇಕಲ್‌ ಪಟ್ಟಣದ ವಿವರ್ಸ್ ಕಾಲೋನಿಯಲ್ಲಿ ಭಾನುವಾರ ರಾತ್ರಿ 15 ಬೈಕ್‌ಗಳಿಂದ ಪೆಟ್ರೋಲ್ ಕಳವು ಮಾಡಲಾಗಿದೆ. ಮನೆಗಳ ಬಳಿ ನಿಲ್ಲಿಸಿದ್ದ ಬೈಕ್‌ಗಳಿಂದ ಕಳ್ಳ ಪೆಟ್ರೋಲ್ ಕದ್ದಿದ್ದಾನೆ. ಇಡೀ ಏರಿಯಾ ಸುತ್ತಾಡಿ ಸಿಕ್ಕ ಸಿಕ್ಕ ಗಾಡಿಗಳಿಂದ ಪೆಟ್ರೋಲ್‌ ಎಗರಿಸಿದ್ದಾನೆ. ಪೆಟ್ರೋಲ್ ಕಳ್ಳನ ಕೈ ಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: Theft Case : ಲಡ್ಡು ಬಂದು ಬಾಯಿಗೆ ಬಿತ್ತು! ಕೀ ಸಮೇತ ಸ್ಕೂಟರ್‌ ಬಿಟ್ಟು ಹೋದ ಮಹಿಳೆ, ಕ್ಷಣಾರ್ಧದಲ್ಲೇ ಎಗರಿಸಿದ ಚಾಲಾಕಿ

Continue Reading
Advertisement
kolkata doctor murder case
ದೇಶ30 mins ago

Kolkata Doctor Murder Case: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

ಪ್ರಮುಖ ಸುದ್ದಿ30 mins ago

Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​

Janhvi Kapoor
ಸಿನಿಮಾ39 mins ago

Janhvi Kapoor: ಇಂದು ನಟಿ ಶ್ರೀದೇವಿ ಜನ್ಮದಿನ; ಬಾಯ್‌ಫ್ರೆಂಡ್‌ ಜತೆ ತಿರುಪತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಜಾಹ್ನವಿ ಕಪೂರ್‌

Bengaluru Police
ಬೆಂಗಳೂರು45 mins ago

Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

Maharaja Trophy 2024
ಕ್ರೀಡೆ45 mins ago

Maharaja Trophy 2024: ಮಹಾರಾಜ ಟಿ20 ಕ್ರಿಕೆಟ್​ ಟೂರ್ನಿ ಆರಂಭಕ್ಕೆ ಒಂದು ದಿನ ಬಾಕಿ; ತಂಡಗಳ ವಿವರ ಹೀಗಿದೆ

ಕರ್ನಾಟಕ1 hour ago

Kundapra Kannada Habba : ಬೆಂಗಳೂರಿನ ಅರಮನೆ ಮೈದಾನದಲ್ಲಿ 2 ದಿನ ಅದ್ಧೂರಿ ‘ಕುಂದಾಪ್ರ ಕನ್ನಡ ಹಬ್ಬ’

Independence day 2024
ದೇಶ1 hour ago

Independence day 2024: ಕೆಂಪು ಕೋಟೆ ಮೇಲೆ ಭಾಷಣ; ನೆಹರೂ, ಇಂದಿರಾ ಬಳಿಕ ಮೋದಿ ಹೊಸ ದಾಖಲೆ!

Bangladesh Unrest
ವಿದೇಶ1 hour ago

Bangladesh Unrest: ಬಾಂಗ್ಲಾ ಹಿಂದೂಗಳ ಪರ ಸೋಶಿಯಲ್‌ ಮೀಡಿಯಾ ಅಭಿಯಾನ; All eyes on hindus ಭಾರೀ ಟ್ರೆಂಡ್!

Road Accident
ಬೆಂಗಳೂರು1 hour ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ! ಬೈಕ್‌, ಕಾರುಗಳಿಗೆ ಡಿಕ್ಕಿ ಹೊಡೆದ ಬಿಎಂಟಿಸಿ; ನರಳಾಡಿದ ಸವಾರರು

Kannada New Movie
ಬೆಂಗಳೂರು1 hour ago

Kannada New Movie: ‘ಸಿ’ ಸಿನಿಮಾದ ಟ್ರೈಲರ್ ಔಟ್; ಗಮನ ಸೆಳೆಯುತ್ತಿದೆ ಹೊಸಬರ ವಿಭಿನ್ನ ಪ್ರಯತ್ನ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌