ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ (Moral Policing) ನಡೆದಿದೆ. ಹಿಂದು ವಿದ್ಯಾರ್ಥಿನಿಯೊಬ್ಬಳ (Hindu girl student) ಜತೆ ಮಾತನಾಡಿದ ಎಂಬ ಕಾರಣಕ್ಕೆ ಕೆಲವು ಯುವಕರು ಮುಸ್ಲಿಂ ಯುವಕನ (Attack on Muslim youth) ಮೇಲೆ ಹಲ್ಲೆ ಮಾಡಿದ್ದಾರೆ. ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೂಡಬಿದ್ರೆಯ (Moral Policing at Moodabidri) ರಾಜೀವ್ ಗಾಂಧಿ ಸಂಕೀರ್ಣದ ಎದುರು ನಡೆದ ಘಟನೆಗೆ ಸಂಬಂಧಿಸಿ ಬಂಧಿತರಾದವರನ್ನು ಅಭಿಲಾಷ್, ಪ್ರೇಮ್ ಭಂಡಾರಿ ಮತ್ತು ಸಂಜಯ್ ಎಂದು ಗುರುತಿಸಲಾಗಿದೆ.
ಮೂಡಬಿದ್ರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ಆಗಸ್ಟ್ 22ರಂದು ರಾತ್ರಿ ಈ ಘಟನೆ ನಡೆದಿತ್ತು. ಮೂಡುಬಿದಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಬೆಂಗಳೂರಿಗೆ ಹೋಗಲು ಬಸ್ ನಿಲ್ದಾಣಕ್ಕೆ ಬಂದಿದ್ದಳು. ಅದೇ ಸಮಯಕ್ಕೆ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿಯೊಬ್ಬ ಪರಿಚಯದ ನೆಲೆಯಲ್ಲಿ ಹುಡುಗಿಯೊಂದಿಗೆ ಮಾತನಾಡಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯ ಕೆಲವು ಯುವಕರು ಉಳಿದವರಿಗೆ ಮಾಹಿತಿ ನೀಡಿದ್ದಾರೆ.
ಇತ್ತ ಯುವತಿ ಬಸ್ ಹತ್ತಿದ ಕೂಡಲೇ ಯುವಕರ ತಂಡ ಸೇರಿ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದೆ. ಹಿಂದು ಯುವತಿಯರ ಜತೆ ನಿನಗೇನು ಸಂಪರ್ಕ ಎಂದು ಕೇಳಿ ದಾಳಿ ಮಾಡಿದೆ. ಈ ಬಗ್ಗೆ ಅಂದೇ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ಗುರುತಿಸಿದ ಪೊಲೀಸರು ಇದೀಗ ಅವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ: Moral Policing : ಎಲ್ಲಿಗೆ ಹೋಗಿದ್ರಿ?; ಶೃಂಗೇರಿಯಿಂದ ಮರಳುತ್ತಿದ್ದ ವೈದ್ಯರ ತಂಡ ತಡೆದು ನೈತಿಕ ಪೊಲೀಸ್‌ಗಿರಿ, ಐವರ ಸೆರೆ
ಬೀಚ್‌ಗೆ ಹೋದವರ ಮೇಲೆ ಹಲ್ಲೆ ನಡೆದಿತ್ತು
ಮಂಗಳೂರಿನಲ್ಲಿ ಕಳೆದ ಜುಲೈ 21ರಂದು ಹಿಂದೂ ಯುವತಿಯರ ಜತೆಗೆ ಬೀಚ್‌ಗೆ ತೆರಳಿದ ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಮೇಲೆ ದುಷ್ಕರ್ಮಿಗಳ ತಂಡದಿಂದ ಹಲ್ಲೆ ನಡೆಸಲಾಗಿತ್ತು.
ಮಂಗಳೂರಿನ ಪ್ರತಿಷ್ಠಿತ ಎಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್‌ನ ವಿದ್ಯಾರ್ಥಿಗಳು ಪಣಂಬೂರು ಬೀಚ್‌ಗೆ ವಿಹಾರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ತಂಡವೊಂದು ಇವರನ್ನು ಹಿಂಬಾಲಿಸಿ ಬಂದಿದ್ದು, ಹಲ್ಲೆ (assault case) ನಡೆಸಿತ್ತು. ಬೀಚ್‌ಗೆ 6 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿಹಾರಕ್ಕೆ ತೆರಳಿದ್ದರು. ತಂಡದಲ್ಲಿ 4 ಮಂದಿ ಹಿಂದೂ ವಿದ್ಯಾರ್ಥಿನಿಯರಿದ್ದು, ಇತರ ಇಬ್ಬರು ಮುಸ್ಲಿಂ ಯುವಕರಿದ್ದರು. ಈ ವೇಳೆ ತಂಡವೊಂದು ಇವರನ್ನು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ತಡೆದು ನಿಲ್ಲಿಸಿ ಹಲ್ಲೆ ನಡೆಸಿದೆ. ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಹಲ್ಲೆಗೊಳಗಾಗಿದ್ದಾರೆ. ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ಘಟನೆ ನಡೆದಿತ್ತು.