ಪುತ್ತೂರು: ನಾಗರ ಪಂಚಮಿ ಶ್ರಾವಣ ಮಾಸದ ಮೊದಲ ಹಬ್ಬ. ಈ ಹಬ್ಬವನ್ನು ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರಿನಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
ಬೆಳಗ್ಗೆ ದೇವಸ್ಥಾನದ ಸನ್ನಿಧಿಯಲ್ಲಿ ಮೂಲ ನಾಗ, ವಾಸುಕೀ ನಾಗರಾಜನಿಗೆ ಹಾಲಿನ ಅಭಿಷೇಕ, ಸೀಯಾಳಾಭಿಷೇಕ ಮತ್ತಿತರ ಅಭಿಷೇಕಗಳನ್ನು ನೆರವೇರಿಸಲಾಯಿತು.
ನೂರಾರು ಭಕ್ತರು ದೇಗುಲಕ್ಕೆ ಆಗಮಿಸಿ ಎಂದಿನಂತೆಯೇ ನಾಗರನಿಗೆ ವಿಶೇಷ ಪೂಜೆ ನೆರವೇರಿಸಿದರು. ಹಾವಿನ ಮೂರ್ತಿಗಳಿಗೆ ತನಿ ಎರೆದು ಪೂಜೆ ಸಲ್ಲಿಸಿದರು. ದೇವಳದ ಪ್ರಧಾನ ಅರ್ಚಕ ವೇ.ಮೂ.ವಿ.ಎಸ್.ಭಟ್, ವೇ.ಮೂ.ಉದಯ.ಭಟ್ ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಇದನ್ನೂ ಓದಿ| ನಾಗರ ಪಂಚಮಿ | ಇಂದು ನಾಗದೇವರ ಪೂಜೆ ಮಾಡುವುದೇಕೆ?