Namaz On Road: ಮಂಗಳೂರಿನ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಎಫ್‌ಐಆರ್‌ - Vistara News

ದಕ್ಷಿಣ ಕನ್ನಡ

Namaz On Road: ಮಂಗಳೂರಿನ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಎಫ್‌ಐಆರ್‌

ಮೇ 24 ರಂದು ಮಂಗಳೂರಿನ ಕಂಕನಾಡಿಯ ಮಸೀದಿ ಎದುರು ರಸ್ತೆಯಲ್ಲಿ ಯುವಕರ ತಂಡ ನಮಾಜ್‌ ಮಾಡಿತ್ತು. ಇದಕ್ಕೆ ಆಕ್ಷೇಪ ವ್ಯಕ್ತವಾಗಿದ್ದರಿಂದ ಪೊಲೀಸರು ಸುಮೋಟೊ ಕೇಸ್‌ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

Namaz on Road
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ನಗರದ ರಸ್ತೆಯಲ್ಲಿ ನಮಾಜ್ (Namaz On Road) ಮಾಡಿದ ವಿಚಾರಕ್ಕೆ ಬಿಜೆಪಿ ನಾಯಕರು ಹಾಗೂ ಹಿಂದು ಸಂಘಟನೆಗಳು ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ನಮಾಜ್ ಮಾಡಿದವರ ವಿರುದ್ಧ ಕದ್ರಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಪಿಸಿ ಕಲಂ 341, 283, 143 ಜೊತೆಗೆ 149ರಡಿ ಸುಮೋಟೊ ಪ್ರಕರಣ ದಾಖಲಾಗಿದೆ.

ಮೇ 24 ರಂದು ನಗರದ ಕಂಕನಾಡಿಯ ಮಸೀದಿ ಎದುರು ಯುವಕರ ತಂಡ ನಮಾಜ್‌ ಮಾಡಿತ್ತು. ಸಾರ್ವಜನಿಕ ಸ್ಥಳದಲ್ಲಿ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗಿತ್ತು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ಘಟನೆ ಬಗ್ಗೆ ಹಿಂದು ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಕಿಡಿಕಾರಿದ್ದರು. ಅಲ್ಲದೇ ಇಂತಹ ಘಟನೆ ಮರುಕಳಿಸಿದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದಾಗಿ ವಿಶ್ವ ಹಿಂದೂ ಪರಿಷದ್‌ ಪ್ರಾಂತ ಸಹ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಪೊಲೀಸು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಸ್ತೆಯಲ್ಲಿ ನಮಾಜ್‌ ಮಾಡೋದು ನಿಲ್ಲಿಸದಿದ್ರೆ ಹನುಮಾನ್‌ ಚಾಲೀಸಾ ಪಠಣ: ವಿಹಿಂಪ ಎಚ್ಚರಿಕೆ

namaz in road mangalore

ಮಂಗಳೂರು: ಮಂಗಳೂರಿನ ಕಂಕನಾಡಿ ಬಳಿ ರಸ್ತೆಯಲ್ಲೇ ನಮಾಜ್ (Namaz in road) ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದು ಪರಿಷತ್ತು (Vishwa Hindu Parishad) ಆಕ್ಷೇಪ ವ್ಯಕ್ತಪಡಿಸಿತ್ತು. ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ತಡೆಯುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. ನಿಲ್ಲಿಸದಿದ್ದರೆ ಸಾಮೂಹಿಕವಾಗಿ ಹನುಮಾನ್ ಚಾಲೀಸಾ (Hanuman Chalisa) ಪಠಿಸಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿತ್ತು.

ಮೊನ್ನೆ ಶುಕ್ರವಾರ ಮಂಗಳೂರಿನ ಕಂಕನಾಡಿಯಲ್ಲಿ ಮಸೀದಿ ಮುಂಭಾಗ ಇರುವ ರಸ್ತೆಯಲ್ಲೇ ನಮಾಜ್ ಮಾಡಲಾಗಿತ್ತು. ರಸ್ತೆಯಲ್ಲಿ ನಡೆದ ನಮಾಜ್ ವೀಡಿಯೋ ವೈರಲ್ ಆಗಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳು ನಮಾಜ್ ಗಮನಿಸಿ ಯೂಟರ್ನ್ ಮಾಡಿಕೊಂಡಿದ್ದವು. ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಬೆಳವಣಿಗೆ ಬಗ್ಗೆ ವಿಹಿಂಪ ಆಕ್ಷೇಪಿಸಿತ್ತು.

“ಕೆಲವು ಕಡೆ ರಸ್ತೆ ಮತ್ತು ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡುತ್ತಿರುವ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯಲ್ಲಿ ಅಶಾಂತಿ ನಿರ್ಮಿಸಲು ಸಂಚು ರೂಪಿಸುತ್ತಿದ್ದಾರೆ. ತಕ್ಷಣ ಜಿಲ್ಲಾಡಳಿತ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಿದರೆ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದರ ಮೂಲಕ ತಡೆಯುತ್ತೇವೆ ಎಂಬ ಎಚ್ಚರಿಕೆ ಕೊಡುತ್ತೇವೆ” ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದರು.

ಇದು ಪಾಕಿಸ್ತಾನವಲ್ಲ, ಹಿಂದೂಸ್ತಾನ: ಈಶ್ವರಪ್ಪ

“ರಸ್ತೆಯಲ್ಲಿ ನಮಾಜ್‌ ಮಾಡಲು, ಮುಸಲ್ಮಾನರು ಏನು ಬೇಕಾದರೂ ಮಾಡಬಹುದು ಎನ್ನಲು ಇದು ಪಾಕಿಸ್ತಾನ ಅಲ್ಲ, ಹಿಂದೂಸ್ತಾನ” ಎಂದು ಕೆ.ಎಸ್‌ ಈಶ್ವರಪ್ಪ ಗುಡುಗಿದ್ದಾರೆ. “ಮಂಗಳೂರು ಪಾಕಿಸ್ತಾನದ ಜಿಲ್ಲೆಯಲ್ಲ. ಮಂಗಳೂರು ಹಿಂದುತ್ವ ವೀರರ ಭೂಮಿ. ಇಲ್ಲಿ ರಸ್ತೆಯಲ್ಲಿ ನಮಾಜ್ ಮಾಡಲು ದುಷ್ಟ ಶಕ್ತಿಗಳು ಯಶಸ್ವಿಯಾಗಿದ್ದು ನೋವಾಗಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು, ಗೃಹ ಸಚಿವರು, ಸರಕಾರ ಸತ್ತಿದೆಯೋ ಬದುಕಿದೆಯೋ ಗೊತ್ತಾಗ್ತಿಲ್ಲ. ಒಬ್ಬ ಇದು ನಮ್ಮ ಸರ್ಕಾರ ಟಿಪ್ಪು ಸುಲ್ತಾನ್ ರಾಜ್ಯ ಅಂತಾನೆ. ಬಿಟ್ಟರೆ ಸಿಎಂ, ಗೃಹ ಸಚಿವರು, ಹಿಂದುಗಳ ಮನೆಗೆ ಬಂದು ನಮಾಜ್ ಮಾಡುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ನಡು ರಸ್ತೆಯಲ್ಲಿ ಪಿಸ್ತೂಲ್‌ ತೋರಿಸಿ ವ್ಯಕ್ತಿ ಮೇಲೆ ಹಲ್ಲೆ; ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ನಿಂದ ದಾಂಧಲೆ

“ನಿಮ್ಮ ಮನೆಯಲ್ಲಿ ನಜಾಮ್ ಮಾಡಿಸಿ ಬೇಡ ಅನ್ನಲ್ಲ. ಎಲ್ಲ ಮುಸ್ಲಿಮರನ್ನು ಟೀಕೆ ಮಾಡುತ್ತಿಲ್ಲ, ಅರ್ಥ ಮಾಡಿಕೊಳ್ಳಿ. ಇವರು ಯಾರೋ ರಾಷ್ಟ್ರದ್ರೋಹಿಗಳು ಮಾಡುತ್ತಿರುವ ಕುತಂತ್ರ. ಇಂತಹವರನ್ನು ಒಳಗೆ ಹಾಕಿದರೆ ಇತರ ಮುಸ್ಲಿಮರಿಗೂ ಸಂತೋಷ ಆಗುತ್ತದೆ. ಮುಸ್ಲಿಂ ಸಮುದಾಯಕ್ಕೆ ಅಪಮಾನ ಆಗುತ್ತಿದೆ ಅಂತ ಅವರೂ ಹೇಳುತ್ತಿದ್ದಾರೆ. ತುಷ್ಟೀಕರಣ ನೀತಿ ಸರ್ಕಾರವನ್ನು ಸುಡುತ್ತೆ, ಭಸ್ಮ ಮಾಡುತ್ತೆ. ರಸ್ತೆಯಲ್ಲಿ ನಮಾಜ್ ಮಾಡಿದವರನ್ನು ತಕ್ಷಣ ಅರೆಸ್ಟ್ ಮಾಡಿ. ರಾಷ್ಟ್ರದ್ರೋಹದ ಕೃತ್ಯ ಕೇಸ್ ಹಾಕಿ” ಎಂದು ಅವರು ಆಗ್ರಹಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

Karnataka Rain : ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುತ್ತಿದೆ. ಈ ಮಧ್ಯೆ ಗುಡ್ಡ ಕುಸಿತ ಹೆಚ್ಚಾಗುತ್ತಿದ್ದು, ಹಲವೆಡೆ ಮನೆಗಳ ಕಾಂಪೌಂಡ್‌ಗೆ ಹಾನಿಯಾಗಿದೆ. ಮನೆ ಮೇಲೆ ಧರೆ ಕುಸಿದಿದ್ದು, ಮಕ್ಕಳಿಬ್ಬರು ಮಣ್ಣಿನಡಿ ಸಿಲುಕಿದ ಘಟನೆಯೂ ನಡೆದಿದೆ.

VISTARANEWS.COM


on

By

karnataka Rains Effected
Koo

ಕಾರವಾರ/ಮಂಗಳೂರು: ಉತ್ತರಕನ್ನಡ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣಾರ್ಭಟ (Karnataka Rain) ಜೋರಾಗಿದೆ. ಸಿದ್ದಾಪುರ ತಾಲೂಕಿನ ಹಸ್ವಿಗುಳಿಯಲ್ಲಿ ಧಾರಾಕಾರ ಮಳೆಗೆ (Rain News) ಗುಡ್ಡಗಳು ಸಡಿಲಗೊಂಡು ಕುಸಿಯುತ್ತಿದೆ. ಹಸ್ವಿಗುಳಿಯ ವೆಂಕಟರಮಣ ತಿಮ್ಮ ನಾಯ್ಕ, ಸದಾನಂದ ತಿಮ್ಮ ನಾಯ್ಕ ಹಾಗೂ ಪಾರ್ವತಿ ತಿಮ್ಮ ನಾಯ್ಕ ಅವರ ಮನೆಯ ಹಿಂಬದಿಯಲ್ಲಿ ಗುಡ್ಡ ಕುಸಿಯುತ್ತಿದೆ. ಅತಿಯಾದ ಮಳೆಯಿಂದ (Karnataka Weather Forecast) ಗುಡ್ಡ ಕುಸಿಯುತ್ತಿದ್ದು, ಮನೆಗಳಿಗೂ ಹಾನಿಯಾಗುವ ಆತಂಕ ಎದುರಾಗಿದೆ. ಗುಡ್ಡಕುಸಿತದ ಆತಂಕವಿರುವ ಮನೆಗಳ ಹಿಂಭಾಗದಲ್ಲಿ ಯಾರೂ ಓಡಾಡದಂತೆ ತಾಲೂಕಾ ಆಡಳಿತದಿಂದ ಎಚ್ಚರಿಕೆಯನ್ನೂ ನೀಡಿದೆ. ಈಗಾಗಲೇ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಗುಡ್ಡ ಕುಸಿತದ ಮುನ್ಸೂಚನೆ ನೀಡಿದೆ.

ಇತ್ತ ಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು, ಮನೆ, ಬೈಕ್ ಸೇರಿ 8ಕ್ಕೂ ಅಧಿಕ ವಿದ್ಯುತ್ ಕಂಬಗಳು ಜಖಂಗೊಂಡಿವೆ. ಉತ್ತರ ಕನ್ನಡದ ಶಿರಸಿಯ ಟಿಪ್ಪು ನಗರದಲ್ಲಿ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಮೌಲಾನಾ ಎಂಬುವವರಿಗೆ ಸೇರಿದ ಮನೆಗೆ ಹಾನಿಯಾಗಿದೆ. ಕುಟುಂಬದವರು ಮನೆಯಲ್ಲಿದ್ದ ಸಂದರ್ಭದಲ್ಲೇ ಮಧ್ಯರಾತ್ರಿ ಸುಮಾರು 12 ಗಂಟೆ ಸುಮಾರಿಗೆ ಮರ ಧರೆಗುರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಮರ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಧರೆ ಕುಸಿದು ಮಣ್ಣಿನಡಿ ಸಿಲುಕಿದ ಮಕ್ಕಳು

ಮಂಗಳೂರಿನ ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದಾಗ ಮನೆ ಮೇಲೆ ಧರೆ ಕುಸಿದಿದೆ. ಕೂಡಲೇ ಪೋಷಕರು ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿಯಾಗಿದೆ.

ತಂದೆ ಮಜೀದ್ ಮತ್ತು ಅವರಿಬ್ಬರು ಮಕ್ಕಳು ಮಲಗಿದ್ದ ಕೊಠಡಿ ಮೇಲೆ ಮಣ್ಣು ಕುಸಿದಿದೆ. ತಕ್ಷಣ ಎಚ್ಚೆತ್ತ ಮಜೀದ್‌ ಮಣ್ಣಿನಡಿ ಇದ್ದ ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ. ಮನೆ ಪಕ್ಕದ ಧರೆಯೊಂದು ಸಡಿಲಗೊಂಡು ಮನೆ ಮೇಲೆ ಬಿದ್ದು ಹಾನಿಯಾಗಿದೆ. ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರಸಭೆ ಮತ್ತು ಸ್ಥಳೀಯರಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಗೆ ಕಾಂಪೌಂಡ್ ಕುಸಿದು ಎರಡು ಮನೆಗಳಿಗೆ ಅಪಾಯ ಎದುರಾಗಿರದೆ. ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಹೊಸ್ಮಾರ್ ಎಂಬಲ್ಲಿ ಘಟನೆ ನಡೆದಿದೆ. ಅಶೋಕ್ ಪೂಜಾರಿ ಮತ್ತು ಗಣೇಶ್ ಪೂಜಾರಿ ಎಂಬುವವರ ಮನೆ ಅಪಾಯದಲ್ಲಿದ್ದು, ಮನೆ ಮಂದಿಯನ್ನು ಸಂಬಂಧಿಕರ ಮನೆಗೆ ಸ್ಥಳಾಂತರ ಮಾಡಲಾಗಿದೆ. ಮಣ್ಣು ಮತ್ತೆ ಕುಸಿಯದಂತೆ ತುರ್ತು ತಡೆಗೋಡೆ ನಿರ್ಮಾಣಕ್ಕೆ ಸೂಚನೆ ನೀಡಲಾಗಿದೆ. ಇನ್ನೂ ಕಾಂಪೌಂಡ್ ಕುಸಿದು ಬೀಳುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Yelahanka Railway : ರೈಲು ಬೋಗಿಯ ಕಸದ ಬುಟ್ಟಿಯಲ್ಲಿತ್ತು ನವಜಾತ ಶಿಶು; ನರಳಾಡಿ ಪ್ರಾಣಬಿಟ್ಟ ಕಂದ

ಮಳೆ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇವಸ್ಥಾನ ಜಲಾವೃತ

ಮಂಗಳೂರು ಗಡಿಭಾಗ ಕಾಸರಗೋಡಿನಲ್ಲೂ ಭಾರೀ ಮಳೆಯಾಗುತ್ತಿದೆ. ಮಳೆ ಅಬ್ಬರಕ್ಕೆ ಇತಿಹಾಸ ಪ್ರಸಿದ್ದ ಮಧೂರು ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನ ಜಲಾವೃತಗೊಂಡಿದೆ. ಮಧುವಾಹಿನಿ ನದಿ ತುಂಬಿ ತುಳುಕುತ್ತಿದ್ದು, ದೇವಸ್ಥಾನದ ಒಳಭಾಗದಲ್ಲಿ ನಾಲ್ಕೈದು ಅಡಿ ನೀರು ನಿಂತಿದೆ. ದೇವಸ್ಥಾನ ಸುತ್ತಮುತ್ತಲ ಪ್ರದೇಶ ಜಲಾವೃತವಾಗಿ ದ್ವೀಪದಂತೆ ಗೋಚರಿಸುತ್ತಿದೆ.

ಬ್ರಹ್ಮಗಿರಿ ತಪ್ಪಲಿನಲ್ಲೂ ನಿರಂತರ ಮಳೆ

ಕೊಡಗಿನ ಹಲವೆಡೆ ಮಳೆ ಅಬ್ಬರ ಮುಂದುವರಿದಿದ್ದು, ನದಿ, ತೊರೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲೂ ನಿರಂತರ ಮಳೆಯಿಂದಾಗಿ ಕಾವೇರಿ ನದಿ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆ ಕಂಡಿದೆ. ಭಾಗಮಂಡಲ ತ್ರಿವೇಣಿ ಸಂಗಮದ ಸ್ಥಾನಘಟ ಮುಳುಗಡೆಯಾಗಿದೆ. ಮಳೆ ಇದೇ ರೀತಿ ಮುಂದುವರೆದಲ್ಲಿ ಮಡಿಕೇರಿ- ಭಾಗಮಂಡಲ, ನಾಪೋಕ್ಲು-ಭಾಗಮಂಡಲ ರಸ್ತೆ ಜಲಾವೃತವಾಗುವ ಸಾಧ್ಯತೆ ಇದೆ. ಈಗಾಗಲೇ ಕೊಡಗಿನ ಮಡಿಕೇರಿ, ವಿರಾಜಪೇಟೆ ಪೊನ್ನಂಪೇಟೆ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕೃಷ್ಣ ಮಠದ ಅಕ್ಕಪಕ್ಕ ನುಗ್ಗಿದ ನೀರು

ಉಡುಪಿ ಜಿಲ್ಲೆಯಲ್ಲಿ ರಾತ್ರಿಯಿಡಿ ಸುರಿದ ಭಾರಿ ಮಳೆಯಿಂದಾಗಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೀರು ನುಗ್ಗಿಯಾಗಿದೆ. ಕೃಷ್ಣ ಮಠದ ಪಕ್ಕದ ಜನವಸತಿ ಪ್ರದೇಶಗಳಲ್ಲಿ ನೆರೆಯಿಂದ ಮುಳುಗಡೆಯಾಗಿದೆ. ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ವರ್ಷವೂ ಇದೇ ಪರಿಸ್ಥಿತಿ ಎದುರಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿಯೇ ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ. ಗಾಳಿ ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಅಲ್ಲಲ್ಲಿ ಮರಗಳು ಧರೆಗುರುಳಿದೆ. ನಗರದ ಇಂದ್ರಾಣಿ ಒಳ ರಸ್ತೆಯಲ್ಲಿ ಬೃಹತ್ ಗಾತ್ರದ ಮರ ಧರಾಶಾಹಿಯಾಗಿದ್ದು, ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಚಿಕ್ಕಮಗಳೂರಲ್ಲೂ ನಿರಂತರ ಮಳೆ

ಚಿಕ್ಕಮಗಳೂರಿನಲ್ಲಿ ಗುರುವಾರ ಬೆಳಗ್ಗೆಯಿಂದಲೂ ಬಿಟ್ಟು-ಬಿಟ್ಟು ಧಾರಾಕಾರ ಮಳೆ ಸುರಿಯುತ್ತಿದೆ. ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ, ಕಳಸ ಸೇರಿದಂತೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಸುತ್ತ ಭಾರೀ ಮಳೆಯೊಂದಿಗೆ ಗಾಳಿ ಬೀಸುತ್ತಿದೆ. ಗಾಳಿ-ಮಳೆ ಮಧ್ಯೆ ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Electric shock : ಮಂಗಳೂರಿನಲ್ಲಿ ವಿದ್ಯುತ್ ಶಾಕ್‌ಗೆ ಇಬ್ಬರು ಆಟೋ ಚಾಲಕರು ಬಲಿ

Electric shock : ಆಟೋ ಸ್ವಚ್ಛ ಮಾಡಲು ಹೋದಾಗ ಕರೆಂಟ್‌ ಶಾಕ್‌ನಿಂದ ಇಬ್ಬರು ಆಟೋ ಚಾಲಕರು ದಾರುಣವಾಗಿ ಮೃತಪಟ್ಟಿದ್ದಾರೆ. ಭಾರಿ ಮಳೆ (Rain news) ಗಾಳಿಗೆ ವಿದ್ಯುತ್‌ ತಂತಿ ಧರೆಗುರುಳಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.

VISTARANEWS.COM


on

By

Electric Shock
Koo

ಮಂಗಳೂರು: ವಿದ್ಯುತ್ ಶಾಕ್‌ನಿಂದಾಗಿ (Electric shock) ಇಬ್ಬರು ಆಟೋ ಚಾಲಕರು ಮೃತ್ಯುವಾಗಿದ್ದಾರೆ. ಮಂಗಳೂರಿನ ರೊಸಾರಿಯೋ ಶಾಲೆ ಬಳಿ ಘಟನೆ ನಡೆದಿದೆ. ರಾಜು ಮತ್ತು ದೇವರಾಜು ಮೃತ ಆಟೋ ಚಾಲಕರಾಗಿದ್ದಾರೆ.

ಬೆಳಗ್ಗೆ ಆಟೋ ಸ್ವಚ್ಛ ಮಾಡುತ್ತಿದ್ದಾಗ ಆಟೋ ಚಾಲಕ ವಿದ್ಯುತ್ ತಂತಿ ಸ್ಪರ್ಶಿಸಿದ್ದ. ಈ ಸಂದರ್ಭದಲ್ಲಿ ಆತನ ರಕ್ಷಣೆಗೆ ಮತ್ತೋರ್ವ ಚಾಲಕ ತೆರಳಿದಾಗ ಈ ವೇಳೆ ಇಬ್ಬರಿಗೂ ಕರೆಂಟ್‌ ಶಾಕ್‌ ಹೊಡೆದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭಾರೀ ಗಾಳಿ ಮಳೆಗೆ ವಿದ್ಯುತ್ ತಂತಿ ಮುರಿದು ಬಿದ್ದಿತ್ತು. ಇದರ ಅರಿವು ಇರದೆ ರಾಜು ಹಾಗೂ ದೇವರಾಜು ವಿದ್ಯುತ್‌ ತಂತಿ ಮೇಲೆ ಕಾಲಿಟಿದ್ದರಿಂದ ಈ ಅವಘಡ ಸಂಭವಿಸಿದೆ. ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Dharma Dangal: ಬೆಂಗಳೂರಿನ 2ನೇ ಅತಿ ದೊಡ್ಡ ಅಪಾರ್ಟ್‌ಮೆಂಟ್‌ನಲ್ಲಿ ಧರ್ಮ ದಂಗಲ್‌; ತುಲಸಿ ಕಟ್ಟೆ ತೆಗೆಯಲು ಧಮಕಿ!

ನಿಶ್ಚಿತಾರ್ಥ ಮುಗಿಸಿ ಬರುತ್ತಿದ್ದವರ ಟಿಟಿ ಲಾರಿಗೆ ಡಿಕ್ಕಿ, ಒಬ್ಬ ಸಾವು

ವಿಜಯನಗರ: ನಿಂತಿದ್ದ ಲಾರಿಗೆ ಟಿಟಿ ವ್ಯಾನ್ ಡಿಕ್ಕಿಯಾದ (Road Accident) ಪರಿಣಾಮ ಒಬ್ಬ ಸಾವಿಗೀಡಾಗಿ 10 ಜನರಿಗೆ (injured) ಗಾಯಗಳಾಗಿವೆ. ಕೂಡ್ಲಿಗಿ ತಾಲೂಕಿನ ಹುಲಿಕೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ (National highway) 50ರಲ್ಲಿ ಅಪಘಾತ ನಡೆದಿದೆ.

ವಿಜಯನಗರ (Vijayanagara news) ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಗ್ರಾಮದ ಬಳಿ ನಡೆದಿರುವ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಕೃಷ್ಣಪ್ಪ(62) ಎಂಬವರು. ಗಾಯಗೊಂಡ 10 ಜನಕ್ಕೂ ಹೆಚ್ಚು ಜನರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಟಿಟಿಯಲ್ಲಿದ್ದ ಇವರು ಕಲುಬುರಗಿಯಲ್ಲಿ ನಿಶ್ಚಿತಾರ್ಥ ಮುಗಿಸಿ ಚಿಕ್ಕಬಳ್ಳಾಪುರದ ಆರೋಡಿ ಗ್ರಾಮಕ್ಕೆ ತೆರಳುತ್ತಿದ್ದರು. ಟಿಟಿ ವಾಹನದಲ್ಲಿ ಇಬ್ಬರು ಮಕ್ಕಳು ಸೇರಿ 16 ಜನ ಪ್ರಯಾಣಿಸುತ್ತಿದ್ದರು.

ಗಂಗಾವತಿಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಕೂಡ್ಲಿಗಿ ಬಳಿ ಕೆಟ್ಟು ನಿಂತಿತ್ತು. ನಿಂತಿದ್ದ ಲಾರಿಗೆ ಹಿಂಬದಿಯಿಂದ ಹೋಗಿ ಟಿಟಿ ವಾಹನ ಗುದ್ದಿದೆ. ಡಿಕ್ಕಿ ರಭಸಕ್ಕೆ ಟಿಟಿ ನಜ್ಜುಗುಜ್ಜಾಗಿದೆ. ಇಬ್ಬರು ವಾಹನದಲ್ಲಿ ಸಿಲುಕಿಕೊಂಡಿದ್ದು, ಅವರನ್ನು ಹರಸಾಹಸಪಟ್ಟು ಹೊರತೆಗೆಯಲಾಯಿತು. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲಸದಿಂದ ತೆಗೆದದ್ದಕ್ಕೆ ನೊಂದು ಯುವಕ ಆತ್ಮಹತ್ಯೆ

ಮೈಸೂರು: ಕಂಪನಿಯಲ್ಲಿ ಕೆಲಸದಿಂದ ತೆಗೆದು ಕಿರುಕುಳ ನೀಡಿದ್ದಾರೆ ಎಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತಿ.ನರಸೀಪುರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಕಿರಣ್ (28) ಮೃತ ಯುವಕ.

ತಿ.ನರಸೀಪುರದ ಸಾಯಿ ಗಾರ್ಮೆಂಟ್ಸ್‌ನಲ್ಲಿ ಯುವಕ ಕಿರಣ್‌ ಕೆಲಸ ಮಾಡುತ್ತಿದ್ದ. ಆದರೆ, ಕಂಪನಿಯಲ್ಲಿ ಕೆಲಸದಿಂದ ಬೇಕಂತಲೇ ತೆಗೆದಿದ್ದಾರೆ. ನನ್ನ ಸಾವಿಗೆ ಕಂಪನಿಯ ಕ್ವಾಲಿಟಿ ಎ.ಜಿ.ಎಂ ಲೋಕೇಶ್‌ ಹಾಗೂ ಎಚ್.ಆರ್. ಎ.ಜಿ.ಎಂ ಅನಿಲ್ ಕಾರಣ ಎಂದು ಡೆತ್‌ ನೋಟ್‌ನಲ್ಲಿ ಯುವಕ ಉಲ್ಲೇಖಿಸಿದ್ದಾನೆ.

ನನ್ನನ್ನು ಕೆಲಸದಿಂದ ಬೇಕಂತಲೇ ತೆಗೆದಿದ್ದಾರೆ. ನನ್ನ ಬಗ್ಗೆ ಬೇರೆ ಕಡೆ ಕೆಟ್ಟ ಫೀಡ್ ಬ್ಯಾಕ್ ಕೊಟ್ಟು ಎಲ್ಲೂ ಕೆಲಸಕ್ಕೆ ತೆಗೆದುಕೊಳ್ಳದ ಹಾಗೆ ಮಾಡಿದ್ದಾರೆ. ಲೋಕೇಶ್‌ ಮತ್ತು ಅನಿಲ್‌ ಅವರಿಂದ ಕೆಲಸ ಸಿಗದ ನಾನು ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್‌ನಲ್ಲಿ ಮೃತ ಕಿರಣ್ ಉಲ್ಲೇಖ ಮಾಡಿದ್ದಾನೆ. ಈ ಬಗ್ಗೆ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka Weather: ಇಂದು ಕೊಡಗು, ಹಾಸನ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಹಲವೆಡೆ ಶಾಲೆಗಳಿಗೆ ರಜೆ!

Karnataka Weather: ಭಾರಿ ಮಳೆ ಹಿನ್ನೆಲೆಯಲ್ಲಿ ಇಂದು (ಜೂನ್‌ 26) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಕೊಡಗಿನ ವಿರಾಜಪೇಟೆ ತಾಲೂಕು, ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

VISTARANEWS.COM


on

Karnataka Weather
ಬುಧವಾರ ಸುರಿದ ಮಳೆಗೆ ಮಂಗಳೂರಿನ ಪಡೀಲು ರೈಲ್ವೆ ಅಂಡರ್‌ ಪಾಸ್ ಜಲಾವೃತವಾಗಿರುವುದು.
Koo

ಬೆಂಗಳೂರು: ರಾಜ್ಯದಲ್ಲಿ ಇಂದು (ಜೂನ್‌ 27) ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ (Rain News) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಕೊಡಗು ಜಿಲ್ಲೆಯ ಎರಡು ತಾಲೂಕುಗಳಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಗುರುವಾರ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (45-55 kmph) ಸಂಭವಿಸುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ದ.ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆಯಲ್ಲಿ ಇಂದು(ಜೂ.27) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.

ಇನ್ನು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಮಾಹಿತಿ ನೀಡಲಾಗಿದೆ. ದ.ಕ‌ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಕೊಡಗಿನ 2 ತಾಲೂಕುಗಳಲ್ಲಿ ರಜೆ

ಕೊಡಗು: ಜಿಲ್ಲೆಯಲ್ಲಿ ಹಲವೆಡೆ ವರುಣಾರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ವಿರಾಜಪೇಟೆ ತಾಲೂಕು ಮತ್ತು ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು (ಗುರುವಾರ) ರಜೆ ಘೋಷಿಸಲಾಗಿದೆ.

ಇನ್ನು ಜೂನ್ 28ರಂದು ಕೂಡ ಕರಾವಳಿ ಜಿಲ್ಲೆಗಳ ಪ್ರತ್ಯೇಕ ಕಡೆ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆ ಭಾರಿ ಮಳೆ ಸಾಧ್ಯತೆಯಿದೆ. ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳು. ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (45-55 kmph) ಆಗುವ ಸಾಧ್ಯತೆಯಿದೆ. ಜೂನ್‌ 30ರವರೆಗೆ ಇದೇ ರೀತಿಯ ಸ್ಥಿತಿ ಕರಾವಳಿ ಜಿಲ್ಲೆಗಳಲ್ಲಿ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗುರುವಾರ ತೀವ್ರ ಬಿರುಗಾಳಿ (ಗಂಟೆಗೆ 35ರಿಂದ 55 ಮಿ.ಮೀ ವೇಗ) ಬೀಸುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡದ ಮುಲ್ಕಿಯಿಂದ ಮಂಗಳೂರಿನವರೆಗೆ ಬೆಳಗ್ಗೆ 8:30ರಿಂದ ರಾತ್ರಿ 11.30ರವರೆಗೆ 3.4 ರಿಂದ 3.5 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗುವ ಸಾಧ್ಯತೆ ಇದೆ.

ಉಡುಪಿ ಹೈ ವೇವ್ ಎಚ್ಚರಿಕೆ: ಬೈಂದೂರಿನಿಂದ ಕಾಪುವರೆಗಿನ ಕರಾವಳಿಯಲ್ಲಿ ಸಂಜೆ 5.30ರಿಂದ ರಾತ್ರಿ 11:30 ಗಂಟೆಗಳವರೆಗೆ 3.5 ರಿಂದ 3.7 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗಲಿವೆ.

ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ ಸಂಜೆ 5.30ರಿಂದ ರಾತ್ರಿ 11.30ರವರೆಗೆ 3.7ರಿಂದ 3.9 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಹೀಗಾಗಿ ಸಣ್ಣ ಹಡಗುಗಳು ಸಂಚರಿಸದಂತೆ ಹಾಗೂ ಮನರಂಜನಾ ಚಟುವಟಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ | Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

ಬೆಂಗಳೂರು ಮತ್ತು ಸುತಮುತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ (30-40 kmph) ತುಂಬಾ ಸಾಧ್ಯತೆ, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 C ಮತ್ತು 21C ಇರಲಿದೆ.

Continue Reading

ಕ್ರೈಂ

Rain News: ಭಾರಿ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವು

Rain News: ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ದುರ್ಘಟನೆ ನಡೆದಿದ್ದು, ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದೆ. ಇದು ಪಕ್ಕದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿತು.

VISTARANEWS.COM


on

rain news wall collapse 4 death
Koo

ಮಂಗಳೂರು: ಭಾರಿ ಮಳೆಯ (Rain news) ಪರಿಣಾಮ ಮನೆಯ ಗೋಡೆ ಕುಸಿದು (Wall collapse) ಬಿದ್ದು ನಾಲ್ವರು‌ ದುರ್ಮರಣ (four death) ಹೊಂದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ (Ullala) ನಡೆದಿದೆ.

ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ದುರ್ಘಟನೆ ನಡೆದಿದ್ದು, ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದೆ. ಇದು ಪಕ್ಕದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿತು. ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಸಾವಿಗೀಡಾದರು.

ರಾತ್ರಿ ಸುರಿದ ಭಾರೀ ಮಳೆಗೆ ಈ ದುರಂತ ಸಂಭವಿಸಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಾಲ್ವರ ಮೃತದೇಹವನ್ನೂ ಸ್ಥಳೀಯರು ಹೊರತೆಗೆದಿದ್ದಾರೆ.

ಅನಂತಕುಮಾರ್‌ ಹೆಗಡೆ ಮನೆಯಲ್ಲಿ ಬೆಂಕಿ ಆಕಸ್ಮಿಕ

ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಮನೆಯಲ್ಲಿ ಬೆಂಕಿ ಆಕಸ್ಮಿಕ (Fire mishop) ಸಂಭವಿಸಿದೆ. ಇದು ಶಾರ್ಟ್‌ ಸರ್ಕ್ಯೂಟ್‌ನಿಂದ (Short Circuit) ಆಗಿದೆ ಎಂದು ತಿಳಿದುಬಂದಿದೆ.

ಶಿರಸಿಯ ಕೆಎಚ್‌ಬಿ ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಸೃಷ್ಟಿಯಾದ ಪರಿಣಾಮ ಜಿಮ್ ಮಾಡುವ ಯಂತ್ರಗಳಿಗೆ ಅಲ್ಪ ಹಾನಿಯಾಗಿದೆ. ಇದನ್ನು ಹೊರತುಪಡಿಸಿದರೆ ಹೊಗೆಯಿಂದ ಗೋಡೆಗಳಿಗೆ ಹಾನಿಯಾಗಿದ್ದು ಅಂದಾಜು 50 ಸಾವಿರದಷ್ಟು ಹಾನಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದು ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸುನೀಲ್ ಅವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಪ್ರವಾಸಿಗರಿಗೆ ಬಾಸುಂಡೆ ಬರುವಂತೆ ಥಳಿಸಿದ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ

ಬೆಳಗಾವಿ: ಕರ್ನಾಟಕದ ಪ್ರವಾಸಿಗರನ್ನು (Karnataka Tourists) ಗೋವಾದ ಅರಣ್ಯ ಇಲಾಖೆ (Goa Forest department) ಸಿಬ್ಬಂದಿ ಮನಬಂದಂತೆ ಥಳಿಸಿದ (Assault Case) ಘಟನೆ ಗೋವಾ ಗಡಿಯಲ್ಲಿರುವ ಸೂರಲ್ ಜಲಪಾತದ (Sural Falls) ಬಳಿ ನಡೆದಿದೆ. ಜಲಪಾತ ವೀಕ್ಷಣೆಗೆ ಹೋಗಿದ್ದ ಕನ್ನಡದ ಪ್ರವಾಸಿಗರಿಗೆ ಮೈಮೇಲೆ ಬಾಸುಂಡೆ ಬರುವ ಹಾಗೆ ಥಳಿಸಿ, ಅವರಿಂದ ಹಣ ಕಿತ್ತುಕೊಂಡು ವಿಕೃತಿ ಮೆರೆದಿದ್ದಾರೆ.

ಬೆಳಗಾವಿ ಮತ್ತು ಗೋವಾ ಗಡಿಯಲ್ಲಿರುವ ಖಾನಾಪೂರ ತಾಲೂಕಿನ ಕಣಕುಂಬಿ ಬಳಿಯ ಸೂರಲ್ ಜಲಪಾತ ಬಳಿ ಇದು ನಡೆದಿದೆ. ಮಳೆಗಾಲ ಆರಂಭ ಆಗುತ್ತಿದ್ದಂತೆ ಕರ್ನಾಟಕದಿಂದ ಅತಿಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ತೆರಳುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಪ್ರವಾಸಿಗರಿಂದ ಹೆಚ್ಚಿನ ಹಣ ವಸೂಲಿ ಮಾಡುವುದಲ್ಲದೆ, ಪ್ರಶ್ನಿಸಿದರೆ ಮೈಮೇಲೆ ಏರಿ ಬರುತ್ತಾರೆ.

ನಿರಂತರವಾಗಿ ಪ್ರವಾಸಿಗರಿಂದ ಒಂದಿಲ್ಲೊಂದು ಕಾರಣ ಹೇಳಿ ಹಣ ಕಿತ್ತುಕೊಳ್ಳುತ್ತಿರುವ ಆರೋಪ ಇವರ ಮೇಲಿದೆ. ಸೂರಲ್ ಜಲಪಾತದ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಣ ವಸೂಲಿ ಆರೋಪ ಮೊದಲಿನಿಂದಲೂ ಇದೆ. ಹುಕ್ಕೇರಿ ತಾಲೂಕಿನ ಸಂಕೇಶ್ವರದ ಐವರು ಯುವಕರ ತಂಡವನ್ನು ಇವರು ತಡೆದು ಥಳಿಸಿದ್ದಾರೆ. ಬೆನ್ನು, ಕಾಲು ಕೈಗೆ ಬಾಸುಂಡೆ ಬರುವ ಹಾಗೆ ಥಳಿಸಿ ವಿಕೃತಿ ತೋರಿದ್ದಾರೆ.

ಹಲ್ಲೆ ಮಾಡಿದ್ದಲ್ಲದೇ ಪರ್ಸ್‌ನಲ್ಲಿದ್ದ ಹಣವನ್ನೂ ಕಿತ್ತುಕೊಂಡಿದ್ದಾರೆ. 1 ಸಾವಿರ ಫೋನ್ ಪೇ ಮಾಡಿಸಿಕೊಂಡಿದ್ದು ಸೇರಿ ಒಟ್ಟು 9 ಸಾವಿರ ರೂಪಾಯಿ ಹಣ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೌರ್ಜನ್ಯವನ್ನು ಸಾವಿರಾರು ಪ್ರವಾಸಿಗರು ಅನುಭವಿಸುತ್ತಿದ್ದು, ಯಾರೂ ದೂರು ನೀಡುತ್ತಿಲ್ಲ ಎಂದು ಹಲ್ಲೆಗೊಳಗಾದವರು ಅಲವತ್ತುಕೊಂಡಿದ್ದಾರೆ. ಗೋವಾ ಅರಣ್ಯ ಇಲಾಖೆಯ ಅಧಿಕಾರಿಗಳು ಇವರ ದೂರನ್ನು ಕೇಳಿಸಿಕೊಂಡಿಲ್ಲ.

ಇದನ್ನೂ ಓದಿ: Contaminated Water : ಬೆಳಗಾವಿ, ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

Continue Reading
Advertisement
IND vs ENG
ಕ್ರೀಡೆ9 mins ago

IND vs ENG: ಹೈವೋಲ್ಟೇಜ್ ಸೆಮಿ ಕಾದಾಟಕ್ಕೆ ಕ್ಷಣಗಣನೆ; ಸೇಡು ತೀರಿಸಲು ರೋಹಿತ್​ ಪಡೆ ಸಜ್ಜು

Parliament Sessions
ದೇಶ21 mins ago

Parliament Sessions: ಸೆಂಗೋಲ್‌ ಮೇಲೆ ಪ್ರತಿಪಕ್ಷಗಳ ಕಣ್ಣು; ಸಂಸತ್‌ನಲ್ಲಿ ಭಾರೀ ಕೋಲಾಹಲ

Bengaluru Metro
Latest22 mins ago

Bengaluru Metro: ಸರ್ಜಾಪುರ-ಹೆಬ್ಬಾಳದ 3ಎ ಮೆಟ್ರೋ ಮಾರ್ಗ ಯಾವಾಗ ಪೂರ್ಣ?

Nitin Gadkari
ಪ್ರಮುಖ ಸುದ್ದಿ26 mins ago

Nitin Gadkari : ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

IND vs ENG Semi Final
ಕ್ರೀಡೆ42 mins ago

IND vs ENG Semi Final: ಮೀಸಲು ದಿನ ಇರದ ಭಾರತ-ಇಂಗ್ಲೆಂಡ್​ ಸೆಮಿ ಪಂದ್ಯದ ಮಳೆ ನಿಯಮ ಹೇಗಿದೆ?

Droupadi Murmu
ದೇಶ54 mins ago

Droupadi Murmu: ನೀಟ್‌ ಅಕ್ರಮ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು

Fazalhaq Farooqi
ಕ್ರೀಡೆ55 mins ago

Fazalhaq Farooqi : ವಿಶ್ವ ಕಪ್​ 2024ರಲ್ಲಿ ಹೊಸ ದಾಖಲೆ ಬರೆದ ಆಪ್ಘನ್ ಬೌಲರ್​ ಫಜಲ್ಹಾಕ್​ ಫಾರೂಕಿ

Vande Bharath Train
Latest58 mins ago

Vande Bharath Train: ಬೆಂಗಳೂರು-ಮಧುರೈ ʼವಂದೇ ಭಾರತ್ʼ ರೈಲು ಜುಲೈನಿಂದ ಆರಂಭ

Actor Darshan
ಸಿನಿಮಾ1 hour ago

Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

cm siddaramaiah price hikes
ಕರ್ನಾಟಕ2 hours ago

CM Siddaramaiah: ₹2000 ಕೊಟ್ಟು ₹4740 ಕಿತ್ತುಕೊಳ್ಳುತ್ತಿರುವ ರಾಜ್ಯ ಸರಕಾರ! ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿರುವುದರ ಲೆಕ್ಕ ಇಲ್ಲಿದೆ ನೋಡಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rains Effected
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

ಟ್ರೆಂಡಿಂಗ್‌