Site icon Vistara News

NIA Raid : ಸುಳ್ಯದಲ್ಲೂ ಎನ್‌ಐಎ ದಾಳಿ; 2 ದಿನದ ಹಿಂದೆ ಕೇರಳದಿಂದ ಬಂದಿದ್ದವ ವಶಕ್ಕೆ

NIA Rait Enmuru

ಮಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಬಾಂಬ್‌ ಸ್ಫೋಟ (Blast in Bengaluru) ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (National Investigation agency) ವಹಿಸಿಕೊಂಡಿದೆ. ಈ ಪ್ರಕರಣವೂ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಎನ್‌ಐಎ (NIA Raid) ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ದೇಶದಲ ಏಳು ರಾಜ್ಯಗಳಲ್ಲಿ ಮಂಗಳವಾರ ದಾಳಿ ನಡೆಸಿದೆ. ಇದರ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada news) ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಎಣ್ಮೂರಿನಲ್ಲೂ ದಾಳಿ ನಡೆದಿದೆ.

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್‌ಐಎ ತುಂಬಾ ಸಕ್ರಿಯವಾಗಿದ್ದು ಎಲ್ಲ ಕಡೆ ಮಾಹಿತಿ ದಾರರನ್ನು ಇಟ್ಟು ಚಟುವಟಿಕೆಗಳನ್ನು ಹದ್ದುಗಣ್ಣಿನಿಂದ ಕಾಯುತ್ತಿದೆ. ಅದರಿಂದ ಪಡೆದ ಮಾಹಿತಿಯನ್ನೂ ಆಧರಿಸಿಯೇ ಅದು ಇಲ್ಲಿಗೆ ಲಗ್ಗೆ ಇಟ್ಟಿದೆ ಎನ್ನಲಾಗಿದೆ. ಕೇವಲ ಎರಡು ದಿನಗಳ ಹಿಂದಷ್ಟೇ ಎಣ್ಮೂರಿಗೆ ಬಂದು ಬಾಡಿಗೆ ಮನೆಯೊಂದನ್ನು ಹಿಡಿದಿದ್ದ ವ್ಯಕ್ತಿಯೊಬ್ಬನನ್ನು ಅದು ವಿಚಾರಿಸಿದ್ದು ಸ್ವತಃ ಊರಿನ ಜನರಿಗೇ ಅಚ್ಚರಿ ಮೂಡಿಸಿದೆ.

ಎನ್.ಐ.ಎ ಅಧಿಕಾರಿಗಳ ತಂಡ ಪ್ರಕರಣವೊಂದರ ಸಂಬಂಧ ಮಾ.5ರಂದು ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರಿನ ಕುಲಾಯಿತೋಡು ಎಂಬಲ್ಲಿನ ಬಾಡಿಗೆ ಮನೆ ಮೇಲೆ ಬೆಳಗ್ಗೆ ಎನ್ ಐ ಎ ಅಧಿಕಾರಿಗಳು ದಾಳಿ ಮಾಡಿ ಮನೆಯಲ್ಲಿ ನಡೆಸಿದರು. ಅಲ್ಲಿ ವಾಸವಾಗಿದ್ದ ಕೇರಳ ಮೂಲದ ಬಿಜು ಎಂಬಾತನಿಗೆ ಸಮನ್ಸ್ ನೀಡಿ ಮೊಬೈಲ್ ಫೋನ್ ವಶಕ್ಕೆ ಪಡೆದು ತೆರಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನಿಂತಿಕಲ್ಲು ಬಳಿಯ ಕಲ್ಮಡ್ಕ ನಿವಾಸಿ ಚಿದಾನಂದ ಎಂಬವರ ಬಾಡಿಗೆ ಮನೆ ಮೇಲೆ ಬೆಂಗಳೂರು ಬ್ರಾಂಚ್ ನ ಎನ್.ಐ.ಎ ಅಧಿಕಾರಿಗಳಾದ ಡಿವೈಎಸ್ಪಿ ರಾಜನ್ ಪಿ.ವಿ, ಸಬ್ ಇನ್ಸೆಕ್ಟರ್ ಮಂಜಪ್ಪ,
ಕಾನ್ಸ್ಟೇಬಲ್ ಸುರೇಶ್.ಸಿ ನೇತೃತ್ವದ ಮೂರು ಜನರ ತಂಡ ದಾಳಿ ಮಾಡಿ ಮನೆಯನ್ನು ಪರಿಶೀಲನೆ ನಡೆಸಿದೆ.

ಇದನ್ನೂ ಓದಿ: Blast in Bengaluru : ರಾಮೇಶ್ವರಂ ಕೆಫೆ ಸ್ಫೋಟ; ಚೆನ್ನೈಯಲ್ಲಿ NIA ದಾಳಿ, ಐವರು ಕ್ರಿಮಿಗಳ ಸೆರೆ

ಯಾರಿವನು ಬಿಜು‌, ಯಾವ ಪ್ರಕರಣ?

25-10-2023 & RC- 28/2023/NIA/DLI ಯಲ್ಲಿ 120B,121,121A&122 ಜೊತೆಗೆ 3,25 ಆರ್ಮ್ 13,18 ಮತ್ತು UA(P) ಅಡಿಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿದಂತೆ ಬೆಳ್ಳಾರೆಯ ಚಿದಾನಂದ ಎಂಬವರ ಬಾಡಿಗೆ ಮನೆಯಲ್ಲಿ ಎರಡು ದಿನದ ಹಿಂದೆ ಬಂದ ಕೇರಳ ರಾಜ್ಯದ ಇಡುಕ್ಕಿಯ ಬಿಜು ಅಬ್ರಾಹಂ @ ಬಿಜು ಎಮ್.ಎ (45) ಎಂಬಾತನ ವಾಸವಾಗಿದ್ದ. ಈ ಮನೆಗೆ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ ನಂತರ ಬಿಜುಗೆ ಸಮನ್ಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

Exit mobile version